ಗದಗ: ಜಂಟಿ ಕೃಷಿ ನಿರ್ದೇಶಕರ ಮನೆ ಮೇಲೆ ಎಸಿಬಿ ದಾಳಿ, 3.5 ಕೋಟಿ ಮೌಲ್ಯದ ಚಿನ್ನ ವಶ

ಗದಗ ಜಿಲ್ಲೆಯ ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಶಿವಮೊಗ್ಗದ ಚಾಲುಕ್ಯನಗರ ಮನೆಯಲ್ಲಿ ಅಪಾರ ಪ್ರಮಾಣದ ಚಿನ್ನಾಭರಣ, ನಗದು ಪತ್ತೆಯಾಗಿದೆ.

3.5 ಕೋಟಿ ರೂಪಾಯಿ ಮೌಲ್ಯದ 7 ಕೆಜಿ ಚಿನ್ನ, ಎರಡು ಲಕ್ಷ ರೂಪಾಯಿ ಮೌಲ್ಯದ ಮೂರು ಕೆ.ಜಿ ಬೆಳ್ಳಿ ಮತ್ತು 15 ಲಕ್ಷ ರೂ. ನಗದನ್ನು ಎಸಿಬಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ವಜ್ರಾಭರಣದ ಮೌಲ್ಯಮಾಪನ ನಡೆಯುತ್ತಿದೆ.

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ಇಂದು ಬೆಳಗ್ಗೆ ರಾಜ್ಯದ 15 ಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಮತ್ತು ಅವರ ಆಪ್ತರ ಮನೆ ಸೇರಿದಂತೆ ಸುಮಾರು 60 ಸ್ಥಳಗಳ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…

400 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಗಳೂರು, ಕಲಬುರಗಿ, ಗದಗ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದರು.

ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.


ಇದನ್ನೂ ಓದಿ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ರಾಜ್ಯದ 15 ಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

LEAVE A REPLY

Please enter your comment!
Please enter your name here