Homeಕರ್ನಾಟಕರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

ರಾಜ್ಯದ ಹಲವೆಡೆ ಇನ್ನೆರಡು ದಿನ ಮಳೆ ಸಾಧ್ಯತೆ, ಯೆಲ್ಲೋ ಅಲರ್ಟ್ ಘೋಷಣೆ

- Advertisement -
- Advertisement -

ಅರಬ್ಬಿ ಸಮುದ್ರದಲ್ಲಿ ಉಂಟಾಗಿರುವ ವಾಯುಭಾರ ಕುಸಿತ ಹಿನ್ನೆಲೆ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಎರಡು ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ನ.8 ಮತ್ತು 9 ಎರಡು ದಿನಗಳ ಕಾಲ ರಾಜ್ಯದಲ್ಲಿ ಮೋಡ ಕವಿದ ವಾತಾವರಣವಿರಲಿದೆ. ಜೊತೆಗೆ ಬೆಂಗಳೂರು ಸೇರಿ ಬೆಂಗಳೂರು ಗ್ರಾಮಾಂತರ, ಕೋಲಾರ, ತುಮಕೂರು, ಹಾಸನ, ಮಂಡ್ಯ, ಮೈಸೂರು, ರಾಮನಗರ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಮಲೆನಾಡು, ಕರಾವಳಿ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡಿನಲ್ಲಿ ತುಂಬಾ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯದ ಕರಾವಳಿ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.

ಇದನ್ನೂ ಓದಿ: ಅನುಮಾನದ ರೋಗ: ಹೆಣ್ಣುಮಕ್ಕಳ ಫೋಟೋ ಎಫ್‌ಬಿಯಲ್ಲಿ ಪೋಸ್ಟ್‌ ಮಾಡಿ ವಿಕೃತಿ

ಈಗಾಗಲೇ ಕರಾವಳಿ ಭಾಗದ ಕೆಲವೆಡೆ ಭಾರಿ ಮಳೆಯಾಗಿದೆ. ಬೆಳ್ತಂಗಡಿಯಲ್ಲಿ 10 ಸೆಂ.ಮೀ ಹಾಗೂ ಕೊಲ್ಲೂರಿನಲ್ಲಿ 9 ಸೆಂ.ಮೀ ಮಳೆಯಾಗಿದೆ. ಉತ್ತರ ಕರ್ನಾಟಕದ ಹಲವು ಭಾಗಗಳಲ್ಲಿ ಚಳಿಯ ವಾತಾವರಣವಿದ್ದು, ಬೀದರ್‌ನಲ್ಲಿ 14 ಡಿಗ್ರಿ ಸೆಂಟಿಗ್ರೇಡ್‌ನ ಕನಿಷ್ಠ ತಾಪಮಾನ ದಾಖಲಾಗಿದೆ.

ಬೆಂಗಳೂರಿನಲ್ಲಿ ನವೆಂಬರ್ 8 (ಇಂದು) ರಂದು ಬೆಳಗ್ಗೆಯಿಂದಲೇ ಮೋಡ ಕವಿದ ವಾತಾವರಣವಿದ್ದು, ತುಂತುರು ಮಳೆಯಾಗುತ್ತಿದೆ. ಕರಾವಳಿ ಭಾಗದಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಇತ್ತ, ತಮಿಳುನಾಡಿನಲ್ಲಿ ಭಾರಿ ಮಳೆಯಾಗಿದ್ದು ಇಡೀ ರಾಜ್ಯ ಮಹಾಮಳೆಗೆ ತತ್ತರಿಸಿದೆ. ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಇನ್ನೂ 2 ದಿನ ಭಾರಿ ಮಳೆಯಾಗಲಿದ್ದು, ಭಾರತೀಯ ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.


ಇದನ್ನೂ ಓದಿ: ದ.ಕ. | ಅಡಿಕೆ ಕಳ್ಳತನದ ಆರೋಪ, ಬಾಲಕನಿಗೆ ಮಾರಣಾಂತಿಕ ಹಲ್ಲೆ- ಆರೋಪಿಗಳಿಗೆ ಜಾಮೀನು

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

‘ಇವಿಎಂ’ ತಿರುಚಲು ಶಿವಸೇನಾ ನಾಯಕನಿಗೆ 2.5 ಕೋಟಿ ರೂ.ಬೇಡಿಕೆ ಇಟ್ಟ ಯೋಧ!

0
ವಿದ್ಯುನ್ಮಾನ ಮತಯಂತ್ರಗಳನ್ನು(ಇವಿಎಂ) ತಿರುಚಲು ಶಿವಸೇನಾ ಉದ್ಧವ್‌ ಬಣದ ನಾಯಕ ಅಂಬಾದಾಸ್ ದನ್ವೆ ಅವರಿಂದ 2.5 ಕೋಟಿ ರೂಪಾಯಿಗೆ ಬೇಡಿಕೆಯಿಟ್ಟಿದ್ದಕ್ಕಾಗಿ ಮಹಾರಾಷ್ಟ್ರ ಪೊಲೀಸರು ಛತ್ರಪತಿ ಸಂಭಾಜಿನಗರದಲ್ಲಿ ಸೇನಾ ಯೋಧನೋರ್ವನನ್ನು ಬಂಧಿಸಿದ್ದಾರೆ. ಮಾರುತಿ ಧಕ್ನೆ(42) ವಿರುದ್ಧ ದೂರು...