Homeಮುಖಪುಟಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

ಕನ್ವರ್ ಯಾತ್ರೆ ವಿವಾದ: ಯತಾಸ್ಥಿತಿ ಕಾಯ್ದುಕೊಳ್ಳುವಂತೆ ನೀಡಿದ್ದ ಮಧ್ಯಂತರ ತಡೆ ವಿಸ್ತರಿಸಿದ ಸುಪ್ರೀಂ

- Advertisement -
- Advertisement -

ಕನ್ವರ್ ಯಾತ್ರೆ ಮಾರ್ಗದಲ್ಲಿನ ಹೋಟೆಲ್ ಮಾಲೀಕರ ಹೆಸರು ಪ್ರದರ್ಶಿಸಬೇಕು ಎಂಬ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ನೀಡಿದ್ದ ನಿರ್ದೇಶನದ ಮಧ್ಯಂತರ ತಡೆಯನ್ನು ಸುಪ್ರೀಂ ಕೋರ್ಟ್ ಇಂದು ವಿಸ್ತರಿಸಿದೆ. “ಯಾರನ್ನೂ ಬಲವಂತವಾಗಿ ಹೆಸರು ಬಹಿರಂಗಪಡಿಸಲು ಸಾಧ್ಯವಿಲ್ಲ” ಎಂದು ನ್ಯಾಯಾಲಯ ಹೇಳಿದೆ.

ನಾಮಫಲಕ ಪ್ರದರ್ಶನ ನಿರ್ದೇಶನವು, ಕನ್ವರ್ ಯಾತ್ರೆಯ ಮಾರ್ಗದಲ್ಲಿರುವ ಉಪಾಹಾರ ಗೃಹಗಳು ತಮ್ಮ ಸೈನ್‌ಬೋರ್ಡ್‌ನಲ್ಲಿ ಮಾಲೀಕರು ಮತ್ತು ಉದ್ಯೋಗಿಗಳ ಹೆಸರನ್ನು ಪ್ರದರ್ಶಿಸುವುದನ್ನು ಕಡ್ಡಾಯಗೊಳಿಸಿದೆ.

ಈ ಆದೇಶವು ಮುಸ್ಲಿಮರು ಮತ್ತು ತಳ ಸಮುದಾಯಕ್ಕೆ ಸೇರಿದವರ ವಿರುದ್ಧ ತಾರತಮ್ಯದಿಂದ ಕೂಡಿದೆ ಎಂದು ವಿರೋಧ ಪಕ್ಷದ ಇಂಡಿಯಾ ಬ್ಲಾಕ್ ಸದಸ್ಯರು ಸೇರಿದಂತೆ, ಎನ್‌ಡಿಎ ಮಿತ್ರಪಕ್ಷಗಳು ಕೂಡ ವಿರೋಧ ವ್ಯಕ್ತಪಡಿಸಿದ್ದವು. ಜುಲೈ 22 ರಂದು ಸುಪ್ರೀಂ ಕೋರ್ಟ್ ಸರ್ಕಾರದ ನಿರ್ದೇಶನಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿತು.

ಉತ್ತರ ಪ್ರದೇಶ ಸರ್ಕಾರವು ಸುಪ್ರೀಂ ಕೋರ್ಟ್‌ನಲ್ಲಿ ತನ್ನ ನಿರ್ದೇಶನವನ್ನು ಸಮರ್ಥಿಸಿಕೊಂಡಿತು. ಯಾತ್ರೆಯ ಅವಧಿಯಲ್ಲಿ ಅವರು ಸೇವಿಸುವ ಆಹಾರದ ಬಗ್ಗೆ ಗ್ರಾಹಕರು/ಕನ್ವಾರಿಯಾ ಅವರ ಪಾರದರ್ಶಕತೆ ಮತ್ತು ತಿಳುವಳಿಕೆಯುಳ್ಳ ಆಯ್ಕೆಯನ್ನು ಖಚಿತಪಡಿಸಿಕೊಳ್ಳುವುದು, ಅವರ ಧಾರ್ಮಿಕ ಭಾವನೆಗಳನ್ನು ಗಮನದಲ್ಲಿಟ್ಟುಕೊಂಡು, ಭಕ್ತರ ನಂಬಿಕೆಗಳಿಗೆ ಘಾಸಿ ಆಗಬಾರದು ಎಂಬುದು ನಿರ್ದೇಶನ ಹಿಂದಿನ ಉದ್ದೇಶ” ಎಂದು ಹೇಳಿತ್ತು.

ಸರ್ಕಾರವು “ಆಹಾರ ಮತ್ತು ಸುರಕ್ಷತಾ ಮಾನದಂಡಗಳ (ಆಹಾರ ವ್ಯವಹಾರಗಳ ಪರವಾನಗಿ ಮತ್ತು ನೋಂದಣಿ (ನಿಯಮಗಳು), 2011” ಪ್ರಸ್ತಾಪಿಸಿ ಗಮನ ಸೆಳೆಯುವ ಮೂಲಕ ನ್ಯಾಯಾಲಯದ ಮುಂದೆ ಅಫಿಡವಿಟ್ ಸಲ್ಲಿಸಿತು. ಎಲ್ಲ ಸಣ್ಣ ಆಹಾರ ವ್ಯವಹಾರಗಳ ನೋಂದಣಿ ಅಗತ್ಯವಿದೆ ಮತ್ತು ಮಾಲೀಕರ ಫೋಟೋ ಐಡಿ, ನೋಂದಣಿ ಪ್ರಮಾಣಪತ್ರವನ್ನು ಬಹಿರಂಗಪಡಿಸುವುದು ಕಡ್ಡಾಯವಾಗಿ ಎಂದು ಹೇಳಿದೆ.

ತನ್ನ ಅಫಿಡವಿಟ್‌ನಲ್ಲಿ, ಯುಪಿ ಸರ್ಕಾರವು ತನ್ನ ನಿರ್ದೇಶನವನ್ನು ವಿರೋಧಿಸುವ ಅರ್ಜಿಗಳನ್ನು ಪ್ರಶ್ನಿಸಿದೆ.

“ಕನ್ವಾರಿಯಾಗಳು ಕಟ್ಟುನಿಟ್ಟಾದ ಸಸ್ಯಾಹಾರಿ, ಸಾತ್ವಿಕ ಆಹಾರವನ್ನು ಅನುಸರಿಸುತ್ತಾರೆ, ಈರುಳ್ಳಿ, ಬೆಳ್ಳುಳ್ಳಿ ಮತ್ತು ಇತರ ಎಲ್ಲ ತಾಮಸಿಕ ಆಹಾರಗಳನ್ನು ತ್ಯಜಿಸುತ್ತಾರೆ; ಸಾತ್ವಿಕ್ ಆಹಾರ ಎಂದರೆ ಈರುಳ್ಳಿ ಮತ್ತು ಬೆಳ್ಳುಳ್ಳಿ ಇಲ್ಲದೆ ಆಹಾರವನ್ನು ತಯಾರಿಸುವುದು ಎಂದರ್ಥವಲ್ಲ. ಆದರೆ, ಉಪವಾಸ ಸಮಾರಂಭಗಳನ್ನು ಕೈಗೊಳ್ಳುವಾಗ ಇತರ ಹಬ್ಬಗಳಲ್ಲಿ ಫಲಹಾರದಂತೆಯೇ ಆಹಾರವನ್ನು ತಯಾರಿಸುವ ವಿಧಾನವೂ ಆಗಿದೆ” ಎಂದು ಯುಪಿ ಸರ್ಕಾರ ಹೇಳಿದೆ.

ಇದನ್ನೂ ಓದಿ; ಮಸೂದೆಗಳಿಗೆ ಒಪ್ಪಿಗೆ ನೀಡುವಲ್ಲಿ ರಾಜ್ಯಪಾಲರಿಂದ ವಿಳಂಬ; ಕೇಂದ್ರ-ರಾಜ್ಯ ಸರ್ಕಾರಗಳಿಗೆ ಸುಪ್ರೀಂನಿಂದ ನೋಟಿಸ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭೆ ಚುನಾವಣೆಯಲ್ಲಿ ಅಡ್ಡ ಮತದಾನ : ಮೂವರು ಶಾಸಕರನ್ನು ಅಮಾನತುಗೊಳಿಸಿದ ಒಡಿಶಾ ಕಾಂಗ್ರೆಸ್

ರಾಜ್ಯಸಭಾ ಚುನಾವಣೆಯಲ್ಲಿ ಅಡ್ಡ ಮತದಾನ ಮಾಡಿದ್ದಕ್ಕಾಗಿ ಒಡಿಶಾ ಕಾಂಗ್ರೆಸ್ ಮೂವರು ಶಾಸಕರಾದ ಸೋಫಿಯಾ ಫಿರ್ದೌಸ್, ರಮೇಶ್ ಜೆನಾ ಮತ್ತು ದಾಸರಥಿ ಗೊಮಾಂಗೊ ಅವರನ್ನು ಅಮಾನತುಗೊಳಿಸಿದೆ. ಒಡಿಶಾ ವಿಧಾನಸಭೆಯಲ್ಲಿ ಕಾಂಗ್ರೆಸ್ 14 ಶಾಸಕರನ್ನು ಹೊಂದಿದ್ದು, ನಾಲ್ಕನೇ...

ಅಮೆರಿಕ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ದಳದ ನಿರ್ದೇಶಕ ಜೋ ಕೆಂಟ್‌ ರಾಜೀನಾಮೆ

ಅಮೆರಿಕದ ರಾಷ್ಟ್ರೀಯ ಭಯೋತ್ಪಾದನಾ ನಿಗ್ರಹ ಕೇಂದ್ರದ (ಎನ್‌ಸಿಟಿಸಿ) ನಿರ್ದೇಶಕ ಜೋ ಕೆಂಟ್ ಅವರು ಇರಾನ್ ಜೊತೆಗಿನ ಯುದ್ಧಕ್ಕೆ ವಿರೋಧ ವ್ಯಕ್ತಪಡಿಸಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. "ಇರಾನ್‌ನಿಂದ ಅಮೆರಿಕಕ್ಕೆ ಯಾವುದೇ ತಕ್ಷಣದ ಅಪಾಯವಿರಲಿಲ್ಲ. ಇಸ್ರೇಲ್‌ನ ಒತ್ತಡದಿಂದಾಗಿ...

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...