Homeಮುಖಪುಟಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ರಾಜ್ಯದ 15 ಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ...

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪ: ರಾಜ್ಯದ 15 ಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ ಎಸಿಬಿ ದಾಳಿ

- Advertisement -
- Advertisement -

ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಆರೋಪದಲ್ಲಿ ರಾಜ್ಯದ 15 ಕ್ಕೂ ಹೆಚ್ಚು ಅಧಿಕಾರಿಗಳ ಮನೆ ಮೇಲೆ ಬುಧವಾರ ಎಸಿಬಿ ದಾಳಿ ನಡೆಸಿದೆ. ಅಧಿಕಾರಿಗಳಿಗೆ ಸಂಬಂಧಿಸಿದ ಮನೆ, ಕಚೇರಿ ಮತ್ತು ಅವರ ಆಪ್ತರ ಮನೆ ಸೇರಿದಂತೆ ಸುಮಾರು 60 ಸ್ಥಳಗಳ ಮೇಲೆ ದಾಳಿ ನಡೆಸಿ, ಅಧಿಕಾರಿಗಳು ಪರಿಶೀಲನೆ ನಡೆಸುತ್ತಿದ್ದಾರೆ.

400 ಕ್ಕೂ ಹೆಚ್ಚು ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ಬೆಂಗಳೂರು, ಕಲಬುರಗಿ, ಗದಗ, ದಾವಣಗೆರೆ, ಬೆಳಗಾವಿಯ ಗೋಕಾಕ್, ಮಂಡ್ಯದಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದ್ದಾರೆ.

ಕೆಎಎಸ್ ಅಧಿಕಾರಿ ನಾಗರಾಜ್, ಯಲಹಂಕ ಸರ್ಕಾರಿ ಆಸ್ಪತ್ರೆಯ ಫಿಜಿಯೋಥೆರಪಿಸ್ಟ್ ರಾಜಶೇಖರ, ಬಿಬಿಎಂಪಿ ಸಿಬ್ಬಂದಿ ಮಾಯಣ್ಣ, ಬಿಬಿಎಂಪಿ ಸಿಬ್ಬಂದಿ ಬಾಗಲಗುಂಟೆಯ ಗಿರಿ, ಬೆಂಗಳೂರು ನಿರ್ಮಿತಿ ಕೇಂದ್ರದ ಮಾಜಿ ಪ್ರಾಜೆಕ್ಟ್ ಮ್ಯಾನೇಜರ್ ವಾಸುದೇವ್, ದೊಡ್ಡಬಳ್ಳಾಪುರದ ಕಂದಾಯ ನಿರೀಕ್ಷಕ ಲಕ್ಷ್ಮೀನರಸಿಂಹಯ್ಯ, ಮಂಗಳೂರು ಸ್ಮಾರ್ಟ್‌ ಸಿಟಿ ಇಇ ಕೆ.ಎಸ್.ಲಿಂಗೇಗೌಡ, ಮಂಡ್ಯ ಹೆಚ್‌ಎಲ್‌ಬಿಸಿ ಇಇ ಕೆ.ಶ್ರೀನಿವಾಸ್ ಮನೆಗಳ ಮೇಲೆ ಎಸಿಬಿ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇದನ್ನೂ ಓದಿ: ಇವರ ದೇಶಪ್ರೇಮ ಬ್ಯಾನರ್‌ಗಷ್ಟೇ ಸೀಮಿತ; ಸಂಘಪರಿವಾರದ ಜೊತೆಗಿನ ಆ ದಿನಗಳು…

ಬೆಂಗಳೂರು ನಂದಿನಿ ಡೇರಿಯ ಜನರಲ್ ಮ್ಯಾನೇಜರ್ ಬಿ.ಕೃಷ್ಣಾರೆಡ್ಡಿ, ಲೋಕೋಪಯೋಗಿ ಇಲಾಖೆಯ ಜೆ.ಇ. ಶಾಂತಗೌಡ ಬಿರಾದಾರ್‌, ಗದಗದ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಟಿ.ಎಸ್.ರುದ್ರೇಶಪ್ಪ, ಸಹಕಾರಿ ಅಭಿವೃದ್ಧಿ ಅಧಿಕಾರಿ ಎ.ಕೆ.ಮಸ್ತಿ ನಿವಾಸದ ಮೇಲೂ ದಾಳಿ ನಡೆದಿದೆ.

ಈ 15 ಅಧಿಕಾರಿಗಳ ವಿರುದ್ಧ ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.


ಇದನ್ನೂ ಓದಿ: ‘ಆಂದೋಲನ ಜೀವಿ’ಗಳ ಮುಂದೆ ಸೋಲೊಪ್ಪಿದ ಮೋದಿ: ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು ಏನಂದರು?

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...