Homeಮುಖಪುಟಪರೀಕ್ಷೆ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ: ಕಾಂಗ್ರೆಸ್

ಪರೀಕ್ಷೆ ಹಿನ್ನೆಲೆಯಲ್ಲಿ ಕರ್ನಾಟಕ ಬಂದ್ ಹಿಂಪಡೆಯಲಾಗಿದೆ: ಕಾಂಗ್ರೆಸ್

- Advertisement -
- Advertisement -

ಬಿಜೆಪಿ ಸರ್ಕಾರದ ಭ್ರಷ್ಟಾಚಾರವನ್ನು ವಿರೋಧಿಸಿ ಮಾರ್ಚ್ 9 ರಂದು ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ಹೋರಾಟವನ್ನು ಹಿಂಪಡೆಯಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆಗಳು ನಡೆಯುತ್ತಿರುವ ಹಿನ್ನೆಲೆ ಶಿಕ್ಷಣ ಸಂಸ್ಥೆಗಳು, ವಿದ್ಯಾರ್ಥಿ – ಪೋಷಕರ ಮನವಿ ಮೇರೆಗೆ ಬಂದ್ ಹಿಂಪಡೆಯಲಾಗಿದೆ. ಮುಂದಿನ ಹೋರಾಟಕ್ಕೆ ಸಂಬಂಧಿಸಿದಂತೆ ಸ್ಕ್ರೀನಿಂಗ್ ಕಮಿಟಿ ಸಭೆ ಬಳಿಕ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ಕಾಂಗ್ರೆಸ್ ಮುಖಂಡರಾದ ರಾಮಲಿಂಗಾರೆಡ್ಡಿಯವರು ತಿಳಿಸಿದ್ದಾರೆ.

“ಪಿಯುಸಿ ಪರೀಕ್ಷೆ ಇರುವುದರಿಂದ ಕರ್ನಾಟಕ ಬಂದ್ ಹಿಂಪಡೆಯುವಂತೆ ಪೋಷಕರು ಮತ್ತು ವಿದ್ಯಾರ್ಥಿಗಳು ನನ್ನನ್ನು ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯನವರನ್ನು ಸಂಪರ್ಕಿಸಿದ್ದರು. ಯುವಜನರೆ ನಮ್ಮ ಪ್ರಧಾನ ಆದ್ಯತೆಯಾಗಿರುವುದಿರಂದ ಮಾರ್ಚ್ 09 ರಂದು ಕಾಂಗ್ರೆಸ್ ಕರೆ ನೀಡಿದ್ದ ಕರ್ನಾಟಕ ಬಂದ್ ಹೋರಾಟವನ್ನು ವಾಪಸ್ ಪಡೆಯುತ್ತಿದ್ದೇವೆ. ಬಿಜೆಪಿ ಭ್ರಷ್ಟಾಚಾರದ ವಿರುದ್ಧದ ನಮ್ಮ ಹೋರಾಟ ಮುಂದುವರೆಯಲಿದೆ” ಎಂದು ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.

ಪ್ರಕರಣ ಹೊರಬಿದ್ದು 6 ದಿನಗಳಾದರೂ ಪ್ರಮುಖ ಆರೋಪಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರನ್ನು ಬಂಧಿಸಿಲ್ಲ ಹಾಗೂ ಸಾಲು ಸಾಲು ಭ್ರಷ್ಟಾಚಾರ ಹಗರಣಗಳ ನೈತಿಕ ಹೊಣೆ ಹೊತ್ತು ಸಿಎಂ ಬಸವರಾಜ ಬೊಮ್ಮಾಯಿಯವರು ರಾಜೀನಾಮೆ ನೀಡಿಲ್ಲ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿ ಬಂದ್‌ಗೆ ಕರೆ ನೀಡಿತ್ತು. ಇದೇ ಸಮಯದಲ್ಲಿ ಕರ್ನಾಟಕ ಹೈಕೋರ್ಟ್ ಸಹ ಆರೋಪಿ ಮಾಡಾಳ್ ವಿರೂಪಾಕ್ಷಪ್ಪನವರಿಗೆ ಮಧ್ಯಂತರ ಜಾಮೀನು ನೀಡಿದೆ. ಈ ಎಲ್ಲಾ ಹಿನ್ನೆಲೆಯಲ್ಲಿ ಕಾಂಗ್ರೆಸ್ ಬಂದ್ ಹಿಂಪಡೆದಿದ್ದು ಬೇರೆ ರೀತಿಯ ಹೋರಾಟ ನಡೆಸಲು ಚಿಂತನೆ ನಡೆಸಿದೆ.

ಇದನ್ನೂ ಓದಿ; ಲಂಚಾರೋಪಿ ಮಾಡಾಳ್‌ಗೆ ಜಾಮೀನು ವಿಚಾರ: ವಕೀಲರ ಸಂಘದಿಂದ ತೀವ್ರ ಕಳವಳ ವ್ಯಕ್ತ; ಸಿಜೆಐಗೆ ಪತ್ರ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

1 COMMENT

  1. Yes we need to aware his work and wrong messages to public , no development only commission govt , people had to think twice before voting modi and bjp

LEAVE A REPLY

Please enter your comment!
Please enter your name here

- Advertisment -

Must Read

‘ಚುನಾವಣೆ ಪ್ರಚಾರದಲ್ಲಿ ಪದೇ ಪದೇ ಸುಳ್ಳು ಹೇಳುತ್ತಿರುವುದರಿಂದ…..’,: ಮೋದಿಗೆ ಕಾಂಗ್ರೆಸ್‌ ಪ್ರಣಾಳಿಕೆಯನ್ನು ವಿವರಿಸಿ ಪತ್ರ...

0
ಕಾಂಗ್ರೆಸ್‌ ಪ್ರಣಾಳಿಕೆಯ ಬಗ್ಗೆ ಮೋದಿ, ಅಮಿತ್‌ ಶಾ ಚುನಾವಣಾ ಭಾಷಣದಲ್ಲಿ ಸುಳ್ಳು ಆಪಾದನೆ ಮಾಡುತ್ತಿರುವ ಮಧ್ಯೆ ಕಾಂಗ್ರೆಸ್‌ ಪ್ರಣಾಳಿಕೆ ಬಗ್ಗೆ ಚರ್ಚೆಗೆ ನರೇಂದ್ರ ಮೋದಿ ಅಥವಾ ಅವರಿಂದ ನಿಯೋಜಿಸಲ್ಪಟ್ಟ ಯಾರಾದರು ಬನ್ನಿ ಎಂದು...