Homeಮುಖಪುಟಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

ಕಾಂತಾರ: ಟ್ಯೂನ್‌ ಕದ್ದ ಆರೋಪ; ಕಾನೂನು ಕ್ರಮಕ್ಕೆ ಮುಂದಾದ ಕೇರಳ ಸಂಸ್ಥೆ

- Advertisement -
- Advertisement -

‘ಕಾಂತಾರ’ ಸಿನಿಮಾದಲ್ಲಿನ ‘ವರಹ ರೂಪಂ’ ಹಾಡಿಗೂ ಮಲಯಾಳಂನ ‘ನವರಸಂ’ ಆಲ್ಬಮ್‌ಗೂ ಸಾಮ್ಯತೆಗಳು ಕಂಡು ಬಂದಿದ್ದು, ಕಾಂತಾರ ಚಿತ್ರತಂಡವು ಟ್ಯೂನ್‌ ಕದ್ದಿರುವ ಆರೋಪಕ್ಕೆ ಗುರಿಯಾಗಿದೆ.

ಈ ಕುರಿತು ಚರ್ಚೆಯಾಗುತ್ತಿರುವ ಬೆನ್ನಲ್ಲೇ ಕೇರಳದ ಜನಪ್ರಿಯ ಸಂಗೀತ ಬ್ಯಾಂಡ್ ‘ಥೈಕ್ಕುಡಂ ಬ್ರಿಡ್ಜ್’ ಕಾನೂನು ಕ್ರಮ ಜರುಗಿಸಲು ನಿರ್ಧರಿಸಿದೆ. ‘ಕಾಂತಾರ’ ಚಿತ್ರದ ‘ವರಹ ರೂಪಂ’ ಹಾಡಿಗೆ ಆಕ್ಷೇಪ ಎತ್ತಿದ್ದು, ಕೃತಿಚೌರ್ಯದ ಆರೋಪ ಮಾಡಿದೆ.

‘ಕಾಂತಾರ’ ಚಿತ್ರತಂಡದಿಂದ ಹಕ್ಕುಸ್ವಾಮ್ಯ ಉಲ್ಲಂಘನೆಯಾಗಿದೆ ಎಂದಿರುವ ‘ಥೈಕ್ಕುಡಮ್ ಬ್ರಿಡ್ಜ್’ ಈ ಬಗ್ಗೆ ಸಾಮಾಜಿಕ ಮಾಧ್ಯಮದಲ್ಲಿ ಪೋಸ್ಟ್ ಮಾಡಿದೆ.

“ತೈಕ್ಕುಡಂ ಬ್ರಿಡ್ಜ್‌’ಗೂ ‘ಕಾಂತಾರ’ ಚಿತ್ರಕ್ಕೂ ಯಾವುದೇ ಸಂಬಂಧವಿಲ್ಲ. ಇದನ್ನು ನಮ್ಮ ಕೇಳುಗರು ತಿಳಿದುಕೊಳ್ಳಬೇಕು. ನಮ್ಮ ‘ನವರಸಂ’ ಮತ್ತು ಕಾಂತಾರದ ‘ವರಾಹ ರೂಪಂ’ ಹಾಡಿನ ನಡುವೆ ಸ್ಪಷ್ಟ ಹೋಲಿಕೆಗಳು ಕಂಡು ಬಂದಿವೆ. ಆದ್ದರಿಂದ ಇದು ಹಕ್ಕುಸ್ವಾಮ್ಯ ಕಾನೂನುಗಳ ಉಲ್ಲಂಘನೆಯಾಗಿದೆ” ಎಂದು ‘ಥೈಕ್ಕುಡಮ್ ಬ್ರಿಡ್ಜ್‌’ ತಿಳಿಸಿದೆ.

“ನಮ್ಮ ದೃಷ್ಟಿಕೋದಲ್ಲಿ ‘ಸ್ಫೂರ್ತಿ’ ಮತ್ತು ‘ಚೌರ್ಯ’ ಎರಡೂ ವಿಭಿನ್ನ ಮತ್ತು ನಿರ್ವಿವಾದ. ಆದ್ದರಿಂದ ನಾವು ಇದಕ್ಕೆ ಕಾರಣವಾದ ತಂಡದ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಬಯಸುತ್ತೇವೆ” ಎಂದು ಎಚ್ಚರಿಸಿದೆ.

 

View this post on Instagram

 

A post shared by Thaikkudam Bridge (@thaikkudambridge)

“ಈ ವಿಷಯದಲ್ಲಿ ನಾವು ನಮ್ಮ ಕೇಳುಗರ ಬೆಂಬಲವನ್ನು ಅಪೇಕ್ಷಿಸುತ್ತೇವೆ. ಈ ಬಗ್ಗೆ ಪ್ರಚಾರ ಮಾಡಲು ನಿಮ್ಮನ್ನು ನಾವು ಕೋರುತ್ತೇವೆ. ಅಲ್ಲದೆ, ಸಂಗೀತದ ಹಕ್ಕುಸ್ವಾಮ್ಯವನ್ನು ರಕ್ಷಿಸುವ ಬಗ್ಗೆ ಅಭಿಪ್ರಾಯಗಳನ್ನು ಹಂಚಿಕೊಳ್ಳಲು ಸಹ ಕಲಾವಿದರನ್ನು ನಾವು ವಿನಂತಿಸುತ್ತೇವೆ” ಎಂದು ತಿಳಿಸಿದೆ.

ರಿಷಬ್ ಶೆಟ್ಟಿ ನಿರ್ದೇಶಿಸಿ ಅಭಿನಯಿಸಿರುವ ‘ಕಾಂತಾರ’ ಸಿನಿಮಾ ಅಭೂತಪೂರ್ವ ಯಶಸ್ಸು ಪಡೆದಿದ್ದು, ಅಜನೀಶ್ ಬಿ.ಲೋಕನಾಥ್ ಸಂಗೀತ ನಿರ್ದೇಶಿಸಿದ್ದಾರೆ. ‘ವರಹ ರೂಪಂ’ ಹಾಗೂ ‘ಸಿಂಗಾರ ಸಿರಿಯೇ’ ಹಾಡಿನ ಟ್ಯೂನ್‌ಗಳ ಮೇಲೆ ಕೃತಿಚೌರ್ಯದ ಆಕ್ಷೇಪಗಳನ್ನು ಪ್ರೇಕ್ಷಕರು ಮಾಡಿದ್ದರು.

‘ಸಿಂಗಾರ ಸಿರಿಯೇ’ ಹಾಡಿಗೂ ‘ಅಜಯ್‌- ಅತುಲ್‌’ ಅವರ ‘ಅಪ್ಸರ ಆಲಿ’ ಹಾಡಿಗೂ ಸಾಮ್ಯತೆಯನ್ನು ಪ್ರೇಕ್ಷಕರು ಗುರುತಿಸಿದ್ದರು.

ಇದನ್ನೂ ಓದಿರಿ: ‘ಕಾಂತಾರ’ ದೈವಕ್ಕೂ ‘ಕರ್ಣನ್‌’ ದೈವಕ್ಕೂ ಎಷ್ಟೊಂದು ವ್ಯತ್ಯಾಸ!

ಈ ಕುರಿತು ಇತ್ತೀಚೆಗೆ ‘ನಾನುಗೌರಿ.ಕಾಂ’ ಜೊತೆ ಮಾತನಾಡಿದ್ದ ಸಂಗೀತ ನಿರ್ದೇಶಕ ಅಜನೀಶ್‌ ಬಿ.ಲೋಕನಾಥ್, “ವರಹ ರೂಪಂ ಹಾಡು ರ್‍ಯಾಕ್‌ ಮ್ಯೂಸಿಕ್ ಶೈಲಿಯದ್ದಾಗಿದೆ. ಆದರೆ ರಾಗ ಸಂಯೋಜನೆ ಸಂಪೂರ್ಣ ಭಿನ್ನವಾಗಿದೆ. ಶೈಲಿ ಹಾಗೂ ರಾಗದ ಛಾಯೆ ಒಂದೇ ರೀತಿ ಇರುವುದರಿಂದ ‘ವರಹಾ ರೂಪಂ’ಗೂ ‘ನವರಸಂ’ಗೂ ಸಾಮ್ಯತೆ ಇದೆ ಅನಿಸುತ್ತದೆ. ಖಂಡಿತವಾಗಿಯೂ ನವರಸಂನಿಂದ ಸ್ಫೂರ್ತಿ ಇದೆ. ರಾಗ ಛಾಯೆ ಹಾಗೂ ಶೈಲಿ ಒಂದೇ ಆಗಿದ್ದರಿಂದ ಹೋಲಿಕೆ ಬರುತ್ತದೆ” ಎಂದಿದ್ದರು.

“ಸಿಂಗಾರ ಸಿರಿಯೇ ಹಾಡಿಗೂ ಅಪ್ಸರ ಅಲಿ ಹಾಡಿಗೂ ಸಂಬಂಧವಿಲ್ಲ. ಕೊರಸ್ ಬರುವ ಕಡೆ ಸಾಮ್ಯತೆ ಇದೆ ಎನಿಸುತ್ತದೆ” ಎಂದು ಸ್ಪಷ್ಪಪಡಿಸಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...