Homeಕರ್ನಾಟಕKarnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ 'ರೋಹಿತ್ ವೇಮುಲ ಕಾಯ್ದೆ'

Karnataka Budget 2026| ವಿಶ್ವ ವಿದ್ಯಾಲಯಗಳಲ್ಲಿ ಜಾತಿ ಆಧಾರಿತ ದೌರ್ಜನ್ಯ ತಡೆಗೆ ‘ರೋಹಿತ್ ವೇಮುಲ ಕಾಯ್ದೆ’

- Advertisement -
- Advertisement -

“ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು” ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದಿನ ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಣೆ ಮಾಡಿದರು.

ಹೈದರಾಬಾದ್ ಕೇಂದ್ರೀಯ ವಿಶ್ವವಿದ್ಯಾಲಯದಲ್ಲಿ ಸಂಭವಿಸಿದ ರೋಹಿತ್ ವೇಮುಲ ಸಾಂಸ್ಥಿಕ ಹತ್ಯೆ ಬಳಿಕ, ದಲಿತ ಮತ್ತು ಆದಿವಾಸಿ ಸಮುದಾಯದ ವಿದ್ಯಾರ್ಥಿಗಳಿಗೆ ಜಾತಿ ಆಧಾರಿತ ದೌರ್ಜನ್ಯದಿಂದ ರಕ್ಷಣೆ ನೀಡಬೇಕು ಎಮದು ಸದೇಶದಾದ್ಯಂತ ಕೂಗು ಎದ್ದಿತ್ತು. ಶೈಕ್ಷಣಿಕ ಕ್ಷೇತ್ರದಲ್ಲಿ ನಡೆಯುತ್ತಿರುವ ಜಾತಿ ಆಧಾರಿತ ದೌರ್ಜನ್ಯದ ವಿರುದ್ಧ ಕಾಯ್ದೆ ರೂಪಿಸಬೇಕು ಎಂದು ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ ಸಹ ಕಾಂಗ್ರೆಸ್‌ ಆಡಳಿತದ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದ್ದರು.

ಉನ್ನತ ಶಿಕ್ಷಣಕ್ಕೆ ಸಂಬಂಧಿಸಿದ ಇತರೆ ಬಜೆಟ್‌ ಘೋಷಣೆಗಳು

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಪಾಲಿಟೆಕ್‌ನಿಕ್‌ಗಳ ಬಲವರ್ಧನೆ, ಉತ್ಕೃಷ್ಟತಾ ಕೇಂದ್ರಗಳ ಸ್ಥಾಪನೆ ಹಾಗೂ ಸಂಶೋಧನಾ ಸಾಮರ್ಥ್ಯ ಹೆಚ್ಚಿಸುವ ಸಲುವಾಗಿ ಎಬಿಡಿ ನೆರವಿನೊಂದಿಗೆ 2,500 ಕೋಟಿ ರೂ. ವೆಚ್ಚದಲ್ಲಿ ʻಕರ್ನಾಟಕ ಉನ್ನತ ಶಿಕ್ಷಣ ಪರಿವರ್ತನೆ ಯೋಜನೆʼ ಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ಈ ಯೋಜನೆಯಡಿ 40 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು ಮತ್ತು 11 ಪಾಲಿಟೆಕ್ನಿಕ್ಗಳನ್ನು ಮಾದರಿ ಸಂಸ್ಥೆಗಳನ್ನಾಗಿ ಅಭಿವೃದ್ಧಿಗೊಳಿಸಲಾಗುತ್ತಿದೆ. ವಿದ್ಯಾರ್ಥಿಗಳಲ್ಲಿ ಉದ್ಯಮಶೀಲತೆ ಮತ್ತು ಸ್ಟಾರ್ಟ್-ಅಪ್ ಸಂಸ್ಕೃತಿಯನ್ನು ಪ್ರೋತ್ಸಾಹಿಸಲು ಎಬಿಡಿ ನೆರವಿನೊಂದಿಗೆ ಉತ್ಕೃಷ್ಟತಾ ಕೇಂದ್ರಗಳನ್ನು ಸ್ಥಾಪಿಸಲಾಗುವುದು.

ಹಿಂದಿನ ಸಾಲಿನಲ್ಲಿ ಘೋಷಿಸಿದಂತೆ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, ಇಂಜಿನಿಯರಿಂಗ್ ಕಾಲೇಜುಗಳು, ಪಾಲಿಟೆಕ್‌ನಿಕ್‌ಗಳು ಮತ್ತು ಯುವಿಸಿಇ ವಿಶ್ವವಿದ್ಯಾಲಯದಲ್ಲಿ ಒಟ್ಟಾರೆ 2,000 ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಅನುಮತಿಸಲಾಗಿದೆ. ಸದರಿ ನೇಮಕಾತಿ ಪ್ರಕ್ರಿಯೆಯನ್ನು ಶೀಘ್ರದಲ್ಲಿ ಪೂರ್ಣಗೊಳಿಸಲಾಗುವುದು. ಮುಂದುವರೆದು, ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ 1,000 ಬೋಧಕ ಹುದ್ದೆಗಳನ್ನು ತರ್ಕಬದ್ಧಗೊಳಿಸಿ ಹಂತ ಹಂತವಾಗಿ ಭರ್ತಿ ಮಾಡಲಾಗುವುದು.

ಶೇ.50ಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರು ವ್ಯಾಸಂಗ ಮಾಡುತ್ತಿರುವ 25 ಸರ್ಕಾರಿ ಪದವಿ ಕಾಲೇಜು, ಮೂರು ಪಾಲಿಟೆಕ್ನಿಕ್ ಹಾಗೂ ಮೂರು ಇಂಜಿನಿಯರಿಂಗ್ ಕಾಲೇಜುಗಳಲ್ಲಿ ತಲಾ ಒಂದು ಕೋಟಿ ರೂ.ಗಳಂತೆ ಒಟ್ಟು 31 ಕೋಟಿ ರೂ.ಗಳ ವೆಚ್ಚದಲ್ಲಿ ವಿದ್ಯಾರ್ಥಿನಿಯರಿಗೆ ಅವಶ್ಯವಿರುವ ಮೂಲ ಸೌಲಭ್ಯಗಳನ್ನು ಒದಗಿಸಲಾಗುವುದು.

1,000ಕ್ಕಿಂತ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿರುವ ಒಟ್ಟು 50 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ ಪೀಠೋಪಕರಣಗಳು ಹಾಗೂ ಕಟ್ಟಡಗಳ ದುರಸ್ತಿ/ನವೀಕರಣ ಕಾಮಗಾರಿಗಳನ್ನು 100 ಕೋಟಿ ರೂ.ಗಳ ವೆಚ್ಚದಲ್ಲಿ ಮುಂದಿನ ಮೂರು ವರ್ಷಗಳಲ್ಲಿ ಕೈಗೊಳ್ಳಲಾಗುವುದು.

ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿರುವ 75 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳು, 23 ಪಾಲಿಟೆಕ್ನಿಕ್ ಹಾಗೂ ಐದು ಇಂಜಿನಿಯರಿಂಗ್ ಕಾಲೇಜುಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ ಒದಗಿಸಲಾಗುವುದು.

ವಿಜಯಪುರ ಜಿಲ್ಲೆಯ ಚಡಚಣ, ಬೆಳಗಾವಿ ಗ್ರಾಮಾಂತರ ಹಾಗೂ ಮೈಸೂರು ನಗರದ ನರಸಿಂಹರಾಜ ಕ್ಷೇತ್ರದಲ್ಲಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳನ್ನು ಸ್ಥಾಪಿಸಲಾಗುವುದು. ರಾಯಚೂರು ಜಿಲ್ಲೆಯ ಮಸ್ಕಿಯಲ್ಲಿ ಕೆಕೆಆರ್‌ಡಿಬಿ ಮ್ಯಾಕ್ರೋ ಅನುದಾನದಿಂದ ಪ್ರಥಮ ದರ್ಜೆ ಕಾಲೇಜನ್ನು ಸ್ಥಾಪಿಸಲಾಗುವುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ ವತಿಯಿಂದ ಕಲಬುರಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕಕ್ಕೇರಾ, ರಾಯಚೂರು ಜಿಲ್ಲೆಯ ಅಂಬಾಮಠ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಸರ್ಕಾರದ 11 ಪಾಲಿಟೆಕ್ನಿಕ್‌ಗಳಲ್ಲಿ ಹಾಗೂ ಚಿತ್ರದುರ್ಗ ಸರ್ಕಾರಿ ಇಂಜಿನಿಯರಿಂಗ್ ಕಾಲೇಜಿನಲ್ಲಿ ಪ್ರಸ್ತುತ ಹೆಚ್ಚಿನ ಬೇಡಿಕೆ ಹಾಗೂ ಉದ್ಯೋಗಾವಕಾಶವಿರುವ ಕೋರ್ಸ್‌ಗಳಾದ ಎಐ, ಮಷಿನ್ ಲರ್ನಿಂಗ್, ಕ್ಲೌಡ್ ಕಂಪ್ಯೂಟಿಂಗ್, ಮೈನಿಂಗ್ ಇಂಜಿನಿಯರಿಂಗ್, ಆಟೋಮೇಷನ್ ಇಂಜಿನಿಯರಿಂಗ್ ಮುಂತಾದ 15 ಹೊಸ ಕೋರ್ಸ್‌ಗಳನ್ನು ಪ್ರಾರಂಭಿಸಲಾಗುವುದು.

AnitaB.org ಇಂಡಿಯಾ ಹಾಗೂ ರಾಜ್ಯ ಸರ್ಕಾರದ ಪಾಲುದಾರಿಕೆಯೊಂದಿಗೆ ವೃತ್ತಿ ಜೀವನದ ಆರಂಭಿಕ ಹಂತದಲ್ಲಿರುವ ವಿಜ್ಞಾನ, ತಾಂತ್ರಿಕ, ಗಣಿತ ಮತ್ತು ಇಂಜಿನಿಯರಿಂಗ್ (STEM) ವಿಭಾಗಗಳಲ್ಲಿನ ಆಯ್ದ 3,000 ಮಹಿಳಾ ಪದವೀಧರರಿಗೆ ಕೌಶಲ್ಯಾಭಿವೃದ್ಧಿ/ವೃತ್ತಿನಿರತ ತರಬೇತಿಗಳನ್ನು ಒಟ್ಟು 13.50 ಕೋಟಿ ರೂ. ವೆಚ್ಚದಲ್ಲಿ ಜಾರಿಗೊಳಿಸಲಾಗುವುದು.

ವಿಶ್ವೇಶ್ವರಯ್ಯ ಇಂಜಿನಿಯರಿಂಗ್ ಕಾಲೇಜು ವಿಶ್ವವಿದ್ಯಾಲಯವನ್ನು ಐಐಟಿ ಮಾದರಿಯಲ್ಲಿ 500 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ರಾಜ್ಯ ಸರ್ಕಾರದ ವತಿಯಿಂದ ಈಗಾಗಲೇ 100 ಕೋಟಿ ರೂ.ಗಳನ್ನು ಒದಗಿಸಲಾಗಿದೆ. ಪ್ರಸಕ್ತ ವರ್ಷದಲ್ಲಿಯೂ 100 ಕೋಟಿ ರೂ.ಗಳನ್ನು ಒದಗಿಸಲಾಗುವುದು.

ʻದೀಪಿಕಾ ವಿದ್ಯಾರ್ಥಿ ವೇತನ

ಸರ್ಕಾರಿ ಶಾಲಾ ಕಾಲೇಜುಗಳಲ್ಲಿ 10 ಮತ್ತು 12ನೇ ತರಗತಿಗಳನ್ನು ವ್ಯಾಸಂಗ ಮಾಡಿ 2025-26ನೇ ಸಾಲಿನಿಂದ ಉನ್ನತ ಶಿಕ್ಷಣವನ್ನು ಮುಂದುವರೆಸುತ್ತಿರುವ 37,000 ವಿದ್ಯಾರ್ಥಿನಿಯರಿಗೆ ವಾರ್ಷಿಕ 30,000 ರೂ.ಗಳ ವಿದ್ಯಾರ್ಥಿ ವೇತನವನ್ನು ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ ಹಾಗೂ ಉಳಿದ ವಿದ್ಯಾರ್ಥಿನಿಯರಿಗೆ ರಾಜ್ಯ ಸರ್ಕಾರದ ವತಿಯಿಂದ ʻದೀಪಿಕಾ ವಿದ್ಯಾರ್ಥಿ ವೇತನʼ ಯೋಜನೆಯಡಿ ನೀಡಲಾಗುತ್ತಿದೆ. ಇದನ್ನು ಪ್ರಸಕ್ತ ಸಾಲಿನಲ್ಲಿಯೂ ಮುಂದುವರೆಸಲಾಗುವುದು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ಪಾಲಿಟೆಕ್ನಿಕ್ ಹಾಗೂ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರುಗಳಿಗೆ 90 ದಿನಗಳ ಮಾತೃತ್ವ ರಜೆಯ ಸೌಲಭ್ಯವನ್ನು ಮುಂದಿನ ಶೈಕ್ಷಣಿಕ ಸಾಲಿನಿಂದ ಜಾರಿಗೊಳಿಸಲಾಗುವುದು.

ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆ, ಹೆಸರಘಟ್ಟ ಇಲ್ಲಿ ನಡೆಸಲಾಗುತ್ತಿರುವ ಸೌಂಡ್ ರೆಕಾರ್ಡಿಂಗ್ ಮತ್ತು ಇಂಜಿನಿಯರಿಂಗ್ ಹಾಗೂ ಸಿನಿಮಾಟೋಗ್ರಫಿ ಕೋರ್ಸುಗಳಿಗೆ ಅಗತ್ಯವಿರುವ ಆಧುನಿಕ ಉಪಕರಣಗಳನ್ನು ಒದಗಿಸಲಾಗುವುದು.

ರಾಜ್ಯದ ಎಲ್ಲಾ ಸರ್ಕಾರಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳಲ್ಲಿ ಜಾತಿ ಆಧಾರದ ಮೇಲೆ ವಿದ್ಯಾರ್ಥಿಗಳ ಮೇಲೆ ನಡೆಯುವ ʻಶೈಕ್ಷಣಿಕ ಮತ್ತು ಸಾಮಾಜಿಕ ದೌರ್ಜನ್ಯʼವನ್ನು ನಿಲ್ಲಿಸಲು ʻರೋಹಿತ್ ವೇಮುಲ ಕಾಯ್ದೆʼಯನ್ನು ಜಾರಿಗೆ ತರಲಾಗುವುದು.

ವಿದ್ಯಾರ್ಥಿಗಳಲ್ಲಿ ನಾಯಕತ್ವ, ಹೊಣೆಗಾರಿಕೆ ಮತ್ತು ಪ್ರಜಾಪ್ರಭುತ್ವ ಮೌಲ್ಯಗಳನ್ನು ಬೆಳೆಸಲು ಕಾಲೇಜು ಮತ್ತು ವಿಶ್ವವಿದ್ಯಾಲಯಗಳಲ್ಲಿ ವಿದ್ಯಾರ್ಥಿ ಸಂಘಗಳ ಚುನಾವಣೆ ನಡೆಸಲು ನಮ್ಮ ಸರ್ಕಾರವು ಉದ್ದೇಶಿಸಿದೆ.

ಧಾರವಾಡ ಮತ್ತು ಬೆಂಗಳೂರಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸಿದ್ಧತೆ ನಡೆಸುವ ವಿದ್ಯಾರ್ಥಿಗಳಿಗಾಗಿ ತಲಾ 10 ಕೋಟಿ ರೂ. ವೆಚ್ಚದಲ್ಲಿ ಡಿಜಿಟಲ್ ಗ್ರಂಥಾಲಯ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪಿಸಲಾಗುವುದು.

ಕರ್ನಾಟಕದಲ್ಲಿ ಎನ್‌ಸಿಸಿಯನ್ನು ಉತ್ತೇಜಿಸುವ ಸಲುವಾಗಿ ಪ್ರಸ್ತುತ ಇರುವ 96,000 ಎನ್‌ಸಿಸಿ ಕೆಡೆಟ್‌ಗಳ ಕಾರ್ಯಬಲವನ್ನು ಮುಂದಿನ ಎರಡು ವರ್ಷಗಳಲ್ಲಿ 10,000ಗಳಷ್ಟು ಹೆಚ್ಚಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯವನ್ನು ಪ್ರಾರಂಭಿಸಲು 25 ಎಕರೆ ಜಮೀನನ್ನು ನೀಡಲಾಗುವುದು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

    ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

    60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

    ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

    ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

    ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

    ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

    ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

    ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

    ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

    ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

    ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

    ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

    ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

    ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

    ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

    ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

    ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

    ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...