Homeಕರ್ನಾಟಕಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

ಪ್ರಾಥಮಿಕ ಚರ್ಚೆಗೆ ಅವಕಾಶ: ಪ್ರತಿಪಕ್ಷಗಳ ಒತ್ತಡಕ್ಕೆ ಮಣಿಯದ ಸ್ಪೀಕರ್‌..

- Advertisement -
- Advertisement -

ಒಂದೆಡೆ ಬರ ಮತ್ತು ಮತ್ತೊಂದೆಡೆ ನೆರೆಯ ಸಮಸ್ಯೆಗೆ ತುತ್ತಾಗಿ ಅರ್ಧ ರಾಜ್ಯವೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಈ ಕುರಿತು ತಾವು ನೀಡಿರುವ ನಿಲುವಳಿ ಸೂಚನೆಗೆ ಸಂಬಂಧಿಸಿದಂತೆ ಪ್ರಾಥಮಿಕ ಚರ್ಚೆಗೆ ಅವಕಾಶ ಮಾಡಿಕೊಡುವಂತೆ ಕಾಂಗ್ರೆಸ್ ಮುಖಂಡ ಸಿದ್ದರಾಮಯ್ಯ ಒತ್ತಾಯಿಸಿದರು. ಆದರೆ ಪ್ರತಿಪಕ್ಷದ ಒತ್ತಾಯಕ್ಕೆ ಮಣಿಯದೆ ಕಾರ್ಯಸೂಚಿಯಂತೆ ಸದನದ ಕಲಾಪಕ್ಕೆ ಅವಕಾಶ ಕಲ್ಪಿಸಿದ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಇಲ್ಲಿ ಇಂದು ಪ್ರತಿಪಕ್ಷಗಳ ಕೆಂಗಣ್ಣಿಗೆ ಗುರಿಯಾದರು.

ಸಂತಾಪ ಸೂಚನಾ ನಿರ್ಣಯ ಪೂರ್ಣಗೊಂಡ ನಂತರ ಕಾರ್ಯದರ್ಶಿಗಳ ವರದಿ ಹಾಗೂ ವಿವಿಧ ಸಮಿತಿಗಳ ವರದಿ ಮಂಡನೆಯ ನಂತರ ಕಾಂಗ್ರೆಸ್ ಹಾಗೂ ಜಾತ್ಯಾತೀತ ಜನತಾ ದಳ ನೀಡಿರುವ ನಿಲುವಳಿ ಸೂಚನೆಯನ್ನು ಕೈಗೆತ್ತಿಕೊಳ್ಳುವುದಾಗಿ ಸಭಾಧ್ಯಕ್ಷರು ಹೇಳಿದರಾದರೂ, ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ನಂತರ ನಿಯಮ 60 ರಂತೆ ಸಾರ್ವಜನಿಕ ಮಹತ್ವದ ವಿಚಾರದ ಚರ್ಚೆಗೆ ನಿಯಮಾವಳಿಗಳಲ್ಲಿ ಅವಕಾಶವಿದೆ ಎಂಬುದನ್ನು ಉಲ್ಲೇಖಿಸಿದ ಸಿದ್ದರಾಮಯ್ಯ ಅವರು ದಿನದ ಕಾರ್ಯಸೂಚಿಯಲ್ಲಿ ಪ್ರಶ್ನೋತ್ತರ ವೇಳೆ ಹಾಗೂ ಶೂನ್ಯ ವೇಳೆಯ ಚರ್ಚೆ ಇಲ್ಲದಿರುವ ಹಿನ್ನೆಲೆಯಲ್ಲಿ ಸಭಾಧ್ಯಕ್ಷ ಪೀಠಕ್ಕೆ ತಾವು ಸಲ್ಲಿಸಿದ ನಿಲುವಳಿ ಸೂಚನೆ ಕುರಿತ ಪ್ರಾಥಮಿಕ ಚರ್ಚೆಗೆ ಪಟ್ಟುಹಿಡಿದರು. ಸಭಾನಾಯಕ ಬಿ.ಎಸ್ ಯಡಿಯೂರಪ್ಪ ಅವರು ಮಧ್ಯ ಪ್ರವೇಶಿಸಿ ಚರ್ಚೆಗೆ ತಾವು ಸಿದ್ಧ ಎಂದು ಭರವಸೆ ನೀಡಿದರೂ ಪ್ರತಿಪಕ್ಷದವರು ಮುಖ್ಯಮಂತ್ರಿಯವರ ಮನವಿಯನ್ನು ಪುರಸ್ಕರಿಸಲಿಲ್ಲ.

ತಮ್ಮ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಬೆಂಬಲಕ್ಕೆ ನಿಂತ ಸದಸ್ಯರಾದ ಕೆ ಆರ್ ರಮೇಶ್ ಕುಮಾರ್ ಕೃಷ್ಣ ಬೈರೇಗೌಡ ಹಾಗೂ ಹೆಚ್ ಕೆ ಪಾಟೀಲ್ ಅವರು ಕಲಾಪದ ಕಾರ್ಯವಿಧಾನದಲ್ಲಿನ ನಿಯಮಾವಳಿಗಳನ್ನು ಉಲ್ಲೇಖಿಸಿದರೂ ಸಭಾಧ್ಯಕ್ಷರ ಮನವೊಲಿಸಲು ಸಾಧ್ಯವಾಗಲಿಲ್ಲ. ಒಂದು ಹಂತದಲ್ಲಿ ಸಿದ್ದರಾಮಯ್ಯ ಅವರು ಪ್ರಜಾಪ್ರಭುತ್ವದ ಧ್ವನಿ ಅಡಗಿಸಲು ಸಾಧ್ಯವಿಲ್ಲ ಎಂದು ಏರಿದ ಧ್ವನಿಯಲ್ಲಿ ಕೂಗಿ ಸಭಾಧ್ಯಕ್ಷರ ನಡೆಯನ್ನು ಪ್ರತಿಭಟಿಸಿದರಲ್ಲದೆ, ಸಭಾಧ್ಯಕ್ಷರು ಸರ್ಕಾರದ ಜೊತೆಗೆ ಶಾಮೀಲಾಗಿದ್ದಾರೆ ಎಂದು ಆರೋಪಿಸಿದರು. ಇದಾವುದಕ್ಕೂ ಜಗ್ಗದ ಸಭಾಧ್ಯಕ್ಷರು ಕಾರ್ಯಸೂಚಿಯಂತೆ ಕಲಾಪವನ್ನು ಮುಂದುವರೆಸಿದರು.

ರಾಜ್ಯ ವಿಧಾನ ಸಭೆಯ ಕಾರ್ಯದರ್ಶಿ ಎಂ.ಕೆ ವಿಶಾಲಾಕ್ಷಿ ಅವರು ಕಳೆದ ಅಧಿವೇಶನದಲ್ಲಿ ವರದಿಯನ್ನು ಒಪ್ಪಿಸಿದ ನಂತರ ರಾಷ್ಟ್ರಪತಿಯವರಿಂದ – ರಾಜ್ಯಪಾಲರಿಂದ ಒಪ್ಪಿಗೆ ಪಡೆದ ವಿಧೇಯಕಗಳ ಪಟ್ಟಿಯನ್ನು ಸಭೆಯ ಮುಂದೆ ಮಂಡಿಸಿದರು. ಸ್ಥಳೀಯ ಸಂಸ್ಥೆಗಳ ಮತ್ತು ಪಂಚಾಯತ್ ರಾಜ್ ಸಂಸ್ಥೆಗಳ ಸಮಿತಿಯ ಅಧ್ಯಕ್ಷ ಅರಗ ಜ್ಞಾನೇಂದ್ರ ಅವರು 2018-19 ನೇ ಸಾಲಿನ ಸಮಿತಿಯ 28 ನೇ ವರದಿಯನ್ನು ಒಪ್ಪಿಸಿದರು. ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಕಲ್ಯಾಣ ಸಮಿತಿಯ ಅಧ್ಯಕ್ಷ ಎಸ್.ಅಂಗಾರ ಅವರು ಸಮಿತಿಯ ಎರಡನೇ ವರದಿಯನ್ನು ಸದನಕ್ಕೆ ಒಪ್ಪಿಸಿದರು.

ನಂತರ, ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಭಾರತದ ಲೆಕ್ಕ ನಿಯಂತ್ರಕರು ಮತ್ತು ಮಹಾಲೆಕ್ಕಪರಿಶೋಧಕರ 2017-18 ನೇ ಸಾಲಿನ ಧನ ವಿನಿಯೋಗ ಲೆಕ್ಕಗಳು ಮತ್ತು ಹಣಕಾಸು ಲೆಕ್ಕಗಳನ್ನು ಸಭೆಯ ಮುಂದಿಟ್ಟರು. ಅಲ್ಲದೆ, ಮಾರ್ಚ್ 2018 ಕ್ಕೆ ಅಂತ್ಯಗೊಂಡ ರಾಜಸ್ವ ವಲಯದ ಮೇಲಿನ ವರದಿ ಹಾಗೂ ಆರ್ಥಿಕ ವಲಯದ ಮೇಲಿನ ವರದಿಗಳನ್ನು ಸಭೆಯ ಮುಂದಿಟ್ಟರು. ತದನಂತರ, ಉಪ ಮುಖ್ಯಮಂತ್ರಿಗಳಾದ ಗೋವಿಂದ ಎಂ ಕಾರಜೋಳ, ಡಾ. ಸಿ.ಎನ್ ಅಶ್ವಥನಾರಾಯಣ ಹಾಗೂ ಲಕ್ಷ್ಮಣ ಸವದಿ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ ಮಾಧುಸ್ವಾಮಿ ಅವರನ್ನು ಒಳಗೊಂಡಂತೆ ಬಿ.ಎಸ್ ಯಡಿಯೂರಪ್ಪ ಅವರ ಸಚಿವ ಸಂಪುಟ ಸಹೋದ್ಯೋಗಿಗಳು ತಮ್ಮ ಇಲಾಖೆಗೆ ಸಂಬಂಧಿಸಿದಂತೆ ವಿತ್ತೀಯ ಕಾರ್ಯಕಲಾಪಗಳಲ್ಲಿನ ಪ್ರಸಕ್ತ ಸಾಲಿನ ಅನುದಾನದ ಬೇಡಿಕೆಗಳನ್ನು ಮಂಡಿಸಿದರು.

ಇದೇ ಸಂದರ್ಭದಲ್ಲಿ ಸಿದ್ದರಾಮಯ್ಯ ಅವರನ್ನು ಪ್ರತಿಪಕ್ಷ ನಾಯಕರಾಗಿ ಹಾಗೂ ಸರ್ಕಾರದ ಸಚೇತಕರಾಗಿ ವಿ ಸುನೀಲ್ ಕುಮಾರ್ ಅವರನ್ನು ಮಾನ್ಯ ಮಾಡಿರುವುದಾಗಿ ರಾಜ್ಯ ವಿಧಾನ ಸಭೆಯ ಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿಕೃತವಾಗಿ ಪ್ರಕಟಿಸಿದರು.

ಅಂತೆಯೇ, ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸಲು ಆಡಳಿತಾರೂಢಾ ಹಾಗೂ ಪ್ರತಿಪಕ್ಷಗಳ ಸದನ ನಾಯಕರನ್ನು ಕಲಾಪ ಸಲಹಾ ಸಮಿತಿಯ ಸಭೆಗೆ ಆಮಂತ್ರಿಸಿದ ಸಭಾಧ್ಯಕ್ಷರು ಪ್ರತಿಪಕ್ಷ ಹಾಗೂ ಆಡಳಿತ ಪಕ್ಷಗಳ ಘೋಷಣೆ ಮತ್ತು ಪ್ರತಿ-ಘೋಘಣೆಗಳ ನಡುವೆಯೇ ಸದನವನ್ನು ಮುಂದೂಡಿದರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೀದಿಬದಿ ವ್ಯಾಪಾರಿಗಳ ಒಕ್ಕಲೆಬ್ಬಿಸುವಿಕೆ ಖಂಡಿಸಿ ಸರ್ಕಾರದ ವಿರುದ್ದ ಬೃಹತ್ ಪ್ರತಿಭಟನೆ

ಬೆಂಗಳೂರು ನಗರದಲ್ಲಿ ಫುಟ್‌ಪಾತ್ ಒತ್ತುವರಿ ತೆರವಿನ ಹೆಸರಿನಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ (ಜಿಬಿಎ) ನಡೆಸುತ್ತಿರುವ ಏಕಪಕ್ಷೀಯ ಕಾರ್ಯಾಚರಣೆ ಬಡ ಬೀದಿಬದಿ ವ್ಯಾಪಾರಿಗಳ ಬದುಕನ್ನು ಬೀದಿಗೆ ತಳ್ಳಿದೆ. ಪ್ರಾಧಿಕಾರದ ಈ ಜನವಿರೋಧಿ ‘ಆಪರೇಷನ್’ ಖಂಡಿಸಿ,...

ಬಿಹಾರ| ಹಿಜಾಬ್ ತೆಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಮುಸ್ಲಿಂ ಮಹಿಳೆಗೆ ಒತ್ತಾಯಿಸಿದ ಗುಂಪು

ಪುರುಷರ ಗುಂಪೊಂದು ದಾರಿಯಲ್ಲಿ ಹೋಗುತ್ತಿದ್ದ ಮುಸ್ಲಿಂ ಮಹಿಳೆಯನ್ನು ತಡೆದು ದೌರ್ಜನ್ಯ ಎಸಗಿದ್ದು, ಆಕೆ ಧರಿಸಿದ್ದ ಹಿಜಾಬ್ ತಗೆದು ಹಣೆಗೆ ಸಿಂಧೂರ ಇಟ್ಟುಕೊಳ್ಳುವಂತೆ ಹಿಂದುತ್ವ ಕಿಡಿಗೇಡಿಗಳು ಒತ್ತಾಯಿಸಿರುವ ವಿಡಿಯೊ ವೈರಲ್ ಆಗಿದೆ. ಜುಲೈ 8 ರ...

ಕೃಷಿ ಭೂಮಿ ಉಳಿಸಲು ರೈತ ಸಂಘಟನೆಗಳಿಂದ ಜುಲೈ 11ಕ್ಕೆ ‘ಬಿಡದಿ ಚಲೋ’

ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಗಾಗಿ ರೈತರ ಫಲವತ್ತಾದ ಕೃಷಿ ಭೂಮಿಯನ್ನು ವಶಪಡಿಸಿಕೊಳ್ಳಲು ಮುಂದಾಗಿರುವ ರಾಜ್ಯ ಸರ್ಕಾರದ ಜನವಿರೋಧಿ ಧೋರಣೆಯನ್ನು ಖಂಡಿಸಿ, ಜುಲೈ 11 ರಂದು ಬೃಹತ್ ‘ಬಿಡದಿ ಚಲೋ’ ಹಸಿರು ಹೆದ್ದಾರಿ ಪ್ರತಿಭಟನೆಯನ್ನು...

ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ : ಕದನ ವಿರಾಮ ಮುಕ್ತಾಯಗೊಂಡಿದೆ ಎಂದ ಟ್ರಂಪ್

ಮಂಗಳವಾರ ರಾತ್ರಿಯಿಂದ (ಭಾರತೀಯ ಕಾಲಮಾನ) ಅಮೆರಿಕ-ಇರಾನ್ ನಡುವೆ ಮತ್ತೆ ಕಾಳಗ ಶುರುವಾಗಿದ್ದು, ಕದನ ವಿರಾಮ ಮುಕ್ತಾಯಗೊಂಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಟರ್ಕಿಯಲ್ಲಿ ನಡೆದ ನ್ಯಾಟೋ ಶೃಂಗಸಭೆಯಲ್ಲಿ ಮಾತನಾಡಿದ ಟ್ರಂಪ್...

ಅಯೋಧ್ಯೆ ದೇಣಿಗೆ ಹಗರಣ: ಕೇವಲ 45 ದಿನಗಳಲ್ಲಿ 70 ಬಾರಿ ಕಳ್ಳತನ, SIT ವರದಿ

ಅಯೋಧ್ಯೆಯ ರಾಮಮಂದಿರಕ್ಕೆ ಬಂದ ಸಾರ್ವಜನಿಕರ ದೇಣಿಗೆ ದುರುಪಯೋಗದ ಆರೋಪದ ಕುರಿತು ವಿಶೇಷ ತನಿಖಾ ತಂಡ (SIT) ನಡೆಸಿದ ಪ್ರಾಥಮಿಕ ತನಿಖೆಯಲ್ಲಿ, ಕೇವಲ 45 ದಿನಗಳಲ್ಲಿ ಸುಮಾರು 70 ಸಂಶಯಾಸ್ಪದ ಕಳ್ಳತನಗಳು ನಡೆದಿರುವುದಕ್ಕೆ ಪ್ರಾಥಮಿಕ...

ಬರುಯಿಪುರ ಅತ್ಯಾಚಾರ-ಕೊಲೆ ಪ್ರಕರಣ: ಪ್ರಮುಖ ಆರೋಪಿಯ ಎನ್‌ಕೌಂಟರ್; ‘ನನ್ನ ಮಗನ ಶವ ನನಗೆ ಬೇಡ’ ಎಂದ ಹೆತ್ತ ತಾಯಿ!

ಬರುಯಿಪುರ/ಕೋಲ್ಕತ್ತಾ: ಪಶ್ಚಿಮ ಬಂಗಾಳದ ದಕ್ಷಿಣ 24 ಪರಗಣ ಜಿಲ್ಲೆಯ ಬರುಯಿಪುರದಲ್ಲಿ 12 ವರ್ಷದ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಮತ್ತು ಕ್ರೂರ ಕೊಲೆ ಪ್ರಕರಣದ ಪ್ರಮುಖ ಆರೋಪಿ ಪ್ರಭಾಸ್ ಮೊಂಡೋಲ್ ಬುಧವಾರ...

ವಯನಾಡ್ ಭೂಕುಸಿತ: ಕಾಣೆಯಾದ ಐವರಿಗಾಗಿ ಮುಂದುವರೆದ ಹುಡುಕಾಟ

ಬೆಟ್ಟದ ಜಿಲ್ಲೆಯ ವಯನಾಡ್‌ನಲ್ಲಿ ನಡೆಯುತ್ತಿರುವ ಸುರಂಗ ರಸ್ತೆ ನಿರ್ಮಾಣ ಸ್ಥಳದಲ್ಲಿ ಭೂಕುಸಿತ ಸಂಭವಿಸಿ ಮೂರು ಜೀವಗಳು ಬಲಿಯಾದ ಒಂದು ದಿನದ ನಂತರ, ಕಾಣೆಯಾಗಿರುವ ಐವರಿಗಾಗಿ ಹುಡುಕಾಟ ಮುಂದುವರೆದಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ವಯನಾಡ್...

ನನ್ನನ್ನು ಕೊಂಡುಕೊಳ್ಳಲು ಯಾರ ಕೈಲೂ ಸಾಧ್ಯವಿಲ್ಲ: ಮಹುವಾ ಮೋಯಿತ್ರಾ ವಿಶೇಷ ಸಂದರ್ಶನ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಜಯಭೇರಿ ಬಾರಿಸಿದ ಬೆನ್ನಲ್ಲೇ, ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಅವರ ಭದ್ರಕೋಟೆ ಧೂಳೀಪಟವಾಗಿದೆ. ಚುನಾವಣಾ ಸೋಲಿನ ನಂತರ ಸಾಲು...

ಕೋರ್ಟ್ ರಾಜಕೀಯ ಅಖಾಡ ಅಲ್ಲ: ಸಿಎಂ ವಿಜಯ್ ವಿರುದ್ಧ ಅರ್ಜಿ ಸಲ್ಲಿಸಿದ್ದ ಡಿಎಂಕೆಗೆ ಸುಪ್ರೀಂ ತರಾಟೆ

ತಮಿಳುನಾಡಿನ ಕರೂರ್ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರನ್ನು ಭೇಟಿ ಮಾಡದಂತೆ ಮುಖ್ಯಮಂತ್ರಿ ವಿಜಯ್ ಅವರಿಗೆ ನಿರ್ಬಂಧ ಹೇರಬೇಕೆಂದು ಕೋರಿ ದ್ರಾವಿಡ ಮುನ್ನೇತ್ರ ಕಳಗಂ (ಡಿಎಂಕೆ) ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಜನರಿಂದ...

ಸುರಂಗ ರಸ್ತೆ ಕಾಮಗಾರಿ ವೇಳೆ ವಯನಾಡಿನಲ್ಲಿ ಭೂಕುಸಿತ: ಜನರು ಜೀವ ಉಳಿಸಿಕೊಳ್ಳಲು ಓಡಿದ ಭಯಾನಕ ದೃಶ್ಯ ಸೆರೆ

ಕೇರಳದ ವಯನಾಡ್ ಜಿಲ್ಲೆಯ ಮೇಪ್ಪಾಡಿಯಲ್ಲಿ ಮಂಗಳವಾರ (ಇಂದು) ಭೀಕರ ಭೂಕುಸಿತ ಸಂಭವಿಸಿದ್ದು, ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಏಳು ಜನರು ಗಾಯಗೊಂಡಿದ್ದಾರೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಜನರನ್ನು ರಕ್ಷಿಸಲು ಕಾರ್ಯಾಚರಣೆ ಮುಂದುವರಿದಿದ್ದು, ಈ...