Homeಕರ್ನಾಟಕಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

ಕಾರ್ಕಳ: ಗೋಡ್ಸೆ ಬೋರ್ಡ್ ತೆರವು; ರಸ್ತೆಗೆ ನಾರಾಯಣಗುರುಗಳ ಹೆಸರಿಡುವಂತೆ ಕಾಂಗ್ರೆಸ್ ಆಗ್ರಹ

- Advertisement -
- Advertisement -

ಉಡುಪಿ ಜಿಲ್ಲೆ, ಕಾರ್ಕಳ ತಾಲ್ಲೂಕಿನ ಬೋಳ ಗ್ರಾಮ ಪಂಚಾಯಿತಿಗೆ ಸೇರಿದ ರಸ್ತೆಯೊಂದಕ್ಕೆ ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರನ್ನು ಹತ್ಯೆ ಮಾಡಿದ ‘ನಾಥೂರಾಮ್‌ ಗೋಡ್ಸೆ’ ಹೆಸರನ್ನು ಯಾರೋ ಕಿಡಿಗೇಡಿಗಳು ಇಟ್ಟಿದ್ದು ವಿವಾದದ ಸ್ವರೂಪ ಪಡೆದ ಬೆನ್ನಲ್ಲೇ ಸ್ಥಳೀಯ ಮುಖಂಡರು ಕ್ರಮ ವಹಿಸಿದ್ದಾರೆ.

ಸ್ಥಳಕ್ಕೆ ಧಾವಿಸಿದ ಸ್ಥಳೀಯ ಕಾಂಗ್ರೆಸ್ ಮುಖಂಡರು ಬೋರ್ಡ್ ತೆರವು ಮಾಡಿಸುವಲ್ಲಿ ಯಶಸ್ವಿಯಾಗಿದ್ದು, “ಈ ರಸ್ತೆಗೆ ಗೋಡ್ಸೆ ಹೆಸರಿನ ಬದಲು ಸಮಾಜ ಸುಧಾರಕ ನಾರಾಯಣಗುರುಗಳ ಹೆಸರು ಇಡಬೇಕು” ಎಂದು ಆಗ್ರಹಿಸಿದ್ದಾರೆ.

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಬಿ.ಕೆ.ಹರಿಪ್ರಸಾದ್, “ಈ ನೆಲದಲ್ಲಿ ಗೋಡ್ಸೆ ಸಂತತಿಗಳನ್ನ ಬುಡ ಸಮೇತ ಕಿತ್ತು ಹಾಕಬೇಕು. ಅದು ಥೇಟ್ ಕಾರ್ಕಳದ ರಸ್ತೆಗೆ ಇಟ್ಟಿದ್ದ ಗೋಡ್ಸೆಯ ನಾಮಫಲಕವನ್ನ ಕಿತ್ತು ಹಾಕಿದಂತೆ. ನಾಮ ಫಲಕ ತೆರವುಗೊಳಿಸಿ ಅದೇ ಜಾಗದಲ್ಲಿ ಶ್ರೀ ನಾರಾಯಣ ಗುರುಗಳ ಹೆಸರಿಡಲು ಸ್ಥಳೀಯ ಆಡಳಿತಕ್ಕೆ ಮನವಿ ಮಾಡಿರುವ ಯುವ ಕಾಂಗ್ರೆಸ್ ಕಾರ್ಯಕರ್ತರ ಕೆಲಸಕ್ಕೆ ಸಲಾಂ” ಎಂದಿದ್ದಾರೆ.

ಕಾರ್ಕಳ ವಿಧಾನಸಭಾ ಕ್ಷೇತ್ರವನ್ನು ರಾಜ್ಯದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್‌ಕುಮಾರ್‌ ಅವರು ಪ್ರತಿನಿಧಿಸುತ್ತಿರುವುದು ವಿವಾದದ ಕೇಂದ್ರ ಸ್ಥಾನ ಪಡೆದ ಬಳಿಕ ‘ಗೋಡ್ಸೆ ರಸ್ತೆ’ ಫಲಕ ತೆರವಾಗಿದೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ಯುವ ಕಾಂಗ್ರೆಸ್ ಮುಖಂಡ ದೀಪಕ್‌ ಕೋಟ್ಯಾನ್‌ ಮಾತನಾಡಿ, “ಯಾರೋ ಕಿಡಿಗೇಡಿಗಳು ದೇಶದ ಮೊದಲ ಭಯೋತ್ಪಾದಕ ನಾಥೂರಾಮ್‌ ಗೋಡ್ಸೆ ಹೆಸರನ್ನು ಇಟ್ಟಿದ್ದರು. ಬ್ಲಾಕ್‌ ಕಾಂಗ್ರೆಸ್ ಮುಖಂಡರು ಪ್ರತಿಭಟನೆಯ ಎಚ್ಚರಿಕೆ ನೀಡಿದೆವು. ಇದರಿಂದ ಎಚ್ಚೆತ್ತ ಬೋಳ ಗ್ರಾಪಂ ಪಿಡಿಒ ಹಾಗೂ ಆಡಳಿತ ವರ್ಗ ಬೋರ್ಡ್ ತೆರವುಗೊಳಿಸಿದೆ” ಎಂದು ತಿಳಿಸಿದ್ದಾರೆ.

“ಬೋರ್ಡ್ ಹಾಕುವಂತಹ ಘಟನೆಗಳು ಖಂಡನೀಯ ಹಾಗೂ ಖೇದಕರ. ಬಿಜೆಪಿ ಸರ್ಕಾರದ ಅವಧಿಯಲ್ಲಿ ದೇಶ ಎತ್ತ ಸಾಗುತ್ತಿದೆ? ಯುವಕರಿಗೆ ಎಂತಹ ಸಂದೇಶವನ್ನು ನೀಡುತ್ತಿದ್ದಾರೆ ಎಂಬುದು ಕಳವಳಕಾರಿ ವಿಚಾರವಾಗಿದೆ. ಮುಂದೆ ಏನಾದರೂ ಇದು ಮರುಕಳುಸಿದರೆ ಉಡುಪಿ ಕಾಂಗ್ರೆಸ್‌ ಘಟಕವು ಉಗ್ರ ಹೋರಾಟವನ್ನು ಹಮ್ಮಿಕೊಳ್ಳಲಿದೆ” ಎಂದು ಎಚ್ಚರಿಕೆ ನೀಡಿದ್ದಾರೆ.

“ಬೋಳ ಗ್ರಾಮ ಪಂಚಾಯತ್‌- ಪಡುಗಿರಿ ನಾಥೂರಾಮ್‌ ಗೋಡ್ಸೆ ರಸ್ತೆ” ಎಂದು ಬರೆಯಲಾಗಿರುವ ಮಾರ್ಗಸೂಚಿ ಫಲಕ ಹಾಕಲಾಗಿತ್ತು. ಬೋಳ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಸುಧಾ ಎಸ್.ಪೂಜಾರಿ ಅವರೊಂದಿಗೆ ‘ನಾನುಗೌರಿ.ಕಾಂ’ ಪ್ರತಿನಿಧಿ ಮಾತನಾಡಿದಾಗ, “ಹೌದು ಈ ಫಲಕ ಇರುವುದು ನಿಜ. ಆದರೆ ಯಾರು ಇದನ್ನು ಹಾಕಿದ್ದಾರೆಂಬ ಮಾಹಿತಿ ಇಲ್ಲ. ಯಾರೋ ಖಾಸಗಿ ವ್ಯಕ್ತಿಗಳು ಈ ರೀತಿಯ ಫಲಕವನ್ನು ಪಡುಗಿರಿ ರಸ್ತೆಯಲ್ಲಿ ನೆಟ್ಟಿದ್ದಾರೆ. ಕ್ರಮ ವಹಿಸಲಾಗುವುದು” ಎಂದು ತಿಳಿಸಿದ್ದರು.

ಫಲಕ ಹಾಕಿದ್ದ ಘಟನೆ ಬಗ್ಗೆ ಸಚಿವ ಸುನೀಲ್‌ ಕುಮಾರ್ ಪ್ರತಿಕ್ರಿಯಿಸಿದ್ದು, “ಫಲಕ ಹಾಕುವುದು ಅಥವಾ ಗೋಡ್ಸೆ ಹೆಸರಿಡುವುದು ಪಂಚಾಯತ್‌ನ ನಿರ್ಧಾರವಲ್ಲ. ಫಲಕವನ್ನು ಪಂಚಾಯತ್‌ ಹಾಕಿಲ್ಲ, ಯಾರೋ ಖಾಸಗಿ ವ್ಯಕ್ತಿಗಳು ಹಾಕಿದ್ದಾರೆ. ತನಿಖೆ ನಡೆಸಿ, ವಸ್ತುಸ್ಥಿತಿಯನ್ನು ಮುಂದಿಡಲಾಗುತ್ತದೆ” ಎಂದು ಹೇಳಿದ್ದಾರೆ.

ಆ ನಂತರದಲ್ಲಿ ಪಂಚಾಯತ್‌ ಸದಸ್ಯರು, ಕಾಂಗ್ರೆಸ್ ಮುಖಂಡರು, ಅಧಿಕಾರಿಗಳ ನೇತೃತ್ವದಲ್ಲಿ ತೆರಳಿ ಫಲಕ ತೆರವಿಗೆ ಕ್ರಮ ವಹಿಸಿದ್ದಾರೆ.

“ನಾಥೂರಾಮ್‌ ಗೋಡ್ಸೆ ಫಲಕವನ್ನು ಇಂದು ಬೆಳಿಗ್ಗೆ ತೆರವು ಮಾಡಲಾಗಿದೆ” ಎಂದು ಬೋಳ ಗ್ರಾಪಂ ಉಪಾಧ್ಯಕ್ಷ ಕಿರಣ್‌ಕುಮಾರ್ ಶೆಟ್ಟಿಯವರು ‘ನಾನುಗೌರಿ.ಕಾಂ’ಗೆ ತಿಳಿಸಿದ್ದಾರೆ.

ಘಟನೆ ಬೆಳಕಿಗೆ ಬಂದ ತಕ್ಷಣವೇ ಟ್ವೀಟ್ ಮಾಡಿರುವ ಕಾಂಗ್ರೆಸ್ ನಾಯಕ ಪ್ರಕಾಶ್ ರಾಥೋಡ್‌, “ತಾಲಿಬಾನಿಗಳನ್ನು ಬಿಜೆಪಿ ಉಗ್ರಗಾಮಿಗಳು ಎಂದು ಕರೆಯುತ್ತಿತ್ತು. ಭಾರತದಲ್ಲಿ ತಾಲಿಬಾನ್ ನಿಷೇಧಿತ ಸಂಘಟನೆ. ಆದರೆ, ಕೇಂದ್ರ ಸರ್ಕಾರ ಗೋಧಿ, ಔಷಧ, ಹಣ ಮುಂತಾದ ನೆರವನ್ನು ಅಫ್ಘನ್ ಸರ್ಕಾರಕ್ಕೆ ರವಾನೆ ಮಾಡಿ ತಾಲಿಬಾನಿಗಳ ಜತೆ ಸ್ನೇಹ-ಪ್ರೀತಿಯ ಅಪ್ಪುಗೆ ಮಾಡುತ್ತಿದ್ದಂತೆ ಉಡುಪಿಯಲ್ಲಿ ದೇಶದ್ರೋಹಿ ಗೋಡ್ಸೆ ರಸ್ತೆ ತಲೆ ಎತ್ತಿದೆ” ಎಂದು ಆಕ್ರೋಶ ವ್ಯಕ್ತಿಸಿದರು.

ಇದನ್ನೂ ಓದಿರಿ: ಪಠ್ಯ ಪುಸ್ತಕದಲ್ಲಿ ‘ಆಡಿಸಿ ನೋಡು ಬೀಳಿಸಿ ನೋಡು’ ಹಾಡು: ಬರೆದವರ ಹೆಸರನ್ನೇ ಬದಲಿಸಿದ ಚಕ್ರತೀರ್ಥ ಸಮಿತಿ!

“ಮಹಾತ್ಮಗಾಂಧಿಯನ್ನು ಕೊಲ್ಲುವ ಮೂಲಕ ಸ್ವತಂತ್ರ ಭಾರತದಲ್ಲಿ ಭಯೋತ್ಪಾದನೆ ಉದ್ಘಾಟಿಸಿದ ಉಗ್ರ ನಾಥೂ ಗೋಡ್ಸೆ. ಭಾರತೀಯರ ಪಾಲಿಗೆ ಈತ ತಾಲಿಬಾನಿಗಳಿಗಿಂತ ಅತ್ಯುಗ್ರ ಪಾಪಿ. ತಾಲಿಬಾನಿಗಳ ಸ್ನೇಹಕ್ಕೆ ಕೈ ಚಾಚಿದ ಬಳಿಕ ಬಿಜೆಪಿಗೆ ಉಗ್ರರ ಬಗ್ಗೆ ಪ್ರೀತಿ ಹೆಚ್ಚಾಗುತ್ತಿದೆಯೇ?” ಎಂದು ಪ್ರಶ್ನಿಸಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...