Homeಕರ್ನಾಟಕವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗಾಗಿ ಆಶಾ ಕಾರ್ಯಕರ್ತೆಯರ ಆನ್‌ಲೈನ್ ಪ್ರತಿಭಟನೆ

- Advertisement -
- Advertisement -

ಬಾಕಿಯಿರುವ ವೇತನ, ಗೌರವಧನ ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸಬೇಕು ಎಂದು ಆಗ್ರಹಿಸಿ ಸೋಮವಾರ ಆಶಾ ಕಾರ್ಯಕರ್ತೆಯರು ರಾಜ್ಯ ವ್ಯಾಪಿ ಆನ್‌ಲೈನ್ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಕೆಲಸದ ಸ್ಥಳಗಳಿಂದ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿದ್ದಾರೆ.

ರಾಜ್ಯ ವ್ಯಾಪಿ ನಡೆಸಿದ ಪ್ರತಿಭಟನೆಯ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟು ರಾಜ್ಯ  ಸರ್ಕಾರಕ್ಕೆ ಮತ್ತು ಆರೋಗ್ಯ ಇಲಾಖೆಗೆ ತಮ್ಮ ಹಕ್ಕೊತ್ತಾಯಗಳಿಗೆ ತಕ್ಷಣ ಪರಿಹಾರ ಒದಗಿಸಬೇಕೆಂದು ಮನವಿ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಅಧ್ಯಕ್ಷರಾದ ಕೆ. ಸೋಮಶೇಖರ ಯಾದಗಿರಿ, ರಾಜ್ಯ ಕಾರ್ಯದರ್ಶಿ ಶ್ರೀಮತಿ ಡಿ. ನಾಗಲಕ್ಷ್ಮಿ, ರಾಜ್ಯ ಉಪಾಧ್ಯಕ್ಷೆ ರಮಾ.ಟಿ.ಸಿ ಸೇರಿದಂತೆ ಅನೇಕ ಆಶಾ ಕಾರ್ಯಕರ್ತೆಯರು ತಮ್ಮ ಸ್ಥಳಗಳಿಂದಲೇ ಭಿತ್ತಿಪತ್ರಗಳನ್ನು ಪ್ರದರ್ಶಿಸಿ ಪ್ರತಿಭಟಿಸಿದ್ದಾರೆ.

ಇದನ್ನೂ ಓದಿ: ಜನಾಕ್ರೋಶದ ಸ್ಫೋಟ: ರಾಜ್ಯಾದ್ಯಂತ ಮನೆಗಳಲ್ಲಿಯೇ ಭುಗಿಲೆದ್ದ ಪ್ರತಿಭಟನೆಗಳು

ಗ್ರಾಮಾಂತರ ಪ್ರದೇಶಗಳಲ್ಲಿ ವ್ಯಾಪಕವಾಗಿ ಹರಡುತ್ತಿರುವ ಈ ಕೊರೊನಾ ಸಾಂಕ್ರಾಮಿಕ ಹಬ್ಬುತ್ತಿರುವ  ಸಂದರ್ಭದಲ್ಲಿ ಜನತೆಗೆ ಭರವಸೆಯ ಆತ್ಮವಿಶ್ವಾಸವನ್ನು, ಮುನ್ನೆಚ್ಚರಿಕೆಯನ್ನು, ಜಾಗೃತಿಯನ್ನು ಆಶಾ ಕಾರ್ಯಕರ್ತೆಯರು ಮೂಡಿಸುತ್ತಿದ್ದಾರೆ. ಇವರಿಗೆ ಮೇ ತಿಂಗಳು ಸೇರಿ 3 ತಿಂಗಳಿಂದ ವೇತನ ಕೂಡ ನೀಡಿಲ್ಲ ಎಂದು ಸಂಘಟನೆ ಸದಸ್ಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಬೇಡಿಕೆಗಳು ಹೀಗಿವೆ.

೧. ಲಾಕ್‌ಡೌನ್ ಸಂದರ್ಭದಲ್ಲಿ ಕಳೆದ 2 ತಿಂಗಳ ಮತ್ತು ಮೇ ತಿಂಗಳು ಸೇರಿದರೆ 3 ತಿಂಗಳಿಂದ ವೇತನ

೨. ಕಾರ್ಯಕರ್ತೆಯರಿಗೆ ಕೆಲಸ ಮಾಡುವುದಕ್ಕೆ ಅಗತ್ಯವಿರುವಷು  ಮಾಸ್ಕ್, ಸ್ಯಾನಿಟೈಸರ್ ಹಾಗೂ ಗ್ಲೌಸ್ ನೀಡಬೇಕು.

೩. ಪ್ರತಿ ಜಿಲ್ಲೆಯಲಿ  20 ರಿಂದ 40 ಮಂದಿ ಆಶಾ ಕಾರ್ಯಕರ್ತೆಯರು ಸೋಂಕಿಗೋಳಗಾಗಿರುವ ಹಿನ್ನೆಲೆಯಲ್ಲಿ, ಅವರ ಕುಟುಂಬವನ್ನು ಸಶಕ್ತಗೊಳಿಸಲು ಪ್ರತಿ ಆಶಾ ಕಾರ್ಯಕರ್ತೆಯರಿಗೆ ರೂ. 25,000 ಪರಿಹಾರ ನೀಡಬೇಕು.

೪. ಕೊರೊನಾ ಸಂದರ್ಭದಲ್ಲಿನ ವಿಶೇಷ ಸೇವೆಗೆಂದು ಇತರ ಕೊರೊನಾ ವಾರಿಯರ್ಸ್‌ಗಳಿಗೆ ಆರೋಗ್ಯ ಇಲಾಖೆಯಲ್ಲಿ ನೀಡಲಾಗುವ ಮಾಸಿಕ 5000 ರೂಪಾಯಿ ವಿಶೇಷ ಭತ್ಯೆ(ರಿಸ್ಕ್ ಅಲೋಯನ್ )ಯನ್ನು ಆಶಾ ಕಾರ್ಯಕರ್ತೆರಿಗೂ ನೀಡಬೇಕು.

೫. ಕಳೆದ ವರ್ಷ ಕೋವಿಡ್ ಮೊದಲ ಅಲೆಯಲ್ಲಿ  ಮತ್ತು ಈಗ ಕೋವಿಡ್‌ಯಿಂದ ಸಾವಿಗೀಡಾದ ಕುಟುಂಬಕ್ಕೆ ಘೋಷಣೆಯಾದ 50 ಲಕ್ಷ ರೂಪಾಯಿ ಪರಿಹಾರ ನೀಡಬೇಕು.

ಅಸುರಕ್ಷತೆ ಮಧ್ಯೆ ಕೆಲಸ ಮಾಡುತ್ತಿರುವ ಆಶಾ ಕಾರ್ಯಕರ್ತೆಯರ ಬೇಡಿಕೆಗಳನ್ನು ಕೂಡಲೇ ಪರಿಹರಿಸಬೇಕು ಎಂದು ಆಗ್ರಹಿಸಿ, ಸೋಮವಾರ ಕೆಲಸದ ಸ್ಥಳಗಳಿಂದಲೇ ಆನ್‌ಲೈನ್ ಪ್ರತಿಭಟನೆ ನಡೆಸಲಾಗಿದೆ.


ಇದನ್ನೂ ಓದಿ: ಬಾಯಿಮಾತಿನಲ್ಲಿ ಕೊರೊನಾ ವಾರಿಯರ್ಸ್ ಎನ್ನದೆ, ದುಡಿದವರಿಗೆ ಗೌರವಧನ ನೀಡಿ- ಕುಮಾರಸ್ವಾಮಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

FACT CHECK : ಅಧಿಕಾರಕ್ಕೆ ಬಂದರೆ ‘ಪಿತ್ರಾರ್ಜಿತ ಆಸ್ತಿ ತೆರಿಗೆ’ ಜಾರಿಗೊಳಿಸುವುದಾಗಿ ಕಾಂಗ್ರೆಸ್ ಹೇಳಿಲ್ಲ

0
ಕಳೆದ ಎರಡು ದಿನಗಳಿಂದ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' (Inheritance Tax) ಕುರಿತು ದೊಡ್ಡ ಮಟ್ಟದ ಚರ್ಚೆಗಳು ನಡೆಯುತ್ತಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ದೇಶದಲ್ಲಿ 'ಪಿತ್ರಾರ್ಜಿತ ಆಸ್ತಿ ತೆರಿಗೆ' ಜಾರಿಗೆ ತರಲಿದೆ. ಈ...