Homeಕರ್ನಾಟಕಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

'ಸಾರ್ವಜನಿಕ ಹೂಡಿಕೆಯಿಂದ ಸರ್ಕಾರ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ'

- Advertisement -
- Advertisement -

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು ಪರಿಗಣಿಸಿರುವ ಸರ್ಕಾರ ಸಾರ್ವಜನಿಕ ಹೂಡಿಕೆಯಿಂದ ಹಂತ ಹಂತವಾಗಿ ಹಿಂದೆ ಸರಿಯುತ್ತಿದೆ.

ಉನ್ನತ ಶಿಕ್ಷಣದ ಕುರಿತು ಹೇಳುವುದಾದರೆ ಬಜೆಟ್ ಹಂಚಿಕೆ ನಿರಾಶದಾಯಕವಾಗಿದೆ. ಉನ್ನತ ಶಿಕ್ಷಣಕ್ಕೆ ಬಜೆಟ್ ವೆಚ್ಚದ ಶೇ.2.1ರಷ್ಟು ಮಾತ್ರ ಹಂಚಿಕೆ ಮಾಡಿದ್ದಾರೆ. ಇದು ಈಗಿನ ಹಣಕಾಸಿನ ಕೊರತೆಗೆ ಯಾವುದೇ ರೀತಿಯಲ್ಲೂ ಪರಿಹಾರವಲ್ಲ. ಸಾರ್ವಜನಿಕ ಹೂಡಿಕೆ ಇಲ್ಲದೆ ಉನ್ನತ ಶಿಕ್ಷಣ ಉಳಿಸಲು ಸಾಧ್ಯವಿಲ್ಲ.. ತಮಾಶೆಯೆಂದರೆ ಕಳೆದ ಮೂರು ವರ್ಷಗಳಿಂದ ಪ್ರತಿ ಬಜೆಟ್‌ನಲ್ಲಿಯೂ 2000 ಸಹಾಯಕ ಪ್ರಾಧ್ಯಾಪಕರ ನೇಮಕಾತಿ ಮಾಡಿಕೊಳ್ಳುತ್ತೇವೆ ಎಂದು ಹೇಳುತ್ತಾ ಬಂದಿದ್ದಾರೆ. ಇದುವರೆಗೂ ಅದರ ಆರಂಭಿಕ ಚಟುವಟಿಕೆಗಳು ಪ್ರಾರಂಭವಾಗಿಲ್ಲ… ಇದೊಂದು ಮರೆಮೋಸವಷ್ಟೆ.

ಇಂದು 430 ಪದವಿ ಕಾಲೇಜುಗಳಲ್ಲಿ ಮಾನವಿಕ ವಿಭಾಗಗಳು ಅಸ್ತಿತ್ವದ ಬಿಕ್ಕಟ್ಟು ಎದುರಿಸುತ್ತಿವೆ. ಖಾಸಗಿ ವಿವಿಗಳ ಲಿಬರಲ್ ಆರ್ಟ್ಸ್, ಬಹುಶಿಸ್ತೀಯ ವ್ಯಾಸಂಗ ಕ್ರಮದ ಎದುರು ತುಂಬಾ ಪೇಲವವಾಗಿ ಕಾಣುತ್ತಿದೆ. ಈ ಬಿಕ್ಕಟ್ಟನ್ನು ಸಮಗ್ರವಾಗಿ ಅಧ್ಯಯನ ಮಾಡಿ ಪರಿಹಾರ ಕಂಡುಕೊಳ್ಳುವ ಯಾವುದೇ ಕಾರ್ಯಯೋಜನೆ ಇಲ್ಲ..

1000 ವಿದ್ಯಾರ್ಥಿಗಳಿಗಿಂತ ಹೆಚ್ಚಿರುವ 50 ಪದವಿ ಕಾಲೇಜುಗಳ ಉನ್ನತೀಕರಣ. ಇದು ಬಾಯಿ ಮಾತಿನ ಹೇಳಿಕೆಯಷ್ಟೆ. ಇದಕ್ಕೆ ಯಾವುದೇ ನೀಲನಕ್ಷೆ ಇಲ್ಲ. ಇಂದು ಮಾರ್ಚ್ 7, ಆರು ತಿಂಗಳ ನಂತರ ಇದೇ ಉನ್ನತೀಕರಣದ ವಿಚಾರ ಎಲ್ಲಿಗೆ ಬಂದು ನಿಂತಿದೆ ಎಂದು ಕಾದು ನೋಡಿ ಪರಿಶೀಲಿಸಬಹುದು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ (ಕೆಕೆಆರ್‌ಡಿಬಿ) ಮೂಲಕ ಕಲ್ಬುರ್ಗಿ ಜಿಲ್ಲೆಯ ನಿಂಬರಗಾ, ಯಾದಗಿರಿ ಜಿಲ್ಲೆಯ ಕರ್ಕೇರಾ, ರಾಯಚೂರು ಜಿಲ್ಲೆಯ ಅಂಬಾಪುರ ಮತ್ತು ಕೊಪ್ಪಳ ಜಿಲ್ಲೆಯ ಬೇವೂರು ಗ್ರಾಮಗಳಲ್ಲಿ ವಸತಿಯುಕ್ತ ಪ್ರಥಮ ದರ್ಜೆ ಕಾಲೇಜುಗಳನ್ನು ತಲಾ 18 ಕೋಟಿ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು ಎಂದು ಹೇಳಿದ್ದಾರೆ. ಇದು ಸ್ವಾಗತಾರ್ಹ. ಆದರೆ ಕೆಕೆಆರ್‌ಡಿಬಿ ಕಾರ್ಯಕ್ಷಮತೆ ತುಂಬಾ ನಿರಾಶದಾಯಕವಾಗಿದೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿ ಕುರಿತು ಯಾವುದೇ ಬಗೆಯ ರಚನಾತ್ಮಕ ಕೆಲಸ ಮಾಡಿದ ಉದಾಹರಣೆಗಳಿಲ್ಲ. ಇದರ ಮೇಲೆ ಭ್ರಷ್ಟಾಚಾರದ ಆರೋಪಗಳಿವೆ. ಇಂತಹ ಮಂಡಳಿಯಿಂದ ಹೊಸ ಪದವಿ ಕಾಲೇಜುಗಳ ಸ್ಥಾಪನೆ ಮತ್ತು ನಿರ್ವಹಣೆ ಕುರಿತು ಭರವಸೆ ಇಲ್ಲ; ಆದರೆ ಕಾದು ನೋಡಬೇಕಿದೆ.

ಸರ್ಕಾರಿ ಪದವಿ ಕಾಲೇಜು ಹಾಗೂ ಪಾಲಿಟೆಕ್ನಿಕ್, ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಕೆಲಸ ಮಾಡುತ್ತಿರುವ ಮಹಿಳಾ ಅತಿಥಿ ಉಪನ್ಯಾಸಕರಿಗೆ 90 ದಿನಗಳ ಮಾತೃತ್ವ ಸೌಲಭ್ಯ ನೀಡಿರುವುದು ಸ್ವಾಗತಾರ್ಹವಾಗಿದೆ.

ಆದರೆ, ಬಸವಕಲ್ಯಾಣದಲ್ಲಿ ಖಾಸಗಿ ವಚನ ವಿಶ್ವವಿದ್ಯಾಲಯ ಪ್ರಾರಂಭಿಸಲು 25 ಎಕರೆ ಭೂಮಿ ಕೊಡುವ ಪ್ರಸ್ತಾಪವು ಒಂದು ಹಗರಣ ಎಂದೇ ಕರೆಯಬೇಕಾಗುತ್ತದೆ. ಏಕೆಂದರೆ, ಖಾಸಗಿ ಸಂಸ್ಥೆಗಳಿಗೆ ಸರ್ಕಾರಿ ಜಮೀನು ಕೊಡುವುದು ಭ್ರಷ್ಟಾಚಾರ ಎನಿಸಿಕೊಳ್ಳುತ್ತದೆ. ಮತ್ತು ಈ ರೀತಿ ಖಾಸಗಿಯವರಿಗೆ ಪ್ರೋತ್ಸಾಹಿಸುವುದು ಸಾಧಕವಲ್ಲ, ಬಾಧಕ ಎಂದು ವಿಷಾದದಿಂದ ಹೇಳಬೇಕಿದೆ.

ಇನ್ನು ಹಾಸ್ಟೆಲ್‌ಗಳಿಗೆ ಅನುದಾನ ಮುಂತಾದವುಗಳು ಸಹಜವಾದ ಆಡಳಿತಾತ್ಮಕ ಕರ್ತವ್ಯಗಳು. ಇದರಲ್ಲಿ ಹೆಚ್ಚುಗಾರಿಕೆ ಏನಿಲ್ಲ.

ಆದರೆ, ರಾಜ್ಯ ಶಿಕ್ಷಣ ನೀತಿ ಕುರಿತು ಯಾವುದೇ ಪ್ರಸ್ತಾಪವಿಲ್ಲ.. ಸಂಶೋಧನೆ ಕುರಿತು ಸಮಗ್ರ ನೀತಿಯಿಲ್ಲ. ಇಲ್ಲಿ ರಾಜ್ಯ ಶಿಕ್ಷಣ ನೀತಿಯೂ ಇಲ್ಲ, ರಾಷ್ಟ್ರೀಯ ಶಿಕ್ಷಣ ನೀತಿಯೂ ಇಲ್ಲ.. ಈ ಸರ್ಕಾರದ ಅವಧಿ ಇನ್ನು ಎರಡು ವರ್ಷ ಮಾತ್ರ. ಥೋರಟ್ ಆಯೋಗ ಸಲ್ಲಿಸಿದ ಶಿಫಾರಸ್ಸುಗಳ ವರದಿ ಮುಂಬರುವ ಆಗಸ್ಟ್ ತಿಂಗಳಿಗೆ ಒಂದು ವರ್ಷವಾಗುತ್ತದೆ. ಇದುವರೆಗೂ ಅದನ್ನು ಸಾರ್ವಜನಿಕವಾಗಿ ಪ್ರಕಟಿಸಲಿಲ್ಲ.. ವಿಧಾನಮಂಡಲದ ಎರಡೂ ಸದನಗಳಲ್ಲಿಯೂ ಮಂಡಿಸಲಿಲ್ಲ. ಇದು ಬಿಡಿ ಕ್ಯಾಬಿನೆಟ್ ಸಭೆಯಲ್ಲೂ ಚರ್ಚೆ ಮಾಡಲಿಲ್ಲ… ಈ ಬಾರಿ ಬಜೆಟ್‌ನಲ್ಲಿಯೂ ಪ್ರಸ್ತಾಪವಿಲ್ಲ. ಇದು ಬೇಜವಾಬ್ದಾರಿಯಲ್ಲವೇ? ಇನ್ನುಳಿದ ಎರಡು ವರ್ಷಗಳಲ್ಲಿ ಈ ಎಸ್‌ಇಪಿ ಪರಾಮರ್ಶೆಯಾಗಿ, ಅಗತ್ಯವಿದ್ದರೆ ಸೂಕ್ತ ತಿದ್ದುಪಡಿಯಾಗಿ ಹಂತ ಹಂತವಾಗಿ ಅನುಷ್ಠಾನಗೊಳಿಸಲು ಸಾಧ್ಯವೇ? ಇದ್ಯಾವುದೂ ಆಗದೆ 2028ರ ಚುನಾವಣೆಯಲ್ಲಿ ಬೇರೊಂದು ಪಕ್ಷ ಅಧಿಕಾರಕ್ಕೆ ಬಂದರೆ, ಅದು ಎಸ್‌ಇಪಿಯನ್ನು ಖಂಡಿತಾ ತಿರಸ್ಕರಿಸುತ್ತದೆ. ಆಗ ಇಲ್ಲಿನ ವಿದ್ಯಾರ್ಥಿಗಳ ಭವಿಷ್ಯವೇನು?

ರೋಹಿತ್ ವೇಮುಲ ಕಾಯ್ದೆ ಜಾರಿ ಕುರಿತು ಪ್ರಸ್ತಾಪ ಸ್ವಾಗತಾರ್ಹ. ಆದರೆ ಇದನ್ನು ಅನುಷ್ಠಾನಗೊಳಿಸುವ ರಾಜಕೀಯ ಇಚ್ಛಾಶಕ್ತಿ ಬೇಕು. ಏಕೆಂದರೆ ಕಳೆದ ಒಂದು ವರ್ಷದಿಂದ ಇದರ ಕುರಿತು ಸಾಕಷ್ಟು ಚರ್ಚೆ, ಸಂವಾದ ಮಾಡಿದ್ದೇವೆ. ಇಲ್ಲಿನ ಪ್ರಗತಿಪರ ಲೇಖಕರು, ನ್ಯಾಯವಾದಿಗಳು, ಪ್ರಾಧ್ಯಾಪಕರ ತಂಡವು ಸತತವಾಗಿ ಅಧ್ಯಯನ ಮಾಡಿ ಇದರ ಕರಡು ಪ್ರತಿ ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಆದರೆ ಇದುವರೆಗೂ ಕ್ಯಾಬಿನೆಟ್ ಸಭೆಯಲ್ಲೂ ಇದರ ಕುರಿತು ಚರ್ಚೆ ನಡೆಸಲಿಲ್ಲ. ಕೇವಲ ಪ್ರಿಯಾಂಕ್ ಖರ್ಗೆಯವರು ಮಾತ್ರ ಇದರ ಕುರಿತು ಗಂಭೀರವಾಗಿ ಪರಿಗಣಿಸಿದ್ದಾರೆ. ಆದರೆ ಉನ್ನತ ಶಿಕ್ಷಣ ಸಚಿವರು ಮತ್ತು ಕಾನೂನು ಸಚಿವರು ಆಸಕ್ತಿ ತೋರಿಸುತ್ತಿಲ್ಲ. ಇದು ಕಳೆದ ಒಂದು ವರ್ಷದ ಬೆಳವಣಿಗೆ.. ಈ ಬಾರಿಯಾದರೂ ಅನುಮೋದನೆ ದೊರಕಬಹುದು, ನೋಡೋಣ.

ವಿದ್ಯಾರ್ಥಿ ಸಂಘಟನೆಗಳ ಚುನಾವಣೆ ನಿರ್ಧಾರ ಮೇಲ್ನೋಟಕ್ಕೆ ಸ್ವಾಗತಾರ್ಹವಾದರೂ ನಿರ್ದಿಷ್ಟ ಮಾರ್ಗಸೂಚಿಗಳಿಲ್ಲದೇ ಹೋದರೆ, ಸೈದ್ಧಾಂತಿಕ ಸ್ಪಷ್ಟತೆಯಿಲ್ಲದೇ ಹೋದರೆ ಕ್ಯಾಂಪಸ್‌ಗಳು ಎಬಿವಿಪಿಯ ಆಡೊಂಬಲವಾಗುವುದರಲ್ಲಿ ಅನುಮಾನವಿಲ್ಲ..

ಒಟ್ಟಾರೆ ಉನ್ನತ ಶಿಕ್ಷಣದ ಕುರಿತು ಯಾವುದೇ ದೂರದರ್ಶಿತ್ವ ಮತ್ತು ಧ್ಯೇಯ (ವಿಷನ್ & ಪ್ಯಾಶನ್) ಇಲ್ಲದ ಈ ಬಜೆಟ್ ಕೇವಲ ಕಾಮಗಾರಿಗಳ ಘೋಷಣೆಯಷ್ಟೆ. ವಾಸ್ತವದಲ್ಲಿ ಸರ್ಕಾರವು ಉನ್ನತ ಶಿಕ್ಷಣದ ಜೊತೆಗೆ ಎಂಗೇಜ್ ಆಗಬೇಕು. ಆದರೆ ಈಗ ಕೇವಲ ಮಧ್ಯಸ್ಥಿಕೆ ವಹಿಸುತ್ತಿದೆ. ಇದು ಕೇವಲ ಫೈರ್ ಫೈಟಿಂಗ್ ಅಷ್ಟೇ.. ಅಥವಾ ಅದೂ ಅಲ್ಲ. ಜಾಗತಿಕವಾಗಿ ಉನ್ನತ ಶಿಕ್ಷಣ ಯಾವ ಹಂತದಲ್ಲಿದೆ? ನಾವೆಲ್ಲಿದ್ದೇವೆ ಎನ್ನುವ ಕನಿಷ್ಠ ಕಾಳಜಿಯೂ ಇಲ್ಲದೇ ಹೋದರೆ ಹೇಗೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕರ್ನಾಟಕ ಸರ್ಕಾರ ಸಾಮಾಜಿಕ ನ್ಯಾಯ ನಿರಾಕರಿಸುತ್ತಿದೆ’: ವಿಶೇಷ ಸಚಿವ ಸಂಪುಟ ಸಭೆ ಮುಂದೂಡಿಕೆಗೆ ಹೋರಾಟಗಾರರ ಖಂಡನೆ

ಕಳೆದ 35 ವರ್ಷಗಳಿಂದ ಒಳಮೀಸಲಾತಿಗಾಗಿ ಆಗ್ರಹಿಸಿ ನಡೆಯುತ್ತಿದ್ದ ಹೋರಾಟಕ್ಕೆ ಸುಪ್ರೀಂ ಕೋರ್ಟ್‌ ತೀರ್ಪಿನ ನಂತರ ಕರ್ನಾಟಕದಲ್ಲಿ ಒಳಮೀಸಲಾತಿ ಜಾರಿಯಾಗುವ ಭರವಸೆಯನ್ನು ಒಳಮೀಸಲಾತಿ ಹೋರಾಟಗಾರರು ಹೊಂದಿದ್ದರು.  ಕಾಂಗ್ರೆಸ್‌ ನೇತೃತ್ವದ ಕರ್ನಾಟಕ ಸರ್ಕಾರ ಎರಡು ವರ್ಷಗಳಿಂದ ನಿರಂತರವಾಗಿ...

ನೇಪಾಳದ ನೂತನ ಪ್ರಧಾನಿಯಾಗಿ 35ವರ್ಷದ ಬಾಲೇಂದ್ರ ಶಾ ಪ್ರಮಾಣ ವಚನ ಸ್ವೀಕಾರ

ಕಠ್ಮಂಡು: 'ಬಾಲೆನ್' ಎಂದು ಪ್ರೀತಿಯಿಂದ ಕರೆಯಲ್ಪಡುವ ಬಾಲೇಂದ್ರ ಶಾ ಅವರು ಶುಕ್ರವಾರ ನೇಪಾಳದ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು, ಹಿಮಾಲಯನ್ ರಾಷ್ಟ್ರದಲ್ಲಿ ಉನ್ನತ ಕಾರ್ಯಕಾರಿ ಹುದ್ದೆಯನ್ನು ಅಲಂಕರಿಸಿದ ಅತ್ಯಂತ ಕಿರಿಯ ನಾಯಕರಾಗಿ ಬಾಲೆನ್...

ಶಿವನ ಅವತಾರ ಎಂದು ಹೇಳಿಕೊಳ್ಳುತ್ತಿದ್ದ ಋುಷಿಕೇಶ್ ವೈದ್ಯ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣ: ಎಫ್‌ಐಆರ್ ನಂತರ ದೇವಮಾನವ ಪರಾರಿ

ವಸಾಯಿ: ಶಿವನ ಅವತಾರ ಎಂದು ಹೇಳಿಕೊಂಡು ಮಹಿಳೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಸ್ವಯಂ ಘೋಷಿತ ದೇವಮಾನವ ಋಷಿಕೇಶ್ ವೈದ್ಯ ವಿರುದ್ಧ ಪ್ರಕರಣ ದಾಖಲಾಗಿದೆ. ಈ ಘಟನೆ ವಸಾಯಿ-ವಿರಾರ್ ಪ್ರದೇಶ...

ಜ್ಯೋತಿಷಿ ಅಶೋಕ್ ಖರತ್ ಲೈಂಗಿಕ ದೌರ್ಜನ್ಯ; ಸಂತ್ರಸ್ತರ ವಿಡಿಯೋ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕೇಸ್: ದೇವೇಂದ್ರ ಫಡ್ನವೀಸ್

ಮುಂಬೈ: ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ಅವರಿಂದ ದೌರ್ಜನ್ಯಕ್ಕೊಳಗಾದ ಸಂತ್ರಸ್ತ ಮಹಿಳೆಯರ ಅಶ್ಲೀಲ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಪ್ರಸಾರ ಮಾಡುವವರ ವಿರುದ್ಧ ಕ್ರಿಮಿನಲ್ ಕ್ರಮ ಕೈಗೊಳ್ಳಲಾಗುವುದು ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ...

ಕ್ಷಿಪಣಿಗಳ ಮೇಲೆ ಭಾರತ ಸೇರಿದಂತೆ ಹಲವು ರಾಷ್ಟ್ರಗಳಿಗೆ ಧನ್ಯವಾದ ಸಂದೇಶ ಬರೆದ ಇರಾನ್

ಯುನೈಟೆಡ್ ಸ್ಟೇಟ್ಸ್-ಇಸ್ರೇಲ್ ವಿರುದ್ಧದ ಯುದ್ಧದ ಮಧ್ಯೆ ಇರಾನ್‌ನೊಂದಿಗೆ ಒಗ್ಗಟ್ಟನ್ನು ತೋರಿಸಿದ ರಾಷ್ಟ್ರಗಳಿಗೆ ಇರಾನ್‌ ತನ್ನ ಕ್ಷಿಪಣಿಗಳು ಕೃತಜ್ಞತಾ ಸಂದೇಶ ಬರೆದಿದೆ. ಕ್ಷಿಪಣಿಗಳ ಮೇಲೆ ಬರೆಯಲಾದ ಸಂದೇಶಗಲ್ಲಿ "ಭಾರತದ ಜನರಿಗೆ ಧನ್ಯವಾದಗಳು" ಎಂದು ಕಂಡುಬಂದಿದೆ. ಜೊತೆಗೆ,...

ಬಿಜೆಪಿಗೆ ಉಳಿದೆಲ್ಲಾ ಪಕ್ಷಗಳಿಗಿಂತ 10 ಪಟ್ಟು ಹೆಚ್ಚು ದೇಣಿಗೆ: ವರದಿ

2024–25ರ ಆರ್ಥಿಕ ವರ್ಷದಲ್ಲಿ ಆಡಳಿತಾರೂಢ ಭಾರತೀಯ ಜನತಾ ಪಕ್ಷ ( ಬಿಜೆಪಿ ) ಇತರ ಎಲ್ಲಾ ರಾಷ್ಟ್ರೀಯ ಪಕ್ಷಗಳು ಒಟ್ಟು ಸೇರಿಸಿ ಪಡೆದ ದೇಣಿಗೆಗಿಂತ ಸುಮಾರು ಹತ್ತು ಪಟ್ಟು ಹೆಚ್ಚು ದೇಣಿಗೆ ಪಡೆದಿದೆ...

ವಿಶಾಖಪಟ್ಟಣ| ಕುಡಿದ ಮತ್ತಿನಲ್ಲಿ ಎಪಿಎಸ್‌ಆರ್‌ಟಿಸಿ ಬಸ್‌ ಅಪಹರಿಸಿದ ವ್ಯಕ್ತಿ

ಮದ್ಯದ ಅಮಲಿನಲ್ಲಿದ್ದ ವ್ಯಕ್ತಿಯೊಬ್ಬ ಎಪಿಎಸ್‌ಆರ್‌ಟಿಸಿ ಬಸ್ಸನ್ನು ಅಪಹರಿಸಿ ಸುಮಾರು ಒಂದು ಕಿಲೋಮೀಟರ್ ಅಜಾಗರೂಕತೆಯಿಂದ ಚಲಾಯಿಸಿ ಸಾರ್ವಜನಿಕರಲ್ಲಿ ಭೀತಿ ಮೂಡಿಸಿದ ಆಘಾತಕಾರಿ ಘಟನೆ ವಿಶಾಖಪಟ್ಟಣದಲ್ಲಿ ನಡೆದಿದೆ. ಪ್ರತ್ಯಕ್ಷ್ಯದರ್ಶಿಗಳ ಪ್ರಕಾರ, ಮಾರ್ಚ್ 26 ರ ಗುರುವಾರ ಬಸ್...

ಕರ್ನಾಟಕ ವಿಧಾನಸಭೆಯಲ್ಲಿ ಐಪಿಎಲ್ ಟಿಕೆಟ್ ವಿವಾದ; ಶಾಸಕರನ್ನು ಟೀಕಿಸಿದ ತೇಜಸ್ವಿ ಸೂರ್ಯ ವಿರುದ್ಧ ಡಿಕೆಶಿ ವಾಗ್ದಾಳಿ

ಶಾಸಕರಿಗೆ ಐಪಿಎಲ್ 2026 ಟಿಕೆಟ್ ಹಂಚಿಕೆ ವಿವಾದದ ನಡುವೆ ಕರ್ನಾಟಕ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರೋಧ ಪಕ್ಷದ ನಾಯಕ ತೇಜಸ್ವಿ ಸೂರ್ಯ ವಿರುದ್ಧ ಕಿಡಿಕಾರಿದ್ದಾರೆ  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುವ ಪಂದ್ಯಗಳಿಗೆ ವಿಐಪಿ ಟಿಕೆಟ್‌ಗಳಿಗೆ...

ವಿಚಾರಣೆಯ ನಂತರವೂ 8 ಲಕ್ಷ ಮತದಾರರ ಹೆಸರು ಅಳಿಸಲಾಗಿದೆ; ಬಂಗಾಳದಲ್ಲಿ ಎನ್.ಆರ್.ಸಿ ಇಲ್ಲ: ಮಮತಾ ಬ್ಯಾನರ್ಜಿ

ಮೊದಲ ಪೂರಕ ಮತದಾರರ ಪಟ್ಟಿ ಪ್ರಕಟವಾದ ನಂತರ ಎಂಟು ಲಕ್ಷ ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. ಇದು ರಾಜ್ಯದಲ್ಲಿ ಚುನಾವಣಾ ಪಾರದರ್ಶಕತೆಯ ಬಗ್ಗೆ ಗಂಭೀರ...

ಪೆಟ್ರೋಲ್-ಡೀಸೆಲ್ ಮೇಲಿನ ಅಬಕಾರಿ ಸುಂಕ ಕಡಿತಗೊಳಿಸಿದ ಕೇಂದ್ರ ಸರ್ಕಾರ

ಜಾಗತಿಕ ತೈಲ ಬೆಲೆಗಳ ಏರಿಕೆಯ ಪರಿಣಾಮವನ್ನು ತಗ್ಗಿಸುವ ಪ್ರಯತ್ನದಲ್ಲಿ ಸರ್ಕಾರವು ಪೆಟ್ರೋಲ್ ಮತ್ತು ಡೀಸೆಲ್ ಮೇಲಿನ ಅಬಕಾರಿ ಸುಂಕವನ್ನು ಪ್ರತಿ ಲೀಟರ್‌ಗೆ 10 ರೂ.ಗಳಷ್ಟು ಕಡಿಮೆ ಮಾಡಿದೆ, ಇದರಿಂದಾಗಿ ಪೆಟ್ರೋಲ್‌ಗೆ 3 ರೂ.ಗಳಷ್ಟು...