Homeಕರ್ನಾಟಕKarnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

Karnataka Budget 2026| ವಿಕ್ಟೋರಿಯಾ ಹೆಸರು ಬದಲಾವಣೆ; ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣ

- Advertisement -
- Advertisement -

ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯನ್ನು ʻಶಾಂತವೇರಿ ಗೋಪಾಲಗೌಡ ಆಸ್ಪತ್ರೆʼ ಎಂದು ಮರುನಾಮಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ತಮ್ಮ ಬಜೆಟ್‌ ಭಾಷಣದಲ್ಲಿ ಘೋಷಿಸಿದರು.

ತಮ್ಮ ಆಯವ್ಯಯದಲ್ಲಿ ವೈದ್ಯಕೀಯ ಶಿಕ್ಷಣ ಇಲಾಖೆಗೆ ಸಂಬಂಧಿಸಿದ ಘೋಷಣೆಗಳನ್ನು ಮಾಡಿದ ಸಿಎಂ ಸಿದ್ದರಾಮಯ್ಯ, “ಬೆಂಗಳೂರು ವೈದ್ಯಕೀಯ ಕಾಲೇಜಿನ ಎಂಬಿಬಿಎಸ್ ಮತ್ತು ಬಿಡಿಎಸ್‌ ವಿದ್ಯಾರ್ಥಿಗಳ ಬಾಲಕರ ಹಾಸ್ಟೆಲ್ ನಿರ್ಮಾಣಕ್ಕಾಗಿ 10 ಕೋಟಿ ರೂ.ಗಳ ಅನುದಾನವನ್ನು ಒದಗಿಸಲಾಗುವುದು” ಎಂದರು.

“ಕಾರವಾರದಲ್ಲಿ 198 ಕೋಟಿ ರೂ. ವೆಚ್ಚದ 450 ಹಾಸಿಗೆ ಸಾಮರ್ಥ್ಯದ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ, ರಾಯಚೂರಿನಲ್ಲಿ 10 ಕೋಟಿ ರೂ. ವೆಚ್ಚದ ಟ್ರಾಮಾ ಕೇರ್ ಕೇಂದ್ರ ಮತ್ತು ಮೈಸೂರು ಹಾಗೂ ತುಮಕೂರಿನಲ್ಲಿ 92 ಕೋಟಿ ರೂ. ವೆಚ್ಚದ ಪೆರಿಫೆರಲ್ ಕ್ಯಾನ್ಸರ್ ಕೇಂದ್ರಗಳ ಕಾಮಗಾರಿಗಳನ್ನು ಪೂರ್ಣಗೊಳಿಸಲಾಗಿದೆ. 236 ಕೋಟಿ ರೂ. ವೆಚ್ಚದ ಹುಬ್ಬಳ್ಳಿಯ ಜಯದೇವ ಹೃದ್ರೋಗ ಪ್ರಾದೇಶಿಕ ಕೇಂದ್ರದ ಕಟ್ಟಡವನ್ನು ಪ್ರಸಕ್ತ ಸಾಲಿನಲ್ಲಿ ಲೋಕಾರ್ಪಣೆಗೊಳಿಸಲಾಗುವುದು. ಬೆಂಗಳೂರಿನ ರಾಜೀವ್ ಗಾಂಧಿ ಎದೆರೋಗಗಳ ಆಸ್ಪತ್ರೆ ಆವರಣದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಶನ್ ವತಿಯಿಂದ 1,000 ಹಾಸಿಗೆಗಳ ಚಾರಿಟಬಲ್ ಸೂಪರ್ ಸ್ಪೆಷಾಲಿಟಿ ಟರ್ಷಿಯರಿ ಆರೈಕೆ ಮತ್ತು ಅಂಗಾಂಗ ಕಸಿ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ” ಎಂದು ಘೋಷಣೆ ಮಾಡಿದರು.

“2026-27ನೇ ಸಾಲಿನಲ್ಲಿ ವೈದ್ಯಕೀಯ ಕಾಲೇಜುಗಳು, ಆಸ್ಪತ್ರೆಗಳು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳ ನಿರ್ಮಾಣ ಕಾಮಗಾರಿಗಳಿಗೆ 620 ಕೋಟಿ ರೂ.ಗಳ ಅನುದಾನವನ್ನು ಮತ್ತು ಉಪಕರಣಗಳ ಖರೀದಿಗಾಗಿ 220 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡಲಾಗಿದೆ. ಮೈಸೂರಿನ 400 ಹಾಸಿಗೆ ಸಾಮರ್ಥ್ಯದ ಶ್ರೀ ಜಯದೇವ ಹೃದ್ರೋಗ ಆಸ್ಪತ್ರೆಯನ್ನು 600 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನಾಗಿ 180 ಕೋಟಿ ರೂ. ವೆಚ್ಚದಲ್ಲಿ ಮೇಲ್ದರ್ಜೆಗೇರಿಸಲಾಗುವುದು. ಹಿಂದಿನ ಸಾಲಿನ ಆಯವ್ಯಯದಲ್ಲಿ ಘೋಷಿಸಿದಂತೆ ಪುತ್ತೂರಿನಲ್ಲಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು 300 ಹಾಸಿಗೆಯ ಆಸ್ಪತ್ರೆಯನ್ನು ನಿರ್ಮಿಸಲು ಅನುಮೋದಿಸಲಾಗಿರುತ್ತದೆ. ಅಲ್ಲದೆ, ಬಾಗಲಕೋಟೆಯಲ್ಲಿ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಘಟಕ ಕಾಲೇಜನ್ನು ಸ್ಥಾಪಿಸಲು ಕ್ರಮವಹಿಸಲಾಗಿದೆ. ಸದರಿ ಕಾಲೇಜುಗಳ ಕಾರ್ಯಾಚರಣೆಗಾಗಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು” ಎಂದು ಹೇಳಿದರು.

“ವಿಜಯಪುರ ಮತ್ತು ಕೋಲಾರ ಜಿಲ್ಲೆಯಲ್ಲಿ ಸರ್ಕಾರಿ ವೈದ್ಯಕೀಯ ಕಾಲೇಜನ್ನು ಸ್ಥಾಪಿಸಲು ವಿಸ್ತೃತ ಯೋಜನಾ ವರದಿ ತಯಾರಿಸಲಾಗುವುದು. ಕಾರವಾರ ಮತ್ತು ಯಾದಗಿರಿಯಲ್ಲಿ ತಲಾ 100 ಕೋಟಿ ರೂ. ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಸ್ಥಾಪಿಸಲಾಗುವುದು. ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಯಲ್ಲಿ ತೃತೀಯ ಹಂತದ ಕ್ಯಾನ್ಸರ್ ಆರೈಕೆ ಒದಗಿಸಲು ಕ್ಯಾನ್ಸರ್ ಆಸ್ಪತ್ರೆಯನ್ನು ಮುನಿರಾಬಾದ್-ಟಿ.ಬಿ.ಡ್ಯಾಂನಲ್ಲಿ ಸ್ಥಾಪಿಸಲಾಗುವುದು” ಎಂದರು.

“ಬೆಂಗಳೂರಿನ ಗೋವಿಂದರಾಜನಗರದ ಬಿಬಿಎಂಪಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಜಯದೇವ ಹೃದ್ರೋಗ ಸಂಸ್ಥೆಯ ಪ್ರಾದೇಶಿಕ ಕೇಂದ್ರವನ್ನು 15 ಕೋಟಿ ರೂ.ಗಳ ವೆಚ್ಚದಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಸಹಯೋಗದೊಂದಿಗೆ ಸ್ಥಾಪಿಸಲಾಗುವುದು. ಬೆಂಗಳೂರಿನ ವಾಣಿ ವಿಲಾಸ್ ಆಸ್ಪತ್ರೆ ಮತ್ತು ಕಲಬುರಗಿಯ ಗುಲ್ಬರ್ಗಾ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿಐ.ವಿ.ಎಫ್ ಕೇಂದ್ರಗಳನ್ನು ಸ್ಥಾಪಿಸಲು ತಲಾ ಒಂದು ಕೋಟಿ ರೂ. ನೀಡಲಾಗುವುದು” ಎಂದು ಹೇಳಿದರು.

    ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

    LEAVE A REPLY

    Please enter your comment!
    Please enter your name here

    - Advertisment -

    ಕಾಂಗೋ: 5 ತಿಂಗಳಲ್ಲಿ 600 ಕ್ಕೂ ಹೆಚ್ಚು ಜನರಿಗೆ ಮರಣದಂಡನೆ; 1,300 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ; ವಿಶ್ವಸಂಸ್ಥೆ 

    ಆಫ್ರಿಕಾ ಖಂಡದಲ್ಲಿ ಎರಡನೇ ಅತಿ ದೊಡ್ಡ ದೇಶವಾಗಿರುವ ಕಾಂಗೋ ಪ್ರಜಾಸತ್ತಾತ್ಮಕ ಗಣರಾಜ್ಯವು ಹದಗೆಡುತ್ತಿರುವ ಮಾನವೀಯ ಮತ್ತು ಮಾನವ ಹಕ್ಕುಗಳ ಬಿಕ್ಕಟ್ಟನ್ನು ಎದುರಿಸುತ್ತಿದೆ. ಸಶಸ್ತ್ರ ಗುಂಪುಗಳು, ವಿದೇಶಿ ಹಸ್ತಕ್ಷೇಪ ಮತ್ತು ನೈಸರ್ಗಿಕ ಸಂಪನ್ಮೂಲಗಳ ಮೇಲಿನ...

    60 ದಿನಗಳಿಗಾಗುವಷ್ಟು ಕಚ್ಚಾ ತೈಲ ಸಂಗ್ರಹವಿದೆ, 1 ತಿಂಗಳ ಎಲ್‌ಪಿಜಿ ಪೂರೈಕೆಗೆ ವ್ಯವಸ್ಥೆ ಮಾಡಲಾಗಿದೆ: ಕೇಂದ್ರ ಸರ್ಕಾರ

    ಭಾರತದ ಪೆಟ್ರೋಲಿಯಂ ಮತ್ತು ಎಲ್‌ಪಿಜಿ ಪೂರೈಕೆ ಪರಿಸ್ಥಿತಿ ಸಂಪೂರ್ಣವಾಗಿ ಸುರಕ್ಷಿತ ಹಾಗೂ ನಿಯಂತ್ರಣದಲ್ಲಿದೆ ಎಂದು ಸರ್ಕಾರ ಗುರುವಾರ ಪ್ರತಿಪಾದಿಸಿದೆ. "ಉದ್ದೇಶಪೂರ್ವಕವಾಗಿ ದುರುದ್ದೇಶಪೂರಿತ, ಸಂಘಟಿತ ತಪ್ಪು ಮಾಹಿತಿಯ ಅಭಿಯಾನದಿಂದ ನಿವಾಸಿಗಳು ಮೋಸಹೋಗಬಾರದು" ಎಂದು ಎಚ್ಚರಿಸಿದೆ. "ಭಾರತವು...

    ಮುಡಾ ಪ್ರಕರಣ : ಸಿಎಂ ಸಿದ್ದರಾಮಯ್ಯ, ಪತ್ನಿ ಪಾರ್ವತಿಗೆ ಹೈಕೋರ್ಟ್ ನೋಟಿಸ್

    ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಇತರರ ವಿರುದ್ಧ ದಾಖಲಾಗಿರುವ ಮುಡಾ ಭೂ ಹಗರಣ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿದ 'ಬಿ ರಿಪೋರ್ಟ್' / ಮುಕ್ತಾಯ ವರದಿಯನ್ನು ವಿಚಾರಣಾ ನ್ಯಾಯಾಲಯ ಸ್ವೀಕರಿಸುವುದನ್ನು ಪ್ರಶ್ನಿಸಿ ಸ್ನೇಹಮಯಿ...

    ದೆಹಲಿ| ಹೊಸ ಮಸೂದೆ ವಿರೋಧಿಸಿ ಟ್ರಾನ್ಸ್‌ಜೆಂಡರ್ ಸಮುದಾಯದಿಂದ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ

    ಹೊಸದಾಗಿ ಪರಿಚಯಿಸಲಾದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಯನ್ನು ವಿರೋಧಿಸಿ ದೆಹಲಿಯ ಜಂತರ್ ಮಂತರ್‌ನಲ್ಲಿ ಟ್ರಾನ್ಸ್‌ಜೆಂಡರ್ ಸಮುದಾಯದ ಸದಸ್ಯರು ಗುರುವಾರ ಪ್ರತಿಭಟನೆ ನಡೆಸಿದರು. "ಹೊಸ ಮಸೂದೆ ನಮ್ಮ ಹಕ್ಕುಗಳು ಮತ್ತು ಘನತೆಯನ್ನು...

    ವಂದೇ ಭಾರತ್ ಪ್ರಯಾಣಿಕನಿಗೆ ಕೊಟ್ಟ ಮೊಸರಿನಲ್ಲಿ ಜೀವಂತ ಹುಳುಗಳು ಪತ್ತೆ; ಮಾರಾಟಗಾರನಿಗೆ ದಂಡ

    ಪಾಟ್ನಾ-ಟಾಟಾನಗರ ನಡುವಿನ ವಂದೇ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಕನೊಬ್ಬನಿಗೆ ನೀಡಿದ ಪ್ಯಾಕ್ ಮಾಡಿದ ಮೊಸರಿನಲ್ಲಿ ಹುಳುಗಳು ಕಂಡುಬಂದ ನಂತರ ರೈಲ್ವೆ ಇಲಾಖೆ ಮಾರಾಟಗಾರನ ನಡುವಿನ ಒಪ್ಪಂದವನ್ನು ರದ್ದುಗೊಳಿಸಿದ್ದಿ, ಕಂಪನಿಗೆ 50 ಲಕ್ಷ ರೂ. ದಂಡ...

    ಮಹಾರಾಷ್ಟ್ರ: ಪ್ರತಿಷ್ಠಿತ ಶಾಲೆಯಲ್ಲಿ ಶಿಕ್ಷಕಿಗೆ ಲೈಂಗಿಕ ಕಿರುಕುಳ ಆರೋಪ: ಶಾಲಾ ಟ್ರಸ್ಟಿಯ ಮಗ ಬಂಧನ

    ಮಹಾರಾಷ್ಟ್ರದ ಡೊಂಬಿವ್ಲಿಯ ಸಾಗವ್ ಪ್ರದೇಶದ ಪ್ರಸಿದ್ಧ ಶಾಲೆಯಲ್ಲಿ ಶಾಲಾ ಟ್ರಸ್ಟಿಯ ಮಗ ಶಿಕ್ಷಕಿಯೊಬ್ಬರಿಗೆ ಅಶ್ಲೀಲ ಸಂದೇಶಗಳು ಮತ್ತು ವಿಡಿಯೋಗಳನ್ನು ಕಳುಹಿಸಿದ್ದಾನೆ ಎಂದು ಆರೋಪಿಸಲಾಗಿದೆ. ಅದಲ್ಲದೇ ಶಿಕ್ಷಕಿಯನ್ನು ದೈಹಿಕ ಸಂಬಂಧಕ್ಕಾಗಿ ಪೀಡಿಸಿರುವ ಆರೋಪದ ಮೇಲೆ...

    ಒಂದೂವರೆ ವರ್ಷದ ಪ್ಯಾಲೆಸ್ತೀನಿಯನ್ ಮಗುವಿಗೆ ಸಿಗರೇಟ್‌ನಿಂದ ಸುಟ್ಟು, ಮೊಳೆ ಚುಚ್ಚಿ ಚಿತ್ರಹಿಂಸೆ ಕೊಟ್ಟ ಇಸ್ರೇಲಿ ಸೈನಿಕರು

    ಗಾಝಾದ ಪ್ಯಾಲೆಸ್ತೀನಿಯನ್ ವ್ಯಕ್ತಿಯೊಬ್ಬರಿಂದ ಬಲವಂತವಾಗಿ ತಪ್ಪೊಪ್ಪಿಗೆ ಪಡೆಯಲು, ಅವರ 18 ತಿಂಗಳ ಮಗುವಿಗೆ ಇಸ್ರೇಲಿ ಸೈನಿಕರು ತೀವ್ರ ಚಿತ್ರಹಿಂಸೆ ಕೊಟ್ಟಿರುವ ಬಗ್ಗೆ ಅಂತಾರಾಷ್ಟ್ರೀಯ ಮಾಧ್ಯಮಗಳು ಸೋಮವಾರ (ಮಾ.23) ವರದಿ ಮಾಡಿವೆ. ಮಾರ್ಚ್ 21ರಂದು...

    ಇಂಧನ ಕೊರತೆ ವದಂತಿ; ಕಾಶ್ಮೀರದ ಪೆಟ್ರೋಲ್‌ ಬಂಕ್‌ಗಳಲ್ಲಿ ಖರೀದಿಗೆ ಮುಗಿಬಿದ್ದ ಜನ

    ಪಶ್ಚಿಮ ಏಷ್ಯಾ ಸಂಘರ್ಷಕ್ಕೆ ಸಂಬಂಧಿಸಿದ ಇಂಧನ ಕೊರತೆಯ ವದಂತಿಗಳು ಹರಡುತ್ತಿದ್ದಂತೆ ಗುರುವಾರ ಕಾಶ್ಮೀರದಾದ್ಯಂತ ಪೆಟ್ರೋಲ್ ಪಂಪ್‌ಗಳು ಭಾರಿ ಜನದಟ್ಟಣೆಯಾಯಿತು; ಭೀತಿಯಿಂದ ಜನ ಖರೀದಿಗೆ ಮುಗಿಬಿದ್ದರು. ಇಂಧನ ಸರಬರಾಜು ಸಾಕಷ್ಟು ಲಭ್ಯವಿದೆ ಎಂದು ಅಧಿಕಾರಿಗಳು...

    ರಾಮ ಮಂದಿರವನ್ನು ಎಂದಿಗೂ ವಿರೋಧಿಸಿಲ್ಲ; ಅದಕ್ಕಾಗಿ ದೇಣಿಗೆ ನೀಡಿದ್ದೇನೆ: ದಿಗ್ವಿಜಯ ಸಿಂಗ್

    ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ಗುರುವಾರ ಅಯೋಧ್ಯೆಗೆ ತೆರಳಿ ರಾಮ ಜನ್ಮಭೂಮಿ ದೇವಾಲಯದಲ್ಲಿ ಪ್ರಾರ್ಥನೆ ಸಲ್ಲಿಸಿದರು. "ನಾನು ರಾಮಮಂದಿರ ನಿರ್ಮಾಣವನ್ನು ಎಂದಿಗೂ ವಿರೋಧಿಸಿಲ್ಲ, ದೇವಾಲಯ ಟ್ರಸ್ಟ್‌ಗೆ ದೇಣಿಗೆ...

    ಮೀಸಲಾತಿ ವಿರೋಧಿ ಹೇಳಿಕೆ: ಖಾಸಗಿ ಆಸ್ಪತ್ರೆಯಲ್ಲಿ ಸೋನಿಯಾ ಗಾಂಧಿ ಚಿಕಿತ್ಸೆ ಬಗ್ಗೆ ಪ್ರಶ್ನಿಸಿದ ಬಿಜೆಪಿ ಸಂಸದನಿಗೆ ಕಾಂಗ್ರೆಸ್ ತಿರುಗೇಟು

    ಗುರುವಾರ ಬಿಜೆಪಿ ಸಂಸದ ನಿಶಿಕಾಂತ್ ದುಬೆ ಅವರು ಹಿರಿಯ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ನೀಡಲಾಗುತ್ತಿರುವ ಚಿಕಿತ್ಸೆಯನ್ನು ಪ್ರಶ್ನಿಸುವ ಮೂಲಕ ತಮ್ಮ ಮೀಸಲಾತಿ ವಿರೋಧಿ ಮನಸ್ಥಿತಿಯನ್ನು ಅನಾವರಣಗೊಳಿಸಿದ್ದಾರೆ. ಅವರ...