Homeಕರ್ನಾಟಕಕಾರ್ಕಳ | ಪರಶುರಾಮ ಥೀಮ್ ಪಾರ್ಕ್ ಅಕ್ರಮ : ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

ಕಾರ್ಕಳ | ಪರಶುರಾಮ ಥೀಮ್ ಪಾರ್ಕ್ ಅಕ್ರಮ : ತಲೆಮರೆಸಿಕೊಂಡಿದ್ದ ಶಿಲ್ಪಿ ಕೃಷ್ಣ ನಾಯಕ್ ಬಂಧನ

- Advertisement -
- Advertisement -

ಉಡುಪಿ ಜಿಲ್ಲೆ ಕಾರ್ಕಳದ ಬೈಲೂರಿನ ಪರಶುರಾಮ ಥೀಮ್ ಪಾರ್ಕ್‌ನಲ್ಲಿ ನಕಲಿ ಪರಶುರಾಮ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿರುವ ಆರೋಪದ ಮೇಲೆ ಪ್ರತಿಮೆಯ ಶಿಲ್ಪಿ ಕೃಷ್ಣ ನಾಯಕ್ ಅವರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಕೃಷ್ಣ ನಾಯಕ್ ‘ಕೃಷ್ ಆರ್ಟ್ ವರ್ಲ್ಡ್’ ಎಂಬ ಸಂಸ್ಥೆಯ ಮೂಲಕ ಥೀಮ್ ಪಾರ್ಕ್‌ನಲ್ಲಿ ಕಂಚಿನ ಪರಶುರಾಮ ಪ್ರತಿಮೆ ಸ್ಥಾಪಿಸಲು ಉಡುಪಿ ನಿರ್ಮಿತಿ ಕೇಂದ್ರದಿಂದ 1.25 ಕೋಟಿ ರೂಪಾಯಿ ಹಣ ಪಡೆದುಕೊಂಡು, ಕಂಚಿನ ಪ್ರತಿಮೆ ಮಾಡದೇ ನಕಲಿ ಫೈಬರ್ ಪ್ರತಿಮೆ ನಿರ್ಮಿಸಿ ಸರ್ಕಾರಕ್ಕೆ ವಂಚಿಸಿದ್ದಾರೆ ಎಂದು ನಲ್ಲೂರಿನ ಕೃಷ್ಣ ಶೆಟ್ಟಿ ಜೂನ್ ತಿಂಗಳಲ್ಲಿ ದೂರು ನೀಡಿದ್ದರು. ದೂರು ಆಧರಿಸಿ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಪ್ರಕರಣ ರದ್ಧುಗೊಳಿಸುವಂತೆ ಕೋರಿ ಕೃಷ್ಣ ನಾಯಕ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅಕ್ಟೋಬರ್ 21ರಂದು ಅರ್ಜಿಯನ್ನು ವಜಾಗೊಳಿಸಿತ್ತು. ಈ ಹಿನ್ನೆಲೆ ಕೃಷ್ಣ ನಾಯಕ್ ನಿರೀಕ್ಷಣಾ ಜಾಮೀನು ಕೋರಿ ಉಡುಪಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಲಯ, ತಿರಸ್ಕರಿಸಿತ್ತು.

ನಿರೀಕ್ಷಣಾ ಜಾಮೀನು ಅರ್ಜಿ ತಿರಸ್ಕೃತಗೊಂಡ ಬಳಿಕ, ಕೃಷ್ಣ ನಾಯಕ್ ತಲೆಮರೆಸಿಕೊಂಡಿದ್ದರು. ಅವರನ್ನು ಕೇರಳದ ಕ್ಯಾಲಿಕಟ್‌ನಿಂದ ಭಾನುವಾರ (ನ.10) ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಕರಣದ ಹಿನ್ನೆಲೆ : ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಸಚಿವರಾಗಿದ್ದ ಕಾರ್ಕಳದ ಶಾಸಕ ಸುನಿಲ್ ಕುಮಾರ್ ಅವರ ನೇತೃತ್ವದಲ್ಲಿ ಕಾರ್ಕಳದ ಬೈಲೂರಿನ ಉಮ್ಮಿಕಲ್ ಬೆಟ್ಟದ ಮೇಲೆ ಪರಶುರಾಮ ಥೀಮ್ ಪಾರ್ಕ್ ನಿರ್ಮಿಸಲಾಗಿತ್ತು.

ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅದನ್ನು ಉದ್ಘಾಟಿಸಿದ್ದರು. ಬಳಿಕ ಕೆಲ ದಿನಗಳಲ್ಲೇ ಪಾರ್ಕ್ ಕಾಮಗಾರಿ ಪೂರ್ಣಗೊಂಡಿಲ್ಲ ಎಂಬ ಕಾರಣಕ್ಕೆ ಪ್ರವಾಸಿಗರ ಭೇಟಿ ನಿಷೇಧಿಸಲಾಗಿತ್ತು.
ಇದು ಜನರಲ್ಲಿ ಅನುಮಾನ ಮೂಡುವಂತೆ ಮಾಡಿತ್ತು.

ನಂತರ ಕಾಂಗ್ರೆಸ್ ನಾಯಕರು ಸೇರಿದಂತೆ ಹಲವರು ಥೀಮ್ ಪಾರ್ಕ್‌ನಲ್ಲಿರುವ ಪರಶುರಾಮ ಪ್ರತಿಮೆ ಕಂಚಿನದ್ದಲ್ಲ, ಅದು ನಕಲಿ ಫೈಬರ್ ಪ್ರತಿಮೆ ಎಂದು ಆರೋಪಿಸಿದ್ದರು. ಈ ಆರೋಪವನ್ನು ಅಲ್ಲಗಳೆದಿದ್ದ ಶಾಸಕ ಸುನಿಲ್ ಕುಮಾರ್ ಆಪ್ತರು ಮತ್ತು ಬಿಜೆಪಿ ನಾಯಕರು ಪ್ರತಿಮೆಯ ಬಳಿಗೆ ತೆರಳಿ ಸುತ್ತಿಗೆ ಮೂಲಕ ಹೊಡೆದು ಅದು ಕಂಚಿನ ಪ್ರತಿಮೆಯೇ? ಎಂದು ಸಾಬೀತುಪಡಿಸುವ ಪ್ರಯತ್ನ ಮಾಡಿದ್ದರು. ನಂತರ ಪ್ರತಿಮೆ ಏಕಾಏಕಿ ಕಾಣೆಯಾಗಿತ್ತು.

ಈ ಎಲ್ಲಾ ಬೆಳವಣಿಗೆಗಳ ನಡುವೆ ಚುನಾವಣೆ ನಡೆದು ಹೊಸ ಕಾಂಗ್ರೆಸ್ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂತು. ಥೀಮ್ ಪಾರ್ಕ್ ಅಕ್ರಮದ ಬಗ್ಗೆ ಸರ್ಕಾರ ತನಿಖೆಗೆ ಆದೇಶಿಸಿತು. ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಾಗಿ ಪ್ರಸ್ತುತ ಸಿಐಡಿ ತನಿಖೆ ನಡೆಯುತ್ತಿದೆ.

ಪ್ರಕರಣ ಸಂಬಂಧ ಈಗಾಗಲೇ ನಿರ್ಮಿತಿ ಕೇಂದ್ರದ ನಿರ್ದೇಶಕ ಅರುಣ್ ಕುಮಾರ್ ಅವರನ್ನು ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾ ಕುಮಾರಿ ಅಮಾನತು ಮಾಡಿದ್ದಾರೆ. ಈಗ ಶಿಲ್ಪಿ ಕೃಷ್ಣ ನಾಯಕ್ ಬಂಧನವಾಗಿದೆ.

ಇದನ್ನೂ ಓದಿ : ಅತ್ಯಾಚಾರ ಪ್ರಕರಣ: ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಏಷ್ಯಾ ಸಂಘರ್ಷ: ಇರಾನ್ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ಹತ್ಯೆ ಮಾಡಿರುವುದಾಗಿ ಹೇಳಿಕೊಂಡ ಇಸ್ರೇಲ್ 

ಇರಾನ್‌ನ ಭದ್ರತಾ ಮುಖ್ಯಸ್ಥ ಅಲಿ ಲಾರಿಜಾನಿ ವೈಮಾನಿಕ ದಾಳಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಇಸ್ರೇಲ್ ರಕ್ಷಣಾ ಸಚಿವ ಕಾಟ್ಜ್ ಮಂಗಳವಾರ ಹೇಳಿದ್ದಾರೆ. ಆದರೆ ಟೆಹ್ರಾನ್‌ನಿಂದ ಯಾವುದೇ ಅಧಿಕೃತ ದೃಢೀಕರಣವಿಲ್ಲ. ಕಾಟ್ಜ್ ಪ್ರಕಾರ, ಜನರಲ್ ಘೋಲಮ್...

ನಾಲ್ಕು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ತಲುಪಿದ ಯುವಜನರ ನಿರುದ್ಯೋಗ ಪ್ರಮಾಣ

15–29 ವರ್ಷ ವಯಸ್ಸಿನ ಯುವಕರಲ್ಲಿ ನಿರುದ್ಯೋಗ ದರವು ಫೆಬ್ರವರಿಯಲ್ಲಿ ನಾಲ್ಕು ತಿಂಗಳಲ್ಲೇ ಗರಿಷ್ಠ ಶೇ. 14.8 ಕ್ಕೆ ಏರಿದೆ. ಇದು ಜನವರಿಯಲ್ಲಿ ಶೇ. 14.7 ರಷ್ಟು ಹೆಚ್ಚಾಗಿ, ಯುವಜನರಲ್ಲಿ ನಿರುದ್ಯೋಗ ಹೆಚ್ಚಳ ಉಂಟಾಗಿದೆ...

ಆರ್‌ಎಸ್‌ಎಸ್‌ ನಿಷೇಧಕ್ಕೆ ಒತ್ತಾಯಿಸಿದ ಅಮೆರಿಕದ ಧಾರ್ಮಿಕ ಸ್ವಾತಂತ್ರ್ಯ ಸಮಿತಿ; ಕಾಂಗ್ರೆಸ್ ಪ್ರತಿಕ್ರಿಯೆ

ಭಾರತದಲ್ಲಿ ಧಾರ್ಮಿಕ ಸ್ವಾತಂತ್ರ್ಯದ ಉಲ್ಲಂಘನೆಯಾಗಿದೆ ಎಂದು ಆರೋಪಿಸಿರುವ ಅಂತರರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯದ ಯುನೈಟೆಡ್ ಸ್ಟೇಟ್ಸ್ ಆಯೋಗವು, ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರೆಸ್ಸೆಸ್) ಮತ್ತು ಭಾರತದ ಬಾಹ್ಯ ಗುಪ್ತಚರ ಸಂಸ್ಥೆಯಾದ ಸಂಶೋಧನೆ, ವಿಶ್ಲೇಷಣಾ...

ಕಾಂಗ್ರೆಸ್ ವಿರುದ್ಧದ ‘ಟರ್ಕಿ ಕಚೇರಿ’ ಹೇಳಿಕೆ: ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ಸಮನ್ಸ್ ಜಾರಿ ಮಾಡಿದ ದೆಹಲಿ ಹೈಕೋರ್ಟ್

ಕಾಂಗ್ರೆಸ್ ವಿರುದ್ಧದ "ಟರ್ಕಿ ಕಚೇರಿ" ಆರೋಪಕ್ಕೆ ಸಂಬಂಧಿಸಿದಂತೆ ಅರ್ನಾಬ್ ಗೋಸ್ವಾಮಿಗೆ ₹2 ಕೋಟಿ ಮಾನನಷ್ಟ ಮೊಕದ್ದಮೆ ಹೂಡಲು ದೆಹಲಿ ಹೈಕೋರ್ಟ್ ಸಮನ್ಸ್ ಜಾರಿ ಮಾಡಿದೆ. ಟರ್ಕಿಯಲ್ಲಿ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಅಂತರರಾಷ್ಟ್ರೀಯ ಕಚೇರಿಯನ್ನು ನಡೆಸುತ್ತಿದೆ...

ಚುನಾವಣಾ ಆಯೋಗ ಬಿಜೆಪಿ ಆಜ್ಞೆಯ ಮೇರೆಗೆ ಕೆಲಸ ಮಾಡುತ್ತಿದೆ: ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ

ವಿಧಾನಸಭಾ ಚುನಾವಣೆಗೂ ಮುನ್ನ, ಭಾರತದ ಚುನಾವಣಾ ಆಯೋಗ (ಇಸಿಐ) ಪ್ರಸ್ತುತ ಡಿಜಿಪಿ, ಕೋಲ್ಕತ್ತಾ ಪೊಲೀಸ್ ಆಯುಕ್ತರು, ಮುಖ್ಯ ಮತ್ತು ಗೃಹ ಕಾರ್ಯದರ್ಶಿಗಳನ್ನು ಬದಲಿಸುವ ಮೂಲಕ ಪ್ರಮುಖ ಪುನರ್ರಚನೆಯನ್ನು ಮಾಡಿದೆ. ಪಶ್ಚಿಮ ಬಂಗಾಳದ ಹೊಸ ಡಿಜಿ...

‘ಶಾಂತಿಗೆ ಇದು ಸಮಯವಲ್ಲ’: ‘ಕದನ ವಿರಾಮ’ ಪ್ರಸ್ತಾಪಗಳನ್ನು ತಿರಸ್ಕರಿಸಿದ ಇರಾನ್ ಸರ್ವೋಚ್ಚ ನಾಯಕ ಮೊಜ್ತಾಬಾ ಖಮೇನಿ 

ಇರಾನ್‌ನ ನೂತನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ ಅವರು ಉದ್ವಿಗ್ನತೆಯನ್ನು ಕಡಿಮೆ ಮಾಡುವ ಅಥವಾ ಎರಡು ಮಧ್ಯವರ್ತಿ ರಾಷ್ಟ್ರಗಳು ಟೆಹ್ರಾನ್‌ಗೆ ತಲುಪಿಸಿದ ಯುನೈಟೆಡ್ ಸ್ಟೇಟ್ಸ್‌ನೊಂದಿಗೆ ಕದನ ವಿರಾಮದ ಪ್ರಸ್ತಾಪಗಳನ್ನು ತಿರಸ್ಕರಿಸಿದರು ಎಂದು...

ಲೋಕಸಭೆ | 8 ವಿಪಕ್ಷ ಸಂಸದರ ಅಮಾನತು ರದ್ದು

ಲೋಕಸಭೆಯ ಎಂಟು ವಿಪಕ್ಷ ಸಂಸದರ ಅಮಾನತನ್ನು ತಕ್ಷಣಕ್ಕೆ ಜಾರಿಗೆ ಬರುವಂತೆ ಸ್ಪೀಕರ್ ಓಂ ಬಿರ್ಲಾ ಮಂಗಳವಾರ (ಮಾ.17) ವಾಪಸ್ ಪಡೆದಿದ್ದಾರೆ. ಅಶಿಸ್ತಿನ ಕಾರಣ ನೀಡಿ ಫೆಬ್ರವರಿ 8ರಂದು ಸಂಸದರನ್ನು ಅಮಾನತು ಮಾಡಲಾಗಿತ್ತು. ಅಮಾನತು...

ಪಿತೃತ್ವ ರಜೆಗೆ ಕಾನೂನು ತನ್ನಿ : ಕೇಂದ್ರಕ್ಕೆ ಸುಪ್ರೀಂ ಕೋರ್ಟ್ ಸೂಚನೆ

ಪಿತೃತ್ವ ರಜೆಯನ್ನು (paternity leave) ಸಾಮಾಜಿಕ ಭದ್ರತಾ ಸೌಲಭ್ಯವೆಂದು ಪರಿಗಣಿಸಿ ಕಾನೂನು ರೂಪಿಸುವಂತೆ ಸುಪ್ರೀಂ ಕೋರ್ಟ್ ಮಂಗಳವಾರ (ಮಾ.17) ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಈ ರಜೆಯ ಅವಧಿಯು ಪೋಷಕರು ಮತ್ತು ಮಗು ಇಬ್ಬರ...

‘ಕಾಲ ಎಲ್ಲಕ್ಕೂ ಉತ್ತರಿಸುತ್ತದೆ’; ಟಿವಿಕೆ ನಾಯಕನ ‘ಡಿಎಂಕೆ ಬೆದರಿಕೆ’ ಆರೋಪ ‘ಸತ್ಯಕ್ಕೆ ದೂರವಾದ ಮಾತು’ ಎಂದ ರಜನಿಕಾಂತ್

ರಾಜಕೀಯ ಪ್ರವೇಶಕ್ಕೆ ಯತ್ನಿಸಿದಾಗ ಡಿಎಂಕೆಯಿಂದ ಬೆದರಿಕೆ ಇತ್ತು ಎಂಬ ಟಿವಿಕೆ ನಾಯಕ ಆಧವ್ ಅರ್ಜುನ ಅವರ ಆರೋಪವನ್ನು ಸೂಪರ್‌ಸ್ಟಾರ್ ರಜನಿಕಾಂತ್ ಮಂಗಳವಾರ ನಿರಾಕರಿಸಿದ್ದಾರೆ ಮತ್ತು "ಕಾಲವೇ ಉತ್ತರ ನೀಡುತ್ತದೆ" ಎಂದು ಹೇಳಿದ್ದಾರೆ. ತಮ್ಮ ಅಧಿಕೃತ...

ಕಾಂಗ್ರೆಸ್‌ ಮಾನನಷ್ಟ ಪ್ರಕರಣ : ಅರ್ನಾಬ್ ಗೋಸ್ವಾಮಿ, ರಿಪಬ್ಲಿಕ್ ಟಿವಿಗೆ ದೆಹಲಿ ಹೈಕೋರ್ಟ್ ಸಮನ್ಸ್

ಟರ್ಕಿ ದೇಶದಲ್ಲಿ ಕಾಂಗ್ರೆಸ್‌ ಪಕ್ಷವು ಅಂತಾರಾಷ್ಟ್ರೀಯ ಕಚೇರಿ ಹೊಂದಿದೆ ಎಂಬ ವರದಿಗೆ ಸಂಬಂಧಿಸಿದಂತೆ, ಅರ್ನಾಬ್ ಗೋಸ್ವಾಮಿ ಮತ್ತು ರಿಪಬ್ಲಿಕ್ ಟಿವಿ ವಿರುದ್ಧ ಕಾಂಗ್ರೆಸ್ ಹೂಡಿರುವ ಮಾನನಷ್ಟ ಮೊಕದ್ದಮೆಯಲ್ಲಿ ದೆಹಲಿ ಹೈಕೋರ್ಟ್ ಮಂಗಳವಾರ (ಮಾ.17)...