Homeಕರ್ನಾಟಕಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು?

ಉಪ ಮುಖ್ಯಮಂತ್ರಿಗಳಾಗಿ ಗೋವಿಂದ ಕಾರಜೋಳ, ಆ‌‌ರ್‌‌. ಅಶೋಕ್, ಶ್ರೀರಾಮುಲು?

- Advertisement -

ಹಾಲಿ ಗೃಹ ಸಚಿವ ಬಸವರಾಜ್‌ ಬೊಮ್ಮಾಯಿ ಅವರನ್ನು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿದೆ. ಮಂಗಳವಾರ ರಾತ್ರಿ ಎಂಟು ಗಂಟೆಗೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಒಕ್ಕೂಟ ಸರ್ಕಾರದ ಸಚಿವ ಧರ್ಮೇಂದ್ರ ಪ್ರಧಾನ್‌ ಅಧೀಕೃತವಾಗಿ ನೂತನ ಮುಖ್ಯಮಂತ್ರಿಯ ಆಯ್ಕೆಯನ್ನು ಘೋಷಿಸಿದ್ದಾರೆ.

ಇದರ ಜೊತೆಗೆ ಆರ್‌. ಅಶೋಕ್‌, ಗೋವಿಂದ ಕಾರಜೋಳ ಮತ್ತು ಶ್ರೀರಾಮುಲು ಅವರನ್ನು ಉಪ ಮುಖ್ಯಮಂತ್ರಿಗಳಾಗಿ ಆಯ್ಕೆ ಮಾಡಲಾಗಿದೆ. ಆದರೆ ಅಧೀಕೃತವಾಗಿ ಇನ್ನೂ ಘೋಷಣೆಯಾಗಿಲ್ಲ.

ಬುಧವಾರ ಬೆಳಿಗ್ಗೆ 11.00 ಕ್ಕೆ ರಾಜ್ಯದ 20 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ಸಮಯದಲ್ಲಿ ಹೊಸ ಉಪಮುಖ್ಯಮಂತ್ರಿಗಳಾಗಿ ಮೂವರೂ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆಯಿದೆ.

ಯಡಿಯೂರಪ್ಪ ಅವರು ರಾಜೀನಾಮೆ ನೀಡಿದ ನಂತರ ಬಿಎಲ್ ಸಂತೋಷ್‌, ಸಿಟಿ ರವಿ ಸೇರಿದಂತೆ ಹಲವರ ಹೆಸರು ಕೇಳಿಬಂದಿತ್ತಾದರೂ, ಅಂತಿಮವಾಗಿ ಬಸವರಾಜ್‌ ಬೊಮ್ಮಾಯಿ ಅವರು ಮುಖ್ಯಮಂತ್ರಿಯಾಗಿ ಆಯ್ಕೆಯಾಗಿದ್ದಾರೆ.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಸೀದಿ ಒಡೆಯುವ ಮಾತುಗಳು: ‘ಮುತಾಲಿಕ್‌’ ಮುಂದುವರಿದ ಭಾಗ ‘ಕಾಳಿ ಸ್ವಾಮೀಜಿ’ ಪ್ರಕರಣ

ಕೋಮು ಪ್ರಚೋದನೆ ಮಾಡಿರುವ ರಿಷಿ ಕುಮಾರ ಸ್ವಾಮೀಜಿ (ಕಾಳಿ ಸ್ವಾಮೀಜಿ) ಈಗ ಸುದ್ದಿಯಲ್ಲಿದ್ದಾರೆ. ಮಸೀದಿ ಒಡೆಯಬೇಕೆಂದು ಕರೆ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಬಂಧಿಸಲಾಗಿದೆ. ಬಾಬ್ರಿ ಮಸೀದಿ ರೀತಿಯಲ್ಲಿ ಶ್ರೀರಂಗಪಟ್ಟಣದ ಮಸೀದಿ ಕೆಡವಬೇಕೆಂದು ಕಾಳಿ...
Wordpress Social Share Plugin powered by Ultimatelysocial