Homeಕರ್ನಾಟಕಕರ್ನಾಟಕದಲ್ಲಿ ವಿವಾದಿತ 'ಹಮಾರೆ ಬಾರಹ್' ಸಿನಿಮಾ ಬಿಡುಗಡೆ ನಿಷೇಧಿಸಿದ ಸರ್ಕಾರ

ಕರ್ನಾಟಕದಲ್ಲಿ ವಿವಾದಿತ ‘ಹಮಾರೆ ಬಾರಹ್’ ಸಿನಿಮಾ ಬಿಡುಗಡೆ ನಿಷೇಧಿಸಿದ ಸರ್ಕಾರ

- Advertisement -
- Advertisement -

ವಿವಾದಿತ ಹಿಂದಿ ಚಲನಚಿತ್ರ ‘ಹಮಾರೆ ಬಾರಹ್’ ಬಿಡುಗಡೆಗೆ ಒಂದು ದಿನ ಮುನ್ನ, ಕರ್ನಾಟಕದಲ್ಲಿ ಅದರ ಪ್ರದರ್ಶನವನ್ನು ಸರ್ಕಾರ ನಿಷೇಧಿಸಿದೆ.

ವಿವಿಧ ಮುಸ್ಲಿಂ ಸಂಘಟನೆಗಳ ಮನವಿ ಮೇರೆಗೆ ಗೃಹ ಇಲಾಖೆ ಸಿನಿಮಾ ಪ್ರದರ್ಶನಕ್ಕೆ ನಿಷೇಧ ಹೇರಿ ಗುರುವಾರ ಆದೇಶ ಹೊರಡಿಸಿದೆ. ಹಿರಿಯ ನಟ ಅಣ್ಣು ಕಪೂರ್ ಮುಖ್ಯ ಪಾತ್ರದಲ್ಲಿ ನಟಿಸಿರುವ ಈ ಚಿತ್ರ ಇಂದು (ಜೂನ್ 7, ಶುಕ್ರವಾರ) ಬಿಡುಗಡೆಯಾಗಲಿದೆ.

ವಿವಿಧ ಜಿಲ್ಲೆಗಳು ಮತ್ತು ತಾಲೂಕುಗಳ ಮುಸ್ಲಿಂ ಗುಂಪುಗಳು ಸಿನಿಮಾ ಪ್ರದರ್ಶನ ನಿಷೇಧಿಸುವಂತೆ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದವು. ಸಿನಿಮಾದ ನಿರ್ಮಾಪಕರು ಮುಸ್ಲಿಂ ಸಮುದಾಯದವನ್ನು ಅವಮಾನಿಸಿದ್ದಾರೆ. ಕುರಾನ್‌ನ ಸೂರಾ ಅಲ್-ಬಕರಾದಲ್ಲಿನ ಶ್ಲೋಕಗಳನ್ನು ತಪ್ಪಾಗಿ ವಿವರಿಸಿದ್ದಾರೆ. ಚಿತ್ರ ಬಿಡುಗಡೆಯಾದರೆ ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ, ಕೋಮು ಸೌಹಾರ್ದತೆಗೆ ಧಕ್ಕೆ ಉಂಟಾಗಬಹುದು ಎಂದು ಮನವಿಯಲ್ಲಿ ಕಳವಳ ವ್ಯಕ್ತಪಡಿಸಿತ್ತು.

ಗುರುವಾರ ಗೃಹ ಇಲಾಖೆ ಅಧೀನ ಕಾರ್ಯದರ್ಶಿ ಬಿ ಕೆ ಭುವನೇಂದ್ರ ಕುಮಾರ್ ಅವರು, ವಿದ್ಯುನ್ಮಾನ ಮಾಧ್ಯಮಗಳು, ಸಾಮಾಜಿಕ ಮಾಧ್ಯಮಗಳು, ಸಿನಿಮಾ ಥಿಯೇಟರ್‌ಗಳು, ಖಾಸಗಿ ಟೆಲಿವಿಷನ್ ಚಾನೆಲ್‌ಗಳು ಮತ್ತು ಇತರ ಮಾಧ್ಯಮಗಳಲ್ಲಿ ‘ಹಮಾರೆ ಬಾರಹ್’ ಸಿನಿಮಾ ಮತ್ತು ಅದರ ಟ್ರೇಲರ್ ಬಿಡುಗಡೆಯನ್ನು ಎರಡು ವಾರಗಳವರೆಗೆ ಅಥವಾ ಮುಂದಿನ ಸೂಚನೆ ಬರುವವರೆಗೆ ನಿಷೇಧಿಸಿ ಆದೇಶ ಹೊರಡಿಸಿದ್ದಾರೆ.

ಕರ್ನಾಟಕ ಸಿನಿಮಾಗಳ ನಿಯಂತ್ರಣ ಕಾಯಿದೆ, 1964 ರ ಸೆಕ್ಷನ್ 15(1) ಮತ್ತು 15(5) ಅಡಿಯಲ್ಲಿ ನಿಷೇಧ ಹೇರಲಾಗಿದೆ.

ಕಾಯ್ದೆಯ ಸೆಕ್ಷನ್ 15(2) ರ ಪ್ರಕಾರ ನಿಷೇಧ ಹೇರುವ ಮುನ್ನ ಚಿತ್ರ ನಿರ್ಮಾಪಕರಿಗೆ ಸರ್ಕಾರ ನೋಟಿಸ್ ಜಾರಿ ಮಾಡಬೇಕಾಗಿದ್ದರೂ, ಈ ಅಗತ್ಯವನ್ನು ಪೂರೈಸಲು ಸಾಕಷ್ಟು ಸಮಯವಿಲ್ಲ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಏಕೆಂದರೆ ಚಿತ್ರದ ನಿರ್ದೇಶಕ ಕಮಲ್ ಚಂದ್ರ ಮತ್ತು ನಿರ್ಮಾಪಕರಾದ ಬೀರೇಂದ್ರ ಭಗತ್, ರವಿ ಎಸ್ ಗುಪ್ತಾ, ಶಿಯೋ ಬಾಲಕ್ ಸಿಂಗ್, ಸಂಜಯ್ ನಾಗ್ಪಾಲ್ ಮತ್ತು ಇತರರು ಕರ್ನಾಟಕದ ಹೊರಗೆ ನೆಲೆಸಿದ್ದಾರೆ.

ಬಾಂಬೆ ಹೈಕೋರ್ಟ್ ಕೂಡ ಜೂನ್ 14 ರವರೆಗೆ ಚಿತ್ರದ ಬಿಡುಗಡೆಯನ್ನು ತಡೆಹಿಡಿದಿದೆ.

ಇದನ್ನೂ ಓದಿ : ಲೈಂಗಿಕ ದೌರ್ಜನ್ಯ ಪ್ರಕರಣ: ಪ್ರಜ್ವಲ್ ರೇವಣ್ಣ ಎಸ್‌ಐಟಿ ಕಸ್ಟಡಿ ಅವಧಿ ವಿಸ್ತರಣೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಮ್ಮು-ಕಾಶ್ಮೀರ| ಭದ್ರತಾ ಸಿಬ್ಬಂದಿ ಗುಂಡಿಗೆ ವ್ಯಕ್ತಿ ಸಾವು; ಭುಗಿಲೆದ್ದ ಪ್ರತಿಭಟನೆ

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಭದೇರ್ವಾದ ಜೈ ಕಣಿವೆ ಪ್ರದೇಶದಲ್ಲಿ ಗುರುವಾರ ತಡರಾತ್ರಿ ನಡೆದ ಗುಂಡಿನ ದಾಳಿಯಲ್ಲಿ 30 ವರ್ಷದ ನಾಗರಿಕನೊಬ್ಬ ಸಾವನ್ನಪ್ಪಿ ಇಬ್ಬರು ಗಾಯಗೊಂಡಿದ್ದು ವ್ಯಾಪಕ ಪ್ರತಿಭಟನೆಗಳಿಗೆ ಕಾರಣವಾಗಿದೆ. ಮೃತರನ್ನು...

ಸಿಜೆಪಿ ಪ್ರತಿಭಟನೆ ಮೇಲೆ ಕೇಂದ್ರದ ಬಲಪ್ರಯೋಗ: ಸೋನಮ್ ವಾಂಗ್‌ಚುಕ್ ಅವರನ್ನು ಬಂಧಿಸಿ ಆಸ್ಪತ್ರೆಗೆ ಕರೆದೊಯ್ದ ಪೊಲೀಸರು

ದೆಹಲಿಯ ಜಂತರ್ ಮಂತರ್‌ನಲ್ಲಿ 21 ದಿನಗಳಿಂದ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪರಿಸರ ಕಾರ್ಯಕರ್ತ ಸೋನಮ್ ವಾಂಗ್‌ಚುಕ್ ಅವರನ್ನು ಪ್ರತಿಭಟನಾ ಸ್ಥಳದಿಂದ ಪೊಲೀಸರು ಬಲವಂತವಾಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಶನಿವಾರ ಬೆಳಿಗ್ಗೆ ಪೊಲೀಸರು ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ...

ಪ್ರಶ್ನೆಪತ್ರಿಕೆ ಸೋರಿಕೆಗೆ ಇಡೀ ವ್ಯವಸ್ಥೆಯನ್ನೇ ದೂಷಿಸಿದ ವಿಪಕ್ಷ ನಾಯಕ ರಾಹುಲ್ ಗಾಂಧಿ

ರಾಜಕೀಯ ಪಕ್ಷ ಅಥವಾ ಸಂಘಟನೆಯು ಯಾವುದೇ ಶಿಕ್ಷಣ ಸಂಸ್ಥೆಗಳ ಮೇಲೆ ಹಿಡಿತ ಸಾಧಿಸಬಾರದು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ (ಜು.17) ರಂದು ಹೇಳಿದ್ದಾರೆ. ಪ್ರಶ್ನೆಪತ್ರಿಕೆ ಸೋರಿಕೆಯ ವಿಷಯದ ಬಗ್ಗೆ ರಾಜಕೀಯ ಒಮ್ಮತಕ್ಕೆ ಕರೆ...

ಧರ್ಮದ ಕಾರಣಕ್ಕೆ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಗೆ ಹಲವು ಬಾರಿ ಇರಿತ: ಅಮೆರಿಕದ ಮಾಲ್‌ನಲ್ಲಿ ಕೃತ್ಯ

ಅಮೆರಿಕದ ಉತಾಹ್‌ನಲ್ಲಿರುವ ಶಾಪಿಂಗ್ ಮಾಲ್‌ನಲ್ಲಿ ಹೈದರಾಬಾದ್ ಮೂಲದ ಮುಸ್ಲಿಂ ವ್ಯಕ್ತಿಯೊಬ್ಬನಿಗೆ ಹಲವು ಬಾರಿ ಇರಿತದ ಆರೋಪ ಹೊರಿಸಲಾಗಿದೆ. ಹೈದರಾಬಾದ್‌ ನಗರದ ಟೋಲಿಚೌಕಿಯ ನಿವಾಸಿ ಸೈಯದ್ ಸೊಹೈಲ್ ಉದ್ದೀನ್, ಉತಾಹ್‌ನ ಸಾಲ್ಟ್ ಲೇಕ್ ಕೌಂಟಿಯ...

47 ವರ್ಷಗಳ ನಂತರ ಸಾಮೂಹಿಕ ಅತ್ಯಾಚಾರ ಪ್ರಕರಣದ ಶಿಕ್ಷೆ ಎತ್ತಿಹಿಡಿದ ಅಲಹಾಬಾದ್ ಹೈಕೋರ್ಟ್

1979 ರಲ್ಲಿ ನಡೆದಿದ್ದ ಅಪ್ರಾಪ್ತೆ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ 71 ವರ್ಷದ ವ್ಯಕ್ತಿಯ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಎತ್ತಿಹಿಡಿದಿದೆ. ಆದರೆ, ಕ್ರಿಮಿನಲ್ ಮೇಲ್ಮನವಿಯ 43 ವರ್ಷಗಳ ಸುದೀರ್ಘ ವಿಚಾರಣೆ ಮತ್ತು ಆತನ...

ಪಶ್ಚಿಮ ಬಂಗಾಳ: ಮುರ್ಷಿದಾಬಾದ್‌ನಲ್ಲಿ ಶಾಲಾ ವ್ಯಾನ್‌ಗೆ ರೈಲು ಡಿಕ್ಕಿ: ಇಬ್ಬರು ವಿದ್ಯಾರ್ಥಿಗಳು ಸೇರಿ 3 ಮಂದಿ ಸಾವು

ಮುರ್ಷಿದಾಬಾದ್: ದೇಶದಲ್ಲಿ ರೈಲ್ವೆ ಸುರಕ್ಷತೆಯ ಕುರಿತು ಸರ್ಕಾರಗಳು ದೊಡ್ಡ ದೊಡ್ಡ ಭರವಸೆ ಹಾಗೂ ಯೋಜನೆಗಳನ್ನು ಮಂಡಿಸುತ್ತಿದ್ದರೂ, ತಳಮಟ್ಟದ ವಾಸ್ತವ ಮಾತ್ರ ಇಂದಿಗೂ ಅತ್ಯಂತ ಭೀಕರವಾಗಿದೆ ಎಂಬುದಕ್ಕೆ ಪಶ್ಚಿಮ ಬಂಗಾಳದಲ್ಲಿ ನಡೆದ ಈ ಘೋರ...

ವಿಜಯ್ ನೇತೃತ್ವದ ಟಿವಿಕೆ ಸರ್ಕಾರವನ್ನು ಅಸ್ಥಿರಗೊಳಿಸಲು ‘ಪ್ರಾಜೆಕ್ಟ್ ಮೇಘಾಲಯ’ ಸಂಚು ಆರೋಪ : ಪತ್ರಕರ್ತನ ವಿಚಾರಣೆ

ತಮಿಳುನಾಡಿನ ಆಡಳಿತಾರೂಢ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷದ ಶಾಸಕ ಎನ್. ಇಲೈಯರಾಜ ಅವರಿಗೆ ಹಣದ ಆಮಿಷವೊಡ್ಡಲು ಯತ್ನಿಸಿದ ಆರೋಪ ಪ್ರಕರಣ ಸಂಬಂಧ ಚೆನ್ನೈ ಪೊಲೀಸರು 'ಪುದಿಯಾ ತಲೈಮುರೈ' ವಾಹಿನಿಯ ಪತ್ರಕರ್ತ ವಿಜಯನ್...

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...