Homeಮುಖಪುಟಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

ಕಾರ್ಗಿಲ್ ಯೋಧನ ಕುಟುಂಬಕ್ಕೆ ಭಾರತೀಯ ಪೌರತ್ವ ಸಾಬೀತುಪಡಿಸಲು ಒತ್ತಾಯ: ವರದಿ

- Advertisement -
- Advertisement -

ಶನಿವಾರ ತಡರಾತ್ರಿ ಪೊಲೀಸರೊಂದಿಗೆ ಮನೆಗೆ ನುಗ್ಗಿದ 30 ರಿಂದ 40 ಜನರ ಗುಂಪು, ನಮ್ಮ ಭಾರತೀಯ ಪೌರತ್ವ ಸಾಬೀತು ಮಾಡುವಂತೆ ಒತ್ತಾಯಿಸಿದೆ ಎಂದು ಕಾರ್ಗಿಲ್ ಯುದ್ದದಲ್ಲಿ ಪಾಲ್ಗೊಂಡಿದ್ದ ಪುಣೆ ಮೂಲದ ನಿವೃತ್ತ ಹಿರಿಯ ಯೋಧನ ಕುಟುಂಬ ಆರೋಪಿಸಿದೆ.

ತಡರಾತ್ರಿ ಪುಣೆಯ ಚಂದನ್ ನಗರದ ನಮ್ಮ ಮನೆಗೆ ಏಕಾಏಕಿ ಮನೆಗ ನುಗ್ಗಿದ ಗುಂಪು, ನಮ್ಮ ಭಾರತೀಯ ಪೌರತ್ವದ ದಾಖಲೆಗಳನ್ನು ತೋರಿಸುವಂತೆ ಒತ್ತಾಯಿಸಿದೆ. ಅಲ್ಲದೆ, ನಮ್ಮನ್ನು ಪೊಲೀಸ್ ಠಾಣೆಗೆ ಕರೆದೊಯ್ಯಲಾಗಿದೆ ಎಂದು1999ರಲ್ಲಿ ಕಾರ್ಗಿಲ್ ಯುದ್ಧದಲ್ಲಿ ಭಾಗವಹಿಸಿದ್ದ ನಿವೃತ್ತ ಯೋಧ ಹಕೀಮುದ್ದೀನ್ ಶೇಖ್ ಅವರ ಕುಟುಂಬ ಮಂಗಳವಾರ ಹೇಳಿಕೊಂಡಿದೆ.

“ಬೆಳಿಗ್ಗೆ 3 ಗಂಟೆಯವರೆಗೆ ಕಾಯುತ್ತೇವೆ . ಅದರೊಳಗೆ ನೀವು ಪೌರತ್ವ ಸಾಬೀತು ಮಾಡಲು ವಿಫಲರಾದರೆ, ನಿಮ್ಮನ್ನು ಬಾಂಗ್ಲಾದೇಶಿಯರು ಅಥವಾ ರೋಹಿಂಗ್ಯಾಗಳು ಎಂಬುವುದಾಗಿ ಘೋಷಿಸುತ್ತೇವೆ” ಎಂದು ನಮಗೆ ಬೆದರಿಕೆ ಹಾಕಲಾಗಿದೆ ಎಂದು ಯೋಧನ ಕುಟುಂಬ ತಿಳಿಸಿದೆ.

“ಅಕ್ರಮ ವಲಸಿಗರು ಎಂಬ ಶಂಕೆಯ ಮೇಲೆ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ನಮ್ಮ ತಂಡ ದಾಖಲೆಗಳನ್ನು ಕೇಳಿತ್ತು. ಅವರು ಭಾರತೀಯರು ಎಂದು ಖಚಿತವಾದ ಬಳಿಕ, ಅವರನ್ನು ಬಿಟ್ಟು ಕಳಿಸಿದ್ದೇವೆ. ಪೊಲೀಸರ ತಂಡದೊಂದಿಗೆ ಹೊರಗಿನವರು ಯಾರು ಇರಲಿಲ್ಲ. ಈ ಬಗ್ಗೆ ವಿಡಿಯೋ ಇದೆ” ಎಂದು ಡಿಸಿಪಿ ಸೋಮೈ ಮುಂಡೆ ಹೆಳಿದ್ದಾರೆ.

58 ವರ್ಷದ ನಿವೃತ್ತ ಯೋಧ ಹಕೀಮುದ್ದೀನ್ ಅವರು, 1984ರಿಂದ 2000ವರೆಗೆ ಭಾರತೀಯ ಸೇನೆಯ 269ನೇ ಇಂಜಿನಿಯರ್ ರೆಜೆಮೆಂಟ್‌ನಲ್ಲಿ 16 ವರ್ಷದ ಸೇವೆ ಸಲ್ಲಿಸಿದವರು. “ಕಾರ್ಗಿಲ್ ಯುದ್ದದಲ್ಲಿ ನಾನು ಈ ದೇಶಕ್ಕೋಸ್ಕರ ಹೋರಾಡಿದವನು. ನನ್ನ ಇಡೀ ಕುಟುಂಬ ಈ ದೇಶಕ್ಕೆ ಸಮರ್ಪಿತವಾಗಿದೆ. ನಮ್ಮನ್ನೇಕೆ ಪೌರತ್ವ ಸಾಬೀತುಪಡಿಸಲು ಕೇಳಿದ್ದು? ಎಂದು ಹಕೀಮುದ್ದೀನ್ ಪ್ರಶ್ನಿಸಿದ್ದಾರೆ.

ಹಕೀಮುದ್ದೀನ್ ಅವರ ಕುಟುಂಬಸ್ಥರು ಮೂಲತಃ ಉತ್ತರ ಪ್ರದೇಶದ ಪ್ರತಾಪ್‌ಘಡದವರು, 1960ರಿಂದ ಪುಣೆಯಲ್ಲಿ ವಾಸಿಸುತ್ತಿದ್ದಾರೆ. ಹಕೀಮುದ್ದೀನ್ 2013ರಲ್ಲಿ ತನ್ನ ಸ್ವಗ್ರಾಮಕ್ಕೆ ಹಿಂದಿರುಗಿದ್ದಾರೆ. ಅವರ ಸಹೋದರ,ಇತರ ಕುಟುಂಬಸ್ಥರು ಮತ್ತು ಸಂಬಂಧಿಕರು ಪುಣೆಯಲ್ಲೇ ಇದ್ದಾರೆ.

ಅಪರಿಚಿತ ಪುರುಷರ ಗುಂಪೊಂದು ಘೋಷಣೆಗಳನ್ನು ಕೂಗುತ್ತಾ ನಮ್ಮ ಮನೆ ಬಳಿಗೆ ಬಂತು. ಬಾಗಿಲಿಗೆ ಒದ್ದು ಏಕಾಏಕಿ ಮನೆಯೊಳಗೆ ನುಗ್ಗಿತು. ದಾಖಲೆಗಳನ್ನು ನೀಡುವಂತೆ ಒತ್ತಾಯಿಸಿತು. ಸಿವಿಲ್ ಡ್ರೆಸ್‌ನಲ್ಲಿದ್ದ ಅಧಿಕಾರಿಯೊಬ್ಬರು ಅವರನ್ನು ಶಾಂತಗೊಳಿಸಲು ಪ್ರಯತ್ನಿಸಿದರು. ಪೊಲೀಸ್ ವ್ಯಾನ್ ರಸ್ತೆಯಲ್ಲಿ ಕಾಯುತ್ತಿತ್ತು” ಎಂದು ಹಕೀಮುದ್ದೀನ್ ಅವರ ಸಹೋದರ ಇರ್ಷಾದ್ ಶೇಖ್ ಹೇಳಿದ್ದಾರೆ.

ಹಕೀಮುದ್ದೀನ್ ಮಾತ್ರವಲ್ಲದೆ ನಮ್ಮ ಕುಟುಂಬದಲ್ಲಿ ಶೇಖ್ ನಯೀಮುದ್ದೀನ್ ಮತ್ತು ಶೇಖ್ ಮೊಹಮ್ಮದ್ ಸಲೀಂ ಎಂಬ ಇನ್ನಿಬ್ಬರು ನಿವೃತ್ತ ಯೋಧರಿದ್ದಾರೆ. ಅವರು 1965 ಮತ್ತು 1971ರ ಯುದ್ಧಗಳಲ್ಲಿ ದೇಶಕ್ಕಾಗಿ ಹೋರಾಡಿವದರು. “ಸೈನಿಕರ ಕುಟುಂಬಗಳನ್ನು ಹೀಗೆ ನಡೆಸಿಕೊಳ್ಳುತ್ತಾರಾ? ಎಂದು ಇರ್ಷಾದ್ ಪ್ರಶ್ನಿಸಿದ್ದಾರೆ. ಸಿಕ್ಕ ಸಿಕ್ಕವರು ಬಾಗಿಲು ತಟ್ಟಿದಾಗಲೆಲ್ಲಾ ನಮ್ಮ ಪೌರತ್ವ ಸಾಬೀತುಪಡಿಸಬೇಕಾದರೆ ನಾವು ಭಾರತೀಯರಾಗಿರುವುದರ ಅರ್ಥವೇನು? ಎಂದಿದ್ದಾರೆ.

ಮನೆಗೆ ನುಗ್ಗಿದ ಗುಂಪು ದಾಖಲೆಗಳನ್ನು ತೋರಿಸಿದರೂ ಅದನ್ನು ನಿರಾಕರಿಸಿದೆ ಎಂದು ಆರೋಪಿಸಲಾಗಿದೆ. ನಾವು ಆಧಾರ್ ಕಾರ್ಡ್ ತೋರಿಸಿದರೂ, ಅದು ನಕಲಿ ಎಂದು ಗುಂಪು ಅಪಹಾಸ್ಯ ಮಾಡಿತು ಎಂದು ಯೋಧ ಹಕೀಮುದ್ದೀನ್ ಅವರ ಸೋದರಳಿಯರಾದ ನೌಶಾದ್ ಮತ್ತು ನವಾಬ್ ಶೇಖ್ ಹೇಳಿದ್ದಾರೆ. ಅವರು ಗೂಂಡಾಗಳಂತೆ ವರ್ತಿಸಿದ್ದಾರೆ ಎಂದು ನೌಶಾದ್ ಆರೋಪಿಸಿದ್ದು, ಅವರು ಬಾಗಿಲಿಗೆ ಒದ್ದರು, ಮಹಿಳೆಯರ ಮುಂದೆ ದಾಖಲೆ ತೋರಿಸುವಂತೆ ಅಬ್ಬರಿಸಿದರು ಎಂದು ಹೇಳಿದ್ದಾರೆ.

ಭಾನುವಾರ ಕೂಡ ನಮ್ಮನ್ನು ಪೊಲೀಸ್ ಠಾಣೆಗೆ ಕರೆಸಲಾಗಿತ್ತು. ಅಲ್ಲಿ ನಮ್ಮ ದಾಖಲೆಗಳನ್ನು ಪಡೆದು ಎರಡು ಗಂಟೆ ಕಾಯಿಸಿದರು. ನಂತರ ಇನ್‌ಸ್ಪೆಕ್ಟರ್ ಬರಲ್ಲ ಎಂದು ಕಳಿಸಿದರು. ನಮ್ಮ ದಾಖಲೆಗಳು ಈಗಲೂ ಅವರ ಬಳಿಯಿದೆ ಎಂದು ಮತ್ತೊಬ್ಬರು ಶಂಶಾದ್ ಶೇಖ್ ತಿಳಿಸಿದ್ದಾರೆ.

ಈ ಪ್ರಕರಣದ ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಆಯುಕ್ತ ಅಮಿತೇಶ್ ಕುಮಾರ್ ಹೇಳಿದ್ದು, “ನಿರ್ಲಕ್ಷ್ಯ ಕಂಡುಬಂದರೆ ಕ್ರಮ ಕೈಗೊಳ್ಳಲಾಗುವುದು. ಪ್ರಾಥಮಿಕ ಮಾಹಿತಿ ಪ್ರಕಾರ ಪೊಲೀಸರು ಬಲವಂತವಾಗಿ ಮನೆಗೆ ಪ್ರವೇಶಿಸಿಲ್ಲ” ಎಂದಿದ್ದಾರೆ.

Courtesy: timesofindia.indiatimes.com

ಅಸ್ಸಾಂನ ಗೋಲಾಘಾಟ್‌ನಲ್ಲಿ ಬೃಹತ್ ತೆರವು ಕಾರ್ಯಾಚರಣೆ: ನೆಲೆ ಕಳೆದುಕೊಳ್ಳಲಿರುವ 1,500ಕ್ಕೂ ಹೆಚ್ಚು ಮುಸ್ಲಿಂ ಕುಟುಂಬಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...

ರಾಜಸ್ಥಾನ| ಸಾರ್ವಜನಿಕ ಕಾರ್ಯಕ್ರಮದಲ್ಲಿ ವೃದ್ಧ ಮಹಿಳೆಯನ್ನು ಕಾಲಿನಿಂದ ಒದ್ದ ವ್ಯಕ್ತಿ

ರಾಜಸ್ಥಾನದ ಬಾರ್ಮರ್ ಜಿಲ್ಲೆಯಲ್ಲಿ ನಡೆಯುತ್ತಿದ್ದ ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ವೃದ್ಧ ಮಹಿಳೆಯನ್ನು ಒದೆಯುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ವ್ಯಕ್ತಿಯನ್ನು ಬಂಧಿಸಲಾಗಿದೆ. ಆತನ ಕೃತ್ಯದ ವಿರುದ್ಧ ವ್ಯಾಪಕ ಆಕ್ರೋಶಕ್ಕೆ ವ್ಯಕ್ತವಾಗಿದೆ. ಜತೋನ್ ಕಾ...

ಅಜಿತ್ ಪವಾರ್ ವಿಮಾನ ದುರಂತ: ಅಪಘಾತ ಸ್ಥಳದಲ್ಲಿ ಬ್ಲಾಕ್ ಬಾಕ್ಸ್ ಪತ್ತೆ..!

ನವದೆಹಲಿ: ಮಹಾರಾಷ್ಟ್ರ ಉಪಮುಖ್ಯಮಂತ್ರಿ ಅಜಿತ್ ಪವಾರ್ ಮತ್ತು ಇತರ ನಾಲ್ವರು ಸಾವನ್ನಪ್ಪಿದ ಬಾರಾಮತಿ ವಿಮಾನ ನಿಲ್ದಾಣದಲ್ಲಿ ಬುಧವಾರ ಸಂಭವಿಸಿದ ವಿಮಾನ ಅಪಘಾತದ ತನಿಖೆಯ ಕುರಿತು ನಾಗರಿಕ ವಿಮಾನಯಾನ ಸಚಿವಾಲಯ (MoCA) ಗುರುವಾರ ಹೇಳಿಕೆ...

ಮೀಸಲಾತಿಗಾಗಿ ಪ್ರಬಲ ಜಾತಿಯ ವ್ಯಕ್ತಿ ಬೌದ್ಧ ಧರ್ಮಕ್ಕೆ ಮತಾಂತರ : ಹೊಸ ಬಗೆಯ ವಂಚನೆ ಎಂದ ಸುಪ್ರೀಂ ಕೋರ್ಟ್

ಇಬ್ಬರು ಪ್ರಬಲ ಜಾತಿ ಅಭ್ಯರ್ಥಿಗಳು ಬೌದ್ಧ ಧರ್ಮಕ್ಕೆ ಮತಾಂತರಗೊಂಡಿರುವ ಬಗ್ಗೆ ಮಂಗಳವಾರ (ಜ.27) ಸುಪ್ರೀಂ ಕೋರ್ಟ್ ಗಂಭೀರ ಅನುಮಾನ ವ್ಯಕ್ತಪಡಿಸಿದ್ದು, ಈ ನಡೆಯು ಸ್ನಾತಕೋತ್ತರ ವೈದ್ಯಕೀಯ ಕೋರ್ಸ್‌ಗಳಿಗೆ ಅಲ್ಪಸಂಖ್ಯಾತ ಕೋಟಾದ ಅಡಿಯಲ್ಲಿ ಪ್ರವೇಶ...