Homeಮುಖಪುಟದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿರುವ ಜಿಲ್ಲೆಯಲ್ಲೆ ಪರೀಕ್ಷೆ ಬರೆಯಲು ಅವಕಾಶ

ದ್ವಿತೀಯ ಪಿಯುಸಿ ಪರೀಕ್ಷೆ; ವಿದ್ಯಾರ್ಥಿಗಳಿರುವ ಜಿಲ್ಲೆಯಲ್ಲೆ ಪರೀಕ್ಷೆ ಬರೆಯಲು ಅವಕಾಶ

- Advertisement -
- Advertisement -

ಕೊರೊನಾ ಕಾರಣಕ್ಕೆ ಬಾಕಿಯಾಗಿದ್ದ ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಜೂನ್ ತಿಂಗಳಲ್ಲಿ ನಡೆಸಲು ಇಲಾಖೆ ಚಿಂತನೆ ನಡೆಸಿದೆ.

ದ್ವಿತೀಯ ಪಿಯುಸಿ ಇಂಗ್ಲಿಷ್ ಭಾಷಾ ಪರೀಕ್ಷೆಯನ್ನು ಬಹುತೇಕ ಜೂನ್​​ ತಿಂಗಳಲ್ಲಿ ನಡೆಸಲು ಇಲಾಖೆ ಚಿಂತಿಸಿದೆ. ಈ ನಡುವೆ ಇಂದು ಸುತ್ತೋಲೆ ಹೊರಡಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಲಾಕ್‌ಡೌನ್‌ನಿಂದಾಗಿ ವಿದ್ಯಾರ್ಥಿಗಳು ಯಾವ ಯಾವ ಜಿಲ್ಲೆಗಳಲ್ಲಿ ಸಿಲುಕಿಕೊಂಡಿದ್ದಾರೋ ಅಲ್ಲೇ ಪರೀಕ್ಷೆ ಬರೆಯಲು ಅನುಮತಿ ನೀಡಲಾಗುವುದು ಎಂದು ತಿಳಿಸಿದೆ.

ದೇಶದಲ್ಲಿ ಲಾಕ್‌ಡೌನ್ ಘೋಷಣೆಯಾಗುವ ಮುಂಚೆ ದ್ವಿತೀಯ ಪಿಯುಸಿ ಯ ಎಲ್ಲಾ ಪರೀಕ್ಷೆಗಳು ಮುಗಿದಿದ್ದವು. ಆದರೆ, ಆಂಗ್ಲ ಭಾಷೆ ಪತ್ರಿಕೆ ಮಾತ್ರ ಉಳಿದಿತ್ತು. ಈ ಸಂದರ್ಭದಲ್ಲಿ ಲಾಕ್‌ಡೌನ್‌ ಘೋಷಿಸಿದ ಪರಿಣಾಮ ಈ ಒಂದು ಪತ್ರಿಕೆಯ ಪರೀಕ್ಷೆಯನ್ನು ನಡೆಸಲು ಪದವಿ ಪೂರ್ವ ಶಿಕ್ಷಣ ಇಲಾಖೆಯಿಂದ ಸಾಧ್ಯವಾಗಿರಲಿಲ್ಲ.

ಹೀಗಾಗಿ ಮಾರ್ಚ್​​ 23ನೇ ತಾರೀಕಿನಂದೇ ನಡೆಯಬೇಕಿದ್ದ ದ್ವಿತೀಯ ಪಿಯುಸಿ ಪರೀಕ್ಷೆ ಮುಂದೂಡಿ ಶಿಕ್ಷಣ ಸಚಿವ ಸುರೇಶ್‌ ಕುಮಾರ್‌ಆದೇಶ ಹೊರಡಿಸಿದ್ದರು. ಇದರ ಜೊತೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನೂ ಮುಂದೂಡಲಾಗಿತ್ತು.

ಇದೀಗ ದೇಶದಾದ್ಯಂತ ಲಾಕ್‌ಡೌ‌ನ್‌ ಅನ್ನು ಹಂತ ಹಂತವಾಗಿ ತೆರವುಗೊಳಿಸಲಾಗುತ್ತಿದೆ. ಕರ್ನಾಟಕದಲ್ಲೂ ಲಾಕ್‌ಡೌನ್ ಬಹುತೇಕ ತೆರವಾಗಿದೆ. ಆದರೆ, ಸಾರ್ವಜನಿಕ ಸಂಚಾರಕ್ಕೆ ಮಾತ್ರ ಈವರೆಗೆ ಅವಕಾಶ ನೀಡಲಾಗಿಲ್ಲ.

ಇದರಿಂದಾಗಿ ವಿದ್ಯಾರ್ಥಿಗಳು ವಿವಿಧ ಕಡೆಗಳಲ್ಲಿ ಸಿಲುಕಿಕೊಂಡಿದ್ದಾರೆ. ಹೀಗಾಗಿ ಜೂನ್‌ ತಿಂಗಳಲ್ಲಿ ಪರೀಕ್ಷೆ ನಡೆಸಲು ನಿರ್ಧರಿಸಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳು ಎಲ್ಲಿದ್ದಾರೋ ಅದೇ ಜಿಲ್ಲೆಯಲ್ಲಿ ಪರೀಕ್ಷೆ ಬರೆಯಲು ಅನುಮತಿ ನೀಡಿದೆ.


ಓದಿ: ವೈ.ಎಸ್‌.ವಿ ದತ್ತರವರ ಗಣಿತ ಪಾಠ ಸಕ್ಸಸ್‌: ಪಾಠ ಕೇಳಿದವರೆಷ್ಟು ಗೊತ್ತೆ?


ಓದಿ: ದ್ವಿತೀಯ ಪಿಯುಸಿ ಹಾಗೂ ಎಸ್ಸೆಸ್ಸೆಲ್ಸಿ ಪರೀಕ್ಷಾ ದಿನಾಂಕ ಘೋಷಿಸಿದ ಸಚಿವ ಸುರೇಶ್ ಕುಮಾರ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣ: ಅಪಹರಣಕ್ಕೊಳಗಾಗಿದ್ದ ಸಂತ್ರಸ್ತೆಯ ರಕ್ಷಣೆ

0
ಅಪಹರಣಕ್ಕೊಳಗಾಗಿದ್ದ ಪ್ರಜ್ವಲ್ ರೇವಣ್ಣ ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ, ಶಾಸಕ ಹೆಚ್‌.ಡಿ ರೇವಣ್ಣ ಅವರ ಮನೆ ಕೆಲಸದ ಮಹಿಳೆಯನ್ನು ವಿಶೇಷ ತನಿಖಾ ತಂಡ (ಎಸ್‌ಐಟಿ)ದ ಅಧಿಕಾರಿಗಳು ಇಂದು (ಮೇ 4) ರಕ್ಷಣೆ ಮಾಡಿದ್ದಾರೆ. ಪ್ರಜ್ವಲ್...