- Advertisement -
- Advertisement -
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಇಂದು (ಮಾ.7) ವಿಧಾನಸಭೆಯಲ್ಲಿ ಮಂಡಿಸಿದರು.
ಈ ಬಾರಿ ರೂ. 4 ಲಕ್ಷ ಕೋಟಿ (409549) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ.
ಬಜೆಟ್ ಮುಖ್ಯಾಂಶಗಳು ಇಲ್ಲಿವೆ :
- ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂಪಾಯಿ ಮೀಸಲು
- ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ‘ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ’ ಎಂಬ ಹೊಸ ಯೋಜನೆ
- ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂಪಾಯಿ ಅನುದಾನ
- ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ‘ಬ್ರ್ಯಾಂಡ್ ಬೆಂಗಳೂರು’ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ
- ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸುಗಮ ಸಾರಿಗೆ ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾಯಿಸಲು ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ
- ರೈತ ಕಲ್ಯಾಣದ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಒಟ್ಟು 51,339 ಕೋಟಿ ರೂಪಾಯಿ ಅನುದಾನ
- 2030ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ
- ಅತಿಹೆಚ್ಚು ಉದ್ಯೋಗ ಸೃಷ್ಟಿಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ
- ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯಧನ
- ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ‘ಬಿ’ ಮತ್ತು ‘ಸಿ’ ವೃಂದಗಳಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ಪ್ರಕ್ರಿಯೆ
- ಎಸ್, ಎಸ್‌ಟಿ ವಸತಿ ನಿಲಯದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವೆಚ್ಚವಾಗಿ ಪ್ರತಿ ತಿಂಗಳು 3,500 ರೂ.
- ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂಪಾಯಿ ಅನುದಾನ.
- ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ.
- ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1, 2ಎ ಮತ್ತು 2ಬಿ (ಮುಸ್ಲಿಂ) ಗೆ ಶೇಕಡಾ 20 ಮೀಸಲಾತಿ
- ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
- ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು
- ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
- ಅತ್ಯಂತ ಹಿಂದುಳಿದ 46 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
- ಇಂಜಿನಿಯರಿಂಗ್ ಮತ್ತು ಮೆಡಿಕಲ್ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
- IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
- 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆ.
- 2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ 14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ಷೆ


