Homeಕರ್ನಾಟಕಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

ಬರಗೂರು, ದೇವನೂರರ ಅವಮಾನ ಮಾಡಿದರೆ ಸಹಿಸಲ್ಲ: ಕರವೇ ರಾಜ್ಯಾಧ್ಯಕ್ಷ ನಾರಾಯಣ ಗೌಡ ಎಚ್ಚರಿಕೆ

- Advertisement -
- Advertisement -

ಪಠ್ಯ ಪರಿಷ್ಕರಣೆ ವಿವಾದ ಮತ್ತಷ್ಟು ಭುಗಿಲೆದ್ದಿದ್ದು, ಮಂಗಳವಾರದಂದು ಪತ್ರಿಕಾ ಹೇಳಿಕೆ ನೀಡಿರುವ ನಾಡಿನ ಹಿರಿಯ ಸಾಹಿತಿ ದೇವನೂರ ಮಹಾದೇವ ಅವರು ಪಠ್ಯದಿಂದ ತನ್ನ ಬರಹಗಳನ್ನು ಕೈಬಿಡುವಂತೆ ಸರ್ಕಾರವನ್ನು ಕೇಳಿದ್ದಾರೆ. ಈ ಎಲ್ಲಾ ಬೆಳವಣಿಗೆಯ ಬಗ್ಗೆ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯಾಧ್ಯಕ್ಷ ನಾರಾಯಣ ಗೌಡ ಟಿಎ ಅವರು, ದೇವನೂರು ಮಹದೇವ, ಬರಗೂರು ರಾಮಚಂದ್ರಪ್ಪ ಸೇರಿದಂತೆ ಕನ್ನಡದ ಹಿರಿಯ ಸಾಹಿತಿಗಳು ಕನ್ನಡದ ಆಸ್ತಿ, ಕನ್ನಡತನದ ಪ್ರತೀಕ, ಕನ್ನಡಿಗರ ಹೆಮ್ಮೆ ಎಂದು ಹೇಳಿದ್ದಾರೆ.

“ಸಾಹಿತಿಗಳಿಗೆ ಅಪಚಾರ, ಅಪಮಾನ ಎಸಗುವ ಯಾವ ಕೆಲಸವನ್ನೂ ಯಾರೂ ಮಾಡಬಾರದು. ಕರ್ನಾಟಕ ರಕ್ಷಣಾ‌ ವೇದಿಕೆ ಇದನ್ನು ಯಾವುದೇ ಕಾರಣಕ್ಕೂ ಸಹಿಸುವುದಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು” ಎಂದು ಅವರು ಆಗ್ರಹಿಸಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಈ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ಪ್ರತಿಕ್ರಿಯಿಸಿರುವ ನಾರಾಯಣ ಗೌಡ ಅವರು, “ಕರ್ನಾಟಕದ, ಕನ್ನಡದ ಕೀರ್ತಿಶಿಖರಗಳಲ್ಲಿ ಒಬ್ಬರಾದ ಮೇರುಸಾಹಿತಿ ದೇವನೂರು ಮಹಾದೇವ ಅವರು ಹತ್ತನೇ ತರಗತಿಯ ಪಠ್ಯಕ್ಕೆ ನೀಡಿದ್ದ ‘ಎದೆಗೆ ಬಿದ್ದ ಅಕ್ಷರ’ ಲೇಖನ ಹಿಂದಕ್ಕೆ ಪಡೆದಿರುವುದನ್ನು ಕೇಳಿ ಆಘಾತವಾಯಿತು” ಎಂದು ಹೇಳಿದ್ದಾರೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕ್ಷಣಕಾಲವೂ ತಡಮಾಡದೆ ಮಧ್ಯೆ ಪ್ರವೇಶಿಸಿ ಬಿಕ್ಕಟ್ಟನ್ನು‌ ಬಗೆಹರಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಸಚಿವ ಬಿಸಿ ನಾಗೇಶ್‌ ತಪ್ಪು ಮಾಹಿತಿ ನೀಡಿದ್ದಾರೆ’: ಪಠ್ಯಪುಸ್ತಕದ ಬಗ್ಗೆ ಬರಗೂರು ರಾಮಚಂದ್ರಪ್ಪ ಸ್ಪಷ್ಟನೆ

“ತಮ್ಮ ಪಠ್ಯವನ್ನು ಹಿಂದಕ್ಕೆ ಪಡೆದ ಘಟನೆ ಕರ್ನಾಟಕದ ಇತಿಹಾಸದಲ್ಲಿ ಮೊದಲಬಾರಿ ಘಟಿಸಿದೆ. ಕರ್ನಾಟಕ ಸರ್ಕಾರಕ್ಕೆ ಇದು ಶೋಭೆ ತರುವ ವಿಷಯವಲ್ಲ‌. ಇಂಥ ನಿರ್ಧಾರ ಕೈಗೊಳ್ಳುವ ಹಿನ್ನೆಲೆಯಲ್ಲಿ ದೇವನೂರು ಅವರು ಅನುಭವಿಸಿರುವ ಮಾನಸಿಕ ಯಾತನೆಯನ್ನು ಮುಖ್ಯಮಂತ್ರಿಗಳು ಅರ್ಥ ಮಾಡಿಕೊಳ್ಳಬೇಕು. ಇದು ನಾಡಿನ ದೃಷ್ಟಿಯಲ್ಲಿ ಒಳ್ಳೆಯ ಬೆಳವಣಿಗೆಯಲ್ಲ” ಎಂದು ಅವರು ಹೇಳಿದ್ದಾರೆ.

“ಪಠ್ಯಪುಸ್ತಕ ಪುನರ್ ಪರಿಶೀಲನೆಗಾಗಿ ಸಮಿತಿ ನೇಮಕ ಮಾಡಿದಾಗಲೇ ಸರ್ಕಾರ ಎಡವಿದೆ. ಸಮಿತಿಗೆ ನೇಮಕ ಮಾಡಲು ಬಲಪಂಥೀಯ ವಿದ್ವಾಂಸರು, ಶಿಕ್ಷಣ ತಜ್ಞರೇ ಬೇಕು ಎಂದಿದ್ದರೆ ಹಲವಾರು ಮಂದಿ ಸಜ್ಜನರು, ಎದೆಯಲ್ಲಿ ನಂಜು ಇಟ್ಟುಕೊಳ್ಳದೆ ಕಾರ್ಯ ನಿರ್ವಹಿಸುವವರು ಲಭ್ಯವಿದ್ದರು. ಆದರೆ ಸರ್ಕಾರ ಇಂಥವರನ್ನು ನೇಮಕ ಮಾಡದೆ ತಪ್ಪೆಸಗಿದೆ” ಎಂದು ಅವರು ಹೇಳಿದ್ದಾರೆ.

“ಶಿಕ್ಷಣ ತಜ್ಞನಲ್ಲದ, ಕನ್ನಡ ಸಾಹಿತಿಗಳ ಕುರಿತು ಅಗೌರವ ಹೊಂದಿರುವ, ರಾಷ್ಟ್ರಕವಿ ಕುವೆಂಪು ಅವರನ್ನು ನಿಂದಿಸಿ ಲೇಖನ ಬರೆದ, ನಾಡಗೀತೆಯನ್ನು ಅತ್ಯಂತ‌ ಕೊಳಕಾಗಿ ಪರಿಷ್ಕರಿಸಿ ಬರೆದ, ಕನ್ನಡಿಗರ ಅಸ್ಮಿತೆಯ ಪ್ರತೀಕವಾದ ಕನ್ನಡ ಧ್ವಜವನ್ನು ತನ್ನ ಒಳಚೆಡ್ಡಿಗೆ ಹೋಲಿಸಿದ ವ್ಯಕ್ತಿಯನ್ನು ಪಠ್ಯ ಪುಸ್ತಕ ಸಮಿತಿಗೆ ಅಧ್ಯಕ್ಷನನ್ನಾಗಿ ಆಯ್ಕೆ ಮಾಡಿದ್ದೇ ಮೊದಲ ತಪ್ಪು” ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

“ಸಾಮಾಜಿಕ ಜಾಲತಾಣಗಳಲ್ಲಿ ಸದಾ ಕನ್ನಡದ್ರೋಹದ ಕೆಲಸವನ್ನೇ ಮಾಡಿಕೊಂಡು ಬಂದ ವ್ಯಕ್ತಿಯನ್ನು ಪಠ್ಯಪುಸ್ತಕ ಪರಿಶೀಲನೆಗೆ ಬಿಟ್ಟರೆ ಏನಾಗಬಹುದು ಎಂಬುದನ್ನು ಇಂದು ನಾವು ನೋಡುತ್ತಿದ್ದೇವೆ. ಕನ್ನಡದ ಸಾರಸ್ವತ ಲೋಕ ಎದ್ದು ನಿಂತು ಪ್ರತಿಭಟಿಸುತ್ತಿದೆ. ಮಕ್ಕಳ ಪಠ್ಯದಲ್ಲಿ ನಂಜು ತುಂಬುವ ಇಂಥವರ ವಿರುದ್ಧ ಶೈಕ್ಷಣಿಕ, ಬುದ್ಧಿಜೀವಿ ವಲಯ ಧ್ವನಿ ಎತ್ತಿದೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: RSS, ಬಿಜೆಪಿಯ ಪಠ್ಯ ಪರಿಷ್ಕರಣೆಗೆ ವಿರೋಧ: ತನ್ನ ಪಠ್ಯ ಕೈಬಿಡಲು ದೇವನೂರ ಮಹಾದೇವ ಪತ್ರ

“ಸರ್ಕಾರ ಕೂಡಲೇ ಪರಿಷ್ಕರಣಾ ಸಮಿತಿಯ ಎಲ್ಲ ಪರಿಷ್ಕರಣೆಯನ್ನೂ ತಿರಸ್ಕರಿಸಬೇಕು. ಈಗಾಗಲೇ ಮುದ್ರಿಸಿರುವ ಹಳೆಯ ಪಠ್ಯಪುಸ್ತಕಗಳನ್ನೇ ಶಾಲೆಗಳಿಗೆ ನೀಡಬೇಕು. ಶಾಲೆಗಳು ಈಗಾಗಲೇ ಆರಂಭವಾಗಿರುವುದರಿಂದ ವಿದ್ಯಾರ್ಥಿಗಳಿಗೆ ಅನಾನುಕೂಲವಾಗದಂತೆ ಕೂಡಲೇ ಹಳೆಯ ಪಠ್ಯ ಪುಸ್ತಕಗಳನ್ನೇ ಒದಗಿಸಬೇಕು. ಇಷ್ಟೆಲ್ಲ ಅವಾಂತರಕ್ಕೆ ಕಾರಣವಾದ ಸಮಿತಿಯನ್ನು ಈ ಕೂಡಲೇ ವಿಸರ್ಜಿಸಬೇಕು” ಎಂದು ನಾರಾಯಣ ಗೌಡ ಅವರು ಒತ್ತಾಯಿಸಿದ್ದಾರೆ.

“ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರರು ಸಾಮಾಜಿಕ, ಸಾಂಸ್ಕೃತಿಕ ವಿಷಯಗಳಲ್ಲಿ ಎಚ್ಚರ‌ ಮತ್ತು ಪ್ರಜ್ಞೆ ಉಳ್ಳವರು. ಅವರು ಯಾವುದೇ ರೀತಿಯ ಬಾಹ್ಯ ಒತ್ತಡಕ್ಕೆ ಒಳಗಾಗದೆ ನಾಯಕತ್ವದ ಗುಣವನ್ನು ಪ್ರದರ್ಶಿಸಬೇಕು. ಕೂಡಲೇ ಮಧ್ಯಪ್ರವೇಶಿಸಿ ವಿವಾದವನ್ನು‌ ಬಗೆಹರಿಸಬೇಕು” ಎಂದು ನಾರಾಯಣ ಗೌಡ ಮನವಿ ಮಾಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...