ಕಳೆದ ವರ್ಷ ಆಗಸ್ಟ್ 28 ರಂದು ಹರಿಯಾಣದ ಕರ್ನಾಲ್‌ನ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ನಡೆಸಿದ್ದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿಂಸಾಚಾರದ ತನಿಖೆಗೆ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಲಾಗಿತ್ತು.
ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎಸ್‌ಎನ್ ಅಗರ್ವಾಲ್ ನೇತೃತ್ವದಲ್ಲಿ ರಚಿಸಲಾಗಿದ್ದ ತನಿಖಾ ಆಯೋಗವನ್ನು ’ಅನಗತ್ಯ’ ಎಂದಿರುವ ಹರಿಯಾಣ ಸರ್ಕಾರ ಏಕವ್ಯಕ್ತಿ ನ್ಯಾಯಾಂಗ ಆಯೋಗದ ಸಂವಿಧಾನದ ಅಧಿಸೂಚನೆಯನ್ನು ರದ್ದುಗೊಳಿಸಿದೆ.
ತನಿಖಾ ಆಯೋಗವು ಅಸ್ತಿತ್ವದಲ್ಲಿಲ್ಲ ಎಂದು ಘೋಷಿಸುವ ಅಧಿಸೂಚನೆಯನ್ನು ರಾಜ್ಯ ಗೃಹ ಇಲಾಖೆಯು ಜನವರಿ 5 ರಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೀವ್ ಅರೋರಾ ಅವರ ಸಹಿಯೊಂದಿಗೆ ಹೊರಡಿಸಿದೆ.
“ತನಿಖಾ ವರದಿ ಸಿದ್ಧವಾಗಿದೆ ಮತ್ತು ರಾಜ್ಯ ಸರ್ಕಾರ ನನ್ನನ್ನು ಕೇಳಿದಾಗ ವರದಿ ಸಲ್ಲಿಸಲಾಗುವುದು ಎಂದು ನಾನು ಹೈಕೋರ್ಟ್‌ಗೆ ತಿಳಿಸಿದ್ದೇನೆ” ಎಂದು ನ್ಯಾಯಮೂರ್ತಿ (ನಿವೃತ್ತ) ಅಗರ್ವಾಲ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.
ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್; 10 ಜನರಿಗೆ ಗಾಯ
ಆಗಸ್ಟ್ 28 ರಂದು ಕರ್ನಾಲ್‌ನಲ್ಲಿ ಪೊಲೀಸರು ರೈತರ ವಿರುದ್ಧ ಅಮಾನುಚವಾಗಿ ನಡೆಸಿದ್ದ ಲಾಠಿಚಾರ್ಜ್ ಒಳಗೊಂಡಂತೆ, ಹಿಂಸಾತ್ಮಕ ಪರಿಸ್ಥಿತಿಗೆ ಕಾರಣರಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಆಗಿನ ಕರ್ನಾಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಯುಷ್ ಸಿನ್ಹಾ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸುವುದು ಈ ಆಯೋಗದ ಕೆಲಸವಾಗಿತ್ತು.
ಹಿಂಸಾಚಾರ ಘಟನೆಯಲ್ಲಿ ರೈತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು ಎಂದು ಮೂಲಗಳು ತಿಳಿಸಿವೆ. ರೈತರ ಮೇಲೆ ನಡೆದ ಹಲ್ಲೆಯನ್ನು ವಿರೋಧಿಸಿ ಕರ್ನಾಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ರೈತರು ಧರಣಿ ಕುಳಿತಿದ್ದರಿಂದ ತನಿಖಾ ಆಯೋಗವನ್ನು ರಚಿಸಲಾಯಿತು. ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಭರವಸೆ ನೀಡಿದ ನಂತರವೇ ಪ್ರತಿಭಟನೆ ತೆಗೆದುಕೊಳ್ಳಲಾಗಿತ್ತು. ಬಳಿಕ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಲಾಗಿತ್ತು.
”ರೈತ ಸಂಘಗಳು ರಾಜ್ಯ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ರೈತರ ಮೇಲೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದ್ದು, ನಮ್ಮ ದೂರನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಹಾಗಾಗಿ, ಬಸ್ತಾರಾ ಘಟನೆಗೆ ಸಂಬಂಧಿಸಿದಂತೆ ನಾವು ದೂರನ್ನು ಹಿಂಪಡೆದಿದ್ದೇವೆ” ಎಂದು ಹರಿಯಾಣ ಬಿಕೆಯು ನಾಯಕ ಗುರ್ನಾಮ್ ಸಿಂಗ್ ಚಾರುಣಿ ಹೇಳಿದ್ದಾರೆ.
ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ



ಸೂಪರ್