Homeಕರ್ನಾಟಕರಾಷ್ಟ್ರಧ್ವಜಕ್ಕೆ ಅವಮಾನ: ಈಶ್ವರಪ್ಪ ವಜಾಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಲಿರುವ ಕಾಂಗ್ರೆಸ್

ರಾಷ್ಟ್ರಧ್ವಜಕ್ಕೆ ಅವಮಾನ: ಈಶ್ವರಪ್ಪ ವಜಾಗೆ ಆಗ್ರಹಿಸಿ ಅಹೋರಾತ್ರಿ ಧರಣಿ ನಡೆಸಲಿರುವ ಕಾಂಗ್ರೆಸ್

- Advertisement -
- Advertisement -

ರಾಷ್ಟ್ರಧ್ವಜ ಬದಲಾವಣೆ ಕುರಿತು ವಿವಾದಾತ್ಮಕ ಹೇಳಿಕೆ ನೀಡಿರುವ ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್. ಈಶ್ವರಪ್ಪ ಅವರ ರಾಜೀನಾಮೆಗೆ ಒತ್ತಾಯಿಸಿರುವ ಕಾಂಗ್ರೆಸ್ ಶಾಸಕರು ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಲಿದ್ದಾರೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಗುರುವಾರ ಘೋಷಿಸಿದ್ದಾರೆ.

“ನಾವು ಅಹೋರಾತ್ರಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದೇವೆ. ನಾವು ಇದನ್ನು ತಾರ್ಕಿಕ ಅಂತ್ಯಕ್ಕೆ ತೆಗೆದುಕೊಳ್ಳಲು ನಿರ್ಧರಿಸಿದ್ದೇವೆ. ಹೀಗಾಗಿ ಅಹೋರಾತ್ರಿ ಧರಣಿ ನಡೆಸುತ್ತೇವೆ” ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದರು.

“ಈಶ್ವರಪ್ಪ ದೇಶದ್ರೋಹ ಮಾಡಿದ್ದಾರೆ. ನಮ್ಮ ಹೆಮ್ಮೆ ಮತ್ತು ರಾಷ್ಟ್ರದ ಸಾರ್ವಭೌಮತ್ವದ ಪ್ರತೀಕವಾಗಿರುವ ರಾಷ್ಟ್ರಧ್ವಜಕ್ಕೆ ಅಪಮಾನ ಮಾಡಿದ್ದಾರೆ’’ ಎಂದು ಆರೋಪಿಸಿದ್ದಾರೆ. ಎಲ್ಲಾ ಕಾಂಗ್ರೆಸ್ ಎಂಎಲ್‌ಸಿಗಳು ಕೂಡ ವಿಧಾನ ಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ ಮಾಡಲಿದ್ದಾರೆ.

ಇದನ್ನೂ ಓದಿ: ಹಿಜಾಬ್ ಕುರಿತ ತಪ್ಪಾದ ವರದಿ ಬಗ್ಗೆ ಚರ್ಚೆಗೂ ತಯಾರಿಲ್ಲದ ಪಬ್ಲಿಕ್‌ ಟಿವಿ: ‘ಹೇಟ್‌ ಸ್ಪೀಚ್‌ ಬೇಡ’ ತಂಡ ಆಕ್ರೋಶ

2010 ರಲ್ಲಿ ಬಿಜೆಪಿ ಅಧಿಕಾರದಲ್ಲಿದ್ದಾಗ ಅಕ್ರಮ ಗಣಿಗಾರಿಕೆ ಹಗರಣದ ಕುರಿತು ಕಾಂಗ್ರೆಸ್ ವಿಧಾನಸಭೆಯಲ್ಲಿ ಅಹೋರಾತ್ರಿ ಧರಣಿ ನಡೆಸಿತ್ತು.

’ಕೆಂಪು ಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಲಾಗುವುದು, ತ್ರಿವರ್ಣ ಧ್ವಜದ ಬದಲು ಕೇಸರಿ ಧ್ವಜ ಹಾಕಲಾಗುವುದದು’ ಎಂದು ಈಶ್ವರಪ್ಪ ಫೆಬ್ರವರಿ 9ರಂದು ಹೇಳಿಕೆ ನೀಡಿದ್ದರು. ಇದು ದೇಶದ್ರೋಹ ಎಂದು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿತ್ತು. ಈಶ್ವರಪ್ಪ, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ಘೋಷಣೆಗಳನ್ನು ಕೂಗಿ, ಈಶ್ವರಪ್ಪ ಅವರನ್ನು ಸಂಪುಟದಿಂದ ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂದು ಒತ್ತಾಯಿಸಿದ್ದರು. ಕಾಂಗ್ರೆಸ್‌ ನಾಯಕರು ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ ನಡೆಸಿದರು.

“ಈಶ್ವರಪ್ಪ ಹೇಳಿಕೆ ನೀಡಿ ಆರು ದಿನಗಳಾಗಿವೆ. ಮುಖ್ಯಮಂತ್ರಿಗಳು ಸ್ವಯಂ ಪ್ರೇರಿತ ಕ್ರಮ ಕೈಗೊಂಡು ಈಶ್ವರಪ್ಪ ಅವರನ್ನು ಈಗಲೇ ವಜಾ ಮಾಡಬೇಕಿತ್ತು. ಸಚಿವರ ಹೇಳಿಕೆಯು 1971ರ ರಾಷ್ಟ್ರೀಯ ಗೌರವ ಅವಮಾನ ತಡೆ ಕಾಯಿದೆ ಹಾಗೂ ಭಾರತೀಯ ದಂಡ ಸಂಹಿತೆಯ ಉಲ್ಲಂಘನೆಯಾಗಿದ್ದು, ಇದನ್ನು ದೇಶದ್ರೋಹವೆಂದು ಗುರುತಿಸಿ ಜೈಲು ಶಿಕ್ಷೆ ವಿಧಿಸಬೇಕು. ಕೂಡಲೇ ಈಶ್ವರಪ್ಪ ಅವರನ್ನು ವಜಾಗೊಳಿಸಿ ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು” ಎಂದು ಸಿದ್ದರಾಮಯ್ಯ ಬುಧವಾರ ಆಗ್ರಹಿಸಿದ್ದರು.


ಇದನ್ನೂ ಓದಿ: ಸಂಪುಟದಿಂದ ಈಶ್ವರಪ್ಪ ವಜಾಕ್ಕೆ ಕಾಂಗ್ರೆಸ್‌ ಆಗ್ರಹ: ಸದನದಲ್ಲಿ ರಾಷ್ಟ್ರಧ್ವಜ ಹಿಡಿದು ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...