Homeಕರ್ನಾಟಕಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ...

ಬೆಂಗಳೂರಿನ ESI ಆಸ್ಪತ್ರೆ ನಿರ್ಲಕ್ಷ್ಯ: ಒಂದೂವರೆ ವರ್ಷದ ಬಳಿಕ ಶವಾಗಾರದಿಂದ ಕೊರೊನಾ ಪೀಡಿತರ ಮೃತದೇಹ ಹೊರ ತೆಗೆದ ಸಿಬ್ಬಂದಿ

- Advertisement -
- Advertisement -

ಕೊರೊನಾದಿಂದ ತಮ್ಮ ಪ್ರೀತಿಪಾತ್ರರನ್ನು ಕಳೆದುಕೊಂಡ ಸುಮಾರು ಒಂದೂವರೆ ವರ್ಷಗಳ ನಂತರ ಅವರ ಮೃತದೇಹಗಳು ಕೊಳೆತ ಸ್ಥಿತಿಯಲ್ಲಿ ಕುಟುಂಬದವರಿಗೆ ದೊರಕಿರುವ ಹೃದಯವಿದ್ರಾವಕ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

ರಾಜಾಜಿನಗರದಲ್ಲಿರುವ ESI ಆಸ್ಪತ್ರೆಯ ಶವಾಗಾರದಲ್ಲಿ ಕಳೆದ ಒಂದೂವರೆ ವರ್ಷದ ಹಿಂದೆ ಕೊರೊನಾದಿಂದ ಮೃತಪಟ್ಟಿದ್ದ ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಎಂಬುವವರ ಮೃತದೇಹಗಳನ್ನಿಟ್ಟು ಆಸ್ಪತ್ರೆ ಸಿಬ್ಬಂದಿ ಮರೆತುಬಿಟ್ಟಿದ್ದಾರೆ. ಮೊನ್ನೆ ಶವಾಗಾರ ಸ್ವಚ್ಛಗೊಳಿಸುವ ವೇಳೆ ಸಿಬ್ಬಂದಿಗೆ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳು ಪತ್ತೆಯಾಗಿವೆ.

ESI ಆಸ್ಪತ್ರೆಯ ದಾಖಲೆಗಳ ಪ್ರಕಾರ, ದುರ್ಗಾ ಸುಮಿತ್ರಾ (40) ಮತ್ತು ಮುನಿರಾಜು (50) ಕಳೆದ ವರ್ಷ ಜುಲೈ 2 ರಂದು ನಿಧನರಾಗಿದ್ದಾರೆ. ಆ ಸಮಯದಲ್ಲಿ, ನಗರದಲ್ಲಿ ಕೊರೊನಾ ಪ್ರಕರಣಗಳು ಉಲ್ಬಣಗೊಂಡಿದ್ದವು. ಆರೋಗ್ಯ ಮೂಲಸೌಕರ್ಯ ವ್ಯವಸ್ಥೆ ತೀವ್ರ ಒತ್ತಡದಲ್ಲಿದ್ದ ಸಮಯವಾಗಿತ್ತು. ಬೆಂಗಳೂರು ಸಾಲು ಸಾಲು ಸಾವಿನ ಮೆರವಣಿಗೆಗೆ ಸಾಕ್ಷಿಯಾಗಿದ್ದ ಸಮಯವದು. ಕೊರೊನಾದಿಂದ ಸಾವನ್ನಪ್ಪಿದವರ ಕುಟುಂಬಗಳ ನೋವು ಇನ್ನು ರಾಜ್ಯದ ಜನರ ಕಣ್ಣೇದುರಿಗಿದೆ.

ಇಂತಹ ಸಮಯದಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಇವರುಗಳು ಕೊರೊನಾ ಸೋಂಕಿನಿಂದ ಮೃತಪಟ್ಟಿದ್ದರು. ಆದರೆ, ಸೋಂಕು ಹರಡುವ ಅಪಾಯವಿದೆ ಎಂದು ತಿಳಿಸಿದ್ದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಆಸ್ಪತ್ರೆಯ ಅಧಿಕಾರಿಗಳು ದೇಹವನ್ನು ಅವರಿಗೆ ಹಸ್ತಾಂತರಿಸಲಿಲ್ಲ. ಜೊತೆಗೆ ಇಬ್ಬರ ಅಂತ್ಯಸಂಸ್ಕಾರ ಮಾಡಲಾಗಿದೆ ಎಂದು ಎರಡು ಕುಟುಂಬದ ಸದಸ್ಯರಿಗೆ ತಿಳಿಸಲಾಗಿತ್ತು ಎಂದು ಕುಟುಂಬಸ್ಥರು ಹೇಳಿದ್ದಾರೆ.

ಇದನ್ನೂ ಓದಿ: ಅಮೆರಿಕ, ಯೂರೋಪ್ ದೇಶಗಳಲ್ಲಿ ಕೊರೊನಾ ನಾಲ್ಕನೇ ಅಲೆ; ಭಾರತ ಎಚ್ಚೆತ್ತುಕೊಳ್ಳುವ ಸಮಯ ಬಂದಿದೆಯೇ?

ಮೃತರ ಡೆಡ್ ಸರ್ಟಿಫಿಕೆಟ್ ಕೂಡ ಪಡೆದಿದ್ದ ಕುಟುಂಬಸ್ಥರಿಗೆ ಈಗ ಒಂದೂವರೆ ವರ್ಷದ ನಂತರ, ತಮ್ಮವರ ಮೃತದೇಹಗಳು ಆಸ್ಪತ್ರೆಯ ಶವಾಗಾರದಲ್ಲೇ ಇವೆ ಎಂಬ ಆಘಾತಕಾರಿ ಸುದ್ದಿ ತಿಳಿದು ಬಂದಿದೆ. ಅದು ಕೂಡ ಹೌಸ್ ಕೀಪಿಂಗ್ ಸಿಬ್ಬಂದಿ ಹಳೆಯ ಶವಾಗಾರವನ್ನು ಸ್ವಚ್ಛಗೊಳಿಸುವಾಗ ಕೊಳೆತ ಸ್ಥಿತಿಯಲ್ಲಿ ಮೃತದೇಹಗಳನ್ನು ಕಂಡು ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಅಧಿಕಾರಿಗಳು ಕುಟುಂಬಸ್ಥರಿಗೆ ತಿಳಿಸಿದ್ದಾರೆ.

ಆಸ್ಪತ್ರೆಯ ನಿರ್ಲಕ್ಷ್ಯದ ಕೃತ್ಯಕ್ಕೆ ಆಸ್ಪತ್ರೆಯ ಅಧಿಕಾರಿಗಳು, ಸಿಬ್ಬಂದಿ ಟೀಕೆಗೆ ಗುರಿಯಾಗಿದ್ದಾರೆ. ಘಟನೆ ಬಗ್ಗೆ ನಡೆದಿದೆ ಎಂಬುದನ್ನು ಕಂಡುಹಿಡಿಯಲು ತನಿಖೆಯನ್ನು ಪ್ರಾರಂಭಿಸಲಾಗಿದೆ. ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮೃತದೇಹಗಳ ಮರಣೋತ್ತರ ಪರೀಕ್ಷೆಯನ್ನು ನಡೆಸಲಾಗಿದೆ.

“ಕಳೆದ ವರ್ಷ ಅನಾರೋಗ್ಯಕ್ಕೆ ಒಳಗಾಗಿದ್ದ ದುರ್ಗಾಗಾಗಿ ತೀವ್ರ ಹುಡುಕಾಟದ ನಂತರ ಇಎಸ್‌ಐ ಆಸ್ಪತ್ರೆಯಲ್ಲಿ ಹಾಸಿಗೆ ಸಿಕ್ಕಿತ್ತು. ಆಸ್ಪತ್ರೆಯಲ್ಲಿ 4 ದಿನಗಳ ನಂತರ ಆಕೆ ಮೃತಪಟ್ಟಿದ್ದರು. ಕೋವಿಡ್ ಆಗಿದ್ದರಿಂದ ಅವರು ದೇಹವನ್ನು ನಮಗೆ ಹಸ್ತಾಂತರಿಸಲಿಲ್ಲ, ನಾವು ಮನೆಗೆ ಮರಳಿದ್ದೇವು. ಕೆಲವು ದಿನಗಳ ನಂತರ, ನಮಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ನಿಂದ ಕರೆ ಬಂದಿತು, ಅವರು ಅಂತ್ಯಸಂಸ್ಕಾರ ಮಾಡಿರುವುದಾಗಿ ತಿಳಿಸಿದ್ದರು. ಈಗ 15 ತಿಂಗಳ ನಂತರ ನಮಗೆ ಕರೆ ಬಂದಾಗ, ಅದು ನಿಜವೋ ಸುಳ್ಳೋ ಎಂದು ನಾವು ಹೆದರಿದ್ದೆವು” ಎಂದು ಮೃತ ದುರ್ಗ ಅವರ ಅಕ್ಕ ಸುಜಾತಾ ಹೇಳಿದ್ದಾರೆ.

ಮೃತ ಮುನಿರಾಜು ಅವರ ಪುತ್ರ ಸತೀಶ್ ಅವರಿಗೂ ಕೂಡ ಇದೇ ರೀತಿಯ ಅನುಭವವಾಗಿದೆ. “ಆಸ್ಪತ್ರೆಯವರು ಕರೆ ಮಾಡಿ ಅವರು ಇನ್ನಿಲ್ಲ ಎಂದು ಹೇಳಿದಾಗ, ನಾವು ಶವವನ್ನು ಕೇಳಿದ್ದೇವು. ಆದರೆ ಬಿಬಿಎಂಪಿ ಅಧಿಕಾರಿಗಳು ಮೃತದೇಹವನ್ನು ಸುಡಲಾಯಿತು ಎಂದು ಹೇಳಿದ್ದರು. ನಾವು ಮರಣ ಪ್ರಮಾಣಪತ್ರವನ್ನು ಪಡೆಯಲು ಹೋದಾಗ ಕೂಡ ಅವರು ಅದನ್ನೇ ಮತ್ತೆ ಹೇಳಿದ್ದರು” ಎಂದಿದ್ದಾರೆ.

ಇನ್ನು ಘಟನೆ ಸಂಬಂಧ ರಾಜಾಜಿನಗರದ ಬಿಜೆಪಿ ಶಾಸಕ ಸುರೇಶ್ ಕುಮಾರ್, ಕಾರ್ಮಿಕ ಸಚಿವ ಎ.ಶಿವರಾಮ್ ಹೆಬ್ಬಾರ್ ಅವರಿಗೆ ಪತ್ರ ಬರೆದಿದ್ದು, ಈ ವಿಷಯವನ್ನು ಕೇಂದ್ರ ಕಾರ್ಮಿಕ ಸಚಿವಾಲಯಕ್ಕೆ ತಿಳಿಸುವಂತೆ ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳೂವಂತೆ ಮನವಿ ಮಾಡಿದ್ದಾರೆ.


ಇದನ್ನೂ ಓದಿ: ವಿಶ್ವದೆಲ್ಲೆಡೆ ಕೊರೊನಾ ಹೊಸ ರೂಪಾಂತರ ‘ಓಮಿಕ್ರಾನ್’ ಆತಂಕ: ತಜ್ಞರು ಹೇಳುವುದೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...