Homeಚಳವಳಿಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

ಹರಿಯಾಣದ ಕರ್ನಾಲ್‌ನಲ್ಲಿ ಇಂದು ರೈತ ಪ್ರತಿಭಟನೆ: ಇಂಟರ್‌ನೆಟ್ ಸ್ಥಗಿತಗೊಳಿಸಿದ ಸರ್ಕಾರ

- Advertisement -
- Advertisement -

ಹರಿಯಾಣದ ಕರ್ನಾಲ್‌ನಲ್ಲಿ ರೈತರ ಮೇಲೆ ನಡೆದಿದ್ದ ಮಾರಣಾಂತಿಕ ಲಾಠಿಚಾರ್ಜ್ ವಿರೋಧಿಸಿ ಇಂದು (ಮಂಗಳವಾರ) ರೈತರು ಕರ್ನಾಲ್ ಮಿನಿ ಸೆಕ್ರೆಟರಿಯೇಟ್‌ಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಲಿದ್ದಾರೆ. ಜೊತೆಗೆ   ಕಿಸಾನ್ ಮಹಾಪಂಚಾಯತ್ ಕೂಡ ನಡೆಯಲಿದೆ. ಸಂಯುಕ್ತ ಕಿಸಾನ್ ಮೋರ್ಚಾ ಪ್ರತಿಭಟನೆಗೆ ಬೆಂಬಲ ಸೂಚಿಸಿದೆ.

ಪ್ರತಿಭಟನೆ ಜೊತೆಗೆ ಕರ್ನಾಲ್ ಕಿಸಾನ್ ಮಹಾಪಂಚಾಯತ್ ನಡೆಯಲಿದೆ. ಲಾಠಿಚಾರ್ಜ್ ನಡೆಸಿ ರೈತರ ಮೇಲೆ ಹಲ್ಲೆ ಮಾಡಿದ್ದ ಸರ್ಕಾರ ಈಗ ಕರ್ನಾಲ್‌ನಲ್ಲಿ 144 ಸೆಕ್ಷನ್ ಜಾರಿ ಮಾಡಿದೆ. ಜೆತೆಗೆ ಇಂಟರ್‌ನೆಟ್ ಸ್ಥಗಿತಗೊಳಿಸಿದೆ.

ಈ ಹೋರಾಟವನ್ನು ಹತ್ತಿಕ್ಕಲು ಕರ್ನಾಲ್ ಜಿಲ್ಲಾಡಳಿತ ಮಧ್ಯರಾತ್ರಿ 12.30 ರಿಂದಲೇ ಇಂಟರ್ನೆಟ್‌ ಸೇವೆ ಬಂದ್‌ ಮಾಡಿದೆ. ಕರ್ನಾಲ್‌ ಸೇರಿದಂತೆ 5 ಜಿಲ್ಲೆಗಳಲ್ಲಿ ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಲಾಗಿದ್ದು, ಸೆಪ್ಟೆಂಬರ್ 7ರ ಮಧ್ಯರಾತ್ರಿ (11.59 pm) ಹಿಂಪಡೆಯಲಿದೆ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಈ ಕ್ರಮಕೈಗೊಳ್ಳಲಾಗಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.

ಇದನ್ನೂ ಓದಿ: ಹರಿಯಾಣ: ಹಲ್ಲೆಯಲ್ಲಿ ಸಾವನ್ನಪ್ಪಿದ ರೈತರ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ನೀಡಲು ಒತ್ತಾಯ

“ರಾಜ್ಯ ಸರ್ಕಾರವು ಕಿಸಾನ್ ಮಹಾಪಂಚಾಯತ್‌ಗಾಗಿ ಎಲ್ಲಾ ವ್ಯವಸ್ಥೆಗಳನ್ನು ಮಾಡಿದೆ. ಕಾನೂನನ್ನು ಕೈಗೆ ತೆಗೆದುಕೊಳ್ಳಲು ಯಾರಿಗೂ ಅವಕಾಶವಿಲ್ಲ. ಶಾಂತಿಯುತವಾಗಿ ತಮ್ಮ ಸಾರ್ವಜನಿಕ ಸಭೆಯನ್ನು ನಡೆಸುವಂತೆ ನಾವು ನಮ್ಮ ರೈತರಿಗೆ ಮನವಿ ಮಾಡುತ್ತೇವೆ” ಎಂದು ಹರಿಯಾಣ ಗೃಹ ಸಚಿವ ಅನಿಲ್ ವಿಜ್ ಹೇಳಿದ್ದಾರೆ.

144 ಸೆಕ್ಷನ್ ಜಾರಿ ಮತ್ತು ಮೊಬೈಲ್‌ ಇಂಟರ್ನೆಟ್‌ ಸೇವೆಯನ್ನು ಸ್ಥಗಿತಗೊಳಿಸಿರುವುದಕ್ಕೆ ಸಂಯುಕ್ತ ಕಿಸಾನ್ ಮೋರ್ಚಾ ಆಕ್ರೋಶ ವ್ಯಕ್ತಪಡಿಸಿದೆ. ಇದು ನಾಚಿಕೆಗೇಡಿನ ಸಂಗತಿ ಎಂದು ಮುಖ್ಯಮಂತ್ರಿ ಮನೋಹರ್ ಲಾಲ್ ಸಿಂಗ್ ಅವರನ್ನು ಟೀಕಿಸಿದೆ.

ಇದನ್ನೂ ಓದಿ: ಐತಿಹಾಸಿಕ ಕಿಸಾನ್ ಮಹಾಪಂಚಾಯತ್: ಬಿಜೆಪಿ ಸರ್ಕಾರಕ್ಕೆ ಸವಾಲು ಹಾಕಿದ ರೈತರು

ಆಗಸ್ಟ್ 28 ರ ಶನಿವಾರದಂದು ಹರಿಯಾಣದ ಕರ್ನಾಲ್ ಬಳಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಲಾಠಿಚಾರ್ಜ್ ನಡೆಸಲಾಗಿತ್ತು. ರೈತರ ತಲೆ ಬುರುಡೆ ಹೊಡೆಯಿರಿ ಎಂದು ಸಬ್ ಡಿವಿಷನಲ್ ಮ್ಯಾಜಿಸ್ಟ್ರೇಟ್ (ಎಸ್‌ಡಿಎಂ) ಆಗಿರುವ ಆಯುಷ್‌ ಸಿನ್ಹಾ ಆದೇಶ ನೀಡಿದ್ದರು. ಇವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ರೈತರು ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಹವಾಮಾನ ವೈಪರೀತ್ಯ ಮತ್ತು ಪೊಲೀಸರ ಭಾರೀ ನಿಯೋಜನೆಯ ನಡುವೆ, ರೈತರು ಕರ್ನಾಲ್‌ನ ಧಾನ್ಯ ಮಾರುಕಟ್ಟೆಯನ್ನು ತಲುಪಲು ಆರಂಭಿಸಿದ್ದಾರೆ. ಎಸ್‌ಕೆಎಂ ಮುಖಂಡರಾದ ರಾಕೇಶ್ ಟಿಕಾಯತ್, ಯೋಗೇಂದ್ರ ಯಾದವ್, ರಾಜೇವಾಲ್, ಗುರ್ನಾಮ್ ಸಿಂಗ್ ಚಾರುಣಿ ಮತ್ತು ದರ್ಶನ್ ಪಾಲ್ ಕೂಡ ಕಿಸಾನ್ ಮಹಾಪಂಚಾಯತ್‌ಗೆ ಆಗಮಿಸುತ್ತಿದ್ದಾರೆ.

ಪ್ರತಿಭಟನೆ ಮತ್ತು ಕಿಸಾನ್ ಮಹಾಪಂಚಾಯತ್ ಹಿನ್ನೆಲೆ ಹರಿಯಾಣ ಸರ್ಕಾರ ಬಿಗಿ ಪೊಲೀಸ್ ಬಂದೋಬಸ್ ಮಾಡಿದೆ.


ಇದನ್ನೂ ಓದಿ: ‘ರೈತರ ತಲೆ ಒಡೆಯಿರಿ’ ಎಂದು ಆದೇಶಿಸಿದ ಅಧಿಕಾರಿಯ ವಿರುದ್ಧ ಕ್ರಮ: ಹರಿಯಾಣ ಡಿಸಿಎಂ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...