Homeಕರ್ನಾಟಕಕರ್ನಾಟಕ: ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ- ಯಾರಿಗೆ ಸಿಗಲಿದೆ ಸಚಿವ ಸ್ಥಾನ?

ಕರ್ನಾಟಕ: ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಒಪ್ಪಿಗೆ- ಯಾರಿಗೆ ಸಿಗಲಿದೆ ಸಚಿವ ಸ್ಥಾನ?

- Advertisement -
- Advertisement -

ಕರ್ನಾಟಕದಲ್ಲಿ ಬಹುದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಕೇಳಿಬರುತ್ತಿತ್ತು. ಆದರೆ ಈಗ ಅದಕ್ಕೆ ಕಾಲ ಕೂಡಿಬಂದಿದ್ದು, ಜನವರಿ 13 ರಂದು ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದ್ದಾರೆ. ಅದೇ ಸಮಯದಲ್ಲಿ ಒಬ್ಬರು ಸಚಿವರನ್ನು ಸಂಪುಟದಿಂದ ಹೊರಗುಳಿಸಲು ನಿರ್ಧರಿಸಲಾಗಿದೆ.

ಭಾನುವಾರ ಬಿ ಎಸ್ ಯಡಿಯೂರಪ್ಪ ಬಿಜೆಪಿ ಹೈಕಮಾಂಡ್‌ ಅನ್ನು ಭೇಟಿ ಮಾಡಲು ದೆಹಲಿಗೆ ತೆರಳಿದ್ದರು. ಅಲ್ಲಿ ಸಚಿವ ಸಂಪುಟ ವಿಸ್ತರಣೆಗೆ ವರಿಷ್ಟರು ಒಪ್ಪಿಗೆ ನೀಡಿದ್ದಾರೆ. ಗೃಹ ಸಚಿವ ಅಮಿತ್ ಶಾ ಮನೆಯಲ್ಲಿ, ಅಮಿತ್ ಶಾ ಮತ್ತು ಪಕ್ಷದ ಅಧ್ಯಕ್ಷ ಜೆ.ಪಿ. ನಡ್ಡಾ ಅವರನ್ನು ಭೇಟಿ ಮಾಡಿ ಸುಮಾರು ಒಂದು ತಾಸು ಮಾತುಕತೆ ನಡೆಸಿದರು. ಬಿಜೆಪಿ ಮುಖಂಡ ಅರುಣ್‌ ಸಿಂಗ್ ಕೂಡಾ ಇದ್ದರು.

ಇದನ್ನೂ ಓದಿ: ವಾಸ್ತವ ತಿಳಿಯದೆ ಕೋತಿಯಂತೆ ಮಾತನಾಡುವ ತೇಜಸ್ವಿ ಸೂರ್ಯನಿಗೂ ಉತ್ತರಿಸುತ್ತೇನೆ: ಬಡಗಲಪುರ ನಾಗೇಂದ್ರ

“ನಾಯಕತ್ವ ಬದಲಾವಣೆ ಸೇರಿ ಎಲ್ಲ ರೀತಿಯ ಊಹಾಪೋಹಗಳಿಗೆ ವರಿಷ್ಠರು ತೆರೆ ಎಳೆದಿದ್ದಾರೆ. ಸಚಿವ ಸಂಪುಟ ವಿಸ್ತರಣೆಗೆ ಮಾತ್ರ ಹಸಿರು ನಿಶಾನೆ ತೋರಿದ್ದು, ಎಲ್ಲ ಹಿರಿಯ ಸಚಿವರನ್ನು ಸಂಪುಟದಲ್ಲಿ ಮುಂದುವರಿಸಲು ಸೂಚಿಸಿದ್ದಾರೆ” ಎಂದು ಪಕ್ಷದ ಮೂಲಗಳು ತಿಳಿಸಿವೆ.

“ಏಳು ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ನೀಡಿದೆ. ಇದೇ 13 ರ ಮಧ್ಯಾಹ್ನ ನೂತನ ಸಚಿವರ ಪ್ರಮಾಣ ವಚನ ನಡೆಯಲಿದೆ. 14 ರಂದು ಸಂಕ್ರಾಂತಿ ಇರುವ ಕಾರಣ 13 ರ ಮಧ್ಯಾಹ್ನವೇ ಪ್ರಮಾಣ ವಚನ ನಡೆಯಲಿದೆ” ಎಂದು ಯಡಿಯೂರಪ್ಪ ಭಾನುವಾರ ರಾತ್ರಿ ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ತಿಳಿಸಿದರು.

ಪಕ್ಷಕ್ಕೆ ವಲಸೆ ಬಂದವರಲ್ಲಿ ಯಾರಿಗೆ ಸಚಿವ ಸ್ಥಾನ ಸಿಗಲಿದೆ ಎಂಬುದು ಇನ್ನೂ ನಿಗೂಢವಾಗಿಯೇ ಇದೆ. ಹಾಗೆಯೇ ಸಂಪುಟದಿಂದ ಹೊರಗುಳಿಯುವ ಆ ಒಬ್ಬ ಸಚಿವರು ಯಾರೆಂಬುದು ಇನ್ನೂ ಬಹಿರಂಗವಾಗಿಲ್ಲ.


ಇದನ್ನೂ ಓದಿ: ಬೆಂಗಳೂರು: ದಲಿತ ಮುಖಂಡ ಶ್ರೀನಿವಾಸ್ ಕೊಲೆ – ಪೊಲೀಸರ ನಿರ್ಲಕ್ಷ್ಯ ಖಂಡಿಸಿ ಪ್ರತಿಭಟನೆ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡಿಗೆ ತಾರತಮ್ಯ; ಬಿಜೆಪಿ ಸರ್ಕಾರದ ವಿರುದ್ಧ ಪ್ರತಿಭಟನೆಗೆ ಕರೆಕೊಟ್ಟ ಡಿಎಂಕೆ

0
ಇತ್ತೀಚಿನ ಕೇಂದ್ರ ಬಜೆಟ್‌ನಲ್ಲಿ ತಮಿಳುನಾಡಿಗೆ ದ್ರೋಹ ಬಗೆಯಲಾಗಿದೆ ಎಂದು ಆರೋಪಿಸಿ, ಕೇಂದ್ರ ಸರ್ಕಾರದ ನಡೆ ಖಂಡಿಸಿ ಆಡಳಿತಾರೂಢ ಡಿಎಂಕೆ ಶನಿವಾರ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ರಾಜ್ಯಾದ್ಯಂತ ಪ್ರತಿಭಟನೆಗೆ ಕರೆ ನೀಡಿದೆ. ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್...