Homeಚಳವಳಿಕರ್ನಾಲ್ ರೈತರ ಹಿಂಸಾಚಾರ: ನ್ಯಾಯಾಂಗ ಆಯೋಗ ರದ್ದುಗೊಳಿಸಿದ ಹರಿಯಾಣ ಸರ್ಕಾರ

ಕರ್ನಾಲ್ ರೈತರ ಹಿಂಸಾಚಾರ: ನ್ಯಾಯಾಂಗ ಆಯೋಗ ರದ್ದುಗೊಳಿಸಿದ ಹರಿಯಾಣ ಸರ್ಕಾರ

- Advertisement -
- Advertisement -

ಕಳೆದ ವರ್ಷ ಆಗಸ್ಟ್‌ 28 ರಂದು ಹರಿಯಾಣದ ಕರ್ನಾಲ್‌ನ ಬಸ್ತಾರಾ ಟೋಲ್ ಪ್ಲಾಜಾದಲ್ಲಿ ಪ್ರತಿಭಟನಾ ನಿರತ ರೈತರ ಮೇಲೆ ಪೊಲೀಸರು ಅಮಾನುಷವಾಗಿ ಲಾಠಿ ಚಾರ್ಜ್ ನಡೆಸಿದ್ದ ಘಟನೆ ದೇಶಾದ್ಯಂತ ಆಕ್ರೋಶಕ್ಕೆ ಕಾರಣವಾಗಿತ್ತು. ಈ ಹಿಂಸಾಚಾರದ ತನಿಖೆಗೆ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಲಾಗಿತ್ತು.

ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್‌ನ ಮಾಜಿ ನ್ಯಾಯಾಧೀಶ ನ್ಯಾಯಮೂರ್ತಿ ಎಸ್‌ಎನ್ ಅಗರ್ವಾಲ್ ನೇತೃತ್ವದಲ್ಲಿ ರಚಿಸಲಾಗಿದ್ದ ತನಿಖಾ ಆಯೋಗವನ್ನು ’ಅನಗತ್ಯ’ ಎಂದಿರುವ ಹರಿಯಾಣ ಸರ್ಕಾರ ಏಕವ್ಯಕ್ತಿ ನ್ಯಾಯಾಂಗ ಆಯೋಗದ ಸಂವಿಧಾನದ ಅಧಿಸೂಚನೆಯನ್ನು ರದ್ದುಗೊಳಿಸಿದೆ.

ತನಿಖಾ ಆಯೋಗವು ಅಸ್ತಿತ್ವದಲ್ಲಿಲ್ಲ ಎಂದು ಘೋಷಿಸುವ ಅಧಿಸೂಚನೆಯನ್ನು ರಾಜ್ಯ ಗೃಹ ಇಲಾಖೆಯು ಜನವರಿ 5 ರಂದು ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ಗೃಹ) ರಾಜೀವ್ ಅರೋರಾ ಅವರ ಸಹಿಯೊಂದಿಗೆ ಹೊರಡಿಸಿದೆ.

“ತನಿಖಾ ವರದಿ ಸಿದ್ಧವಾಗಿದೆ ಮತ್ತು ರಾಜ್ಯ ಸರ್ಕಾರ ನನ್ನನ್ನು ಕೇಳಿದಾಗ ವರದಿ ಸಲ್ಲಿಸಲಾಗುವುದು ಎಂದು ನಾನು ಹೈಕೋರ್ಟ್‌ಗೆ ತಿಳಿಸಿದ್ದೇನೆ” ಎಂದು ನ್ಯಾಯಮೂರ್ತಿ (ನಿವೃತ್ತ) ಅಗರ್ವಾಲ್ ಹೇಳಿದ್ದಾರೆ ಎಂದು ಹಿಂದೂಸ್ತಾನ್ ಟೈಮ್ಸ್ ಉಲ್ಲೇಖಿಸಿದೆ.

ಇದನ್ನೂ ಓದಿ: ಹರಿಯಾಣ: ಪ್ರತಿಭಟನಾ ನಿರತ ರೈತರ ಮೇಲೆ ಲಾಠಿ ಚಾರ್ಜ್‌; 10 ಜನರಿಗೆ ಗಾಯ

ಆಗಸ್ಟ್ 28 ರಂದು ಕರ್ನಾಲ್‌ನಲ್ಲಿ ಪೊಲೀಸರು ರೈತರ ವಿರುದ್ಧ ಅಮಾನುಚವಾಗಿ ನಡೆಸಿದ್ದ ಲಾಠಿಚಾರ್ಜ್ ಒಳಗೊಂಡಂತೆ, ಹಿಂಸಾತ್ಮಕ ಪರಿಸ್ಥಿತಿಗೆ ಕಾರಣರಾದ ವ್ಯಕ್ತಿಗಳನ್ನು ಪತ್ತೆಹಚ್ಚಲು ಮತ್ತು ಆಗಿನ ಕರ್ನಾಲ್ ಉಪ ವಿಭಾಗೀಯ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಯುಷ್ ಸಿನ್ಹಾ ಅವರ ಪಾತ್ರದ ಬಗ್ಗೆ ವಿಚಾರಣೆ ನಡೆಸುವುದು ಈ ಆಯೋಗದ ಕೆಲಸವಾಗಿತ್ತು.

ಹಿಂಸಾಚಾರ ಘಟನೆಯಲ್ಲಿ ರೈತರ ಮೇಲೆ ಪೊಲೀಸರು ಪ್ರಕರಣ ದಾಖಲಿಸಿದ್ದರು ಎಂದು ಮೂಲಗಳು ತಿಳಿಸಿವೆ. ರೈತರ ಮೇಲೆ ನಡೆದ ಹಲ್ಲೆಯನ್ನು ವಿರೋಧಿಸಿ ಕರ್ನಾಲ್‌ನಲ್ಲಿರುವ ಜಿಲ್ಲಾಧಿಕಾರಿ ಕಚೇರಿಯ ಹೊರಗೆ ರೈತರು ಧರಣಿ ಕುಳಿತಿದ್ದರಿಂದ ತನಿಖಾ ಆಯೋಗವನ್ನು ರಚಿಸಲಾಯಿತು. ನ್ಯಾಯಾಂಗ ತನಿಖೆಗೆ ಆದೇಶಿಸಲಾಗುವುದು ಎಂದು ಭರವಸೆ ನೀಡಿದ ನಂತರವೇ ಪ್ರತಿಭಟನೆ ತೆಗೆದುಕೊಳ್ಳಲಾಗಿತ್ತು. ಬಳಿಕ ಏಕವ್ಯಕ್ತಿ ನ್ಯಾಯಾಂಗ ಆಯೋಗ ರಚನೆ ಮಾಡಲಾಗಿತ್ತು.

”ರೈತ ಸಂಘಗಳು ರಾಜ್ಯ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡಿವೆ. ರೈತರ ಮೇಲೆ ದಾಖಲಾದ ಎಲ್ಲಾ ಪ್ರಕರಣಗಳನ್ನು ಸರ್ಕಾರ ಹಿಂಪಡೆಯಲಿದ್ದು, ನಮ್ಮ ದೂರನ್ನು ಹಿಂಪಡೆಯಲು ನಿರ್ಧರಿಸಿದ್ದೇವೆ. ಹಾಗಾಗಿ, ಬಸ್ತಾರಾ ಘಟನೆಗೆ ಸಂಬಂಧಿಸಿದಂತೆ ನಾವು ದೂರನ್ನು ಹಿಂಪಡೆದಿದ್ದೇವೆ” ಎಂದು ಹರಿಯಾಣ ಬಿಕೆಯು ನಾಯಕ ಗುರ್ನಾಮ್ ಸಿಂಗ್ ಚಾರುಣಿ ಹೇಳಿದ್ದಾರೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...