Homeಕರ್ನಾಟಕರಾಜ್ಯದ ವಿವಿಧ ಜಿಲ್ಲೆಗಳ 9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

ರಾಜ್ಯದ ವಿವಿಧ ಜಿಲ್ಲೆಗಳ 9 ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

- Advertisement -
- Advertisement -

ಅಕ್ರಮ ಆಸ್ತಿ ಗಳಿಕೆ ಆರೋಪ ಸಂಬಂಧ ರಾಜ್ಯದ ವಿವಿಧ ಜಿಲ್ಲೆಗಳ 40 ಕಡೆಗಳಲ್ಲಿ 9 ಅಧಿಕಾರಿಗಳಿಗೆ ಸೇರಿದ ಆಸ್ತಿಪಾಸ್ತಿಗಳ ಮೇಲೆ ದಿಢೀರನೇ ಎಸಿಬಿ ಅಧಿಕಾರಿಗಳ ತಂಡ ಗುರುವಾರ ದಾಳಿ ನಡೆಸಿದೆ.

9 ಸರ್ಕಾರಿ ಅಧಿಕಾರಿಗಳ ನಿವಾಸದ ಮೇಲೆ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿ, ಶೋಧ ಕಾರ್ಯದಲ್ಲಿ ಚಿನ್ನ ಮತ್ತು ಆಸ್ತಿಗೆ ಸಂಬಂಧಿಸಿದಂತೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಬೆಂಗಳೂರು, ಮಂಗಳೂರು, ದಾವಣಗೆರೆ, ಉಡುಪಿ, ಶಿವಮೊಗ್ಗ, ಮಂಡ್ಯ ಇತ್ಯಾದಿ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿದೆ. ಅಕ್ರಮ ಸಂಪತ್ತು, ವಿವಿಧ ಕಡೆಗಳಲ್ಲಿ ಭೂಮಿ, ಮನೆ ಹೊಂದಿರುವ ಮಾಹಿತಿ ಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ಇದನ್ನೂ ಓದಿ: ಉಗ್ರ ಸಂಘಟನೆಗಳಿಗೆ ಹಣಕಾಸು ನೆರವು: ಕಾಶ್ಮೀರದಲ್ಲಿ ಎನ್‌ಐಎ ದಾಳಿಯಲ್ಲಿ ಆರು ಜನರ ಬಂಧನ

 

ಕೋಲಾರ ಜಿಲ್ಲೆ ಮಾಲೂರು ನಗರಸಭೆ ಯೋಜನಾ ನಿರ್ದೇಶಕ ಹೆಚ್ ಆರ್ ಕೃಷ್ಣಪ್ಪ ಅವರ ಮನೆ, ಕಚೇರಿಯ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆ, ಆಸ್ತಿಪತ್ರಗಳ ಪರಿಶೀಲನೆ ನಡೆಸಿದ್ದಾರೆ. ಮಂಗಳೂರಿನ ನಗರ ಅಭಿವೃದ್ಧಿ ಘಟಕದ ಇಂಜಿನಿಯರ್ ಜಿ. ಶ್ರೀಧರ್, ಉಡುಪಿಯ ಕರ್ನಾಟಕ ಗ್ರಾಮೀಣ ಅಭಿವೃದ್ಧಿ ಸಂಸ್ಥೆಯ ಇಂಜಿನಿಯರ್ ಕೃಷ್ಣ, ಕೆಆರ್ ಡಿಎಲ್ ಅಧಿಕಾರಿ ಆರ್. ಪಿ ಕುಲಕರ್ಣಿ ಅವರ ಮನೆಗಳ ಮೇಲೆ ದಾಳಿ ನಡೆದಿದೆ.

ಮಂಡ್ಯದ ಅರಣ್ಯ ಅಧಿಕಾರಿ ವೆಂಕಟೇಶ್, ವಿಜಯಪುರ ಹೆಸ್ಕಾಂ ಇಂಜಿನಿಯರ್ ಸಿದ್ಧರಾಮ ಮಲ್ಲಿಕಾರ್ಜುನ್, ಕೋರಮಂಗಲ ಆರ್‌ಟಿಓ ಅಧಿಕಾರಿ ಕೃಷ್ಣಮೂರ್ತಿ, ಬಳ್ಳಾರಿ ಎಲೆಕ್ರಿಕಲ್ ಇಂಜಿನಿಯರ್ ವಿಜಯ್ ಕುಮಾರ್ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.

ಎಸಿಬಿ ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಸೀಮಂತ್ ಕುಮಾರ್ ಸಿಂಗ್ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದೆ. ಈ ಕಾರ್ಯಾಚರಣೆಯಲ್ಲಿ ನೂರಾರು ಅಧಿಕಾರಿಗಳು, ಸಿಬ್ಬಂದಿ ಭಾಗಿಯಾಗಿದ್ದಾರೆ. ಈ ಎಲ್ಲ 9 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆಯಡಿ ಎಫ್ ಐಆರ್ ದಾಖಲಾಗಿದೆ ಎಂದು ತಿಳಿಸಿದ್ದಾರೆ.


ಇದನ್ನೂ ಓದಿ: ಸಹಕಾರ ಖಾತೆ ರಚನೆ: ಒಕ್ಕೂಟ ಸರ್ಕಾರದಿಂದ ರಾಜ್ಯದ ಹಕ್ಕುಗಳ ಮೇಲೆ ದಾಳಿ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...