Homeಕರ್ನಾಟಕKarnataka Budget | ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಇಲ್ಲಿದೆ...

Karnataka Budget | ₹4 ಲಕ್ಷ ಕೋಟಿ ಗಾತ್ರದ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ; ಇಲ್ಲಿದೆ ಮುಖ್ಯಾಂಶಗಳು

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 2025-26ನೇ ಸಾಲಿನ ರಾಜ್ಯ ಬಜೆಟ್ ಇಂದು (ಮಾ.7) ವಿಧಾನಸಭೆಯಲ್ಲಿ ಮಂಡಿಸಿದರು.

ಈ ಬಾರಿ ರೂ. 4 ಲಕ್ಷ  ಕೋಟಿ (409549) ಗಾತ್ರದ ಆಯವ್ಯಯ ಮಂಡನೆಯಾಗಿದ್ದು, ಸಿದ್ದರಾಮಯ್ಯ 16ನೇ ಬಜೆಟ್ ಮಂಡಿಸಿದ ದಾಖಲೆ ಬರೆದಿದ್ದಾರೆ.

ಬಜೆಟ್ ಮುಖ್ಯಾಂಶಗಳು ಇಲ್ಲಿವೆ : 

  • ಗ್ಯಾರಂಟಿ ಯೋಜನೆಗಳಿಗಾಗಿ 51,034 ಕೋಟಿ ರೂಪಾಯಿ ಮೀಸಲು
  • ರಾಜ್ಯದ ರಸ್ತೆ ಮತ್ತು ಮೂಲಸೌಕರ್ಯದ ಅಭಿವೃದ್ಧಿಗಾಗಿ ‘ಮುಖ್ಯಮಂತ್ರಿ ಮೂಲಸೌಕರ್ಯ ಅಭಿವೃದ್ಧಿ ಕಾರ್ಯಕ್ರಮ’ ಎಂಬ ಹೊಸ ಯೋಜನೆ
  • ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ವಿಧಾನಸಭಾ ಕ್ಷೇತ್ರಗಳಿಗೂ ರಸ್ತೆ, ಸಣ್ಣ ನೀರಾವರಿ ಹಾಗೂ ಮೂಲಸೌಕರ್ಯ ಒದಗಿಸಲು 8,000 ಕೋಟಿ ರೂಪಾಯಿ ಅನುದಾನ
  • ಬೆಂಗಳೂರು ಮಹಾನಗರದ ಮೂಲಸೌಕರ್ಯ, ಸೇವಾಪೂರೈಕೆ ಹಾಗೂ ಸಂಚಾರ ಸುವ್ಯವಸ್ಥೆಗಳಿಗಾಗಿ ‘ಬ್ರ್ಯಾಂಡ್‌ ಬೆಂಗಳೂರು’ ಎಂಬ ಪರಿಕಲ್ಪನೆಯಡಿ ಮಹತ್ವಾಕಾಂಕ್ಷಿ ಯೋಜನೆಗಳ ಜಾರಿ
  • ಪ್ರಾದೇಶಿಕ ಅಸಮಾನತೆಯ ನಿವಾರಣೆ, ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರಗಳ ಬಲವರ್ಧನೆ, ಸುಗಮ ಸಾರಿಗೆ  ವ್ಯವಸ್ಥೆ, ಕಾನೂನು ಮತ್ತು ಸುವ್ಯವಸ್ಥೆ ನಿಭಾಯಿಸಲು ಹೊಸ ಕಾರ್ಯತಂತ್ರಗಳಿಗೆ ಹೆಚ್ಚು ಆದ್ಯತೆ
  • ರೈತ ಕಲ್ಯಾಣದ ಉದ್ದೇಶಿತ ಯೋಜನೆಗಳಿಗೆ ವಿವಿಧ ಇಲಾಖೆಗಳಿಗೆ ಒಟ್ಟು 51,339 ಕೋಟಿ ರೂಪಾಯಿ ಅನುದಾನ
  • 2030ರ ವೇಳೆಗೆ ಉತ್ಪಾದನಾ ವಲಯದಲ್ಲಿ ಶೇ.12ರಷ್ಟು ವಾರ್ಷಿಕ ಬೆಳವಣಿಗೆಯನ್ನು ಸಾಧಿಸುವುದರೊಂದಿಗೆ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ
  • ಅತಿಹೆಚ್ಚು ಉದ್ಯೋಗ ಸೃಷ್ಟಿಯಾಗುವ ಎಂ.ಎಸ್.ಎಂ.ಇ, ಪ್ರವಾಸೋದ್ಯಮ, ಐಟಿಬಿಟಿ ವಲಯಗಳಲ್ಲಿ ಹೊಸ ನೀತಿ
  • ರಾಜ್ಯಕ್ಕೆ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುವ ಉದ್ದೇಶದಿಂದ ಒಟ್ಟು 13,692 ಕೋಟಿ ಆರ್ಥಿಕ ನೆರವು ಮತ್ತು ಸಹಾಯಧನ
  • ವಾಣಿಜ್ಯ ತೆರಿಗೆ, ಅಬಕಾರಿ, ನೋಂದಣಿ ಮತ್ತು ಮುದ್ರಾಂಕ, ಸಾರಿಗೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಇಲಾಖೆಗಳ ‘ಬಿ’ ಮತ್ತು ‘ಸಿ’ ವೃಂದಗಳಲ್ಲಿ ಕೌನ್ಸೆಲಿಂಗ್‌ ಮೂಲಕ ವರ್ಗಾವಣೆ ಪ್ರಕ್ರಿಯೆ
  • ಎಸ್‌, ಎಸ್‌ಟಿ ವಸತಿ ನಿಲಯದಲ್ಲಿ ಅಭ್ಯಾಸ ಮಾಡುತ್ತಿರುವ ವಿದ್ಯಾರ್ಥಿಗಳ ವೆಚ್ಚವಾಗಿ ಪ್ರತಿ ತಿಂಗಳು 3,500 ರೂ.
  • ಕಲ್ಯಾಣ ಕರ್ನಾಟಕ ಅಭಿವೃದ್ಧಿಗೆ ವಿಶೇಷ ಕಾರ್ಯಕ್ರಮದಡಿ 5 ಸಾವಿರ ಕೋಟಿ ರೂಪಾಯಿ ಅನುದಾನ.
  • ಪ್ರವರ್ಗ 1, 2ಎ, 2ಬಿ (ಮುಸ್ಲಿಂ) ಸಮುದಾಯದವರಿಗೆ 2 ಕೋಟಿ ರೂ.ವರೆಗೆ ಕಾಮಗಾರಿ ಗುತ್ತಿಗೆಯಲ್ಲಿ ಮೀಸಲಾತಿ.
  • ಕೈಗಾರಿಕಾ ಪ್ರದೇಶ ಭೂಮಿ ಹಂಚಿಕೆಯಲ್ಲೂ ಪ್ರವರ್ಗ 1, 2ಎ ಮತ್ತು 2ಬಿ (ಮುಸ್ಲಿಂ) ಗೆ ಶೇಕಡಾ 20 ಮೀಸಲಾತಿ
  • ಬೆಂಗಳೂರು ನಗರ ವಿಶ್ವವಿದ್ಯಾಲಯಕ್ಕೆ ಡಾ.ಮನಮೋಹನ್​​​ ಸಿಂಗ್ ವಿಶ್ವವಿದ್ಯಾಲಯ ಎಂದು ಮರುನಾಮಕರಣ.
  • ಹಿಂದುಳಿದ ವರ್ಗಗಳ ವಿದ್ಯಾರ್ಥಿನಿಲಯಗಳ ಮೂಲಸೌಕರ್ಯಕ್ಕೆ 50 ಕೋಟಿ ರೂ. ಮೀಸಲು
  • ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ 30 ಮೆಟ್ರಿಕ್-ನಂತರದ ವಿದ್ಯಾರ್ಥಿ ನಿಲಯಗಳ ಕಟ್ಟಡ ನಿರ್ಮಾಣಕ್ಕೆ ಕ್ರಮ.
  • ಅತ್ಯಂತ ಹಿಂದುಳಿದ 46 ಅಲೆಮಾರಿ, ಅರೆ ಅಲೆಮಾರಿ ಜನಾಂಗದ ವಿದ್ಯಾರ್ಥಿಗಳಿಗಾಗಿ ನಾಲ್ಕು ಕಂದಾಯ ವಿಭಾಗಗಳಲ್ಲಿ ತಲಾ ಒಂದರಂತೆ ಡಿ.ದೇವರಾಜ ಅರಸು ವಸತಿ ಶಾಲೆಗಳ ಪ್ರಾರಂಭ.
  •  ಇಂಜಿನಿಯರಿಂಗ್‌ ಮತ್ತು ಮೆಡಿಕಲ್‌ ಕಾಲೇಜುಗಳ ವಿದ್ಯಾರ್ಥಿಗಳಿಗೆ 62 ಹೊಸ ಮೆಟ್ರಿಕ್‌ ನಂತರದ ವಸತಿನಿಲಯಗಳನ್ನು ಪ್ರಾರಂಭಿಸಲು 15 ಕೋಟಿ ರೂ. ಮೀಸಲು.
  •  IAS, IPS, KAS, KSPS ಮುಂತಾದ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ವಸತಿ ಸಹಿತ ತರಬೇತಿ ನೀಡಲು ಬೆಂಗಳೂರಿನಲ್ಲಿ ಎರಡು ಸುಸಜ್ಜಿತ ವಸತಿ ನಿಲಯ ನಿರ್ಮಾಣ.
  • 2024-25ನೇ ಸಾಲಿಗೆ ರಾಜಸ್ವ ಸ್ವೀಕೃತಿಗಳು ವಾರ್ಷಿಕ ಶೇ 10.3 ರಷ್ಟು ಬೆಳವಣಿಗೆಯನ್ನು ದಾಖಲಿಸುವ ನಿರೀಕ್ಷೆ.
  • 2024-25ನೇ ಸಾಲಿಗೆ ತೆರಿಗೆಯೇತರ ರಾಜಸ್ವದಲ್ಲಿ 14,500 ಕೋಟಿ ಗಳು ಸಂಗ್ರಹವಾಗುವ ನಿರೀಕ್ಷೆ

ಬೆಂಗಳೂರು ಅರಮನೆ ಮೈದಾನ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...