Homeಮುಖಪುಟರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

ರಾಯಚೂರಿನಲ್ಲಿ ದಲಿತರ ಸರಣಿ ಕೊಲೆ: ಸಂತ್ರಸ್ತರ ಮನೆಗೆ ಸಚಿವ ಕೆ.ಎಚ್. ಮುನಿಯಪ್ಪ ಭೇಟಿ

- Advertisement -
- Advertisement -

ರಾಯಚೂರು ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದ ದಲಿತರ ಮೇಲಿನ ಸರಣಿ ದೌರ್ಜನ್ಯ ಮತ್ತು ಕೊಲೆ ಪ್ರಕರಣಗಳು ಜನಾಕ್ರೋಶಕ್ಕೆ ಕಾರಣವಾಗಿವೆ. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಸಚಿವ ಕೆ.ಎಚ್. ಮುನಿಯಪ್ಪ ಅವರು ಜಿಲ್ಲೆಯ ವಿವಿಧ ಗ್ರಾಮಗಳಲ್ಲಿ ಕೊಲೆಯಾದ ದಲಿತ ಸಮಾಜದ ಸಂತ್ರಸ್ತರ ಮನೆಗಳಿಗೆ ಶುಕ್ರವಾರ ಭೇಟಿ ನೀಡಿ ಸಾಂತ್ವನ ಹೇಳಿದರು.

‘ನಮ್ಮ ಕಷ್ಟ ನೋಡುವವರಿಲ್ಲ’: ಸಚಿವರ ಮುಂದೆ ಸಹೋದರನ ಕಣ್ಣೀರು

ಕರಡಕಲ್ ಗ್ರಾಮದಲ್ಲಿ ಕೊಲೆಯಾದ ದಲಿತ ಮಹಿಳೆ ರಾಣೆಮ್ಮ ಅವರ ಮನೆಗೆ ಭೇಟಿ ನೀಡಿದ ಸಚಿವ ಕೆ.ಎಚ್. ಮುನಿಯಪ್ಪ ಅವರಿಗೆ ರಾಣೆಮ್ಮ ಅವರ ಸಹೋದರ ಅಮರೇಶ ತಮ್ಮ ತೀವ್ರ ಅಸಮಾಧಾನ ಮತ್ತು ಅಳಲನ್ನು ತೋಡಿಕೊಂಡರು.

ಫೋಟೊ ಕೃಪೆ: ಪ್ರಜಾವಾಣಿ

“ಹತ್ತು ಜನ ಬರ್ತಾರೆ, ಹತ್ತು ಜನ ಹೋಗ್ತಾರೆ. ಇದೇ ನಡೆದಿದೆ, ಯಾವುದೇ ಶಾಶ್ವತ ಪರಿಹಾರ ಸಿಕ್ಕಿಲ್ಲ. ಬರುವವರು ಬಂದು ಹೋಗುತ್ತಾರೆಯೇ ಹೊರತು ನಮ್ಮ ಕಷ್ಟ ಯಾರೂ ನೋಡುತ್ತಿಲ್ಲ. ಕೊಲೆಯಾದ ನಮ್ಮ ಅಕ್ಕನ ಮಕ್ಕಳಿಗೆ ಸರ್ಕಾರ ಒಂದು ದಾರಿ ಮಾಡಿಕೊಡಬೇಕು, ಅವರಿಗೆ ಜೀವನಾಧಾರ ಕಲ್ಪಿಸಬೇಕು” ಎಂದು ಅಮರೇಶ ಆಗ್ರಹಿಸಿದರು.

ಇದಕ್ಕೆ ಸ್ಪಂದಿಸಿದ ಸಚಿವರು, “ಪರಿಹಾರ ನೀಡಲು ಕಾನೂನಿನ ಚೌಕಟ್ಟಿದೆ. ಅದಕ್ಕೆ ಪೂರಕ ದಾಖಲೆಗಳನ್ನು ಸಿದ್ಧಪಡಿಸಲು ಅಧಿಕಾರಿಗಳಿಗೆ ಸೂಚಿಸಿದ್ದೇನೆ. ಸರ್ಕಾರದಿಂದ ಸಾಧ್ಯವಾಗುವ ಎಲ್ಲಾ ರೀತಿಯ ನೆರವು ಮತ್ತು ಗರಿಷ್ಠ ಪರಿಹಾರ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ” ಎಂದು ಭರವಸೆ ನೀಡಿದರು.

ಸಿರವಾರ: ಅಶ್ವಿನಿ ಕುಟುಂಬಕ್ಕೆ ಸರ್ಕಾರಿ ನೌಕರಿ, ಜಮೀನಿಗೆ ನೀರಾವರಿ ಭರವಸೆ

ಬಳಿಕ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮಕ್ಕೆ ಭೇಟಿ ನೀಡಿದ ಸಚಿವರು, ಇತ್ತೀಚೆಗೆ ಮೃತಪಟ್ಟ ಅಶ್ವಿನಿ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು. ಗ್ರಾಮೀಣ ಭಾಗದಲ್ಲಿ ಅಶಾಂತಿ ಮತ್ತು ಕಾನೂನುಬಾಹಿರ ಚಟುವಟಿಕೆಗಳಿಗೆ ಆಸ್ಪದ ನೀಡದೆ, ಪ್ರೀತಿ-ವಾತ್ಸಲ್ಯದ ವಾತಾವರಣ ನಿರ್ಮಿಸಬೇಕಿದೆ ಎಂದರು.

ಮೃತ ಅಶ್ವಿನಿ ಅವರ ಸಹೋದರನಿಗೆ ಸರ್ಕಾರಿ ನೌಕರಿ ನೀಡುವುದು, ಕುಟುಂಬದ ಜಮೀನಿಗೆ ನೀರಾವರಿ ವ್ಯವಸ್ಥೆ ಕಲ್ಪಿಸುವುದು ಸೇರಿದಂತೆ ಅಗತ್ಯ ಸೌಲಭ್ಯಗಳನ್ನು ತಕ್ಷಣವೇ ಒದಗಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚಿಸಿದರು. ನಂತರ ಪ್ರತಿಭಟನಾ ಸ್ಥಳಕ್ಕೂ ಭೇಟಿ ನೀಡಿದ ಸಚಿವರು, “ನಾವು 41 ವರ್ಷಗಳಿಂದ ಸಾಮಾಜಿಕ ಸಾಮರಸ್ಯಕ್ಕಾಗಿ ಹೋರಾಡುತ್ತಿದ್ದೇವೆ. ದ್ವೇಷ-ಅಸೂಯೆ ಮರೆತು ಸಾಮರಸ್ಯದಿಂದ ಬದುಕದಿದ್ದರೆ ಅಭಿವೃದ್ಧಿ ಸಾಧ್ಯವಿಲ್ಲ” ಎಂದರು.

ಜಿಲ್ಲಾಧಿಕಾರಿ ಪೂವಿತಾ ಎಸ್. ಮಾತನಾಡಿ, “ಜಿಲ್ಲೆಯಲ್ಲಿ ಸಾಮರಸ್ಯ ಮೂಡಿಸಲು ಮತ್ತು ಸರ್ಕಾರದ ಯೋಜನೆಗಳನ್ನು ತಲುಪಿಸಲು ಜಿಲ್ಲಾ ಮಟ್ಟದ ಅಧಿಕಾರಿಗಳು ಪ್ರತಿ ವಾರ ತಾಲೂಕು ಹಾಗೂ ಗ್ರಾಮ ಮಟ್ಟಕ್ಕೆ ಭೇಟಿ ನೀಡುತ್ತಿದ್ದಾರೆ” ಎಂದು ವಿವರಣೆ ನೀಡಿದರು.

ದೇವದುರ್ಗ: ಬಿಎಸ್ಪಿ ಮುಖಂಡ ಭೂಮಾನಂದ ಕೊಲೆ ಪ್ರಕರಣದ ತನಿಖೆಗೆ ಆದೇಶ

ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮಕ್ಕೆ ಭೇಟಿ ನೀಡಿದ ಸಚಿವ ಮುನಿಯಪ್ಪ, ಇತ್ತೀಚೆಗೆ ಭೀಕರವಾಗಿ ಕೊಲೆಯಾದ ಬಿಎಸ್ಪಿ ಮುಖಂಡ ಭೂಮಾನಂದ ಅವರ ಕುಟುಂಬಕ್ಕೆ ಸಾಂತ್ವನ ಹೇಳಿದರು.

“ಭೂಮಾನಂದ ಕೊಲೆ ಪ್ರಕರಣವನ್ನು ಪೊಲೀಸರು ಅತ್ಯಂತ ನಿಷ್ಪಕ್ಷಪಾತವಾಗಿ ತನಿಖೆ ಮಾಡುತ್ತಿದ್ದಾರೆ. ತಪ್ಪಿತಸ್ಥ ಆರೋಪಿಗಳಿಗೆ ತಕ್ಕ ಶಿಕ್ಷೆಯಾಗಲಿದೆ. ಈ ಕುರಿತು ಮುಖ್ಯಮಂತ್ರಿಗಳ ಜತೆ ಚರ್ಚಿಸಿ ಸೂಕ್ತ ಪರಿಹಾರ ಘೋಷಿಸಲಾಗುವುದು” ಎಂದರು. ಅಲ್ಲದೆ, ಪರಿಶಿಷ್ಟ ಸಮುದಾಯದವರು ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು, ಅನಗತ್ಯ ಗಲಾಟೆಗಳಿಗೆ ಇಳಿಯದೆ ಕಾನೂನುಬದ್ಧ ಹೋರಾಟದ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಸಚಿವರ ಈ ಭೇಟಿಯ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಎನ್.ಎಸ್. ಬೋಸರಾಜು, ಶಾಸಕರಾದ ಹಂಪಯ್ಯ ನಾಯಕ, ಕರೆಮ್ಮ ಜಿ. ನಾಯಕ, ಸಮಾಜ ಕಲ್ಯಾಣ ಇಲಾಖೆ ಕಾರ್ಯದರ್ಶಿ ಕೆ.ಪಿ. ಮೋಹನ್ ರಾಜ್, ಆಯುಕ್ತ ರಾಕೇಶ್ ಕುಮಾರ್, ರಾಯಚೂರು ಜಿಲ್ಲಾಧಿಕಾರಿ ಪೂವಿತಾ ಎಸ್., ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಅರುಣಾಂಗ್ಷು ಗಿರಿ, ಜಿ.ಪಂ. ಸಿಇಒ ಈಶ್ವರ್ ಕುಮಾರ್ ಕಾಂದೂ, ಅಂಬಣ್ಣ ಅರೋಲಿಕರ್ ಸೇರಿದಂತೆ ವಿವಿಧ ದಲಿತಪರ ಹಾಗೂ ಪ್ರಗತಿಪರ ಸಂಘಟನೆಗಳ ಮುಖಂಡರು ಉಪಸ್ಥಿತರಿದ್ದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿ ಹತ್ಯೆಯಾಗಿ 9 ವರ್ಷ : ಹೋರಾಟಗಾರರು-ಒಡನಾಡಿಗಳಿಂದ ಗೌರವ ನಮನ

ದಿಟ್ಟ ಪತ್ರಕರ್ತೆ, ಹೋರಾಟಗಾರ್ತಿ ಗೌರಿ ಲಂಕೇಶ್‌ ಅವರ 9ನೇ ವರ್ಷದ ಹುತಾತ್ಮ ದಿನದ ಅಂಗವಾಗಿ ಇಂದು (ಸೆ.5) ಬೆಳಿಗ್ಗೆ ಬೆಂಗಳೂರಿನ ಚಾಮರಾಜಪೇಟೆಯಲ್ಲಿರುವ ಅವರ ಸಮಾಧಿ ಬಳಿ ‘ಗೌರಿ ನಮನ ಕಾರ್ಯಕ್ರಮ‘ ನಡೆಯಿತು. ಗೌರಿ ಅವರ...

ಪೆಂಗ್ವಿನ್ ಇಂಡಿಯಾ ಹಿಂದೆ ಸರಿದ ನಂತರ ಸೋನಿಯಾ ಗಾಂಧಿ ಅವರ ಆತ್ಮಚರಿತ್ರೆ ‘ಬಿಲಾಂಗಿಂಗ್’ ಅನ್ನು ಪ್ರಕಟಿಸಲಿರುವ ‘ಹಾರ್ಪರ್‌ಕಾಲಿನ್ಸ್’ 

ನವದೆಹಲಿ: ಕಾಂಗ್ರೆಸ್‌ನ ಹಿರಿಯ ನಾಯಕಿ ಸೋನಿಯಾ ಗಾಂಧಿ ಅವರ ಬಹುನಿರೀಕ್ಷಿತ ಆತ್ಮಚರಿತ್ರೆ ‘ಬಿಲಾಂಗಿಂಗ್: ಎ ಜರ್ನಿ ಆಫ್ ಲವ್’ ಇದೀಗ ಭಾರತದಲ್ಲಿ ಹಾರ್ಪರ್‌ಕಾಲಿನ್ಸ್ ಇಂಡಿಯಾ ಮೂಲಕ ಪ್ರಕಟವಾಗಲಿದೆ. ಪೆಂಗ್ವಿನ್ ರ‍್ಯಾಂಡಮ್ ಹೌಸ್ ಇಂಡಿಯಾ...

ಜೈಲಿನಲ್ಲಿ ಕಂಬಿ ಎಣಿಸುತ್ತಿರುವ 25 ಕ್ರಿಮಿನಲ್‌ಗಳು, ದೆಹಲಿಯ ಜಂತರ್-ಮಂತರ್‌ಗೆ ಬರುಲು ಹೇಗೆ ಸಾಧ? ತನಿಖಾ ವರದಿಯಲ್ಲಿ ಬಯಲಾಯ್ತು ಪೊಲೀಸರ ಕುತಂತ್ರ

ದೆಹಲಿಯ ಜಂತರ್ ಮಂತರ್‌ನಲ್ಲಿ ನಡೆದ ನೀಟ್-ಯುಜಿ (NEET-UG) ಪರೀಕ್ಷಾ ಅಕ್ರಮ ವಿರೋಧಿ ಪ್ರತಿಭಟನೆ ವೇಳೆ ದೆಹಲಿ ಪೊಲೀಸರು ಬಳಸಿದ್ದ ‘ಅಟೋಮೇಟೆಡ್ ಫೇಶಿಯಲ್ ರೆಕಗ್ನಿಷನ್ ಸಿಸ್ಟಮ್’ (AFRS - ಮುಖಚರ್ಯೆ ಗುರುತಿಸುವ ತಂತ್ರಜ್ಞಾನ) ಗಂಭೀರ...

ಪಶ್ಚಿಮ ಬಂಗಾಳ: ವರ್ಷದಲ್ಲಿ 1,000 ಆರ್‌ಎಸ್‌ಎಸ್‌ ಶಾಲೆ: ಶಿಕ್ಷಣ ವ್ಯವಸ್ಥೆಯನ್ನೇ ‘ರಾಷ್ಟ್ರೀಯತಾವಾದಿ’ಗೊಳಿಸುವುದಾಗಿ ಘೋಷಿಸಿದ ಸುವೇಂದು ಅಧಿಕಾರಿ

ಕೋಲ್ಕತ್ತಾ: ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್) ಶೈಕ್ಷಣಿಕ ವಿಭಾಗವಾಗಿರುವ ವಿದ್ಯಾ ಭಾರತಿಯ ಶಾಲೆಗಳ ಸಂಖ್ಯೆಯನ್ನು ಪಶ್ಚಿಮ ಬಂಗಾಳದಲ್ಲಿ ಭಾರಿ ಪ್ರಮಾಣದಲ್ಲಿ ಹೆಚ್ಚಿಸುವುದಾಗಿ ಮುಖ್ಯಮಂತ್ರಿ ಸುವೇಂದು ಅಧಿಕಾರಿ ಘೋಷಿಸಿದ್ದಾರೆ. ರಾಜ್ಯದ ಪ್ರತಿಯೊಂದು ಜಿಲ್ಲೆ, ಪುರಸಭೆ...

SIR ನ್ಯಾಯಸಮ್ಮತವಾಗಿಲ್ಲ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ಆತಂಕ

ಭಾರತೀಯ ಚುನಾವಣಾ ಆಯೋಗವು (ಇಸಿಐ) ದೇಶಾದ್ಯಂತ ಕೈಗೊಂಡಿರುವ ಮತದಾರರ ಪಟ್ಟಿಯ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯು ಶಾಸನಾತ್ಮಕವಾಗಿ ಕಾನೂನುಬದ್ಧವಾಗಿದ್ದರೂ, ನೈತಿಕವಾಗಿ ನ್ಯಾಯಸಮ್ಮತವಾಗಿಲ್ಲ ಎಂದು ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸ ತೀವ್ರ...

ಜಂತರ್ ಮಂತರ್ ಹಲ್ಲೆ: ‘ತಲೆಬುರುಡೆ ಒಡೆದೆ, ಜೈಲಿಗೆ ಹೋಗಲಿಲ್ಲ; ಕಪಿಲ್ ಮಿಶ್ರಾ ನನ್ನ ಅಣ್ಣ’: ಬಿಜೆಪಿ ಬೆಂಬಲದ ಬಗ್ಗೆ ದಾಳಿ ಆರೋಪಿ ಬಹಿರಂಗ ಹೇಳಿಕೆ

ನವದೆಹಲಿ: ದೆಹಲಿಯ ಜಂತರ್ ಮಂತರ್‌ನಲ್ಲಿ ವಿದ್ಯಾರ್ಥಿಗಳ ಪ್ರತಿಭಟನೆಯ ವೇಳೆ ಪ್ರತಿಭಟನಾಕಾರಿಯ ತಂದೆಯ ಮೇಲೆ ನಡೆದ ಹಲ್ಲೆ ಪ್ರಕರಣ ಇದೀಗ ರಾಜಕೀಯ ವಿವಾದದ ಕೇಂದ್ರವಾಗಿದೆ. ಪ್ರಕರಣದ ಆರೋಪಿಯಾಗಿರುವ ಸ್ವತಃ ಬಲಪಂಥೀಯ ಹಾಗೂ ಹಿಂದೂತ್ವ ಕಾರ್ಯಕರ್ತ...

ದೆಹಲಿ: ‘ಖಾನ್’ ಎಂಬ ಹೆಸರಿನ ಕಾರಣಕ್ಕೆ ಪತ್ರಕರ್ತೆಯರ ಮೇಲೆ ಹಲ್ಲೆ ಆರೋಪ, FIR ದಾಖಲಿಸುವಂತೆ ಸಾಕೇತ್ ಠಾಣೆಯಲ್ಲಿ ಧರಣಿ

ದೆಹಲಿಯ ಸಾಕೇತ್ ಮ್ಯಾಕ್ಸ್ ಆಸ್ಪತ್ರೆಯ ಹೊಸ ವಿಭಾಗದ ಉದ್ಘಾಟನಾ ಕಾರ್ಯಕ್ರಮದ ವರದಿಗೆ ತೆರಳಿದ್ದ '4PM ನ್ಯೂಸ್ ನೆಟ್‌ವರ್ಕ್'ನ ಮುಸ್ಲಿಂ ಮಹಿಳಾ ಪತ್ರಕರ್ತೆಯರಾದ ಶಾಹೀನ್ ಖಾನ್ ಮತ್ತು ನಫೀಸಾ ಖಾನ್ ಅವರ ಮೇಲೆ ದಿಲ್ಲಿ...

ಮುಖ್ಯಮಂತ್ರಿಗಳನ್ನು ಪ್ರಶ್ನಿಸಿದ್ದಕ್ಕೆ ದೆಹಲಿ ಪೊಲೀಸರಿಂದ ಬಂಧನ-ಹಲ್ಲೆ: ಇಬ್ಬರು ಪತ್ರಕರ್ತೆಯರ ಆರೋಪ

ಸುದ್ದಿ ಮಾಡುತ್ತಿದ್ದಾಗ ದಕ್ಷಿಣ ದೆಹಲಿಯಲ್ಲಿ ದೆಹಲಿ ಪೊಲೀಸ್ ಸಿಬ್ಬಂದಿ ತಮ್ಮನ್ನು ವಶಕ್ಕೆ ಪಡೆದು ಥಳಿಸಿದ್ದಾರೆ ಎಂದು ಇಬ್ಬರು ಮುಸ್ಲಿಂ ಸ್ವತಂತ್ರ ಮಹಿಳಾ ಪತ್ರಕರ್ತೆಯರು ಆರೋಪಿಸಿದ್ದಾರೆ. '4 ಪಿಎಮ್ ನ್ಯೂಸ್ ನೆಟ್‌ವರ್ಕ್' (4 PM News...

ತ್ರಿಪುರಾ: ‘ದನ ಕಳ್ಳ’ ಎಂದು, ಖರೀದಿಸಿದ ದನಗಳೊಂದಿಗೆ ಹಿಂತಿರುಗುತ್ತಿದ್ದ ಮುಸ್ಲಿಂ ವ್ಯಾಪಾರಿ ಮೇಲೆ ಗುಂಪು ಹಲ್ಲೆ: 46 ವರ್ಷದ ಜಲೀಲುರ್ ರೆಹಮಾನ್ ಸಾವು

ಅಗರ್ತಲಾ: ಖರೀದಿಸಿದ ಎರಡು ದನಗಳನ್ನು ತೆಗೆದುಕೊಂಡು ಹೋಗುತ್ತಿದ್ದ ಮುಸ್ಲಿಂ ದನ ವ್ಯಾಪಾರಿಯೊಬ್ಬರನ್ನು ‘ದನ ಕಳ್ಳ’ ಎಂದು ಆರೋಪಿಸಿ ಗುಂಪೊಂದು ಥಳಿಸಿದ ಪರಿಣಾಮ ಅವರು ಮೃತಪಟ್ಟಿರುವ ಘಟನೆ ತ್ರಿಪುರಾದ ಕಲ್ಯಾಣಪುರ ಪೊಲೀಸ್ ಠಾಣೆ ವ್ಯಾಪ್ತಿಯ...

ಪ್ರಶ್ನಿಸುವವರನ್ನು ‘ದಿಮಾಗಿ ನಕ್ಸಲ್’ ಎಂದು ಕರೆಯುವುದು ಸೂಕ್ಷ್ಮತೆಯಿಲ್ಲದ ನಡವಳಿಕೆ: ಗೀತಾಂಜಲಿ ಅಂಗಮೋ

ಪ್ರಶ್ನೆ ಕೇಳುವ ವ್ಯಕ್ತಿಯನ್ನು ‘ದಿಮಾಗಿ ನಕ್ಸಲ್’ (ಬುದ್ಧಿಜೀವಿ ನಕ್ಸಲರು) ಎಂದು ಕರೆಯುವುದು ಅತ್ಯಂತ ಸೂಕ್ಷ್ಮತೆಯಿಲ್ಲದ ರೀತಿಯಾಗಿದೆ ಎಂದು ಪ್ರಸಿದ್ಧ ಹವಾಮಾನ ಕಾರ್ಯಕರ್ತ ಮತ್ತು ಶಿಕ್ಷಣ ತಜ್ಞ ಸೋನಂ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ...