Homeಕರ್ನಾಟಕKarnataka Budget 2025-26 | ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ ಕ್ಷೇತ್ರದ ಘೋಷಣೆಗಳು ; ಸಂಕ್ಷಿಪ್ತ ವಿವರ

Karnataka Budget 2025-26 | ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ ಕ್ಷೇತ್ರದ ಘೋಷಣೆಗಳು ; ಸಂಕ್ಷಿಪ್ತ ವಿವರ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಇಂದು (ಮಾ.7) ವಿಧಾನಸಭೆಯಲ್ಲಿ ಮಂಡಿಸಿದರು. ಈ ಬಾರಿ ರೂ. 4 ಲಕ್ಷ  ಕೋಟಿ (409549) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ.

ಈ ಬಾರಿಯ ಬಜೆಟ್‌ನಲ್ಲಿ ಪಶುಸಂಗೋಪನೆ, ಮೀನುಗಾರಿಗೆ ಮತ್ತು ಸಹಕಾರ ಕ್ಷೇತ್ರಗಳಿಗೆ ಸಂಬಂಧಿಸಿದಂತೆ ಮಾಡಿರುವ ಘೋಷಣೆಗಳು ಇಲ್ಲಿವೆ..  

ಪಶು ಸಂಗೋಪನೆ

  • ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ ಜಾರಿಗೆ ತಂದಿರುವ ‘ಅನುಗ್ರಹ’ ಯೋಜನೆಯಡಿ ಹಸು, ಎಮ್ಮೆ ಮತ್ತು ಎತ್ತುಗಳಿಗೆ ಪ್ರಸ್ತುತ ನೀಡಲಾಗುತ್ತಿರುವ ಪರಿಹಾರದ ಮೊತ್ತ 10,000 ರೂ. ಗಳಿಂದ 15,000 ರೂ. ಗಳಿಗೆ ; ಕುರಿ/ಮೇಕೆಗಳಿಗೆ ನೀಡಲಾಗುತ್ತಿರುವ ಮೊತ್ತ 5,000 ರೂ. ಗಳಿಂದ 7,500 ರೂ. ಗಳಿಗೆ ಹಾಗೂ 3-6 ತಿಂಗಳ ಕುರಿ/ಮೇಕೆ ಮರಿಗಳಿಗೆ ನೀಡಲಾಗುತ್ತಿರುವ ಮೊತ್ತ 3,500 ರೂ.ಗಳಿಂದ 5,000 ರೂ.ಗಳಿಗೆ ಹೆಚ್ಚಳ.
  • 2025-26ನೇ ಸಾಲಿನಲ್ಲಿ 50 ನೂತನ ಪಶು ಚಿಕಿತ್ಸಾಲಯಗಳನ್ನು ಪ್ರಾರಂಭ
  • ನಬಾರ್ಡ್‌ ಸಹಯೋಗದೊಂದಿಗೆ 2025-26ನೇ ಸಾಲಿನಲ್ಲಿ 100 ಪಶು ವೈದ್ಯಕೀಯ ಸಂಸ್ಥೆಗಳ ನೂತನ ಕಟ್ಟಡಗಳ ನಿರ್ಮಾಣ
  • ಅಮೃತ್‌ ಮಹಲ್‌ ಕಾವಲುಗಳಲ್ಲಿನ ಭೂ ಒತ್ತುವರಿ ತಡೆಯಲು ಹಾಗೂ ಅಮೃತ್‌ ಮಹಲ್‌ ರಾಸುಗಳಿಗೆ ಮೇವು ಲಭ್ಯವಾಗುವಂತೆ ಮಾಡಲು, ಅರಣ್ಯ ಇಲಾಖೆ ಹಾಗೂ ನರೇಗಾ ಸಹಯೋಗದೊಂದಿಗೆ ಮೇವಿನ ಮರಗಳ ನೆಡುತೋಪು ಅಭಿವೃದ್ಧಿ
  • ರಾಜ್ಯದ ಹೆಮ್ಮೆಯ ದೇಶಿ ದನದ ತಳಿಗಳಾದ ಹಳ್ಳಿಕಾರ್‌, ಕಿಲಾರಿ, ಅಮೃತ್‌ ಮಹಲ್‌ ಹಾಗೂ ಬಂಡೂರು ಕುರಿ ತಳಿಯ ಸಂರಕ್ಷಣೆ ಹಾಗೂ ಅಭಿವೃದ್ಧಿಗಾಗಿ 2 ಕೋಟಿ ರೂ. ಒದಗಿಸುವುದು.
  • ಆಧುನಿಕ ಕುರಿ ಸಾಕಾಣಿಕೆ ಪದ್ಧತಿಗಳು ಮತ್ತು ನೈಸರ್ಗಿಕ ವಿಕೋಪಗಳ ಸಂದರ್ಭದಲ್ಲಿ ಅನುಸರಿಸಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ವಲಸೆ ಕುರಿಗಾರರಿಗೆ ಕರ್ನಾಟಕ ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಸಹಯೋಗದಲ್ಲಿ ತರಬೇತಿ.

ಮೀನುಗಾರಿಕೆ : 

  • ರಾಜ್ಯದ ಮತ್ಸ್ಯ ಸಂಪತ್ತಿನ ರಕ್ಷಣೆಯೊಂದಿಗೆ ಸುಸ್ಥಿರ ಮೀನುಗಾರಿಕೆ ಹಾಗೂ ಮೀನುಗಾರರ ಆರ್ಥಿಕ ಅಭಿವೃದ್ಧಿಗೆ ಉತ್ತೇಜನ ನೀಡಲು ಮೀನುಗಾರಿಕಾ ನೀತಿ ರೂಪಿಸುವುದು.ಮಂಗಳೂರಿನಲ್ಲಿರುವ ಮೀನುಗಾರಿಕೆ ಕಾಲೇಜಿಗೆ ಪ್ರಸ್ತುತ ನಿಗದಿಪಡಿಸಿರುವ ವಿದ್ಯಾರ್ಥಿಗಳ ಸಂಖ್ಯಾಬಲವನ್ನು ದ್ವಿಗುಣಗೊಳಿಸಲಾಗುವುದು.
  • ಕರಾವಳಿ ಜಿಲ್ಲೆಗಳಲ್ಲಿನ ಮೀನುಗಾರಿಕೆ ಕೊಂಡಿ ರಸ್ತೆಗಳನ್ನು ನಬಾರ್ಡ್‌ ಸಹಯೋಗದೊಂದಿಗೆ ಅಭಿವೃದ್ಧಿಪಡಿಸಲು 30 ಕೋಟಿ ರೂ.
  • ಪರಿಶಿಷ್ಟ ಜಾತಿ /ಪರಿಶಿಷ್ಟ ಪಂಗಡದ ಆಯ್ದ ಮೀನು ಮಾರಾಟಗಾರರಿಗೆ ನಾಲ್ಕು ಚಕ್ರ ವಾಹನ ಖರೀದಿಸಲು ಶೇ.50ರಷ್ಟು ಅಥವಾ ಗರಿಷ್ಠ 3 ಲಕ್ಷ ರೂ. ಆರ್ಥಿಕ ನೆರವು ನೀಡುವುದು.
  • ರಾಜ್ಯದಲ್ಲಿ ನೋಂದಣಿಯಾಗಿರುವ ಮೋಟರೀಕೃತ ದೋಣಿಗಳಲ್ಲಿ 15 ವರ್ಷ ಕಾಲಾವಧಿ ಮೀರಿರುವ ಹಳೆಯ ಇಂಜಿನ್‌ಗಳನ್ನು ಬದಲಾಯಿಸಿ ಹೊಸ ಇಂಜಿನ್‌ ಖರೀದಿಸಲು ಶೇ.50 ರಷ್ಟು ಒಂದು ಲಕ್ಷ ರೂ. ಮಿತಿಗೊಳಪಟ್ಟು ಸಹಾಯಧನ.
  • ಪ್ರವಾಸಿಗರಿಗೆ ಶುಚಿ-ರುಚಿಯಾದ ಪೌಷ್ಟಿಕ ಮೀನು ಖಾದ್ಯಗಳನ್ನು ಒದಗಿಸಲು ಮೈಸೂರಿನಲ್ಲಿ ಹೈ-ಟೆಕ್‌ ಮತ್ಸ್ಯದರ್ಶಿನಿ ಪ್ರಾರಂಭ
  • ಮಲ್ಪೆ ಮೀನುಗಾರಿಕಾ ಬಂದರಿನಲ್ಲಿ ವಾಹನ ದಟ್ಟಣೆಯನ್ನು ನಿರ್ವಹಿಸಲು ‘ಮಲ್ಟಿ-ಲೆವೆಲ್‌ ಪಾರ್ಕಿಂಗ್‌’ ವ್ಯವಸ್ಥೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ನಿರ್ಮಿಸುವುದು.
  • ಆಳ ಸಮುದ್ರ ಮೀನುಗಾರಿಕೆಯನ್ನು ಪ್ರೋತ್ಸಾಹಿಸಲು ಪ್ರಸ್ತುತ ಇರುವ ಮೀನುಗಾರಿಕೆ ದೋಣಿಗಳ ಉದ್ದದ ಮಿತಿಯನ್ನು ಸಡಿಲಿಸಲು ಕ್ರಮವಹಿಸುವುದು.

ಸಹಕಾರ :

  • ಪ್ರಸಕ್ತ ಸಾಲಿನಲ್ಲಿ 37 ಲಕ್ಷ ರೈತರಿಗೆ 28,000 ಕೋಟಿ ರೂಪಾಯಿ ಕೃಷಿ ಸಾಲವನ್ನು ವಿತರಿಸುವ ಗುರಿಯನ್ನು ಹೊಂದಲಾಗಿದೆ.
  • 2023-24ನೇ ಸಾಲಿನ ಬೆಳಗಾವಿ ಅಧಿವೇಶನದಲ್ಲಿ ಘೋಷಿಸಿದಂತೆ, ಡಿಸಿಸಿ (DCC) ಹಾಗೂ ಪಿಕಾರ್ಡ್‌ (PCARD) ಬ್ಯಾಂಕುಗಳಿಗೆ ಸಂಬಂಧಿಸಿದ ಮಧ್ಯಮಾವಧಿ ಮತ್ತು ದೀರ್ಘಾವಧಿ ಸುಸ್ತಿ ಸಾಲಗಳ ಮೇಲಿನ 240 ಕೋಟಿ ರೂ. ಬಡ್ಡಿಯನ್ನು ಮನ್ನಾ ಮಾಡಲಾಗಿದೆ.ಯಶಸ್ವಿನಿ ಯೋಜನೆಯಡಿ ಇಲ್ಲಿಯವರೆಗೆ 700 ನೆಟ್‌ವರ್ಕ್ ಆಸ್ಪತ್ರೆಗಳು ನೋಂದಣಿಯಾಗಿದ್ದು, ಈ ಆಸ್ಪತ್ರೆಗಳಲ್ಲಿ ಇದುವರೆಗೂ ರಾಜ್ಯಾದ್ಯಂತ 59,000 ಫಲಾನುಭವಿಗಳು 103 ಕೋಟಿ ರೂ. ಮೊತ್ತದ ಚಿಕಿತ್ಸೆ ಪಡೆದಿರುತ್ತಾರೆ.
  • ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ (PACS) ಕೇಂದ್ರ ಪುರಸ್ಕೃತ ಗಣಕೀಕರಣ ಯೋಜನೆಯಡಿ 93 ಕೋಟಿ ರೂ.ಗಳಷ್ಟು ಬಿಡುಗಡೆ ಮಾಡಿ, ರಾಜ್ಯದಲ್ಲಿ 110 ಸಂಘಗಳ ಗಣಕೀಕರಣವನ್ನು ಪೂರ್ಣಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, 3,000 ಸಂಘಗಳನ್ನು ಸಂಪೂರ್ಣವಾಗಿ ಗಣಕೀಕರಣಗೊಳಿಸಲು ಉದ್ದೇಶಿಸಲಾಗಿದೆ.
  • ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ತೊಗರಿ ಖರೀದಿಗೆ ಪ್ರತಿ ಕ್ವಿಂಟಾಲ್‌ಗೆ 7,550 ರೂ. ಜೊತೆಗೆ ರಾಜ್ಯ ಸರ್ಕಾರದ ವತಿಯಿಂದ ಹೆಚ್ಚುವರಿ ಪ್ರೋತ್ಸಾಹಧನ 450 ರೂ.ಗಳಂತೆ ಒಟ್ಟು 138 ಕೋಟಿ ರೂ. ನೀಡಲು ತೀರ್ಮಾನಿಸಲಾಗಿದೆ. ಇದರಿಂದ, ತೊಗರಿ ಬೆಳೆಯುವ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ವಿಜಯಪುರ, ಬಾಗಲಕೋಟೆ, ರಾಯಚೂರು, ಕೊಪ್ಪಳ, ಕೋಲಾರ, ಚಿತ್ರದುರ್ಗ ಹಾಗೂ ಚಿಕ್ಕಬಳ್ಳಾಪುರ ಭಾಗದ ರೈತರಿಗೆ ಅನುಕೂಲವಾಗಲಿದೆ.

ಸಹಕಾರ ಇಲಾಖೆಯಲ್ಲಿ ಕಾರ್ಯಕ್ಷಮತೆ, ಪಾರದರ್ಶಕತೆ ಹಾಗೂ ಜನಸ್ನೇಹಿ ಸೇವೆಗಳನ್ನು ನೀಡಲು ಈ ಕೆಳಕಂಡ ಸುಧಾರಣಾ ಕ್ರಮಗಳನ್ನು ಜಾರಿಗೆ ತರುವುದು:

i) ರಾಜ್ಯದ ಎಲ್ಲಾ ನೊಂದಾಯಿತ ಗೃಹ ನಿರ್ಮಾಣ ಸಹಕಾರ ಸಂಘಗಳ ಮಾಹಿತಿಯನ್ನು ಕರ್ನಾಟಕ ರಾಜ್ಯ ಸಹಕಾರ ವಸತಿ ಮಹಾಮಂಡಳದ ವತಿಯಿಂದ ಆನ್‌ಲೈನ್‌ನಲ್ಲಿ ಅಳವಡಿಸುವುದು.

ii) ಠೇವಣಿದಾರರ ಹಿತಾಸಕ್ತಿಯನ್ನು ಕಾಪಾಡಲು ಹಾಗೂ ಅವ್ಯವಹಾರವನ್ನು ತಡೆಯಲು ಸಹಾಯವಾಣಿಯನ್ನು ಪ್ರಾರಂಭಿಸುವುದು.

iii) ಸಹಕಾರ ಸಂಘಗಳ ಲೆಕ್ಕ ಪರಿಶೋಧನೆ ವರದಿಗಳನ್ನು ಡಿಜಿಟಲೀಕರಣಗೊಳಿಸಲಾಗುವುದು.

  • ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಪೂರ್ಣಗೊಂಡಿರುವ ಉಗ್ರಾಣಗಳ ನಿರ್ಮಾಣ ಹಾಗೂ ಮೂಲಸೌಕರ್ಯ ಕಾಮಗಾರಿಗಳನ್ನು ಪೂರ್ಣಗೊಳಿಸಲು 376 ಕೋಟಿ ರೂ. ಸಹಾಯಾನುದಾನವನ್ನು ಹಿಂದಿನ ಆಯವ್ಯಯದಲ್ಲಿ ಘೋಷಿಸಲಾಗಿತ್ತು. ಅದರಂತೆ, ಈಗಾಗಲೇ 329 ಕೋಟಿ ರೂ. ಬಿಡುಗಡೆಗೊಳಿಸಲಾಗಿದೆ. ಪ್ರಸಕ್ತ ಸಾಲಿನಲ್ಲಿ, ಬಾಕಿ ಇರುವ 47 ಕೋಟಿ ರೂ. ಮೊತ್ತವನ್ನು ಒದಗಿಸುವುದು.
  • ರಾಜ್ಯದ ಎಲ್ಲಾ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಲ್ಲಿ ಪರವಾನಿಗೆ ಪಡೆದು ಕಾರ್ಯನಿರ್ವಹಿಸುತ್ತಿರುವ ಶ್ರಮಿಕರು ಮೃತರಾದಾಗ ಅವರ ವಾರಸುದಾರರಿಗೆ ಒಂದು ಲಕ್ಷ ರೂ. ವಿಮಾ ಮೊತ್ತವನ್ನು ನೀಡಲಾಗುತ್ತಿದ್ದು, ಸದರಿ ವಿಮಾ ಮೊತ್ತವನ್ನು ಐದು ಲಕ್ಷ ರೂ.ಗಳಿಗೆ ಹೆಚ್ಚಿಸುವುದು.
  • ಬೆಂಗಳೂರಿನಲ್ಲಿರುವ ಮಾರುಕಟ್ಟೆ ಸಮಿತಿಗಳಲ್ಲಿ ವಾಹನಗಳ ದಟ್ಟಣೆ ಹೆಚ್ಚಾಗಿರುವುದರಿಂದ ಬೆಂಗಳೂರಿನ ಹೊರವಲಯದಲ್ಲಿ ಹೊಸ Satellite Market ಅನ್ನು ಸ್ಥಾಪಿಸುವುದು.
  • ಕೊಪ್ಪಳ ಜಿಲ್ಲೆಯ ಬೂದುಗುಂಪ ಗ್ರಾಮದಲ್ಲಿ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು KKRDB ವತಿಯಿಂದ 25 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಲಭ್ಯಗಳೊಂದಿಗೆ ಸ್ಥಾಪಿಸುವುದು.
  • ಕಲ್ಯಾಣ ಕರ್ನಾಟಕ ಭಾಗದಲ್ಲಿ ಹೈನುಗಾರಿಕೆಯನ್ನು ಉತ್ತೇಜಿಸಲು 10 ಕೋಟಿ ರೂ. ಅನುದಾನವನ್ನು ಪ್ರಥಮ ಹಂತದಲ್ಲಿ ನೀಡುವುದು. ಕಲಬುರಗಿಯಲ್ಲಿ ನೂತನ ಮೆಗಾ ಡೈರಿಯನ್ನು ಪ್ರಾರಂಭಿಸಲು KKRDB ವತಿಯಿಂದ 50 ಕೋಟಿ ರೂ. ಅನುದಾನ ಒದಗಿಸುವುದು.
  • KKRDB ವತಿಯಿಂದ ಕಲಬುರಗಿಯಲ್ಲಿ ಪ್ರಾದೇಶಿಕ ಸಹಕಾರ ಭವನವನ್ನು 10 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸುವುದು.
  • KKRDB ಸಹಯೋಗದಿಂದ ಗ್ರಾಮೀಣ ಉಗ್ರಾಣಗಳನ್ನು 60 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣ ಮಾಡುವುದು.
  • ಕುರಿ ಮತ್ತು ಮೇಕೆ ಸಾಕಾಣಿಕೆದಾರರಿಗೆ ಅನುವಾಗುವಂತೆ ಬೆಂಗಳೂರಿನಲ್ಲಿ ಸುಸಜ್ಜಿತ ಕುರಿ ಮತ್ತು ಮೇಕೆ ಮಾರುಕಟ್ಟೆಯನ್ನು ಪ್ರಾರಂಭಿಸುವುದು.
  • ಚಿಕ್ಕಬಳ್ಳಾಪುರದಲ್ಲಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ವತಿಯಿಂದ ಅಂತಾರಾಷ್ಟ್ರೀಯ ಮಟ್ಟದ ಹೈಟೆಕ್‌ ಹೂವಿನ ಮಾರುಕಟ್ಟೆಯನ್ನು ಹಾಗೂ ಕೆ.ಜಿ.ಎಫ್‌. ನಲ್ಲಿ ರೈತರ ಆಧುನಿಕ ಮಾರುಕಟ್ಟೆಯನ್ನು ಸಾರ್ವಜನಿಕ-ಖಾಸಗಿ ಸಹಭಾಗಿತ್ವದಲ್ಲಿ ಸ್ಥಾಪಿಸುವುದು.

Karnataka Budget 2025-26 | ಕೃಷಿ, ತೋಟಗಾರಿಕೆ ಕ್ಷೇತ್ರದ ಘೋಷಣೆಗಳು; ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಠಾಣೆಗೆ ನುಸುಳುತ್ತೇನೆ ಎಂದ ಪ್ರತಾಪ್ ಸಿಂಹನಿಗೆ ಪರಪ್ಪನ ಜೈಲಿಗೂ ರೆಡಿಯಾಗಿ ಎಂದ ಸಚಿವ ಪ್ರಿಯಾಂಕ್ ಖರ್ಗೆ

ಮಾಜಿ ಸಂಸದ ಪ್ರತಾಪ್ ಸಿಂಹ ಅವರನ್ನು ನೇರವಾಗಿ ಗುರಿಯಾಗಿಸಿಕೊಂಡು ಸಚಿವ ಪ್ರಿಯಾಂಕ್ ಖರ್ಗೆ ತೀವ್ರ ವಾಗ್ದಾಳಿ ನಡೆಸಿದ್ದು, ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸುವ ಅಥವಾ ಅವರಿಗೆ ಬೆದರಿಕೆ ಹಾಕುವ ರೀತಿಯಲ್ಲಿ ಮಾತನಾಡುವವರ ವಿರುದ್ಧ ಸರ್ಕಾರ...

ಆಹಾರ ಪದ್ಧತಿ- ಧಾರ್ಮಿಕ ಆಚರಣೆಗಳನ್ನು ಆರಿಸಿಕೊಳ್ಳಲು ಜನರಿಗೆ ಸ್ವಾತಂತ್ರ್ಯವಿದೆ: ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ

ದುರ್ಗಾ ಪೂಜೆಯ ಸಂದರ್ಭದಲ್ಲಿ ಬಂಗಾಳಿಗಳು ಮಾಂಸಾಹಾರ ಸೇವಿಸುವುದರ ಕುರಿತು ಬಾಗೇಶ್ವರ ಬಾಬಾ ಎಂದೇ ಜನಪ್ರಿಯರಾಗಿರುವ ಧೀರೇಂದ್ರ ಶಾಸ್ತ್ರಿ ಅವರ ಹೇಳಿಕೆಗೆ ಪರೋಕ್ಷವಾಗಿ ಪ್ರತಿಕ್ರಿಯಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಸುವೇಂದು ಅಧಿಕಾರಿ, "ತಮ್ಮ ಆಹಾರ...

ಕರ್ನಾಟಕದಲ್ಲಿ 2 ಗಂಟೆಗಳ ಬೃಹತ್ ಕಾರ್ಯಾಚರಣೆ: 800 ಬಾಲಕಾರ್ಮಿಕರ ರಕ್ಷಣೆ; ಬೆಂಗಳೂರಿನಲ್ಲೇ 503 ಮಕ್ಕಳು

ಬಾಲಕಾರ್ಮಿಕ ಪದ್ಧತಿಯ ವಿರುದ್ಧ ಕರ್ನಾಟಕ ಪೊಲೀಸರು ಹಾಗೂ ಕಾರ್ಮಿಕ ಇಲಾಖೆ ಶನಿವಾರ ರಾಜ್ಯಾದ್ಯಂತ ನಡೆಸಿದ ವಿಶೇಷ ಕಾರ್ಯಾಚರಣೆಯಲ್ಲಿ 800 ಮಕ್ಕಳನ್ನು ರಕ್ಷಿಸಲಾಗಿದೆ. ರಾಜ್ಯದ 962 ಪೊಲೀಸ್ ಠಾಣೆಗಳು ಹಾಗೂ ಘಟಕಗಳ ವ್ಯಾಪ್ತಿಯಲ್ಲಿ 16,951...

‘ದಿ ಹಿಂದೂ’, ‘ದೈನಿಕ್ ಭಾಸ್ಕರ್’ ಗಳಲ್ಲಿ ಅತ್ಯಾಚಾರ ಅಪರಾಧಿ ಗುರ್ಮೀತ್ ರಾಮ್ ರಹೀಮ್ ಸಮರ್ಥಿಸುವ ಜಾಹೀರಾತು: ಓದುಗರಲ್ಲಿ ಕ್ಷಮೆಯಾಚಿಸಿದ ‘ದಿ ಹಿಂದೂ’

ನವದೆಹಲಿ: ಇಬ್ಬರು ಮಹಿಳಾ ಶಿಷ್ಯೆಯರ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಶಿಕ್ಷೆಗೊಳಗಾಗಿರುವ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಮ್ ಸಿಂಗ್ ಅವರನ್ನು ಸಮರ್ಥಿಸುವ ರೀತಿಯಲ್ಲಿ ಪೂರ್ಣ ಪುಟದ ಮುಖಪುಟ ಜಾಹೀರಾತು...

ದ್ವಿ-ರಾಷ್ಟ್ರ ಪರಿಹಾರ : ಬ್ರಿಕ್ಸ್ ನಿಲುವು ಸ್ವಾಗತಿಸಿದ ಪ್ಯಾಲೆಸ್ತೀನ್

ಪ್ಯಾಲೆಸ್ತೀನ್-ಇಸ್ರೇಲ್ ವಿವಾದಕ್ಕೆ ದ್ವಿ-ರಾಷ್ಟ್ರ ಪರಿಹಾರವನ್ನು ಕಂಡುಕೊಳ್ಳುವಂತೆ ಕರೆ ನೀಡಿರುವ ಬ್ರಿಕ್ಸ್ (BRICS) ಜಂಟಿ ಘೋಷಣೆಯನ್ನು ಪ್ಯಾಲೆಸ್ತೀನ್ ವಿದೇಶಾಂಗ ಮತ್ತು ವಲಸಿಗರ ಸಚಿವಾಲಯವು ಮುಕ್ತಕಂಠದಿಂದ ಸ್ವಾಗತಿಸಿದೆ. ಬ್ರಿಕ್ಸ್‌ ಶೃಂಗಸಭೆ, ಜೆರುಸಲೆಮ್ ಸೇರಿದಂತೆ ಪ್ಯಾಲೆಸ್ತೀನಿಯರನ್ನು ಅವರದೇ ಭೂಮಿಯಿಂದ...

ತೆಲಂಗಾಣ| ಅಂತರ್ಜಾತಿ ವಿವಾಹಕ್ಕೆ ಯುವತಿ ಕುಟುಂಬದ ವಿರೋಧ; ದಲಿತ ಯುವಕನ ಮನೆ ಧ್ವಂಸ

ಹೈದರಾಬಾದ್ ಸಮೀಪದ ಗದ್ವಾಲ್ ಜಿಲ್ಲೆಯ ರೆಪಲ್ಲೆ ಗ್ರಾಮದಲ್ಲಿ ಅಂತರ್ಜಾತಿ ವಿವಾಹದ ಹಿನ್ನೆಲೆಯಲ್ಲಿ ದಲಿತ ಯುವಕನ ಮನೆಯನ್ನು ಧ್ವಂಸಗೊಳಿಸಿರುವ ಘಟನೆಗೆ ಸಂಬಂಧಿಸಿದಂತೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ದಲಿತ ಬಹುಜನ ಫ್ರಂಟ್, ಹ್ಯೂಮನ್...

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...