Homeಕರ್ನಾಟಕಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

ಮೂರೇ ದಿನಕ್ಕೆ ಅಧಿವೇಶನ ಮೊಟಕುಗೊಳಿಸಲು ಮುಂದಾದ ಸಿಎಂ ಬಿಎಸ್‌ವೈ: ಸಿದ್ದರಾಮಯ್ಯ ವಿರೋಧ

ಯಾವುದೇ ಕಾರಣಕ್ಕೂ ಕಲಾಪ ಮೊಟಕುಗೊಳಿಸಲು ಬಿಡಲ್ಲ, ಇನ್ನೂ ಮೂರು ವಾರ ವಿಸ್ತರಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

- Advertisement -
- Advertisement -

ಕೊರೊನಾ ಸೋಂಕಿನ ಕಾರಣ 50 ರಿಂದ 60 ಸದಸ್ಯರು ಅಧಿವೇಶನಕ್ಕೆ ಹಾಜರಾಗಲು ಆಗುತ್ತಿಲ್ಲ. ಹೀಗಾಗಿ ವಿಧಾನಸಭೆ ಅಧಿವೇಶನವನ್ನು ಮೂರೇ ದಿನಕ್ಕೆ ಮೊಟಕುಗೊಳಿಸಲು ಸಿಎಂ ಯಡಿಯೂರಪ್ಪ ಮುಂದಾಗಿದ್ದಾರೆ. ಈ ಕುರಿತು ವಿಪಕ್ಷ ನಾಯಕರಾದ ಸಿದ್ದರಾಮಯ್ಯನವರ ಜೊತೆಗೆ ಮಾತನಾಡಿ ಅಧಿವೇಶನ ನಿಲ್ಲಿಸಲು ಸಹಕರಿಸಬೇಕೆಂದು ಮನವಿ ಮಾಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

“ಈಗಿನ ಸಂದರ್ಭದಲ್ಲಿ ಅಧಿವೇಶನವನ್ನು ಹೆಚ್ಚು ದಿನ ನಡೆಸಲು ಸಾಧ್ಯವಾಗಿಲ್ಲ. ಈ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಸಹ ಬೇಗ ಅಧಿವೇಶನ ಮುಗಿಸಬೇಕೆಂದು ತಿಳಿಸಿದ್ದಾರೆ. ಹಾಗಾಗಿ ಮೂರು ದಿನದಲ್ಲಿ ಅಧಿವೇಶನ ಮುಗಿಸಬೇಕೆಂದುಕೊಂಡಿದ್ದೇವೆ. ದಯವಿಟ್ಟು ನೀವು ಸಹ ಸಹಕಾರ ನೀಡಬೇಕು” ಎಂದು ಸಿಎಂ ಬಿಎಸ್‌ವೈ ಸಿದ್ದರಾಮಯ್ಯ ಬಳಿ ಮನವಿ ಮಾಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, “ನೀವು ಅಧಿವೇಶನದಲ್ಲಿ ಯಾವುದೇ ಮಸೂದೆಗಳನ್ನು ಮಂಡಿಸುವುದಿಲ್ಲ ಎಂಬ ಭರವಸೆ ನೀಡಬೇಕು. ಈ ಕೊರೊನಾ ಸಂದರ್ಭದಲ್ಲಿ ಯಾವುದೇ ಮಸೂದೆಗಳು ಚರ್ಚೆಯೇ ಇಲ್ಲದೇ ಅಂಗೀಕಾರವಾಗುವುದನ್ನು ನಾವು ವಿರೋಧಿಸುತ್ತೇವೆ. ಈ ಕುರಿತು ನೀವು ಸ್ಪಷ್ಟನೆ ನೀಡಿದರೆ ನಾವು ಯೋಚಿಸುತ್ತೇವೆ” ಎಂದು ತಿಳಿಸಿದ್ದಾರೆ.

ಕೊರೊನಾ ಸೋಂಕಿಗೆ ಒಳಗಾಗಿರುವ ಐವರು ಸಚಿವರು, 13 ಶಾಸಕರು ಮತ್ತು ವಯಸ್ಸಿನ ಕಾರಣದಿಂದ ಹಿರಿಯ ಶಾಸಕರು ಅಧಿವೇಶನಕ್ಕೆ ಬರುತ್ತಿಲ್ಲ. ಇವರನ್ನೆಲ್ಲಾ ಹೊರಗಿಟ್ಟು ಅಧಿವೇಶನ ನಡೆಸಲು ಆಗುವುದಿಲ್ಲ. ಹೀಗಾಗಿ ಪ್ರಮುಖ ವಿಷಯಗಳನ್ನು ಮಾತ್ರ ಚರ್ಚೆ ಮಾಡಿ ಅಧಿವೇಶನ ಬೇಗ ಮುಗಿಸಲು ವಿರೋಧ ಪಕ್ಷಗಳ ಸಹಕಾರ ಕೋರುತ್ತೇನೆ. ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಈ ಬಗ್ಗೆ ನಿರ್ಧಾರ ಕೈಗೊಳ್ಳುತ್ತೇವೆ ಎಂದು ಯಡಿಯೂರಪ್ಪ ತಿಳಿಸಿದ್ದರು.

ಇದನ್ನೂ ಓದಿ: ಸಿದ್ದರಾಮಯ್ಯ ಸ್ವಾರ್ಥಿ ಮತ್ತು ಎಡಬಿಡಂಗಿತನದ ರಾಜಕಾರಣಿ: ಕುಮಾರಸ್ವಾಮಿ

ಅಧಿವೇಶನ ಮೊಟಕುಗೊಳಿಸುವ ವಿಷಯಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಪ್ರತಿಕ್ರಿಯಿಸಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ ಯಾವುದೇ ಕಾರಣಕ್ಕೂ ಕಲಾಪ ಮೊಟಕುಗೊಳಿಸಲು ಬಿಡಲ್ಲ, ಇನ್ನೂ ಮೂರು ವಾರ ಅಧಿವೇಶನ ವಿಸ್ತರಿಸಲು ಮುಖ್ಯಮಂತ್ರಿಗಳಿಗೆ ಹೇಳಿದ್ದೇನೆ. ಸುಮಾರು 30 ರಿಂದ 40 ವಿಧೇಯಕಗಳನ್ನು ತಂದಿದ್ದಾರೆ. ಅವನ್ನೆಲ್ಲಾ ವಾಪಾಸು ಪಡೆಯಲಿ ಆಗ ಅಧಿವೇಶನ ಮೊಟಕುಗೊಳಿಸುವ ಬಗ್ಗೆ ನೋಡೋಣ ಎಂದಿದ್ದಾರೆ.

ಇನ್ನು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ.ಕುಮಾರಸ್ವಾಮಿ ಕೂಡ ಕೊರೊನಾ ನಡುವೆ ಜನಜೀವನ ನಡೆಯುತ್ತಿದೆ. ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆಗಳು ನಡೆಯಬೇಕಿದೆ. ಯಾವುದೇ ಕಾರಣಕ್ಕೂ ಅಧಿವೇಶನ ಮೊಟಕುಗೊಳ್ಳಬಾರದು, ಅದು ಮುಂದುವರಿಯಬೇಕು ಎಂಬುದು ಜೆಡಿಎಸ್ ಪಕ್ಷದ ನಿಲುವು ಎಂದಿದ್ದಾರೆ.


ಇದನ್ನೂ ಓದಿ: ರಾಜ್ಯಸಭೆಯಲ್ಲಿ ಕೃಷಿ ಮಸೂದೆ ವಿರೋಧಿಸಿ ಗದ್ದಲ: ಅಧಿವೇಶನದಿಂದ 8 ಸಂಸದರ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...