Homeಕರ್ನಾಟಕಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

ಕರ್ನಾಟಕ ವಿಧಾನ ಪರಿಷತ್‌ನ 6 ಸ್ಥಾನಗಳಿಗೆ ಚುನಾವಣೆ ಘೋಷಣೆ

- Advertisement -
- Advertisement -

ಕರ್ನಾಟಕ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ಚುನಾವಣೆ ನಡೆಸಲು ಚುನಾವಣಾ ಆಯೋಗ ವೇಳಾಪಟ್ಟಿಯನ್ನು ಪ್ರಕಟಿಸಿದ್ದು, ಜೂನ್ 3ರಂದು ಮತದಾನ ನಡೆಯಲಿದೆ.

ಕರ್ನಾಟಕ ವಿಧಾನ ಪರಿಷತ್ತಿನ 3 ಶಿಕ್ಷಕರ ಕ್ಷೇತ್ರ ಮತ್ತು 3 ಪದವೀಧರ ಕ್ಷೇತ್ರಗಳಿಗೆ ಚುನಾವಣೆ ಘೋಷಿಸಲಾಗಿದೆ. ಜೂನ್ 3ರಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಜೂನ್ 6ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ನಾಮಪತ್ರ ಸಲ್ಲಿಕೆಗೆ ಮೇ.16 ಕೊ‌ನೆಯ ದಿನವಾಗಿದ್ದು, ನಾಮಪತ್ರ ಪರಿಶೀಲನೆ ಪ್ರಕ್ರಿಯೆ ಮೇ.17ಕ್ಕೆ ನಡೆಯಲಿದೆ. ನಾಮಪತ್ರ ಹಿಂಪಡೆಯಲು ಮೇ.20 ಕೊನೆಯ ದಿನವಾಗಿದೆ.

ಈಶಾನ್ಯ ಪದವೀಧರ, ನೈಋತ್ಯ ಪದವೀಧರ, ಬೆಂಗಳೂರು ಪದವೀಧರ, ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ, ದಕ್ಷಿಣ ಶಿಕ್ಷಕರ ಕ್ಷೇತ್ರಕ್ಕೆ ಚುನಾವಣೆ ನಡೆಯಲಿದೆ. ರಾಜ್ಯದ ಈಶಾನ್ಯ ಪದವೀಧರರ ಕ್ಷೇತ್ರದ ಡಾ.ಚಂದ್ರಶೇಖರ್‌ ಬಿ. ಪಾಟೀಲ್‌, ನೈರುತ್ಯ ಪದವೀಧರರ ಕ್ಷೇತ್ರದ ಆಯನೂರು ಮಂಜುನಾಥ್‌, ಬೆಂಗಳೂರು ಪದವೀಧರರ ಕ್ಷೇತ್ರದ ಎ.ದೇವೇಗೌಡ, ಆಗ್ನೇಯ ಶಿಕ್ಷಕರ ಕ್ಷೇತ್ರದ ವೈ.ಎ.ನಾರಾಯಣಸ್ವಾಮಿ, ನೈರುತ್ಯ ಶಿಕ್ಷಕರ ಕ್ಷೇತ್ರದ ಎಸ್‌.ಎಲ್‌.ಭೋಜೇಗೌಡ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರದ ಮರಿತಿಬ್ಬೇಗೌಡ ಅವರ ಅವಧಿ ಇದೇ ವರ್ಷ ಜೂನ್‌ 21ರಂದು ಕೊನೆಗೊಳ್ಳಲಿದೆ. ಈ ಹಿನ್ನೆಲೆ ವಿಧಾನಪರಿಷತ್‌ಗೆ ಚುನಾವಣೆಯನ್ನು ಘೋಷಿಸಲಾಗಿದೆ.

ಲೋಕಸಭೆ ಚುನಾವಣೆ ಹಿನ್ನೆಲೆ ಈಗಾಗಲೇ ಎರಡು ಹಂತಗಳ ಮತದಾನ ಪ್ರಕ್ರಿಯೆ ನಡೆದಿದೆ. ಕರ್ನಾಟಕದ 14 ಕ್ಷೇತ್ರಗಳಿಗೆ ಎರಡನೇ ಹಂತದ ಚುನಾವಣೆಯ ವೇಳೆ ಮತದಾನ ನಡೆದಿತ್ತು. ಮೇ.7ರಂದು ಮೂರನೇ ಹಂತದ ಚುನಾವಣೆ ನಡೆಯಲಿದೆ. ಈ ವೇಳೆ ಕರ್ನಾಟಕದ 14 ಕ್ಷೇತ್ರಗಳಲ್ಲಿ ಮತದಾನ ನಡೆಯಲಿದೆ.

ಇದನ್ನು ಓದಿ: ‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ ಬರೆದ ಖರ್ಗೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಿಎಎ ಅಡಿ ಪೌರತ್ವ ನೀಡಿದ ಕೇಂದ್ರ ಸರ್ಕಾರ: ಸುಪ್ರೀಂ ಮೆಟ್ಟಿಲೇರಲು ನಿರ್ಧರಿಸಿದ ಮುಸ್ಲಿಂ ಲೀಗ್

0
ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಅಡಿ ಪಾಕಿಸ್ತಾನ, ಬಾಂಗ್ಲಾದೇಶ ಮತ್ತು ಅಫ್ಘಾನಿಸ್ತಾನದ ಮುಸ್ಲಿಮೇತರರಿಗೆ ಭಾರತೀಯ ಪೌರತ್ವ ನೀಡುವ ಪ್ರಕ್ರಿಯೆಯನ್ನು ಕೇಂದ್ರ ಗೃಹ ಇಲಾಖೆ ಪ್ರಾರಂಭಿಸಿದೆ. ಈಗಾಗಲೇ ಮೊದಲ ಹಂತದಲ್ಲಿ ಅರ್ಜಿ ಸಲ್ಲಿಸಿದ 300ಕ್ಕೂ ಅಧಿಕ...