Homeಮುಖಪುಟಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

ಕನ್ಯಾಕುಮಾರಿಯಲ್ಲಿ ಮೋದಿ ಧ್ಯಾನ: ನೀತಿ ಸಂಹಿತೆ ಉಲ್ಲಂಘನೆ ಬಗ್ಗೆ ಪ್ರತಿಪಕ್ಷಗಳಿಂದ ತರಾಟೆ

- Advertisement -
- Advertisement -

ಪ್ರಧಾನಿ ನರೇಂದ್ರ ಮೋದಿಯವರು ಗುರುವಾರದಿಂದ ಕನ್ಯಾಕುಮಾರಿಯಲ್ಲಿ ಧ್ಯಾನವನ್ನು ಮಾಡುವುದಾಗಿ ಹೇಳಿಕೊಂಡಿದ್ದಾರೆ. ಕನ್ಯಾಕುಮಾರಿಯಲ್ಲಿ ಸ್ವಾಮಿ ವಿವೇಕಾನಂದರು ಈ ಹಿಂದೆ ಧ್ಯಾನ ಮಾಡಿದ್ದ ‘ಧ್ಯಾನ ಮಂಟಪಂ’ನಲ್ಲಿ ಲೋಕಸಭಾ ಚುನಾವಣಾ ಪ್ರಚಾರದ ನಂತರ ಮೋದಿ ಧ್ಯಾನ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿದೆ.

ಲೋಕಸಭೆ ಚುನಾವಣೆಯ 7ನೇ ಹಂತದ ಮತದಾನ ಜೂ.1ರಂದು ನಡೆಯಲಿದೆ. ಈ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಆರಂಭವಾಗಲಿದೆ. ಆದರೆ ಇದೇ ಸಮಯದಲ್ಲಿ ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸುತ್ತಾರೆ. ಇದನ್ನು ಟಿವಿ ವಾಹಿನಿಗಳು ನೇರ ಪ್ರಸಾರ ಮಾಡಲಿದ್ದು, ಇದಕ್ಕೆ ಪ್ರತಿಪಕ್ಷಗಳು ವ್ಯಾಪಕವಾದ ವಿರೋಧವನ್ನು ವ್ಯಕ್ತಪಡಿಸಿದೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಅಭಿಷೇಕ್ ಮನು ಸಿಂಘ್ವಿ, ಪ್ರಧಾನಿ ಮೇ 30ರ ಸಂಜೆಯಿಂದ ತಮ್ಮ ಧ್ಯಾನವನ್ನು ಪ್ರಾರಂಭಿಸುತ್ತಾರೆ ಮತ್ತು ನಾವು ಅದರ ಬಗ್ಗೆ ದೂರು ನೀಡಿದ್ದೇವೆ. ಜೂ.1ರಂದು ಮತದಾನ ಇರುವ ಹಿನ್ನೆಲೆ ಮೇ 30ರಿಂದ ಮೌನ ಅವಧಿ ಪ್ರಾರಂಭವಾಗಲಿದೆ ಎಂದು ನಮಗೆಲ್ಲರಿಗೂ ತಿಳಿದಿದೆ. ಮೋದಿಯ ಈ ಘೋಷಣೆ ಚುನಾವಣೆಯ ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ. ಜೂನ್ 1ರ ಸಂಜೆಯಿಂದ ಪ್ರಧಾನಿ 24-48 ಗಂಟೆಗಳ ನಂತರ ತನ್ನ ಧ್ಯಾನವನ್ನು ಪ್ರಾರಂಭಿಸಬಹುದು. ಅವರು ಮೇ 30ರಿಂದ ಧ್ಯಾನ ಮಾಡಲು ಬಯಸಿದರೆ, ನಂತರ ಅದನ್ನು ಟಿವಿ ಅಥವಾ ಮುದ್ರಣ ಮಾಧ್ಯಮವು ಪ್ರಸಾರ ಮಾಡದಂತೆ ಚುನಾವಣಾ ಆಯೋಗ ನಿರ್ಬಂಧಿಸಬೇಕು ಎಂದು ಹೇಳಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಕಾಂಗ್ರೆಸ್‌ ನಾಯಕ ಕಪಿಲ್‌ ಸಿಬಲ್‌, ಮೋದಿ ‘ಪ್ರಾಯಶ್ಚಿತ್ತ’ಕ್ಕಾಗಿ ಕನ್ಯಾಕುಮಾರಿಗೆ ಹೋಗುವುದು ಒಳ್ಳೆಯದು. ವಿವೇಕದ ಬಗ್ಗೆ ಅರ್ಥ ಗೊತ್ತಿಲ್ಲದ ಅವರು ಏನು ‘ಧ್ಯಾನ’ ಮಾಡುತ್ತಾರೆ’. ಸ್ವಾಮಿ ವಿವೇಕಾನಂದರ ಬರಹಗಳು ಮತ್ತು ಭಾಷಣಗಳಿಂದ ಸ್ಫೂರ್ತಿ ಪಡೆಯಲು ಹೊರಟರೆ ಒಳ್ಳೆಯದು. ‘ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ತನ್ನ ಸಾಧನೆಗಳ ಬಗ್ಗೆ ಮಾತನಾಡುವುದಿಲ್ಲ. ಕಳೆದ 10 ವರ್ಷಗಳಿಂದ ಮೋದಿ ಏನು ಮಾಡಿದ್ದಾರೆ? ಏನು ಮಾಡಿದ್ದಾರೆಂದು ಪ್ರಧಾನಿ ತಮ್ಮ ಭಾಷಣಗಳಲ್ಲಿ ಹೇಳಿದ್ದಾರೆಯೇ? ಅವರ ಸಾಧನೆಗಳೇನು? ಕೊಟ್ಟ ಭರವಸೆಗಳನ್ನು ಈಡೇರಿಸುವಲ್ಲಿ ಅವರು ಸಂಪೂರ್ಣ ವಿಫಲವಾಗಿದ್ದಾರೆ ಎಂದು ಕಪಿಲ್‌ ಸಿಬಲ್‌ ಟೀಕಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯಿಸಿದ ಪ.ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ,ಯಾರಾದರೂ ಹೋಗಿ ಧ್ಯಾನ ಮಾಡಬಹುದು… ಆದರೆ, ಧ್ಯಾನ ಮಾಡುವಾಗ ಯಾರಾದರೂ ಕ್ಯಾಮೆರಾ ತೆಗೆದುಕೊಳ್ಳುತ್ತಾರೆಯೇ ಎಂದು ಪ್ರಶ್ನಿಸಿದ್ದಾರೆ. ಕನ್ಯಾಕುಮಾರಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಧ್ಯಾನವನ್ನು ದೂರದರ್ಶನದಲ್ಲಿ ಪ್ರಸಾರ ಮಾಡಿದರೆ ಅದು ಮಾದರಿ ನೀತಿ ಸಂಹಿತೆ (ಎಂಸಿಸಿ) ಉಲ್ಲಂಘನೆಯಾಗುತ್ತದೆ ಎಂದು ಹೇಳಿದ ಮಮತಾ ಬ್ಯಾನರ್ಜಿ ಈ ಬಗ್ಗೆ ಭಾರತೀಯ ಚುನಾವಣಾ ಆಯೋಗಕ್ಕೆ ದೂರು ನೀಡುವುದಾಗಿ ಹೇಳಿದ್ದಾರೆ.

ಇಂತಹ ಪರೋಕ್ಷ ಪ್ರಚಾರಕ್ಕೆ ಚುನಾವಣಾ ಆಯೋಗ ಅನುಮತಿ ನೀಡಬಾರದು ಎಂದು ಕಾಂಗ್ರೆಸ್ ತಮಿಳುನಾಡು ಘಟಕದ ಮುಖ್ಯಸ್ಥ ಕೆ ಸೆಲ್ವಪೆರುಂತಗೈ ಹೇಳಿದ್ದಾರೆ. ಚುನಾವಣಾ ಆಯೋಗವು ಪ್ರಧಾನಿಯವರ ಕಾರ್ಯಕ್ರಮಕ್ಕೆ ಅನುಮತಿ ನಿರಾಕರಿಸಬೇಕು, ಇದು ಮಾದರಿ ನೀತಿ ಸಂಹಿತೆಯನ್ನು ಉಲ್ಲಂಘಿಸುತ್ತದೆ. ಅಧಿಕೃತ ಪ್ರಚಾರದ ಅವಧಿ ಮುಗಿದ ನಂತರ ಇದು ಸೂಚಿತ ಪ್ರಚಾರದ ಪ್ರಯತ್ನವಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಮಧ್ಯಪ್ರದೇಶ: ಬುಡಕಟ್ಟು ಸಮುದಾಯದ ವ್ಯಕ್ತಿಯೋರ್ವನಿಗೆ ಥಳಿಸಿ ಮೂತ್ರ ಕುಡಿಯುವಂತೆ ಬಲವಂತ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...