Homeಮುಖಪುಟಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

ಕನ್ಯಾಕುಮಾರಿ: ಮಾತು ಕೊಟ್ಟಂತೆ ಬಾಲಕನಿಗೆ ಶೂ ಕಳುಹಿಸಿದ ರಾಹುಲ್ ಗಾಂಧಿ!

- Advertisement -
- Advertisement -

ಕನ್ಯಾಕುಮಾರಿ ಭೇಟಿ ವೇಳೆ, 12 ವರ್ಷದ ಬಾಲಕನೊಬ್ಬ ಕೇಳಿದ್ದ ಅಥ್ಲೆಟಿಕ್ ಸ್ಪರ್ಧೆಯ ಶೂಗಳನ್ನು ಮಾತು ಕೊಟ್ಟಂತೆ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಖರೀದಿಸಿ ಕಳುಹಿಸಿ ಕೊಟ್ಟಿರುವ ಘಟನೆ ಕನ್ಯಾಕುಮಾರಿಯಲ್ಲಿ ನಡೆದಿದೆ.

ರಾಹುಲ್ ಗಾಂಧಿ ಮಾರ್ಚ್ 1 ರಂದು ಕನ್ಯಾಕುಮಾರಿ ಜಿಲ್ಲೆಗೆ ಭೇಟಿ ನೀಡಿದ್ದರು. ಮುಲಕುಮುಡು ಶಾಲೆಗೆ ಹೋದಾಗ, ತಮ್ಮ ವಾಹನವನ್ನು ಪರೈಕೋಡುನಲ್ಲಿ ನಿಲ್ಲಿಸಿ ರಸ್ತೆ ಬದಿಯ ಬೇಕರಿಯೊಂದರ ಬಳಿ ನಡೆದುಕೊಂಡು ಹೋಗಿದ್ದರು. ಅಲ್ಲಿ ಆಂಥೋನಿ ಫಿಲಿಕ್ಸ್ ಎಂಬ ವಿದ್ಯಾರ್ಥಿಯನ್ನು ಮಾತನಾಡಿಸಿದ್ದರು.

ಏನಾಗಬೇಕು ಎಂದು ಕೇಳಿದ್ದಕ್ಕೆ ತಾನು ಅಥ್ಲೆಟಿಕ್ಸ್‌ನಲ್ಲಿ ಏನನ್ನಾದರೂ ಸಾಧಿಸಬೇಕು. ಆದರೆ ಅಥ್ಲೆಟಿಕ್ ತರಬೇತಿಗಾಗಿ ತಾನು ಶೂಗಳನ್ನು ಹೊಂದಿಲ್ಲ ಎಂದು ಬಾಲಕ ಆಂಥೋನಿ ಫಿಲಿಕ್ಸ್ ಹೇಳಿದ್ದರು. ತಕ್ಷಣ ತಾನು ಶೂ ಕೊಡಿಸುವುದಾಗಿ ರಾಹುಲ್ ಗಾಂಧಿ ಮಾತು ಕೊಟ್ಟಿದ್ದರು.

ಇದನ್ನೂ ಓದಿ: 50ನೇ ವರ್ಷದಲ್ಲಿಯೂ ಫಿಟ್ನೆಸ್ ತೋರಿಸಿದ ರಾಹುಲ್ ಗಾಂಧಿ: ಪುಷ್-ಅಪ್ ವಿಡಿಯೋ ವೈರಲ್

ಅದರಂತೆ ನಿನ್ನೆ ಕೊರಿಯರ್‌ ಮೂಲಕ ವಿದ್ಯಾರ್ಥಿ ಆಂಥೋನಿ ಫಿಲಿಕ್ಸ್ ಅವರ ಮನೆಗೆ 5,900 ರೂಪಾಯಿ ಬೆಲೆ ಬಾಳುವ ಶೂಗಳು ಬಂದಿವೆ. ಇದಕ್ಕೆ ಸಂತಸ ವ್ಯಕ್ತಪಡಿಸಿರುವ ಆಂಥೋನಿ ಫಿಲಿಕ್ಸ್ , “ನಾನು 5 ನೇ ತರಗತಿ ಓದುತ್ತಿದ್ದೇನೆ. ನನ್ನ ತಂದೆಯ ಹೊಲಿಗೆ ಅಂಗಡಿ ಇದೆ. 2017 ರಲ್ಲಿ, ತಿರುಚ್ಚಿಯಲ್ಲಿ ನಡೆದ ಬಾಲಕರ ಮ್ಯಾರಥಾನ್‌ನಲ್ಲಿ ನಾನು 51 ನೇ ಸ್ಥಾನ ಗಳಿಸಿದೆ. ಕಳೆದ ವರ್ಷದ ನಾಗರ್‌ಕೋಯಿಲ್‌ನಲ್ಲಿ ನಡೆದ ಮ್ಯಾರಥಾನ್‌ನಲ್ಲಿ ನಾನು 11 ನೇ ಸ್ಥಾನ ಪಡೆದಿದ್ದೇನೆ. ಇದನ್ನೆಲ್ಲ ಅಂದು ರಾಹುಲ್ ಗಾಂಧಿ ಅವರಿಗೆ ಹೇಳಿದೆ. ಅವರು ನನ್ನನ್ನು ಪ್ರೋತ್ಸಾಹಿಸಿ, ಶೂ ಕೊಡಿಸುವುದಾಗಿ ಮಾತು ನೀಡಿದ್ದರು. ಅವರು ಹೇಳಿದಂತೆ ಕೊರಿಯರ್ ಮೂಲಕ ಶೂ ಸಿಕ್ಕಿದೆ’ ಎಂದು ಧನ್ಯವಾದ ಸಲ್ಲಿಸಿದ್ದಾರೆ.

rahul-gandhu-bought-shoe-for-kumari-student
PC: hindutamil

’ಶೂ ತಲುಪಿದ ಮೇಲೆ ರಾಹುಲ್ ಗಾಂಧಿ ಅವರು ನನಗೆ ಕರೆ ಮಾಡಿ ಶೂ ಸೈಜ್ ಸರಿ ಇದೆಯೇ…? ಇಷ್ಟವಾಯಿತೇ? ಎಂದು ಕೇಳಿದರು. ಜೊತೆಗೆ ಶೀಘ್ರದಲ್ಲೇ ಕ್ರೀಡಾಪಟುಗಳಿಗೆ ತರಬೇತಿ ನೀಡಲು ಕೋಚ್‌ ಒಬ್ಬರನ್ನು ವ್ಯವಸ್ಥೆ ಮಾಡುವುದಾಗಿ ಭರವಸೆ ನೀಡಿದ್ದಾರೆ. ಇದನ್ನು ನಾನು ನನ್ನ ಜೀವನದಲ್ಲಿ ಎಂದಿಗೂ ಮರೆಯುವುದಿಲ್ಲ’ ಎಂದು ಬಾಲಕ ಸಂತಸ ವ್ಯಕ್ತಪಡಿಸಿದ್ದಾನೆ.


ಇದನ್ನೂ ಓದಿ: ಪ್ರಧಾನಿಯನ್ನು ಪ್ರೀತಿ, ಅಹಿಂಸೆಯಿಂದ ಸೋಲಿಸುತ್ತೇವೆ: ಬಿಜೆಪಿ ವಿರುದ್ಧ ರಾಹುಲ್ ವಾಗ್ದಾಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...