Homeಕರ್ನಾಟಕKarnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

Karnataka Budget 2025-26 | ಶಿಕ್ಷಣ ಕ್ಷೇತ್ರದ ಘೋಷಣೆಗಳೇನು? ಇಲ್ಲಿದೆ ಸಂಪೂರ್ಣ ಮಾಹಿತಿ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಿದ 2025-26ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಪ್ರಾಥಮಿಕ, ಪ್ರೌಢ ಮತ್ತು ಉನ್ನತ ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಮಾಡಿರುವ ಘೋಷಣೆಗಳು ಇಲ್ಲಿವೆ…

ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ 

  • ಕರ್ನಾಟಕ ಪಬ್ಲಿಕ್‌ ಶಾಲೆಗಳ ವಿಸ್ತರಣೆ. ಏಷಿಯನ್‌ ಡೆವಲಪ್‌ಮೆಂಟ್‌ ಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ 500 ಹೊಸ ಕರ್ನಾಟಕ ಪಬ್ಲಿಕ್‌ ಶಾಲೆಗಳ ಪ್ರಾರಂಭ.
  • ಶಾಲಾ ಮಕ್ಕಳ ಅಪೌಷ್ಟಿಕತೆ ನಿವಾರಿಸುವ ನಿಟ್ಟಿನಲ್ಲಿ ಪ್ರಸ್ತುತ 53 ಲಕ್ಷ ಮಕ್ಕಳಿಗೆ ವಾರದಲ್ಲಿ ಎರಡು ದಿನ ವಿತರಿಸಲಾಗುತ್ತಿರುವ ಮೊಟ್ಟೆ/ಬಾಳೆಹಣ್ಣನ್ನು ಅಜೀಮ್‌ ಪ್ರೇಮ್‌ಜಿ ಫೌಂಡೇಶನ್‌ ಸಹಯೋಗದೊಂದಿಗೆ 1,500 ಕೋಟಿ ರೂ. ವೆಚ್ಚದಲ್ಲಿ ವಾರದಲ್ಲಿ ಆರು ದಿನಕ್ಕೆ ವಿಸ್ತರಿಸಲಾಗಿದೆ. ಈ ಯೋಜನೆಯನ್ನು 2025-26ನೇ ಸಾಲಿನಲ್ಲಿಯೂ ಮುಂದುವರೆಸುವುದು.
  • ಶಾಲಾ ಮಕ್ಕಳಿಗೆ ಶ್ರೀ ಸತ್ಯ ಸಾಯಿ ಅನ್ನಪೂರ್ಣ ಟ್ರಸ್ಟ್‌ ವತಿಯಿಂದ ಪ್ರಸ್ತುತ ವಾರದಲ್ಲಿ ಮೂರು ದಿನ ಸಾಯಿ ಶ್ಯೂರ್‌ ರಾಗಿ ಹೆಲ್ತ್‌ ಮಿಕ್ಸ್‌ ಪುಡಿಯನ್ನು ಬಿಸಿ ಹಾಲಿನೊಂದಿಗೆ ಮಿಶ್ರಣ ಮಾಡಿ ವಿತರಿಸಲಾಗುತ್ತಿದೆ. ಈ ಕಾರ್ಯಕ್ರಮವನ್ನು ವಾರದ ಐದು ದಿನಗಳಿಗೆ ವಿಸ್ತರಿಸುವುದು. ಒಟ್ಟಾರೆ 100 ಕೋಟಿ ರೂ. ವೆಚ್ಚದ ಈ ಯೋಜನೆಯ ಶೇ.25 ರಷ್ಟು ವೆಚ್ಚವನ್ನು ರಾಜ್ಯ ಸರ್ಕಾರದಿಂದ ಭರಿಸುವುದು.
  • ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರು ಮತ್ತು ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಪ್ರಸ್ತುತ ನೀಡಲಾಗುತ್ತಿರುವ ಮಾಸಿಕ ಗೌರವಧನವನ್ನು ತಲಾ 2,000 ರೂ. ಹೆಚ್ಚಿಸುವುದು.
  • ಸರ್ಕಾರಿ ಶಾಲೆಗಳಲ್ಲಿ ಬಿಸಿಯೂಟ ತಯಾರಿಸುವ ಸಿಬ್ಬಂದಿಗೆ ನೀಡುತ್ತಿರುವ ಮಾಸಿಕ ಗೌರವಧನವನ್ನು ತಲಾ 1,000 ರೂ. ಹೆಚ್ಚಿಸುವುದು.
  • ರಾಜ್ಯದ ಅರ್ಹ 100 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳನ್ನು ಪ್ರೌಢ ಶಾಲೆಗಳನ್ನಾಗಿ ಹಾಗೂ 50 ಪ್ರೌಢಶಾಲೆಗಳನ್ನು ಪದವಿ ಪೂರ್ವ ಕಾಲೇಜುಗಳನ್ನಾಗಿ ಉನ್ನತೀಕರಿಸುವುದು.

LKG ಯಿಂದ ದ್ವಿತೀಯ ಪಿಯುಸಿವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳುವುದು :

i) ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,
ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸುವುದು.

ii) ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

iii) ʻಗಣಿತ ಗಣಕʼ ಕಾರ್ಯಕ್ರಮದಡಿ 3 ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ಫೋನ್‌ ಮೂಲಕ ವೈಯಕ್ತಿಕ ಬೋಧನೆಯೊಂದಿಗೆ ಬುನಾದಿ ಗಣಿತ ಕೌಶಲ್ಯವನ್ನು ಅಭಿವೃದ್ಧಿಪಡಿಸಿ ರಾಜ್ಯಾದ್ಯಂತ ವಿಸ್ತರಿಸುವುದು.

iv) ʻಓದು ಕರ್ನಾಟಕʼ ಯೋಜನೆಯಡಿ 4 ಮತ್ತು 5ನೇ ತರಗತಿ ವಿದ್ಯಾರ್ಥಿಗಳಿಗೆ ಬುನಾದಿ ಸಾಕ್ಷರತೆ ಹಾಗೂ ಸಂಖ್ಯಾಜ್ಞಾನದ ಕೌಶಲ್ಯಗಳನ್ನು ಅಭಿವೃದ್ಧಿಪಡಿಸುವುದು.

v) ಸರ್ಕಾರಿ ಶಾಲೆಗಳಲ್ಲಿ ಅತೀ ಕಡಿಮೆ ಕಲಿಕಾ ಸ್ತರದಲ್ಲಿರುವ 6 ರಿಂದ 10ನೇ ತರಗತಿ ವಿದ್ಯಾರ್ಥಿಗಳ ಕಲಿಕಾ ಸಾಮರ್ಥ್ಯ ಹೆಚ್ಚಿಸುವ ʻಮರುಸಿಂಚನʼ ಕಾರ್ಯಕ್ರಮವನ್ನು ರಾಜ್ಯಾದ್ಯಂತ ವಿಸ್ತರಿಸುವುದು.

vi) ಕನ್ನಡ ಮತ್ತು ಆಂಗ್ಲ ಭಾಷೆಯನ್ನು ಆತ್ಮವಿಶ್ವಾಸದಿಂದ ಓದಲು ಹಾಗೂ ಗಣಿತದ ಆರಂಭಿಕ ಸಾಮರ್ಥ್ಯಗಳನ್ನು ಗಳಿಸಲು Ek-Step ಸಂಸ್ಥೆಯ ಸಹಯೋಗದೊಂದಿಗೆ AI ಆಧಾರಿತ ʻಕಲಿಕಾದೀಪʼ ಕಾರ್ಯಕ್ರಮವನ್ನು 2,000 ಶಾಲೆಗಳಿಗೆ ವಿಸ್ತರಿಸುವುದು.

vii) ʻಜ್ಞಾನಸೇತುʼ ಕಾರ್ಯಕ್ರಮದಡಿ ಸರ್ಕಾರಿ ಶಾಲೆಗಳಲ್ಲಿ ವಿಜ್ಞಾನ ಮತ್ತು ಗಣಿತ ವಿಷಯಗಳ ಬೋಧನಾ ವಿಧಾನದಲ್ಲಿ ನಾವೀನ್ಯತೆ ಅಳವಡಿಸಿ, ಖಾನ್‌ ಅಕಾಡೆಮಿ ಸಹಯೋಗದಲ್ಲಿ ಯೋಜನೆ ರೂಪಿಸುವುದು. ರಾಜ್ಯದ 5,೦೦೦ ಸರ್ಕಾರಿ ಶಾಲೆಗಳ 20 ಲಕ್ಷ ವಿದ್ಯಾರ್ಥಿಗಳು ಹಾಗೂ 15,000 ಶಿಕ್ಷಕರು ಈ ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

viii) ಸರ್ಕಾರಿ ಶಾಲೆಗಳ ವಿದ್ಯಾರ್ಥಿಗಳಿಗೆ ಕೋಡಿಂಗ್‌ ಕಲಿಕೆ ಪರಿಚಯಿಸಲು ಅಗಸ್ತ್ಯ ಫೌಂಡೇಶನ್‌ ಸಹಯೋಗದೊಂದಿಗೆ ಐ-ಕೋಡ್‌ ಲ್ಯಾಬ್‌ ಸ್ಥಾಪಿಸುವುದು. ಈ ನಿಟ್ಟಿನಲ್ಲಿ ಪ್ರಸಕ್ತ ವರ್ಷ ICT ಸೌಲಭ್ಯವಿರುವ ಆಯ್ದ 63 ಶಾಲೆಗಳನ್ನು ಹಬ್‌ಗಳೆಂದು ಪರಿಗಣಿಸಿ 756 ಸ್ಪೋಕ್‌ ಶಾಲೆಗಳಿಗೆ ಅನುಕೂಲ ಕಲ್ಪಿಸುವುದು.

ix) ʻವಿದ್ಯಾವಿಜೇತʼ ಕಾರ್ಯಕ್ರಮದಡಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳ 25,000 ವಿದ್ಯಾರ್ಥಿಗಳಿಗೆ CET/NEET/JEE ತರಬೇತಿ ನೀಡಲಾಗಿದ್ದು, ಸದರಿ ಕಾರ್ಯಕ್ರಮವನ್ನು ಮುಂದುವರೆಸಲು 5 ಕೋಟಿ ರೂ. ಒದಗಿಸುವುದು.

  1. ʻನಿರಂತರʼ ಕಾರ್ಯಕ್ರಮದಡಿ Face Recognition ತಂತ್ರಜ್ಞಾನದ ಮೂಲಕ ಮಕ್ಕಳ ಹಾಜರಾತಿಯನ್ನು ಖಚಿತಪಡಿಸುವ ವ್ಯವಸ್ಥೆಯನ್ನು ಜಾರಿಗೊಳಿಸುವುದು.
  2. ವಿದ್ಯಾರ್ಥಿಗಳಲ್ಲಿ ಮಾತೃಭಾಷೆಯ ಜೊತೆಗೆ ಆಂಗ್ಲಭಾಷೆಯ ಕೌಶಲ್ಯ ಬೆಳೆಸಲು ರಾಜ್ಯದ 4,000 ಸರ್ಕಾರಿ ಶಾಲೆಗಳಲ್ಲಿ ದ್ವಿಭಾಷಾ ವಿಭಾಗವನ್ನು ಪ್ರಾರಂಭಿಸುವುದು.
  3. ರಾಜ್ಯದ 2,710 ಸರ್ಕಾರಿ ಪ್ರೌಢಶಾಲೆಗಳಲ್ಲಿ ಈಗಾಗಲೇ ಕಂಪ್ಯೂಟರ್‌ ಮತ್ತು ವಿಜ್ಞಾನ ಪ್ರಯೋಗಾಲಯಗಳನ್ನು ಸ್ಥಾಪಿಸಲಾಗಿದ್ದು, ಪ್ರಸಕ್ತ ಸಾಲಿನಲ್ಲಿ ಇನ್ನೂ 500 ಶಾಲೆಗಳಿಗೆ ಈ ಸೌಲಭ್ಯ ವಿಸ್ತರಿಸುವುದು.
  4. ಪ್ರೌಢಶಾಲಾ / ಪದವಿ ಪೂರ್ವ ಕಾಲೇಜು ಹಂತದಲ್ಲಿಯೇ ವಿದ್ಯಾರ್ಥಿಗಳಿಗೆ ಕೌಶಲ್ಯ ತರಬೇತಿ ನೀಡಲು Skill at ಕಾರ್ಯಕ್ರಮ ರೂಪಿಸಲಾಗಿದೆ. ಇದರಡಿ, ಆಯ್ದ 7,500 ವಿದ್ಯಾರ್ಥಿಗಳಿಗೆ ಉನ್ನತೀಕರಿಸಿದ 150 ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗಳಲ್ಲಿ ತರಬೇತಿ ನೀಡುವುದು.
  5. ಸರ್ಕಾರಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಲ್ಲಿ ಹೆಚ್ಚುವರಿ ಕೊಠಡಿ, ಶೌಚಾಲಯಗಳ ನಿರ್ಮಾಣ ಮತ್ತು ದುರಸ್ತಿ ಕಾರ್ಯಗಳಿಗೆ 725 ಕೋಟಿ ರೂ. ಹಾಗೂ ಅಗತ್ಯ ಪೀಠೋಪಕರಣಗಳನ್ನು ಒದಗಿಸಲು 50 ಕೋಟಿ ರೂ. ನೀಡಲಾಗಿದೆ.
  6. ಮಧ್ಯಾಹ್ನ ಬಿಸಿಯೂಟ ಯೋಜನೆಯಡಿ ರಾಜ್ಯದ 16,347 ಶಾಲೆಗಳ ಅಡುಗೆಮನೆ ಆಧುನೀಕರಣ ಕಾರ್ಯ ಮತ್ತು ಹೊಸ ಪಾತ್ರೆ ಪರಿಕರಗಳನ್ನು ಒದಗಿಸಲು 46 ಕೋಟಿ ರೂ. ವೆಚ್ಚ ಮಾಡುವುದು.
  7. ಕಲ್ಯಾಣ ಕರ್ನಾಟಕ ಭಾಗದಲ್ಲಿ ಅಕ್ಷರ ಆವಿಷ್ಕಾರ ಯೋಜನೆ ಅಡಿ 2೦೦ ಕೋಟಿ ರೂ. ವೆಚ್ಚದಲ್ಲಿ ಆಯ್ದ 50 ಶಾಲೆಗಳನ್ನು ಸುಸಜ್ಜಿತ ಕೆ.ಪಿ.ಎಸ್.‌ ಶಾಲೆಗಳನ್ನಾಗಿ ಉನ್ನತೀಕರಿಸಲಾಗುವುದು.
  8. ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಾಲಿ ಇರುವ 5,267 ಶಿಕ್ಷಕರ ಹುದ್ದೆಗಳನ್ನು ಭರ್ತಿ ಮಾಡುವುದು. ಮುಂದುವರೆದು, ಇಲಾಖೆಯಲ್ಲಿ ಇನ್ನೂ ಖಾಲಿ ಇರುವ ಶಿಕ್ಷಕರ ಹುದ್ದೆಗಳನ್ನು ತರ್ಕಬದ್ಧಗೊಳಿಸಿ 5,000 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸುವುದು.
  9. ದಕ್ಷಿಣ ಕನ್ನಡ ಜಿಲ್ಲೆಯ ಪಿಲಿಕುಳದಲ್ಲಿ ಭಾರತ್ ಸ್ಕೌಟ್ಸ್‌ ಮತ್ತು ಗೈಡ್ಸ್‌ ಅಂತಾರಾಷ್ಟ್ರೀಯ ಯುವಕರ ತರಬೇತಿ ಕೇಂದ್ರದ ಅಭಿವೃದ್ಧಿಗಾಗಿ ಎರಡು ಕೋಟಿ ರೂ. ಒದಗಿಸಲಾಗಿದೆ.

ಉನ್ನತ ಶಿಕ್ಷಣ : 

  • ಗುಣಮಟ್ಟದ ಉನ್ನತ ಶಿಕ್ಷಣವನ್ನು ಒದಗಿಸಲು ರಾಜ್ಯದ ಪ್ರಥಮ ದರ್ಜೆ ಕಾಲೇಜುಗಳ ಬಲವರ್ಧನೆ, ಶಿಕ್ಷಣ ಸಂ‍ಸ್ಥೆಗಳಲ್ಲಿ ಉತ್ಕೃಷ್ಟತಾ ಕೇಂದ್ರಗಳ (Centre of Excellence) ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಉದ್ದೇಶಕ್ಕಾಗಿ ಮುಂದಿನ ನಾಲ್ಕು ವರ್ಷಗಳಲ್ಲಿ ವಿಶ್ವಬ್ಯಾಂಕ್‌ ನೆರವಿನೊಂದಿಗೆ 2,500 ಕೋಟಿ ರೂ. ಯೋಜನೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.
  • ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ|| ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸುವುದು.
  • ಮಹಿಳಾ ಉನ್ನತ ಶಿಕ್ಷಣದ ಬಲವರ್ಧನೆಗಾಗಿ 31 ಮಹಿಳಾ ಕಾಲೇಜುಗಳನ್ನು ಹಿಂದಿನ ವರ್ಷದಲ್ಲಿ ಉನ್ನತೀಕರಿಸಲು ಕ್ರಮ ಕೈಗೊಂಡಿದ್ದು, ಉಳಿದ 26 ಕಾಲೇಜುಗಳ ಮೂಲಸೌಕರ್ಯಗಳನ್ನು ಅಭಿವೃದ್ಧಿಪಡಿಸಲು 26 ಕೋಟಿ ರೂ. ಒದಗಿಸುವುದು.
  • ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್‌ ಕಾಲೇಜುಗಳು ಮತ್ತು ಪಾಲಿಟೆಕ್ನಿಕ್‌ಗಳಲ್ಲಿ ಖಾಲಿಯಿರುವ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕ್ರಮವಹಿಸುವುದು.
  • ರಾಜ್ಯದ ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜು, ಪಾಲಿಟೆಕ್ನಿಕ್‌ ಸಂಸ್ಥೆಗಳು ಹಾಗೂ ಪದವಿ ಕಾಲೇಜುಗಳಿಗೆ ಒಟ್ಟಾರೆ 275 ಕೋಟಿ ರೂ. ವೆಚ್ಚದಲ್ಲಿ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು.
  • ಹೊಸದಾಗಿ ಪ್ರಾರಂಭಿಸಲಾದ ಪಾಲಿಟೆಕ್ನಿಕ್‌ ಹಾಗೂ ಇಂಜಿನಿಯರಿಂಗ್‌ ಕಾಲೇಜುಗಳಿಗೆ 10 ಕೋಟಿ ರೂ. ವೆಚ್ಚದಲ್ಲಿ ಪೀಠೋಪಕರಣಗಳು, ಉಪಕರಣಗಳು, ಕಂಪ್ಯೂಟರ್‌ಗಳು ಹಾಗೂ ಪುಸ್ತಕಗಳನ್ನು ಒದಗಿಸುವುದು.
  • ರಾಜ್ಯದ ಸರ್ಕಾರಿ ಪದವಿ ಕಾಲೇಜುಗಳಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿನಿಯರಿಗೆ ಇಂಗ್ಲೆಂಡ್‌ ದೇಶದ ಪ್ರತಿಷ್ಠಿತ ವಿಶ್ವವಿದ್ಯಾಲಯಗಳಲ್ಲಿ Chevening Karnataka Masters Fellowship ನೆರವಿನೊಂದಿಗೆ ಒಂದು ವರ್ಷದ ಸ್ನಾತಕೋತ್ತರ ಪದವಿ ಪಡೆಯುವ ಯೋಜನೆ ರೂಪಿಸಲಾಗಿದೆ.
  • ರಾಜ್ಯದ 16 ಸರ್ಕಾರಿ ಇಂಜಿನಿಯರಿಂಗ್‌ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರಾಯೋಗಿಕ ಜ್ಞಾನದಿಂದ ಉದ್ಯೋಗಾರ್ಹತೆಯನ್ನು ಹೆಚ್ಚಿಸಲು ವೃತ್ತಿಪರ ವಿಷಯ ತಜ್ಞರನ್ನು ʻProfessor of Practiceʼ ರನ್ನಾಗಿ ನೇಮಿಸಲು ಉದ್ದೇಶಿಸಲಾಗಿದೆ.
  • ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸುವುದು.
  • ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು 150 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸುವುದು.
  • ಅಜೀಂ ಪ್ರೇಮ್‌ಜೀ ಫೌಂಡೇಶನ್‌ರವರ ಸಹಯೋಗದೊಂದಿಗೆ ಕಾಲೇಜು ಶಿಕ್ಷಣ ಇಲಾಖೆಯ ಎಲ್ಲಾ ಬೋಧಕರಿಗೆ ಬೋಧನೆ ಮತ್ತು ಕಲಿಕೆಯನ್ನು ಉತ್ತಮಪಡಿಸಲು ಮುಂದಿನ ಮೂರು ವರ್ಷದೊಳಗೆ ಪುನರ್‌ ಮನನ ತರಬೇತಿ ನೀಡುವುದು.
  • ಸರ್ಕಾರಿ ಶಿಕ್ಷಣ ಸಂಸ್ಥೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳಿಗೆ ಮಾರುಕಟ್ಟೆ ಆಧಾರಿತ ಕೌಶಲ್ಯ ತರಬೇತಿಗಳನ್ನು ಒದಗಿಸಿ ಉದ್ಯೋಗಕ್ಕೆ ಸಜ್ಜುಗೊಳಿಸಲು ಕೈಗಾರಿಕೆಗಳ ಸಹಭಾಗಿತ್ವದಲ್ಲಿ Internship Program ಹಾಗೂ ವಿಶೇಷ ಕಾರ್ಪೋರೇಟ್‌ ತರಬೇತಿ ಯೋಜನೆಗಳನ್ನು ರೂಪಿಸುವುದು.
  • KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳುವುದು.
  • ಪ್ರೊ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವವಿದ್ಯಾಲಯದಲ್ಲಿ ಪ್ರಾರಂಭಿಸುವುದು.

Karnataka Budget 2025-26 | ಪಶುಸಂಗೋಪನೆ, ಮೀನುಗಾರಿಕೆ, ಸಹಕಾರ ಕ್ಷೇತ್ರದ ಘೋಷಣೆಗಳು ; ಸಂಕ್ಷಿಪ್ತ ವಿವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....

ವಿಜಯ್ ಹೇಳಿದ ಭ್ರಷ್ಟಾಚಾರ ನಿರ್ಮೂಲನೆ ಮತ್ತು ಟಿವಿಕೆ ಶಾಸಕರ ಕ್ರಿಮಿನಲ್ ಹಿನ್ನೆಲೆ

ಎರಡು ವರ್ಷಗಳ ಹಿಂದೆ ಅಸ್ತಿತ್ವಕ್ಕೆ ಬಂದ ಟಿವಿಕೆ ಎಂಬ ಪಕ್ಷ, 75 ವರ್ಷಗಳ ಅನುಭವಿ ಪಕ್ಷವಾದ ಡಿಎಂಕೆಯನ್ನು ಸೋಲಿಸಿರುವುದು, ಕಳೆದ ಅರವತ್ತು ವರ್ಷಗಳಲ್ಲಿ ಮೊಟ್ಟ ಮೊದಲ ಬಾರಿಗೆ ದ್ರಾವಿಡ ಚಳುವಳಿ ಹಿನ್ನೆಲೆಯ ಪಕ್ಷವನ್ನು...

ಪಶ್ಚಿಮ ಬಂಗಾಳದಲ್ಲಿ ಮೊದಲ ಬಾರಿಗೆ ಬಿಜೆಪಿ ಗೆಲುವು: ಫಲಿತಾಂಶದ ಬಳಿಕ ಭುಗಿಲೆದ್ದ ಹಿಂಸಾಚಾರ, ಕನಿಷ್ಠ ಐದು ಮಂದಿ ಸಾವು

ಕೊಲ್ಕತ್ತಾ, ಮೇ 8: ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಮೊದಲ ಬಾರಿಗೆ ಬೃಹತ್ ಗೆಲುವು ಸಾಧಿಸಿದ್ದು, ರಾಜ್ಯದ 294 ಸ್ಥಾನಗಳ ಪೈಕಿ 206 ಸ್ಥಾನಗಳನ್ನು ಗೆದ್ದು ಮುಂದಿನ...

ಪಂಚರಾಜ್ಯ ಚುನಾವಣೆಯ ಗೋಜಲುಗಳು

ವಿವಾದಾತ್ಮಕ ಮತ್ತು ಸಂವಿಧಾನ ವಿರೋಧಿ ವಿಶೇಷ ತೀವ್ರ ಪರಿಷ್ಕರಣೆ (ಎಸ್ ಐಆರ್) ಅಡಿಯಲ್ಲಿ ನಡೆದ 2026ರ ಐದು ವಿಧಾನಸಭಾ ಚುನಾವಣೆಯಲ್ಲಿ ಮತದಾರರು ಏಕರೂಪದ ಅಭಿಮತವನ್ನು ವ್ಯಕ್ತಪಡಿಸಲಿಲ್ಲ. ಮತ್ತು ಸಂಕೀರ್ಣವಾದ ಫಲಿತಾಂಶ ಕೊಟ್ಟಿದ್ದಾರೆ. ಪಶ್ಚಿಮ...

ಪ್ರಜಾಸತ್ತೆಯ ಉಳಿವಿಗೆ ಇದು ನಿರ್ಣಾಯಕ ಕ್ಷಣ : ಮಹತ್ವದ ಕಣ್ಣೋಟ

ಚುನಾವಣೆಗಳು ಮತ್ತು ನ್ಯಾಯಾಲಯಗಳು ಇನ್ನು ಪರಿಹಾರವಲ್ಲ ಎಂಬ ಅಭಿಪ್ರಾಯಕ್ಕೆ ಜನರು ಬರಲು ಈ ಬಾರಿಯ ವಿಧಾನಸಭಾ ಚುನಾವಣೆಗಳೇ ಕಾರಣವಾಗಿವೆ. ಇಂದು 'ಭಾರತದ ಪರಿಕಲ್ಪನೆ'ಗೆ (Idea of India) ಸಂಚಕಾರ ಬಂದಿದೆ. ಪ್ರಜಾಪ್ರಭುತ್ವವು ಕೇವಲ...

ಭಾಗ-2: ಎಸ್‌ಐಆರ್ ಜಾರಿಯಿಂದ ಕಾಂಗ್ರೆಸ್‌ ಕಳೆದುಕೊಳ್ಳುವ ಕ್ಷೇತ್ರಗಳೆಷ್ಟು?

30 ಸಾವಿರದಿಂದ ಒಂದು ಸಾವಿರದ ಒಳಗಿನ ಮತಗಳ ಅಂತರದಿಂದ ಗೆದ್ದಿರುವ ಕರ್ನಾಟಕದ 97 ಕ್ಷೇತ್ರಗಳನ್ನು ನಾವು ಪಟ್ಟಿ ಮಾಡಿದ್ದೇವೆ. ಪಶ್ಚಿಮ ಬಂಗಾಳದಲ್ಲಿ ಆದಂತೆಯೇ ರಾಜ್ಯದಲ್ಲಿ ಚುನಾವಣೆ ಸಮೀಪಿಸಿದಾಗ ಎಸ್‌ಐಆರ್ ಜಾರಿಯಾದರೆ ಬಿಜೆಪಿಗೆ ಅನುಕೂಲವಾಗುವ...