Homeಕರ್ನಾಟಕವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ವಿಧಾನಸಭೆಯಲ್ಲಿ ಶರ್ಟ್ ಬಿಚ್ಚಿದ ಶಾಸಕ ಬಿ.ಕೆ ಸಂಗಮೇಶ್- ಕಲಾಪದಿಂದ ಒಂದು ವಾರ ಅಮಾನತು

ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

- Advertisement -
- Advertisement -

ವಿಧಾನಸಭೆಯ ‘ಒಂದು ರಾಷ್ಟ್ರ ಒಂದು ಚುನಾವಣೆ’ ವಿಶೇಷ ಅಧಿವೇಶನದಲ್ಲಿ ಕಲಾಪದ ವೇಳೆ ಅಶಿಸ್ತಿನಿಂದ ನಡೆದುಕೊಂಡ ಭದ್ರಾವತಿ ಶಾಸಕ ಬಿ.ಕೆ ಸಂಗಮೇಶ್ ಅವರನ್ನು ಕಲಾಪದಿಂದ ಒಂದು ವಾರಗಳ ಕಾಲ ಅಮಾನತು ಮಾಡಲಾಗಿದೆ.

‘ಒಂದು ರಾಷ್ಟ್ರ ಒಂದು ಚುನಾವಣೆ’ ಚರ್ಚೆಗೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿ ಧರಣಿ ನಡೆಸಿದರು. ಕಾಂಗ್ರೆಸ್​ ಸದಸ್ಯರು ಸದನದ ಬಾವಿಗೆ ಇಳಿದು ಪ್ರತಿಭಟಿಸುತ್ತಿದ್ದಾಗ, ಭದ್ರಾವತಿ ಶಾಸಕ ಬಿ.ಕೆ.ಸಂಗಮೇಶ್ವರ್ ಸದನದ ಬಾವಿಗಿಳಿದು, ಶರ್ಟ್‌ ಬಿಚ್ಚಿ ಘೋಷಣೆ ಕೂಗಿದ್ದರು.

ಶಾಸಕ ಸಂಗಮೇಶ್ ಪ್ರತಿಭಟಿಸಿದ ರೀತಿಗೆ ಸ್ಪೀಕರ್ ಕಾಗೇರಿ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಕಾಲಪವನ್ನು ಮುಂದೂಡಿದ್ದರು. ಮತ್ತೆ ಸದನ ಸೇರುತ್ತಿದ್ದಂತೆ, ಸಂಗಮೇಶ್ವರ್ ವಿರುದ್ಧ ಪ್ರಸ್ತಾವನೆ ಮಂಡಿಸಿ, ತಕ್ಷಣದಿಂದ ಮಾರ್ಚ್​ 12 ನೇ ತಾರೀಖಿನವರೆಗೆ ಸಂಗಮೇಶ್ ಸದನದಿಂದ ಹೊರಕ್ಕೆ ಹಾಕುವ ನಿರ್ಣಯವನ್ನ ಕೈಗೊಳ್ಳಲಾಯಿತು.

ಇದನ್ನೂ ಓದಿ: ವಿಧಾನಸಭಾ ವಿಶೇಷ ಅಧಿವೇಶನದ ಫೇಸ್‌‌ಬುಕ್ ಲೈವ್‌

ಧ್ವನಿ ಮತದ ಮೂಲಕ ಪ್ರಸ್ತಾವನೆಗೆ ಒಪ್ಪಿಗೆ ಪಡೆದ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಸುಮಾರು 9 ದಿನಗಳ ಕಾಲ ಶಾಸಕ ಸಂಗಮೇಶ್​​ರನ್ನ ಸದನದಿಂದ ಅಮಾನತು ಮಾಡುವ ನಿರ್ಧಾರವನ್ನು ಕೈಗೊಂಡರು.

ಶಿವಮೊಗ್ಗದಲ್ಲಿ ಬಿಜೆಪಿ ಸರ್ಕಾರದಿಂದ ನನಗೆ ಕಿರುಕುಳವಿದೆ. ಅದಕ್ಕಾಗಿ ಪ್ರತಿಭಟನೆ ನಡೆಸಿದ್ದೇನೆ ಎಂದು ಶಾಸಕ ಸಂಗಮೇಶ್ ಹೇಳಿದ್ದಾರೆ. ಕಾಂಗ್ರೆಸ್ ನಾಯಕರು ಸಂಗಮೇಶ್ ಅಮಾನತು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಪ್ರತಿಭಟನೆ, ಗದ್ದಲ ನಡೆಸಿದ್ದು ಮಧ್ಯಾಹ್ನದ ನಂತರ ನಡೆದ ಸಭೆಯು ಶುಕ್ರವಾರಕ್ಕೆ ಮುಂದೂಡಲ್ಪಟ್ಟಿತು.


ಇದನ್ನೂ ಓದಿ: ಪ್ರಪಾತಕ್ಕಿಳಿದ ಉತ್ತರ ಪ್ರದೇಶ ಪರಿಸ್ಥಿತಿ: ಮಗಳ ತಲೆ ಕಡಿದು ರಸ್ತೆಯಲ್ಲಿ ಪ್ರದರ್ಶಿಸಿದ ಕ್ರೂರ ತಂದೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...