Homeಕರ್ನಾಟಕKarnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ 'ಬೌದ್ಧ ಅಭಿವೃದ್ಧಿ ನಿಗಮ' ಸ್ಥಾಪನೆ

Karnataka Budget 2026| ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ

'ಎಸ್‌ಸಿಎಸ್‌ಪಿ-ಟಿಎಸ್‌ಪಿ'ಗೆ 44,632ಕೋಟಿ ರೂ. ನಿಗದಿ

- Advertisement -
- Advertisement -

ಸಮಾಜ ಕಲ್ಯಾಣ ಇಲಾಖೆಯಡಿ ‘ಬೌದ್ಧ ಅಭಿವೃದ್ಧಿ ನಿಗಮ’ ಸ್ಥಾಪನೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ 2026-27ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿದರು.

“ನಮ್ಮ ಸರ್ಕಾರವು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತರ ಸಮಗ್ರ ಅಭಿವೃದ್ಧಿಗಾಗಿ ಕಳೆದ ಮೂರು ವರ್ಷಗಳಲ್ಲಿ ನಾಲ್ಕು ಪ್ರಮುಖ ದಿಕ್ಕುಗಳಲ್ಲಿ ಕಲ್ಯಾಣ ಕಾರ್ಯಕ್ರಮಗಳನ್ನು ಯಶಸ್ವಿಯಾಗಿ ಕೈಗೊಂಡಿದೆ” ಎಂದು ಹೇಳಿದ್ದಾರೆ.

ಶಿಕ್ಷಣ ಮತ್ತು ಮಾನವ ಸಂಪನ್ಮೂಲ ಅಭಿವೃದ್ಧಿ:

“75 ಲಕ್ಷ ವಿದ್ಯಾರ್ಥಿಗಳಿಗೆ 2,676 ಕೋಟಿ ರೂ.ಗಳ ವಿದ್ಯಾರ್ಥಿವೇತನ, 2,231 ವಿದ್ಯಾರ್ಥಿಗಳಿಗೆ 389 ಕೋಟಿ ರೂ.ಗಳ ಶೈಕ್ಷಣಿಕ ಸಾಲ ಮತ್ತು 18 ಲಕ್ಷ ವಿದ್ಯಾರ್ಥಿಗಳಿಗೆ 1,273 ಕೋಟಿ ರೂ.ಗಳಷ್ಟು ಶುಲ್ಕ ಮರುಪಾವತಿ ಮಾಡಲಾಗಿದೆ. ರಾಜ್ಯದಲ್ಲಿ 5,306 ವಿದ್ಯಾರ್ಥಿನಿಲಯ ಮತ್ತು 1,258 ವಸತಿ ಶಾಲೆಗಳನ್ನು ಹಾಗೂ 300 ಮೌಲಾನಾ ಆಜಾದ್ ಶಾಲೆಗಳಲ್ಲಿ 13.30 ಲಕ್ಷ ಮಕ್ಕಳ ಶಿಕ್ಷಣಕ್ಕಾಗಿ 15,081 ಕೋಟಿ ರೂ. ಒದಗಿಸಲಾಗಿದೆ” ಎಂದು ಹೇಳಿದರು.

ಕೌಶಲ್ಯ ಮತ್ತು ಜೀವನೋಪಾಯಕ್ಕೆ ನೆರವು:

“ಸಬ್ಸಿಡಿ ಆಧಾರಿತ ಸಣ್ಣ ಉದ್ಯಮಗಳಿಂದ ಸುಸ್ಥಿರ ಆದಾಯ ಮೂಲಗಳನ್ನು ಸೃಜಿಸುವ ಉದ್ಯಮಶೀಲತೆಗೆ ಉತ್ತೇಜನೆ ಮತ್ತು ಆರ್ಥಿಕ ಸಬಲೀಕರಣಕ್ಕೆ ಆದ್ಯತೆ ನೀಡುವುದು. ಸ್ವಾವಲಂಬಿ ಸಾರಥಿ ಯೋಜನೆಯಡಿ 8,195 ಫಲಾನುಭವಿಗಳಿಗೆ 249 ಕೋಟಿ ರೂ.ಗಳ ಸಾಲ, ಗಂಗಾಕಲ್ಯಾಣ ಯೋಜನೆಯಡಿ 21,556 ಫಲಾನುಭವಿಗಳಿಗೆ 637 ಕೋಟಿ ರೂ.ಗಳು ಮತ್ತು 2,928 ಫಲಾನುಭವಿಗಳಿಗೆ ಭೂಮಿ ಒದಗಿಸಲು 421 ಕೋಟಿ ರೂ.ಗಳನ್ನು ನೀಡಲಾಗಿದೆ” ಎಂದು ಹೇಳಿದ್ದಾರೆ.

ಮೂಲಭೂತ ಸೌಲಭ್ಯಕ್ಕೆ ಒತ್ತು ನೀಡುವುದರ ಮೂಲಕ ಬಡಜನರ ಜೀವನ ಮಟ್ಟವನ್ನು ಸುಧಾರಿಸುವ ಕಾರ್ಯಕ್ರಮಗಳು:

  1. ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಜನರು ಹೆಚ್ಚಿನ ಸಂಖ್ಯೆಯಲ್ಲಿ ವಾಸಿಸುತ್ತಿರುವ ಕಾಲೋನಿಗಳಲ್ಲಿ ಅಗತ್ಯ ಮೂಲಭೂತ ಸೌಕರ್ಯ ಅಭಿವೃದ್ಧಿಗೆ 1,332 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  2. ಅರಣ್ಯಹಾಗೂಅರಣ್ಯದಂಚಿನಲ್ಲಿವಾಸಿಸುತ್ತಿರುವ 11 ಸಮುದಾಯಗಳವಸತಿರಹಿತ 6,257 ಕುಟುಂಬಗಳಿಗೆ
    4.50 ಲಕ್ಷರೂ.ಗಳಘಟಕವೆಚ್ಚದಲ್ಲಿಒಟ್ಟು 282 ಕೋಟಿರೂ.ಗಳಲ್ಲಿ ಮನೆ ನಿರ್ಮಾಣ ಮಾಡಲಾಗುತ್ತಿದೆ. ಅಲ್ಪಸಂಖ್ಯಾತರ ಕಾಲೋನಿಗಳಿಗೆ ಮೂಲಭೂತ ಸೌಕರ್ಯ ಒದಗಿಸಲು 1,635 ಕೋಟಿ ರೂ.ಗಳ ವೆಚ್ಚದಲ್ಲಿ 3,662 ಕಾಮಗಾರಿಗಳನ್ನು ಅನುಮೋದಿಸಲಾಗಿದೆ.
  3. ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಇಲಾಖೆಗಳಲ್ಲಿ 1,650 ಸಮುದಾಯ ಭವನ/ವಾಲ್ಮೀಕಿ ಭವನ/ಶಾದಿ ಮಹಲ್ ಗಳ ನಿರ್ಮಾಣಕ್ಕಾಗಿ 822 ಕೋಟಿ ರೂ.ಗಳನ್ನು ಮಂಜೂರು ಮಾಡಿ 732 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.
  4. ನಾಯಕತ್ವ ಮತ್ತು ಪ್ರಾತಿನಿಧ್ಯ: ಸರ್ಕಾರದ ನೀತಿ ನಿರೂಪಣೆ ಹಾಗೂ ಅನುಷ್ಠಾನದಲ್ಲಿ ಹಿಂದುಳಿದವರಿಗೆ ಸೂಕ್ತ ಪ್ರಾತಿನಿಧ್ಯತೆಯನ್ನು ಕಲ್ಪಿಸುವುದು.
  5. ಒಟ್ಟು 26,821 ವಿದ್ಯಾರ್ಥಿಗಳಿಗೆ ಸರ್ಕಾರಿ ಉದ್ಯೋಗ/ ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ಕೌಶಲ್ಯಾಭಿವೃದ್ಧಿಗೆ ತರಬೇತಿಯನ್ನು ನೀಡಲು 841 ಕೋಟಿ ರೂ.ಗಳನ್ನು ವೆಚ್ಚ ಮಾಡಲಾಗಿದೆ.

    ‘ಎಸ್‌ಇಎಸ್‌ಪಿ-ಟಿಎಸ್‌ಪಿ’ಗೆ 44,632ಕೋಟಿ ರೂ. ನಿಗದಿ

“ಕರ್ನಾಟಕ ಅನುಸೂಚಿತ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆಯಡಿಯಲ್ಲಿ 2026-27ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಉಪಯೋಜನೆಗೆ 31,804ಕೋಟಿ ರೂ. ಹಾಗೂ ಬುಡಕಟ್ಟು ಉಪಯೋಜನೆಗೆ 12,828ಕೋಟಿ ರೂ. ಗಳು ಸೇರಿದಂತೆ ಒಟ್ಟಾರೆ 44,632ಕೋಟಿ ರೂ. ಅನುದಾನವನ್ನು ಒದಗಿಸಲಾಗಿದೆ.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳು ಮತ್ತು ಅಲ್ಪಸಂಖ್ಯಾತರ ಇಲಾಖೆಯ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರ ವಿದ್ಯಾರ್ಥಿನಿಲಯಗಳ ಇತರೆ ನಿರ್ವಹಣಾ ವೆಚ್ಚದ ದರಗಳನ್ನು ಪರಿಷ್ಕರಿಸಲು 56 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಒದಗಿಸಲಾಗುವುದು. ಸರ್ಕಾರಿ ಮೆಟ್ರಿಕ್ ಪೂರ್ವ ಮತ್ತು ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳಿಗೆ ಅಗತ್ಯ ಮೂಲಭೂತ ಸೌಲಭ್ಯಗಳಾದ ಟೂ ಟಯರ್ ಕಾಟ್, ಕಾಯರ್ ಮ್ಯಾಟ್ರಸ್, ಸೋಲಾರ್ ವಾಟರ್ ಹೀಟರ್ ಮತ್ತು ಡೈನಿಂಗ್ ಟೇಬಲ್‌ಗಳನ್ನು ಒದಗಿಸಲು 25 ಕೋಟಿ ರೂ.ಗಳನ್ನು ಮೀಸಲಿರಿಸಿದೆ.

ಶೈಕ್ಷಣಿಕವಾಗಿ ಪ್ರಮುಖ ನಗರಗಳಲ್ಲಿ ವಿದ್ಯಾರ್ಥಿನಿಲಯಗಳಿಗೆ ಬೇಡಿಕೆ ಹೆಚ್ಚುತ್ತಿರುವ ಕಾರಣ ಪ್ರತಿ ಜಿಲ್ಲೆಗೆ 150 ಸಂಖ್ಯಾಬಲದ ಒಂದು ಬಾಲಕಿಯರ ಮತ್ತು ಒಂದು ಬಾಲಕರ ಒಟ್ಟು 62 ಹೊಸ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಗಳನ್ನು ಪ್ರಾರಂಭಿಸಲಾಗುವುದು.

ಶಿಕ್ಷಣ ಹಕ್ಕು ಕಾಯ್ದೆ (Right To Education Act) ರಡಿ ಪ್ರವೇಶ ಪಡೆದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳು ಪ್ರವೇಶ ಪಡೆದ ಶಾಲೆಗಳಲ್ಲಿಯೇ 9 ಮತ್ತು 10ನೇ ತರಗತಿಗಳಲ್ಲಿ ವ್ಯಾಸಂಗ ಮುಂದುವರೆಸಲು ಅವಕಾಶ ಕಲ್ಪಿಸಲು 19 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪದವಿ ಪೂರ್ವ ಶಿಕ್ಷಣಕ್ಕೆ ಅನುವು ಮಾಡಿಕೊಡಲು ಒಟ್ಟು 31 ವಸತಿ ಶಾಲೆಗಳನ್ನು ಉನ್ನತೀಕರಿಸಲಾಗುವುದು. ವಸತಿ ಶಾಲೆಗಳಿಲ್ಲದ ಹೋಬಳಿಗಳಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಒಟ್ಟು 40 ಹೊಸ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ಕ್ರೈಸ್‌ ವಸತಿ ಶಾಲೆಗಳಿಗೆ ಅಗತ್ಯವಿರುವ ಡೆಸ್ಕ್, ಬೆಂಚ್‌, ಪೀಠೋಪಕರಣಗಳು, ಗ್ರಂಥಾಲಯ, ಕಂಪ್ಯೂಟರ್‌ ಲ್ಯಾಬ್‌ ಮತ್ತು ವಿಜ್ಞಾನ ಪ್ರಯೋಗಾಲಯ, ಹಾಸಿಗೆ-ಹೊದಿಕೆ, ಟೂ ಟಯರ್‌ ಕಾಟ್, ಸೋಲಾರ್‌ ವಾಟರ್‌ ಹೀಟರ್, ಡೈನಿಂಗ್ ಟೇಬಲ್, ಸಿಸಿಟಿವಿ ಇತ್ಯಾದಿ ಮೂಲಭೂತ ಸೌಕರ್ಯಗಳನ್ನು ನೀಡಲು‌ 50 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಪರಿಶಿಷ್ಟ ಜಾತಿಯ 20, ಪರಿಶಿಷ್ಟ ಪಂಗಡದ 5 ಮತ್ತು ಹಿಂದುಳಿದ ವರ್ಗಗಳ 5 ವಸತಿ ಶಾಲೆಗಳು ಸೇರಿದಂತೆ ನಿವೇಶನ ಲಭ್ಯವಿರುವ ಒಟ್ಟು 30 ಕ್ರೈಸ್‌ ವಸತಿ ಶಾಲೆಗಳಿಗೆ 22 ಕೋಟಿ ರೂ. ಘಟಕ ವೆಚ್ಚದಲ್ಲಿ ಒಟ್ಟಾರೆ 660 ಕೋಟಿ ರೂ. ವೆಚ್ಚದಲ್ಲಿ ಸ್ವಂತ ಕಟ್ಟಡಗಳನ್ನು ನಿರ್ಮಾಣ ಮಾಡಲಾಗುವುದು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪರಿಶಿಷ್ಟ ಜಾತಿಯ ಎರಡು, ಪರಿಶಿಷ್ಟ ಪಂಗಡದ ಒಂದು ಮತ್ತು ಹಿಂದುಳಿದ ವರ್ಗಗಳ ಒಂದು ಸೇರಿದಂತೆ ಒಟ್ಟು ನಾಲ್ಕು ಕೈಸ್ ವಸತಿ ಶಾಲೆಗಳನ್ನು
ಕೆ-ಸೆಟ್/ಜೆಇಇ/ಎನ್‌ಇಇಟಿ ಪರೀಕ್ಷೆಗಳಿಗೆ ಗುಣಮಟ್ಟದ ತರಬೇತಿ ನೀಡಲು ‘Centre of Excellence’ಗಳನ್ನಾಗಿ ಉನ್ನತೀಕರಿಸಲಾಗುವುದು. ಈ ಶಾಲೆಗಳಿಗೆ ಪ್ರತ್ಯೇಕವಾದಪ್ರವೇಶ ಪರೀಕ್ಷೆಯ ಮೂಲಕ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುವುದು. ಇದಕ್ಕಾಗಿ ಐದು ಕೋಟಿ ರೂ.ಗಳನ್ನು ಒದಗಿಸಲಾಗುವುದು.

ನಮ್ಮ ಸರ್ಕಾರವು ವಸತಿ ನಿಲಯ ಮತ್ತು ವಸತಿ ಶಾಲೆಗಳಲ್ಲಿ ಗುಣಮಟ್ಟದ ಆಹಾರ ಪೂರೈಸಲು ಪ್ರಾಯೋಗಿಕವಾಗಿ 50 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯಗಳಲ್ಲಿ, ಅಲ್ಲಿನ ವಿದ್ಯಾರ್ಥಿಗಳ ಮುಂದಾಳತ್ವದಲ್ಲಿ ಮೆಸ್ ಸಮಿತಿಯೊಂದನ್ನು ರಚಿಸಿ ಕಾಲಕಾಲಕ್ಕೆ ಅಗತ್ಯ ಅನುದಾನವನ್ನು ಮುಂಗಡವಾಗಿ ನೀಡಿ, ಪಾರದರ್ಶಕತೆ ಹಾಗೂ ಜವಾಬ್ದಾರಿಯುತ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು. ಮುಂದುವರೆದು, ಈ ಪ್ರಯೋಗದ ಕಲಿಕೆಗಳನ್ನು ಅಳವಡಿಸಿಕೊಂಡು ಹಂತ ಹಂತವಾಗಿ ವಿಸ್ತರಿಸಲಾಗುವುದು.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ, ಹಿಂದುಳಿದ ವರ್ಗಗಳ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಿಂದ 6,562 ವಸತಿ ನಿಲಯಗಳಲ್ಲಿ ಮತ್ತು ವಸತಿ ಶಾಲೆಗಳಲ್ಲಿ ಪ್ರಸ್ತುತ 8.50 ಲಕ್ಷ ನಿಲಯಾರ್ಥಿಗಳಿದ್ದು, ಇವುಗಳ ನಿರ್ವಹಣೆಯಲ್ಲಿ ಸುಧಾರಣೆ ತರಲು ಒಂದು ಉನ್ನತ ಮಟ್ಟದ ಸಮಿತಿಯನ್ನು ರಚಿಸಲಾಗುವುದು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಉದ್ಯೋಗಸ್ಥ ಮಹಿಳೆಯರಿಗೆ ತಲಾ 50 ಸಂಖ್ಯಾಬಲದ 10 ವಸತಿ ನಿಲಯಗಳನ್ನು ಬೆಂಗಳೂರು, ಮೈಸೂರು, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಬೆಳಗಾವಿ ಮತ್ತು ಕಲಬುರಗಿಯಲ್ಲಿ ಪ್ರಾರಂಭಿಸಲಾಗುವುದು.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಹಾಗೂ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಗಳಡಿ ಬರುವ ನಿಗಮಗಳಲ್ಲಿ ಮೈಕ್ರೊ ಕ್ರೆಡಿಟ್‌ ಪ್ರೇರಣಾ ಯೋಜನೆಯಡಿ ಸಾಲ ಮತ್ತು ಸಹಾಯಧನ ಪಡೆದ ಮಹಿಳಾ ಸ್ವ-ಸಹಾಯ ಸಂಘಗಳು ಸಾಲವನ್ನು ಸಕಾಲದಲ್ಲಿ ಪೂರ್ಣವಾಗಿ ಮರುಪಾವತಿಸಿದ ಸಂಘಗಳಿಗೆ ಎರಡನೇ ಬಾರಿಗೆ ಸಾಲ ಮತ್ತು ಸಹಾಯಧನ ಮಂಜೂರು ಮಾಡಲಾಗುವುದು.

ಶೈಕ್ಷಣಿಕ ಸೌಲಭ್ಯಗಳಿಂದ ವಂಚಿತರಾದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಲೆಮಾರಿ, ಅರೆ ಅಲೆಮಾರಿ, ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಅಭಿವೃದ್ಧಿಗಾಗಿ ಪ್ರತಿ ಕಂದಾಯ ವಿಭಾಗಕ್ಕೆ ಒಂದರಂತೆ ನಾಲ್ಕು ವಿಶೇಷ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ಅಲೆಮಾರಿ ಅರೆ ಅಲೆಮಾರಿ ಅಭಿವೃದ್ಧಿ ನಿಗಮಕ್ಕೆ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ಡಾ||ಬಿ.ಆರ್.ಅಂಬೇಡ್ಕರ್‌ ರವರು ಭೇಟಿ ನೀಡಿದ ಸ್ಥಳಗಳಾದ ಕಲಬುರಗಿ, ವಿಜಯಪುರ, ಬೆಳಗಾವಿ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಅವರಹೆಸರಿನಲ್ಲಿ ಸಿಬಿಎಸ್‌ಇ ಪಠ್ಯಕ್ರಮದನಾಲ್ಕು ಕ್ರೈಸ್ ವಸತಿ ಶಾಲೆಗಳನ್ನು ಪ್ರಾರಂಭಿಸಲಾಗುವುದು.

ಸಮಾಜ ಕಲ್ಯಾಣ ಇಲಾಖೆಯಡಿ ಬೌದ್ಧ ಅಭಿವೃದ್ಧಿ ನಿಗಮವನ್ನು ಸ್ಥಾಪಿಸಲಾಗುವುದು. ಸಮಾಜ ಕಲ್ಯಾಣ ಇಲಾಖೆ ಮತ್ತು ಪರಿಶಿಷ್ಟ ಪಂಗಡಗಳ ಇಲಾಖೆಗಳ ಅಡಿಯಲ್ಲಿ ಬರುವ ನಿಗಮಗಳು ಗಂಗಾ ಕಲ್ಯಾಣ ಯೋಜನೆಯಡಿ ಪ್ರತಿ ಕೊಳವೆ ಬಾವಿಗಳ ವಿದ್ಯುದೀಕರಣಕ್ಕಾಗಿ ಪಾವತಿಸುವ ಮೊತ್ತವನ್ನು 75,000 ರೂ.ಗಳಿಂದ 1,50,000 ರೂ.ಗಳಿಗೆ ಹೆಚ್ಚಿಸಲಾಗುವುದು.

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗ ಮತ್ತು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮಗಳಿಗೆ 2026-27ನೇ ಸಾಲಿನಲ್ಲಿ 1,500 ಕೋಟಿ ರೂ.ಗಳನ್ನು ಒದಗಿಸಲಾಗುವುದು. ಸಮಾಜ ಕಲ್ಯಾಣ, ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗಳಲ್ಲಿ ಖಾಲಿ ಇರುವ 2,500 ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುವುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

    ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

    ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

    ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

    SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

    ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

    ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

    ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

    ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

    ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

    31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

    "ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

    ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

    ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

    ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

    ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

    ‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

    ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

    ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

    ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...