Homeಕರ್ನಾಟಕಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

ಆಡಳಿತ ಪಕ್ಷದಿಂದ ಸದನದಲ್ಲಿ ಯೋಜಿತ ‘ಸಾಂವಿಧಾನಿಕ’ ಕಾರ್ಯಾಚರಣೆ: ಬಿಜೆಪಿಗೆ ಆತಂಕ

- Advertisement -
- Advertisement -

ಇಂದು ಪೂರ್ವನಿಗದಿತ ಅಧಿಸೂಚನೆಯಂತೆ ವಿಶ್ವಾಸಮತ ಯಾಚನೆಗೆ ವಿಧಾನಸಭೆ ಕಲಾಪ ಶುರುವಾಯಿತಾದರೂ, ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳು ಸಂವಿಧಾನದ ಚೌಕಟ್ಟಿನೊಳಗೇ ಯೋಜಿತ ಕಾರ್ಯಾಚರಣೆಯನ್ನು ನಡೆಸಿವೆ. ಇದು ಬಿಜೆಪಿಯಲ್ಲಿ, ಅದಕ್ಕಿಂತಲೂ ಹೆಚ್ಚಾಗಿ ರಾಜೀನಾಮೆ ಕೊಟ್ಟು ಪಕ್ಷ ಹಾರಲು ಸಿದ್ಧವಾಗಿರುವ ಶಾಸಕರಲ್ಲಿ ಆತಂಕ ಹುಟ್ಟಿಸಿರಲಿಕ್ಕೆ ಸಾಕು.

ರಾಜೀನಾಮೆ ಅಂಗೀಕರಿಸುವ ವಿಚಾರದಲ್ಲಿ ಸ್ಪೀಕರ್ ಅವರ ಪರಮಾಧಿಕಾರಕ್ಕೆ ಅಡ್ಡಿ ಬರುವುದಿಲ್ಲ ಎಂದು ಸುಪ್ರೀಂಕೋರ್ಟು ಹೇಳಿತ್ತು. ಆದರೆ, ರಾಜೀನಾಮೆ ನೀಡಿರುವ ಶಾಸಕರನ್ನು ಸದನಕ್ಕೆ ಬರುವಂತೆ ಬಲವಂತಪಡಿಸತಕ್ಕದ್ದಲ್ಲ, ಅದನ್ನು ಅವರ ವಿವೇಚನೆಗೆ ಬಿಡಬೇಕು ಎಂದೂ ಹೇಳಿತ್ತು. ಇದು ವಿಪ್ ಹೊರಡಿಸಬೇಕೇ ಇಲ್ಲವೇ ಎಂಬುದರ ಕುರಿತು, ಒಂದು ವೇಳೆ ವಿಪ್ ಉಲ್ಲಂಘನೆ ಆದರೆ, ಅದರ ಕುರಿತು ಕ್ರಮ ಕೈಗೊಳ್ಳಬಹುದೇ ಇಲ್ಲವೇ ಎಂಬ ಬಗ್ಗೆ ಸ್ಪಷ್ಟತೆಯಿರಲಿಲ್ಲ. ಹೀಗಾಗಿ ಪಕ್ಷಾಂತರ ನಿಷೇಧ ಕಾಯ್ದೆಯ ಪ್ರಮುಖ ಅಂಶವಾದ ವಿಪ್ ಉಲ್ಲಂಘನೆಯ ಮಹತ್ವವೇ ಅಪ್ರಸ್ತುತವಾಗುತ್ತದೆ ಎಂಬ ಪ್ರಶ್ನೆ ಉದ್ಭವವಾಗಿತ್ತು.

ಈಗ ಪ್ರಶ್ನೆಯು ವಿಪ್ ನೀಡುವ ಶಾಸಕಾಂಗ ಪಕ್ಷದ ನಾಯಕರ ಸಂವಿಧಾನಬದ್ಧ ಅಧಿಕಾರವನ್ನು ನ್ಯಾಯಾಂಗ ನಿರ್ಬಂಧಿಸಬಹುದೇ ಎಂಬುದಾಗಿತ್ತು. ಅದನ್ನು ಸರಿಯಾಗಿ ಅಧ್ಯಯನ ಮಾಡಿದ್ದ ಕಾಂಗ್ರೆಸ್ ನಾಯಕರು ಇಂದು ಯೋಜಿತವಾದ ರೀತಿಯಲ್ಲಿ ಸಂವಾದ ನಡೆಸಿದರು. ಮೊದಲಿಗೆ ವಿಶ್ವಾಸಮತ ಯಾಚನೆಯ ಗೊತ್ತುವಳಿಯನ್ನು ಸಭಾನಾಯಕರಾದ ಎಚ್.ಡಿ.ಕುಮಾರಸ್ವಾಮಿ ಮುಂದಿಟ್ಟರು. ಅದಕ್ಕೆ ಸ್ಪೀಕರ್ ಅವಕಾಶ ಮಾಡಿಕೊಟ್ಟ ನಂತರ, ವಿರೋಧ ಪಕ್ಷದ ನಾಯಕ ಬಿ.ಎಸ್.ಯಡಿಯೂರಪ್ಪನವರು ‘ಇದನ್ನು ಕಾಲನಿಗದಿತವಾಗಿ ಬೇಗನೇ ಮುಗಿಸಬೇಕು’ ಎಂದು ಮನವಿ ಮಾಡಿದರು. ಕಾಲಾವಧಿ ಕುರಿತು ನಂತರ ನೋಡೋಣ ಈಗ ಚರ್ಚೆ ಆರಂಭವಾಗಲಿ ಎಂದು ಸ್ಪೀಕರ್ ಹೇಳಿದ ನಂತರ ಮುಖ್ಯಮಂತ್ರಿ ತಮ್ಮ ಮಾತನ್ನು ಆರಂಭಿಸಿದರು. ಅಲ್ಲಿಂದ ಮುಂದಕ್ಕೆ ನಡೆದಿದ್ದು ಅತ್ಯಂತ ಸ್ವಾರಸ್ಯಕರವಾದ ಮತ್ತು ಮಹತ್ವದ ಚರ್ಚೆ.

ಮುಖ್ಯಮಂತ್ರಿ ಮಾತಾಡಲು ಶುರು ಮಾಡಿದ ನಂತರ ಮಧ್ಯದಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯನವರು ಕ್ರಿಯಾಲೋಪ (ಪಾಯಿಂಟ್ ಆಫ್ ಆರ್ಡರ್) ಎತ್ತಿದರು. ಇಂದು ವಿಶ್ವಾಸಮತ ಯಾಚನೆ ಮುಗಿದುಹೋಗಬಾರದು ಎಂಬ ಕಾರಣಕ್ಕೆ ಅವರು ದೀರ್ಘವಾಗಿ ಮಾತಾಡುತ್ತಿದ್ದಾರೆ ಎಂದು ವಿರೋಧಪಕ್ಷದ ಸದಸ್ಯರು ಆಕ್ಷೇಪ ಎತ್ತಿದರೂ, ಸಿದ್ದರಾಮಯ್ಯನವರಿಗೆ ಬೇರೆ ಪಾಯಿಂಟ್ ಮುಂದಿಡಬೇಕಿತ್ತು. ಅವರ ಪ್ರಕಾರ

ಸಿದ್ದರಾಮಯ್ಯ: ಸುಪ್ರೀಂಕೋರ್ಟ್‍ನಲ್ಲಿ ಸಲ್ಲಿಸಲಾಗಿದ್ದ ಮೊಕದ್ದಮೆಯಲ್ಲಿ ಪ್ರಾರ್ಥನೆ ಹೀಗಿತ್ತು.

1. ಪ್ರತಿವಾದಿ 2 (ಅಂದರೆ ಸಭಾಧ್ಯಕ್ಷರು) ರಾಜೀನಾಮೆ ಅಂಗೀಕರಿಸಲು ಸೂಚಿಸಬೇಕು.

2. ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಪ್ರತಿವಾದಿ 2 ಕ್ರಮ ತೆಗೆದುಕೊಳ್ಳದಂತೆ ನಿರ್ಬಂಧಿಸಬೇಕು.

ದುರದೃಷ್ಟಕರ ವಿಚಾರ ಒಂದಿದೆ.
ಮೊದಲನೆಯ ಪ್ರಾರ್ಥನೆಯ ಕುರಿತು (ರಾಜೀನಾಮೆ ಅಂಗೀಕಾರದ ಕುರಿತು) ಸ್ಪೀಕರ್‍ಗೆ ಎಲ್ಲಾ ರೀತಿಯ ಅಧಿಕಾರ ಇದೆ ಎಂದು ಸ್ಪಷ್ಟವಾಗಿ ಹೇಳಿದ್ದಾರೆ.
ಆದರೆ, ಈ ಪ್ರಾರ್ಥನೆಯಲ್ಲಿ ಇಲ್ಲದಿದ್ದ ಒಂದು ಅಂಶದ ಕುರಿತು ಸುಪ್ರೀಂಕೋರ್ಟು ಸೂಚನೆ ನೀಡಿದೆ. ಅದರ ಪ್ರಕಾರ ರಾಜೀನಾಮೆ ನೀಡಿರುವ ಶಾಸಕರು ಸದನದ ಕಲಾಪದಲ್ಲಿ ಭಾಗವಹಿಸುವಂತೆ ಮುಂದಿನ ಆದೇಶದವರೆಗೆ ಬಲವಂತಗೊಳಿಸುವಂತಿಲ್ಲ ಎಂದು ಅದು ಹೇಳಿದೆ. ಆದರೆ, ವಿಪ್ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಈ ಮೊಕದ್ದಮೆಯಲ್ಲಿ ನಾನು (ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ) ಪ್ರತಿವಾದಿಯೇ ಅಲ್ಲ. ಇದು ಸಂವಿಧಾನದ 10ನೇ ಶೆಡ್ಯೂಲ್‍ನಲ್ಲಿ ನನಗೆ ಕೊಟ್ಟಿರುವ ಅಧಿಕಾರವನ್ನು ನಿರ್ಬಂಧಿಸುತ್ತದೆ. ನನ್ನನ್ನು ಅಥವಾ ಕಾಂಗ್ರೆಸ್ ಪಕ್ಷವನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸುವುದು ಸರಿಯೇ? ಈ ಕುರಿತು ಸಭಾಧ್ಯಕ್ಷರು ಸ್ಪಷ್ಟೀಕರಣ ನೀಡಬೇಕು.

ಸ್ಪೀಕರ್: ಇದನ್ನು ನಾನು ಇಂಗ್ಲಿಷಿನಲ್ಲೇ ಉತ್ತರಿಸುತ್ತೇನೆ. ‘ನನ್ನನ್ನು ಪ್ರತಿವಾದಿ ಮಾಡದೇ ನನ್ನ ಅಧಿಕಾರವನ್ನು ನಿರ್ಬಂಧಿಸಿದ್ದಾರೆ. ಜೊತೆಗೆ ಇದು ಪ್ರೇಯರ್‍ನಲ್ಲಿ ಇರಲೂ ಇಲ್ಲ’ ಎಂದು ಶಾಸಕಾಂಗ ಪಕ್ಷದ ನಾಯಕರು ಹೇಳಿದ್ದಾರೆ. ಸುಪ್ರೀಂಕೋರ್ಟಿನ ಬಗ್ಗೆ ನಮಗೆಲ್ಲರಿಗೂ ಗೌರವವಿದೆ. ಅದು ಏನು ಹೇಳಿದೆ ಎಂಬ ಕುರಿತು ನಾನು ಕಾಮೆಂಟ್ ಮಾಡಲು ಹೋಗುವುದಿಲ್ಲ. ಆದರೆ, ನಾನು ನಿಮ್ಮ ಅಧಿಕಾರವನ್ನು ನಾನು ನಿರ್ಬಂಧಿಸುತ್ತಿಲ್ಲ.

ಎಚ್.ಕೆ.ಪಾಟೀಲ್: ಇದು ಬುದ್ಧಿವಂತರ ಸಭೆ – ನಮ್ಮ ಸ್ವಾಯತ್ತತೆಯನ್ನು ಕಿತ್ತುಕೊಂಡಾಗ ಸುಮ್ಮನಿರಬಾರದು.

ಕೃಷ್ಣ ಭೈರೇಗೌಡ: ಸುಪ್ರೀಂಕೋರ್ಟ್ ತೀರ್ಪಿನಿಂದ ಆ ಸದಸ್ಯರು ಸದನದ ಸದಸ್ಯರು ಹೌದೇ ಅಲ್ಲವೇ ಎಂಬ ಗೊಂದಲ ಉಂಟಾಗಿದೆ. ಅವರು ಪ್ರಮಾಣ ವಚನ ಸ್ವೀಕರಿಸಿದ ಮೇಲೆ ರಾಜೀನಾಮೆ ಅಂಗೀಕಾರವಾಗುವವರೆಗೆ ಸದನದ ಸದಸ್ಯರೇ ಆಗಿರುತ್ತಾರೆ.

ಇವೆಲ್ಲದರಿಂದ ಒಂದು ವಿಚಾರ ಸ್ಪಷ್ಟವಾಗಿದೆ. ಶಾಸಕಾಂಗದ ಅಧಿಕಾರವನ್ನು ಸುಪ್ರೀಂಕೋರ್ಟು ಮೊಟಕುಗೊಳಿಸಬಹುದೇ ಎಂಬ ಚರ್ಚೆಯನ್ನು ಸದನದಲ್ಲೇ ಮಾಡಲು ಕಾಂಗ್ರೆಸ್ ನಾಯಕರು ತೀರ್ಮಾನಿಸಿದ್ದಾರೆ. ಅದರಿಂದ ಸುಪ್ರೀಂಕೋರ್ಟಿನ ತೀರ್ಪಿನಲ್ಲಿದ್ದ ಸಮಸ್ಯೆಯನ್ನು ಸದನದಲ್ಲಿ ಬಗೆಹರಿಸಿಕೊಳ್ಳಬಹುದು ಎಂಬುದು ಅವರ ಲೆಕ್ಕಾಚಾರ. ಸ್ಪೀಕರ್ ಈ ಕುರಿತು ರೂಲಿಂಗ್ ನೀಡಲೇಬೇಕಾಗುತ್ತದೆ. ಆ ಮೂಲಕ ವಿಪ್ ನೀಡಬಹುದು, ಪಕ್ಷಾಂತರ ನಿಷೇಧ ಕಾಯ್ದೆಯನ್ವಯ ಸದರಿ ಶಾಸಕರನ್ನು ಅನರ್ಹಗೊಳಿಸಬಹುದು ಎಂದಾದಲ್ಲಿ, ಮುಂಬೈ ಹೋಟೆಲಿನಲ್ಲಿ ಬೀಡುಬಿಟ್ಟಿರುವ ಶಾಸಕರು ಇಕ್ಕಟ್ಟಿಗೆ ಸಿಕ್ಕಿಕೊಳ್ಳುತ್ತದೆ. ಇದರಿಂದ ಬಿಜೆಪಿ ಇನ್ನಷ್ಟು ಗಲಭೆ ಎಬ್ಬಿಸಿದಲ್ಲಿ ಅದರಿಂದಲೂ ಸರ್ಕಾರಕ್ಕೇ ಒಳ್ಳೆಯದಾಗುತ್ತದೆ. ಈ ಅವಧಿಯಲ್ಲಿ ಸರ್ಕಾರ ಉಳಿಸಿಕೊಳ್ಳುವ ಅವಕಾಶ ಲಭ್ಯವಾಗುತ್ತದೆ ಎಂದು ಯೋಜಿಸಿದಂತಿದೆ. ಸ್ವೀಕರ್ ರವರು 3 ಗಂಟೆಗೆ ಸದನವನ್ನು ಮೂಂದೂಡಿದ್ದಾರೆ.

ಸ್ಪೀಕರ್ ಯಾವ ರೂಲಿಂಗ್ ಕೊಡುತ್ತಾರೆ ಕಾದು ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...

ತೆಲಂಗಾಣ| ಗೋಮಾಂಸ ಮಾರಾಟ ಆರೋಪ; ಮುಸ್ಲಿಂ ಸಮುದಾಯದ ತಂದೆ-ಮಗನ ಮೇಲೆ ಹಲ್ಲೆ

ಹನುಮಾನ್ ಜಯಂತಿ ಸಂದರ್ಭದಲ್ಲಿ ಗೋಮಾಂಸ ಮಾರಾಟ ಮಾಡಿದ ಆರೋಪದ ಮೇಲೆ ಹಿಂದುತ್ವವಾದಿ ಗುಂಪೊಂದು 60 ವರ್ಷದ ಮುಸ್ಲಿಂ ವ್ಯಕ್ತಿ ಮತ್ತು ಆತನ ಹದಿಹರೆಯದ ಮಗನ ಮೇಲೆ ಹಲ್ಲೆ ನಡೆಸಿರುವ ಘಟನೆ ತೆಲಂಗಾಣದ ಜಗ್ತಿಯಾಲ್...

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...