Homeಕರ್ನಾಟಕದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

ದೂರುದಾರರಿಂದ ಸುಲಿಗೆ ಆರೋಪ: ರವಿ ಚನ್ನಣ್ಣನವರ್‌ ಅಮಾನತಿಗೆ ಎಎಪಿ ಆಗ್ರಹ

- Advertisement -
- Advertisement -

ಪೊಲೀಸ್ ವರಿಷ್ಠಾಧಿಕಾರಿ ರವಿ ಡಿ.ಚನ್ನಣ್ಣನವರ್‌ ಸೇರಿದಂತೆ ಇತರ ಪೊಲೀಸ್ ಅಧಿಕಾರಿಗಳ ಮೇಲೆ ಸುಲಿಗೆ ಆರೋಪ ಬಂದಿದ್ದು, ದೂರು ಕೂಡ ದಾಖಲಾಗಿರುವ ಸಂಗತಿ ಬಯಲಾಗಿದೆ. ಈ ಕುರಿತು ‘ದಿ ಫೈಲ್‌.ಇನ್‌‌’ ವಿಸ್ತೃತವಾಗಿ ವರದಿ ಮಾಡಿದೆ. ಈ ಹಿನ್ನೆಲೆ ಕರ್ನಾಟಕ ಎಎಪಿ, ರವಿ ಚನ್ನಣ್ಣನವರ್‌ ಅಮಾನತಿಗೆ ಆಗ್ರಹಿಸಿದೆ.

’ಅಕ್ರಮ ಮರಳು ದಂಧೆ ಪ್ರಕರಣವನ್ನು ಮುಚ್ಚಿ ಹಾಕಲು ಲಂಚ ಪಡೆದ ಆರೋಪಕ್ಕೆ ಸಂಬಂಧಿಸಿ ಪೊಲೀಸ್‌ ವರಿಷ್ಠಾಧಿಕಾರಿ ರವಿ ಡಿ ಚನ್ನಣ್ಣನವರ್‌ ಅವರನ್ನು ಅಮಾನತು ಮಾಡಿ, ನ್ಯಾಯಾಂಗ ತನಿಖೆ ನಡೆಸಬೇಕು’ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಆಗ್ರಹಿಸಿದ್ದಾರೆ.

“ಕ್ರಷರ್‌ ಉದ್ಯಮಿ ಸೇರಿ ಹಲವರಿಂದ 3.96 ಕೋಟಿ ಮೊತ್ತ ವಂಚನೆಯಾಗಿದೆ ಎಂದು ಸಲ್ಲಿಕೆಯಾಗಿದ್ದ ದೂರನ್ನು ಆಧರಿಸಿ ಆರೋಪಿಗಳ ವಿರುದ್ಧ ರವಿ ಡಿ ಚನ್ನಣ್ಣನವರ್‌ ಹಾಗೂ ಇತರೆ ಪೊಲೀಸ್‌ ಅಧಿಕಾರಿಗಳು ತನಿಖೆ ನಡೆಸಬೇಕಾಗಿತ್ತು. ಆದರೆ, ಪೊಲೀಸ್‌ ಅಧಿಕಾರಿಗಳೇ ಆರೋಪಿಗಳಿಂದ 50 ಲಕ್ಷ ರೂ. ಲಂಚ ಪಡೆದಿರುವ ಆರೋಪ ಕೇಳಿಬಂದಿದೆ. ಇಂತಹ ಗಂಭೀರ ಆರೋಪ ಹೊತ್ತಿರುವ ರವಿ ಡಿ ಚನ್ನಣ್ಣನವರ್‌ರವರು ಸಿಐಡಿ ಎಸ್ಪಿ ಹುದ್ದೆಯಲ್ಲಿ ಮುಂದುವರಿಯುವುದು ಸರಿಯಲ್ಲ. ತಕ್ಷಣವೇ ಅಮಾನತು ಮಾಡಿ ಸಮಗ್ರ ನ್ಯಾಯಾಂಗ ತನಿಖೆ ನಡೆಸಬೇಕು” ಎಂದಿದ್ದಾರೆ

ಇದನ್ನೂ ಓದಿ: ನಟಿಯ ಬಗ್ಗೆ ಅಸಂಬದ್ದ ಸುದ್ದಿ ಪ್ರಕಟಿಸಿ ‘ವಿಕೃತಿ’ ಮೆರೆದ ವಿಜಯವಾಣಿ.ನೆಟ್‌

’ಈ ಪ್ರಕರಣ ಸಂಬಂಧ ಮಂಜುನಾಥ್‌ ಎಂಬುವವರು ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ದೂರು ನೀಡಿದ್ದರೂ ಯಾವುದೇ ಕ್ರಮ ಕೈಗೊಳ್ಳಲಾಗಿಲ್ಲ. ರವಿ ಚನ್ನಣ್ಣನವರ್‌ 25 ಲಕ್ಷ, ಡಿವೈಎಸ್‌ಪಿ 15 ಲಕ್ಷ ಹಾಗೂ ಮತ್ತೊಬ್ಬ ಅಧಿಕಾರಿ 10 ಲಕ್ಷ ರೂಪಾಯಿ ಸ್ವೀಕರಿಸಿರುವ ಕುರಿತು ದೂರಿನಲ್ಲಿ ಸ್ಪಷ್ವವಾಗಿ ಉಲ್ಲೇಖಿಸಿದ್ದಾರೆ. ಪ್ರಭಾವಿಗಳ ವಿರುದ್ಧ ಎಫ್‌ಐಆರ್‌ ದಾಖಲಿಸಲು ಕೂಡ ಪೊಲೀಸ್‌ ಅಧಿಕಾರಿಗಳು ಲಕ್ಷಗಟ್ಟಲೆ ಲಂಚ ಕೇಳಿರುವ ಮಾಹಿತಿ ದೂರಿನಲ್ಲಿದೆ. ಆರೋಪಗಳಿಗೆ ಸಂಬಂಧಿಸಿ ಧ್ವನಿ ಮುದ್ರಣ, ವಾಟ್ಸಪ್‌ ಸಂದೇಶ ಮುಂತಾದ ಸಾಕ್ಷಿಗಳಿವೆ ಎಂದು ಮಂಜುನಾಥ್‌ ಹೇಳಿದ್ದಾರೆ. ಅವೆಲ್ಲದರ ಆಧಾರದಲ್ಲಿ ತನಿಖೆ ನಡೆಸಿ, ನೈಸರ್ಗಿಕ ಸಂಪತ್ತನ್ನು ಕೊಳ್ಳೆ ಹೊಡೆದವರಿಗೆ ಹಾಗೂ ಅವರನ್ನು ರಕ್ಷಣೆ ಮಾಡಿದವರಿಗೆ ಕಠಿಣ ಶಿಕ್ಷೆ ನೀಡಬೇಕು” ಎಂದು ಆಗ್ರಹಿಸಿದ್ದಾರೆ.

ಇನ್ನು, ಆರೋಪಿ ಅಶೋಕ್‌ ಎಂಬವರೊಂದಿಗೆ ರವಿ ಡಿ.ಚನ್ನಣ್ಣನವರ್‌ ಹಾಗೂ ಡಿವೈಎಸ್‌ಪಿ ಮಹದೇವಪ್ಪ ಶಾಮೀಲಾಗಿ ತನಿಖೆಯಿಂದ ಆರೋಪಿ ಕೈತಪ್ಪಿಸಿಕೊಳ್ಳಲು ನೆರವಾಗಿದ್ದಾರೆ ಎಂದು ದೂರುದಾರ ಮಂಜುನಾಥ್‌ ಆರೋಪಿಸಿದ್ದಾರೆ.


ಇದನ್ನೂ ಓದಿ: ಸುಲಿಗೆ ಆರೋಪ: ರವಿ ಡಿ.ಚನ್ನಣ್ಣವರ್‌ ಸೇರಿದಂತೆ ಕೆಲವು ಪೊಲೀಸ್ ಅಧಿಕಾರಿಗಳ ಮೇಲೆ ದೂರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...