ಏಪ್ರಿಲ್ 17ರಂದು ಕರ್ನಾಟಕದ ಒಂದು ಲೋಕಸಭೆ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳಿಗೆ ನಡೆದಿದ್ದ ಉಪಚುನಾವಣೆಯ ಮತ ಎಣಿಕೆ ಇಂದು ಆರಂಭಗೊಂಡಿದೆ. ಆರಂಭಿಕ ಹಂತದ ಮತ ಎಣಿಕೆಯ ವರದಿಯಂತೆ ಮಸ್ಕಿಯಲ್ಲಿ ಕಾಂಗ್ರೆಸ್, ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿಗಳು ಮುನ್ನಡೆ ಸಾಧಿಸಿದ್ದರೆ ಬೆಳಗಾವಿಯಲ್ಲಿ ಲೋಕಸಭಾ ಕ್ಷೇತ್ರದಲ್ಲಿ ನೇರಾನೇರ ಪೈಪೋಟಿ ಏರ್ಪಟ್ಟಿದೆ.
ಮಸ್ಕಿಯಲ್ಲಿ 7ನೇ ಸುತ್ತಿನ ಮತ ಎಣಿಕೆಯ ನಂತರ ಕಾಂಗ್ರೆಸ್ ಅಭ್ಯರ್ಥಿ ಬಸನಗೌಡ ತುರ್ವಿಹಾಳ 22616 ಮತಗಳನ್ನು ಪಡೆದರೆ ಬಿಜೆಪಿ ಅಭ್ಯರ್ಥಿ ಪ್ರತಾಪಗೌಡ ಪಾಟೀಲ್ 14637 ಮತಗಳನ್ನು ಪಡೆದಿದ್ದಾರೆ.
ಬಸವಕಲ್ಯಾಣ ಕ್ಷೇತ್ರದಲ್ಲಿ 4ನೇ ಸುತ್ತಿನ ನಂತರ ಬಿಜೆಪಿ ಅಭ್ಯರ್ಥಿ ಶರಣು ಸಲಗರ 12023 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಮಾಲಾ ನಾರಾಯಣ್‌ರಾವ್ 6291 ಮಗಳನ್ನು ಪಡೆದಿದ್ದಾರೆ.
ಇನ್ನು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಂಗಳಾ ಅಂಗಡಿ 22ನೇ ಸುತ್ತಿನ ಮತ ಎಣಿಕೆಯ ನಂತರ 72967 ಮತಗಳನ್ನು ಪಡೆದರೆ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ 68921 ಮತಗಳನ್ನು ಪಡೆಯುವ ಮೂಲಕ ಪ್ರಬಲ ಪೈಪೋಟಿ ನೀಡುತ್ತಿದ್ದಾರೆ.
ಇವೆಲ್ಲವೂ ಆರಂಭಿಕ ಮುನ್ನಡೆಗಳಾಗಿದ್ದು ಇನ್ನು ಹಲವು ಹಂತದ ಮತ ಎಣಿಕೆ ಬಾಕಿ ಇದೆ. ಹಾಗಾಗಿ ಈ ಅಂಕಿ ಅಂಶಗಳು ಯಾವಾಗ ಬೇಕಾದರೂ ಬದಲಾಗುವ ಸಂಭವವಿದೆ.
ಇದನ್ನೂ ಓದಿ : Assembly election 2021 result | ಪಂಚರಾಜ್ಯಗಳ ವಿಧಾನಸಭಾ ಚುನಾವಣಾ ಮತ ಎಣಿಕೆ ಇದುವರೆಗಿನ ಅಪ್ಡೇಟ್ಸ್


