Homeಕರ್ನಾಟಕKarnataka Budget 2025-26 | ಕೃಷಿ, ತೋಟಗಾರಿಕೆ ಕ್ಷೇತ್ರದ ಘೋಷಣೆಗಳು; ಸಂಕ್ಷಿಪ್ತ ವಿವರ

Karnataka Budget 2025-26 | ಕೃಷಿ, ತೋಟಗಾರಿಕೆ ಕ್ಷೇತ್ರದ ಘೋಷಣೆಗಳು; ಸಂಕ್ಷಿಪ್ತ ವಿವರ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಮಾರ್ಚ್‌ 7ರ ಶುಕ್ರವಾರ ವಿಧಾನಸಭೆಯಲ್ಲಿ ಮಂಡಿಸಿದರು. ಈ ಬಾರಿ ರೂ. 4 ಲಕ್ಷ ಕೋಟಿ (4,09,549 ಕೋಟಿ) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು 16ನೇ ಬಜೆಟ್ ಮಂಡಿಸಿದ ದಾಖಲೆ ಮಾಡಿದ್ದಾರೆ. Karnataka Budget 2025-26

ಸಿದ್ದರಾಮಯ್ಯ ಅವರು ಬಜೆಟ್ ಮಂಡಿಸುತ್ತಾ, ರಾಜ್ಯದ ಸಣ್ಣ ಮತ್ತು ಅತಿಸಣ್ಣ ಹಿಡುವಳಿದಾರರಿಗೆ ಕೃಷಿಯನ್ನು ಸುಸ್ಥಿರ ಮತ್ತು ಲಾಭದಾಯಕವಾಗಿಸಲು, ನಮ್ಮ ಸರ್ಕಾರವು ರೈತ ಸಮೃದ್ಧಿ ಯೋಜನೆಯನ್ನು ಜಾರಿಗೊಳಿಸಿದೆ ಎಂದು ಹೇಳಿದ್ದಾರೆ. “ಪ್ರಸಕ್ತ ಸಾಲಿನಲ್ಲಿ, ಈ ಯೋಜನೆಯಡಿ 10 ಹವಾಮಾನ ವಲಯಗಳಲ್ಲಿ ಕೃಷಿ ಇಲಾಖೆಯ ಅಧೀನದ ಕ್ಷೇತ್ರಗಳಲ್ಲಿ ಸಮಗ್ರ ಕೃಷಿ ಪದ್ಧತಿಯ ಮಾದರಿ ಪ್ರಾತ್ಯಕ್ಷಿಕೆ ತಾಕುಗಳನ್ನು ಅಭಿವೃದ್ಧಿಪಡಿಸಿ, ಈ ಪದ್ಧತಿಯನ್ನು ಅಳವಡಿಸಿಕೊಳ್ಳಲು ರೈತರಿಗೆ ಪ್ರಚುರಪಡಿಸಲಾಗುವುದು” ಎಂದು ತಿಳಿಸಿದ್ದಾರೆ. Karnataka Budget 2025-26

2025-2026ರ ರಾಜ್ಯ ಬಜೆಟ್‌ನಲ್ಲಿ ಕೃಷಿಗಾಗಿ ಮಾಡಿರುವ ಘೋಷಣೆಗಳು ಹೀಗಿವೆ

  • ಕೃಷಿ ಯಾಂತ್ರೀಕರಣ ಕಾರ್ಯಕ್ರಮದಡಿ 50 ಸಾವಿರ ರೈತರಿಗೆ ಸಹಾಯಧನ ಒದಗಿಸಲು 428 ಕೋಟಿ ರೂ. ಅನುದಾನ
  • ಕೃಷಿ ಬೆಳೆಗಳಲ್ಲಿ ನೀರನ್ನು ಸಮರ್ಥ ಬಳಕೆ ಮಾಡಿ, ಮಳೆಯಾಶ್ರಿತ ಪ್ರದೇಶದಲ್ಲಿ ಕೃಷಿ ಉತ್ಪಾದನೆಯನ್ನು ಹೆಚ್ಚಿಸುವ ನಿಟ್ಟಿನಲ್ಲಿ ಅಂದಾಜು 1.81 ಲಕ್ಷ ರೈತರಿಗೆ ಹನಿ ಮತ್ತು ತುಂತುರು ನೀರಾವರಿ ಘಟಕಗಳ ಅಳವಡಿಕೆಗೆ 440 ಕೋಟಿ ರೂ. ಸಹಾಯಧನ
  • ತೊಗರಿ ಬೆಳೆಯಲ್ಲಿ ನೂತನ ತಾಂತ್ರಿಕತೆಗಳ ಅಳವಡಿಕೆ, ಕ್ಷೇತ್ರ ವಿಸ್ತರಣೆ ಮತ್ತು ತೊಗರಿಯನ್ನು ಅಂತರ ಬೆಳೆಯನ್ನಾಗಿ ಪ್ರೋತ್ಸಾಹಿಸುವುದರ ಮೂಲಕ ಉತ್ಪಾದನೆಯಲ್ಲಿ ರಾಷ್ಟ್ರದಲ್ಲೇ ಮುಂಚೂಣಿ ರಾಜ್ಯವನ್ನಾಗಿಸಲು ಉದ್ದೇಶಿಸಿದ್ದು, ರೈತರ ಆದಾಯ ಮತ್ತು ಪೌಷ್ಟಿಕ ಭದ್ರತೆಯನ್ನು ಸುಧಾರಿಸಲು 88 ಕೋಟಿ ರೂ. ಅನುದಾನ
  • 6,000 ಕಿರು ಆಹಾರ ಸಂಸ್ಕರಣಾ ಘಟಕಗಳು ಹಾಗೂ 14 ಸಾಮಾನ್ಯ ಇನ್‌ಕ್ಯೂಬೇಷನ್‌ ಕೇಂದ್ರಗಳ ಸ್ಥಾಪನೆ, ಪ್ರಸಕ್ತ ಸಾಲಿನಲ್ಲಿ 5,000 ಕಿರು ಸಂಸ್ಕರಣಾ ಘಟಕಗಳ ಸ್ಥಾಪಿನೆ
  • ಕೃಷಿ ಭಾಗ್ಯ ಯೋಜನೆಯಡಿ ಮೂರು ಲಕ್ಷಕ್ಕಿಂತ ಅಧಿಕ ಕೃಷಿ ಹೊಂಡಗಳ ನಿರ್ಮಾಣ, ಪ್ರಸಕ್ತ ವರ್ಷದಲ್ಲಿ ಯೋಜನೆಯಡಿ 12,000 ಕೃಷಿ ಹೊಂಡಗಳ ನಿರ್ಮಾಣ\
  • ಜಾಗತಿಕ ಮಟ್ಟದಲ್ಲಿ ಡಿಜಿಟಲ್‌, ಕೃತಕ ಬುದ್ಧಿಮತ್ತೆ ಹಾಗೂ ಜಿಯೋ ಸ್ಪೇಷಿಯಲ್ ಕ್ಷೇತ್ರದಲ್ಲಿ ಆಗುತ್ತಿರುವ ಆವಿಷ್ಕಾರಗಳನ್ನು ಕೃಷಿ ಕ್ಷೇತ್ರದಲ್ಲಿ ಅಳವಡಿಸಿ, ಡಿಜಿಟಲ್‌ ಕೃಷಿ ಸೇವೆಗಳ ಕೇಂದ್ರ ಸ್ಥಾಪನೆ
  • ನೈಸರ್ಗಿಕ ವೈಪರೀತ್ಯಗಳ ಬದಲಾವಣೆಯಿಂದ ಹವಾಮಾನ ವಲಯಗಳನ್ನು ಮರುವ್ಯಾಖ್ಯಾನಗೊಳಿಸಲು ತಜ್ಞರ ಸಮಿತಿ ರಚಿನೆ
  • ಮಳೆಯಾಶ್ರಿತ ಕೃಷಿಯನ್ನು ಜೀವನಾಧಾರವಾಗಿಸಿ ಸುಸ್ಥಿರವನ್ನಾಗಿಸಲು ಹಾಗೂ ರೈತರ ಜೀವನೋಪಾಯವನ್ನು ಸುಧಾರಿಸಲು ʻಸಮಗ್ರ ಮಳೆಯಾಶ್ರಿತ ಕೃಷಿ ನೀತಿʼ ಅನುಷ್ಠಾನ
  • ರೈತರಿಗೆ ಮಣ್ಣು ಪರೀಕ್ಷೆ ಹಾಗೂ ಅವರು ಬಳಸುವ ಪರಿಕರಗಳಾದ ರಸಗೊಬ್ಬರ, ಬಿತ್ತನೆ ಬೀಜ, ಸಸ್ಯ ಸಂರಕ್ಷಣಾ ಔಷಧಿ, ಜೈವಿಕ ಗೊಬ್ಬರ ಇತ್ಯಾದಿಗಳ ಗುಣಮಟ್ಟವನ್ನು ಪರೀಕ್ಷಿಸಲು ಇಲಾಖೆಯಡಿ ಇರುವ 58 ಪ್ರಯೋಗಾಲಯಗಳನ್ನು ಅತ್ಯಾಧುನಿಕ ತಂತ್ರಜ್ಞಾನಗಳೊಂದಿಗೆ ಬಲವರ್ಧನೆ
  • ಸುಸ್ಥಿರ ಸಾವಯವ ಕೃಷಿಯನ್ನು ಉತ್ತೇಜಿಸಲು ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕನ್ನು ರಾಜ್ಯದ ಪ್ರಥಮ ಸಾವಯವ ತಾಲ್ಲೂಕನ್ನಾಗಿ ಪರಿವರ್ತಿಸಿ, ರೈತರ ಸಾವಯವ ಉತ್ಪನ್ನಗಳಿಗೆ ಮಾರುಕಟ್ಟೆ ಒದಗಿಸಲು ಸಾವಯವ ಪ್ರಮಾಣೀಕರಣ ವ್ಯವಸ್ಥೆ
  • ಬೆಳಗಾವಿ, ಬಾಗಲಕೋಟೆ, ವಿಜಯಪುರ, ಕಲಬುರಗಿ ಮತ್ತು ಮಂಡ್ಯ ಜಿಲ್ಲೆಗಳಲ್ಲಿ ಒಟ್ಟಾರೆ 3,000 ಹೆಕ್ಟೇರ್ ಪ್ರದೇಶದಲ್ಲಿ ಸಮಗ್ರ ಮಣ್ಣು ಮತ್ತು ನೀರಿನ ನಿರ್ವಹಣೆ, ಸಮರ್ಪಕ ತ್ಯಾಜ್ಯ ನಿರ್ವಹಣೆ, ನೀರಿನ ಬಳಕೆ ಮತ್ತು ಸಮತೋಲನ ಪೋಷಕಾಂಶ ನಿರ್ವಹಣೆಯನ್ನು ಸಕ್ಕರೆ ಕಾರ್ಖಾನೆಗಳ ಸಹಯೋಗದೊಂದಿಗೆ ಜಾರಿ
  • ಜೈವಿಕ ಕೃಷಿ ಪರಿಕರ ಸ್ಟಾರ್ಟ್‌-ಅಪ್‌ಗಳು (Agri Start-up) ಉತ್ಪಾದಿಸುವ ಜೈವಿಕ ಪರಿಕರಗಳನ್ನು ರೈತ ಸಂಪರ್ಕ ಕೇಂದ್ರಗಳ ಮೂಲಕ ರೈತರಿಗೆ ಸೂಕ್ತ ದರದಲ್ಲಿ ಮಾರಾಟ ಮಾಡಲು ಉತ್ತೇಜನೆ
  • ವಿಶ್ವ ಬ್ಯಾಂಕ್‌ ನೆರವಿನ ರಿವಾರ್ಡ್‌ ಯೋಜನೆಯಡಿ ಪ್ರಸಕ್ತ ಸಾಲಿನಲ್ಲಿ 11 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಸಮೀಕ್ಷೆಯನ್ನು ಪೂರ್ಣಗೊಳಿಸಲು ಕ್ರಮ
  • ಭೂ-ಸಂಪನ್ಮೂಲ ಸಮೀಕ್ಷೆ ಆಧಾರದ ಮೇಲೆ ರೈತರು ಸೂಕ್ತವಾದ ಬೆಳೆಗಳನ್ನು ಬೆಳೆಯಲು, ಅಗತ್ಯವಿರುವ ರಾಸಾಯನಿಕ ಗೊಬ್ಬರ ಹಾಗೂ ಪೋಷಕಾಂಶಗಳನ್ನು ಬಳಸಿ ಬೆಳೆಗಳ ಉತ್ಪಾದನೆ ಹೆಚ್ಚಿಸಲು ಪ್ರೋತ್ಸಾಹ
  • ಮಂಡ್ಯ ಕೃಷಿ ವಿಶ್ವವಿದ್ಯಾಲಯದ ಮೂಲಸೌಕರ್ಯಕ್ಕಾಗಿ 25 ಕೋಟಿ ರೂ. ಅನುದಾನ ಮತ್ತು ಪ್ರಸಕ್ತ ಸಾಲಿನಲ್ಲಿ ತರಗತಿ ಆರಂಭ
  • ಬರ ಮತ್ತು ರೋಗ ನಿರೋಧಕ ಲಕ್ಷಣಗಳ ಸಂಶೋಧನೆ ಕೈಗೊಂಡು ಬೆಳೆಗಳ ಉತ್ತಮ ತಳಿ ಅಭಿವೃದ್ಧಿಪಡಿಸಲು ಬೆಂಗಳೂರಿನ ಗಾಂಧಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ಸಸ್ಯ ಫೀನೋಟೈಪಿಂಗ್‌ (Phenotyping) ಸೌಲಭ್ಯ
  • ಸಾವಯವ ಉತ್ಪನ್ನಗಳು ಮತ್ತು ಸಿರಿಧಾನ್ಯಗಳ ಬೇಡಿಕೆ ಮತ್ತು ಪೂರೈಕೆಗಳ ಅಂತರವನ್ನು ಸರಿದೂಗಿಸಲು ಹಾಗೂ ರೈತರಿಗೆ ಸೂಕ್ತ ಮಾರುಕಟ್ಟೆಯನ್ನು ಕಲ್ಪಿಸುವ ಉದ್ದೇಶದಿಂದ 20 ಕೋಟಿ ರೂ. ಮೊತ್ತದಲ್ಲಿ ʻಸಾವಯವ ಮತ್ತು ಸಿರಿಧಾನ್ಯಗಳ ಹಬ್‌ʼ ಸ್ಥಾಪನೆ
  • ವಿಜಯಪುರದ ಮುದ್ದೇಬಿಹಾಳ ತಾಲ್ಲೂಕಿನಲ್ಲಿ ಕೃಷಿ ಸಂಶೋಧನಾ ಕೇಂದ್ರ ಸ್ಥಾಪನೆ
  • ಬೆಳಗಾವಿ ಜಿಲ್ಲೆಯ ಅಥಣಿ ತಾಲ್ಲೂಕಿನಲ್ಲಿ ಹೊಸ ಕೃಷಿ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಯುವಲ್ಲಿ ಕ್ರಮ

2025-2026ರ ರಾಜ್ಯ ಬಜೆಟ್‌ನಲ್ಲಿ ತೋಟಗಾರಿಕೆ ಮಾಡಿರುವ ಘೋಷಣೆಗಳು ಹೀಗಿವೆ

  • ಬೆಳೆ ಪದ್ಧತಿ, ಸಂಸ್ಕರಣೆ ಮತ್ತು ಮೌಲ್ಯವರ್ಧನೆಯ ತಂತ್ರಜ್ಞಾನದಲ್ಲಾದ ಆಧುನೀಕರಣದ ಅನುಕೂಲವನ್ನು ಬೆಳೆಗಾರರಿಗೆ ತಲುಪಿಸುವ ಉದ್ದೇಶದಿಂದ ಸಮಗ್ರ ತೋಟಗಾರಿಕಾ ಅಭಿವೃದ್ಧಿ ಯೋಜನೆ-2ರ ಜಾರಿ ಮತ್ತು ಪ್ರಸಕ್ತ ಸಾಲಿನಲ್ಲಿ ಈ ಯೋಜನೆಗಾಗಿ 95 ಕೋಟಿ ರೂ. ಅನುದಾನ
  • ತೋಟಗಾರಿಕಾ ಬೆಳೆಗಳ ವಿಸ್ತೀರ್ಣ, ಉತ್ಪಾದನೆ, ಬೆಳೆಗಳ ಆರೋಗ್ಯ, ಮಾರುಕಟ್ಟೆ ಇತ್ಯಾದಿಗಳ ಬಗ್ಗೆ ನೈಜ ಸಮಯದ (Real Time) ಆಧಾರದ ಮೇಲೆ ರೈತರಿಗೆ ಮಾಹಿತಿ ಒದಗಿಸಲು ಇಂಡಿಯನ್‌ ಇನ್ಸ್‌ಟಿಟ್ಯೂಟ್‌ ಆಫ್‌ ಸ್ಪೇಸ್‌ ಸೈನ್ಸ್ ಟೆಕ್ನಾಲಜಿ ಮತ್ತು ಖಾಸಗಿ ಸಹಯೋಗದಲ್ಲಿ ಜ್ಞಾನ ಕೋಶ ಸ್ಥಾಪನೆ
  • GI ಟ್ಯಾಗ್‌ ಹೊಂದಿರುವ ರಾಜ್ಯದ 20 ಬೆಳೆಗಳು ಹಾಗೂ ಇತರೆ ದೇಸಿ ತಳಿಗಳು ಕಣ್ಮರೆಯಾಗಿರುವದರಿಂದ, ಅದು ನಶಿಸಿ ಹೋಗುವುದನ್ನು ತಪ್ಪಿಸಲು ದೇಶಿ ತಳಿಗಳ ಬೀಜ ಬ್ಯಾಂಕ್‌ ಸ್ಥಾಪನೆ
  • ಬ್ಯಾಡಗಿ ಮೆಣಸಿನಕಾಯಿ ತಳಿಯ ಸಂರಕ್ಷಣೆ ಮತ್ತು ಎಲೆ ಮುಟುರು ರೋಗ, ತ್ರಿಪ್ಸ್‌ ಇತ್ಯಾದಿ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಸಂಶೋಧನೆ
  • ತೋಟಗಾರಿಕೆ ಇಲಾಖೆಯ ಅಧೀನದ ಆಯ್ದ ಕ್ಷೇತ್ರಗಳು ಮತ್ತು ನರ್ಸರಿಗಳಡಿ ಸಾರ್ವಜನಿಕ-ಖಾಸಗಿ ಸಹಯೋಗದೊಂದಿಗೆ ಹೂ-ಕೃಷಿ, ಅಲಂಕಾರಿಕ ಸಸ್ಯಗಳು, ಔಷಧೀಯ ಸಸ್ಯಗಳನ್ನು ಬೆಳೆಸಲು ಹಾಗೂ ತೋಟಗಾರಿಕಾ ಪ್ರವಾಸೋದ್ಯಮವನ್ನು ಉತ್ತೇಜಿಸಲು ಕಾರ್ಯಕ್ರಮ
  • ಗದಗ ಜಿಲ್ಲೆಯ ಡಂಬಳದಲ್ಲಿ ತೋಟಗಾರಿಕಾ ಕಾಲೇಜನ್ನು ಸ್ಥಾಪಿಸಲು ತಜ್ಞರಿಂದ ಕಾರ್ಯಸಾಧ್ಯತಾ ವರದಿಯನ್ನು ಪಡೆದುಕೊಳ್ಳಲು ಕ್ರಮ
  • ತೋಟಗಾರಿಕಾ ಬೆಳೆಗಳ ಹನಿ ನೀರಾವರಿ ಕಾರ್ಯಕ್ರಮದಡಿ ಸುಮಾರು 52,000 ಫಲಾನುಭವಿಗಳಿಗೆ 426 ಕೋಟಿ ರೂ. ಸಹಾಯ ಧನ
  • ಎಲೆ ಚುಕ್ಕೆ ರೋಗ ನಿಯಂತ್ರಿಸಲು ಸಸ್ಯ ಸಂರಕ್ಷಣಾ ಕ್ರಮಗಳಿಗಾಗಿ 62 ಕೋಟಿ ರೂ. ಅನುದಾನ
  • ತೆಂಗು ಬೆಳೆಯುವ ಪ್ರದೇಶಗಳಲ್ಲಿ ಕಪ್ಪು ತಲೆ ಹುಳುವಿನ ಬಾಧೆಯ ಕುರಿತು ವೈಜ್ಞಾನಿಕ ಸಮೀಕ್ಷೆ. ಅದರ ಆಧಾರದ ಮೇಲೆ ಸಸ್ಯ ಸಂರಕ್ಷಣಾ ಕ್ರಮ

2025-2026ರ ರಾಜ್ಯ ಬಜೆಟ್‌ನಲ್ಲಿ ರೇಷ್ಮೆ ಕೃಷಿಗಾಗಿ ಮಾಡಿರುವ ಘೋಷಣೆಗಳು ಹೀಗಿವೆ 

    • ಅಂತಾರಾಷ್ಟ್ರೀಯ ದರ್ಜೆಯ ದ್ವಿತಳಿ ಕಚ್ಚಾ ರೇಷ್ಮೆಯ ದೇಶೀಯ ಬೇಡಿಕೆಯನ್ನು ಪೂರೈಸಲು ಮಧ್ಯಮ ವರ್ಗದ ರೇಷ್ಮೆ ನೂಲು ಬಿಚ್ಚಾಣಿಕೆದಾರರಿಗೆ 120 ಕೊನೆಗಳ ಸ್ವಯಂಚಾಲಿತ ರೀಲಿಂಗ್‌ ಘಟಕಗಳ ಸ್ಥಾಪನೆಗೆ ಪ್ರೋತ್ಸಾಹ
    • ರಾಮನಗರ ಮತ್ತು ಶಿಡ್ಲಘಟ್ಟ ಹೈ-ಟೆಕ್‌ ರೇಷ್ಮೆ ಗೂಡಿನ ಮಾರುಕಟ್ಟೆಯ ಎರಡನೇ ಹಂತದ ಕಾಮಗಾರಿಗಳನ್ನು 250 ಕೋಟಿ ರೂ. ವೆಚ್ಚದಲ್ಲಿ ಅನುಷ್ಠಾನ
    • ಮೈಸೂರು ಮತ್ತು ಸುತ್ತಮುತ್ತಲಿನ ಭಾಗದ ರೇಷ್ಮೆ ಬೆಳೆಗಾರರಿಗೆ ಅನುಕೂಲವಾಗುವಂತೆ ಮೈಸೂರಿನಲ್ಲಿ
      ರೇಷ್ಮೆಗೂಡಿನ ಮಾರುಕಟ್ಟೆಯನ್ನು NABARD ಸಹಯೋಗದಲ್ಲಿ ಸ್ಥಾಪನೆ
    • ರೈತರು ಉತ್ಪಾದಿಸುವ ರೇಷ್ಮೆಗೂಡುಗಳಿಗೆ ಸೂಕ್ತ ಬೆಲೆ ದೊರಕಿಸಲು ಹಾಗೂ ಅಂತಾರಾಷ್ಟ್ರೀಯ ಮಟ್ಟದ ಗುಣಮಟ್ಟವನ್ನು ಸಾಧಿಸುವ ದೃಷ್ಟಿಯಿಂದ ಸರ್ಕಾರಿ ರೇಷ್ಮೆ ಗೂಡಿನ ಮಾರುಕಟ್ಟೆಗಳಲ್ಲಿ ಗುಣಮಟ್ಟ ಪರೀಕ್ಷೆ ಮತ್ತು ಶ್ರೇಣೀಕರಣದ ಕಾರ್ಯಕ್ಕಾಗಿ Assayer ಗಳನ್ನು ನಿಯೋಜನೆ
    • ರೇಷ್ಮೆ ಬೆಳೆ ವಿಸ್ತರಿಸಲು ರೇಷ್ಮೆ ಗೂಡಿನ ಪೂರ್ವ ಮತ್ತು ನಂತರದ ಚಟುವಟಿಕೆಗಳಿಗೆ ಪ್ರೋತ್ಸಾಹಿಸಲು ರೇಷ್ಮೆ ಅಭಿವೃದ್ಧಿ ಯೋಜನೆಯಡಿಯಲ್ಲಿ ಪ್ರಸಕ್ತ ಸಾಲಿನಲ್ಲಿ 55 ಕೋಟಿ ರೂ. ಅನುದಾನ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ಮಣಿಪುರ | ಮಾರ್ಚ್ 8 ರಂದು ಮುಕ್ತ ಸಂಚಾರ ಪುನರಾರಂಭ; ಮೈತೇಯಿ ಪರ; ಕುಕಿಗಳಿಂದ ವಿರೋಧ

ಮಣಿಪುರ | ಮಾರ್ಚ್ 8 ರಂದು ಮುಕ್ತ ಸಂಚಾರ ಪುನರಾರಂಭ; ಮೈತೇಯಿ ಪರ; ಕುಕಿಗಳಿಂದ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...