Homeಕರ್ನಾಟಕಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

ಕರ್ನಾಟಕ ಉಪಚುನಾವಣೆ: ಮೂರೂ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆ

- Advertisement -
- Advertisement -

ರಾಜ್ಯದ ಬೆಳಗಾವಿ ಲೋಕಸಭೆ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಮೂರು ಕ್ಷೇತ್ರಗಳಿಗೂ ಮುಂದಿನ ತಿಂಗಳು ಏಪ್ರಿಲ್‌ 17ರಂದು ಮತದಾನ ನಡೆಯಲಿದ್ದು, ಮೂರು ಕ್ಷೇತ್ರಗಳ ಮತ ಏಣಿಕೆ ಮೇ 2ರಂದು ನಡೆಯಲಿದೆ. ರಾಜ್ಯದ ಮೂರು ಪ್ರಮುಖ ಪಕ್ಷಗಳಿಂದ ಅಭ್ಯರ್ಥಿಗಳ ಅಂತಿಮ ಪಟ್ಟಿ ಬಿಡುಗಡೆಯಾಗಿದೆ.

ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ, ಬಿಜೆಪಿ ಸಂಸದ ಸುರೇಶ್ ಅಂಗಡಿ ಅವರ ನಿಧನದಿಂದ ತೆರವಾಗಿದ್ದ ಬೆಳಗಾವಿ ಲೋಕಸಭೆ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು, ಕಾಂಗ್ರೆಸ್ ಪಕ್ಷದಿಂದ ಸತೀಶ್ ಜಾರಕಿಹೊಳಿ ಕಣಕ್ಕಿಳಿಯಲಿದ್ದಾರೆ. ಬಿಜೆಪಿಯಿಂದ ಸುರೇಶ್ ಅಂಗಡಿಯವರ ಪತ್ನಿ ಮಂಗಳಾ ಅಂಗಡಿ ಇಲ್ಲಿ ಸ್ಪರ್ಧಿಸಲಿದ್ದಾರೆ.

ಇನ್ನು ರಾಯಚೂರು ಜಿಲ್ಲೆಯ ಮಸ್ಕಿ ವಿಧಾನಕ್ಷೇತ್ರದ ಶಾಸಕರಾಗಿದ್ದ ಪ್ರತಾಪ್ ಗೌಡ ಪಾಟೀಲ್ (ಈ ಮೊದಲು ಕಾಂಗ್ರೆಸ್ ಅಭ್ಯರ್ಥಿ) ಅವರ ರಾಜೀನಾಮೆಯಿಂದ ತೆರವಾಗಿದ್ದ ಕ್ಷೇತ್ರ. ಇಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸನಗೌಡ ತುರುವಿಹಾಳ (ಈ ಮೊದಲು ಬಿಜೆಪಿ ಅಭ್ಯರ್ಥಿ) ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ಪ್ರತಾಪಗೌಡ ಪಾಟೀಲ ಸ್ಪರ್ಧಿಸಲಿದ್ದಾರೆ.

ಇದನ್ನೂ ಓದಿ: ಮುಂಬರುವ ಉಪಚುನಾವಣೆಗಳಲ್ಲಿಯೂ ಗೆಲ್ಲುವುದಷ್ಟೇ ಅಲ್ಲ…! – ಸಿದ್ದುಗೆ ಸವಾಲ್ ಹಾಕಿದ ಬಿಎಸ್‌ವೈ

ಬೀದರ್ ಜಿಲ್ಲೆಯ ಬಸವಕಲ್ಯಾಣ ವಿಧಾನಸಬೆ ಕ್ಷೇತ್ರದ ಕಾಂಗ್ರೆಸ್ ಶಾಸಕ ಬಿ. ನಾರಾಯಣರಾವ್ ನಿಧನದಿಂದಾಗಿ ಉಪಚುನಾವಣೆ ನಡೆಯುತ್ತಿದ್ದು, ಬಿಜೆಪಿಯಿಂದ ಶರಣು ಸಲಗಾರ್, ಕಾಂಗ್ರೆಸ್‌ನಿಂದ ಮಲ್ಲಮ್ಮ ಮತ್ತು ಜೆಡಿಎಸ್‌ನಿಂದ ಸೈಯದ್ ಅಶ್ರಬ್ ಅಲಿಖಾನ್ ಸ್ಪರ್ಧಿಸಲಿದ್ದಾರೆ.

ಬಸವಕಲ್ಯಾಣ ಹೊರತುಪಡಿಸಿ ಉಳಿದ ಎರಡು ಕ್ಷೇತ್ರಗಳಲ್ಲಿಯೂ ಜೆಡಿಎಸ್ ಸ್ಪರ್ಧಿಸುತ್ತಿಲ್ಲ. ಶಾಸಕ ಎಂ.ಸಿ.ಮನಗೂಳಿ ಅವರ ನಿಧನದಿಂದ ತೆರವಾಗಿರುವ ಸಿಂಧಗಿ ವಿಧಾನಸಭೆ ಕ್ಷೇತ್ರಕ್ಕೆ ಇನ್ನು ಉಪಚುನಾವಣೆ ಘೋಷಣೆಯಾಗಿಲ್ಲ.

ಮಾರ್ಚ್ 23ರಂದು ಉಪ ಚುನಾವಣೆಯ ಅಧಿಸೂಚನೆ ಪ್ರಕಟವಾಗಲಿದ್ದು, ಮಾರ್ಚ್ 30 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ. 31ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದ್ದು, ಏಪ್ರಿಲ್‌ 3 ನಾಮಪತ್ರ ಹಿಂಪಡೆಯಲು ಕೊನೆಯ ದಿನವಾಗಿದೆ.

ಚುನಾವಣೆ ಘೋಷಣೆ ಆದ ದಿನದಿಂದಲೇ ಮಾದರಿ ನೀತಿಸಂಹಿತೆ ಜಾರಿಯಲ್ಲಿರಲಿದೆ ಎಂದು ಕೇಂದ್ರ ಚುನಾವಣಾ ಆಯೋಗ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ತಮಿಳುನಾಡು, ಅಸ್ಸಾಂ, ಕೇರಳ, ಪುದುಚೇರಿ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗೂ ಚುನಾವಣೆ ಘೋಷಣೆಯಾಗಿದ್ದು, ಚುನಾವಣಾ ಕಣ ದಿನದಿಂದ ದಿನಕ್ಕೆ ರಂಗೇರುತ್ತಿದೆ.


ಇದನ್ನೂ ಓದಿ: ತಮಿಳುನಾಡು: ಚುನಾವಣಾ ಪ್ರಚಾರದಲ್ಲಿ ಮೋದಿ ಫೋಟೊ ಬಳಸಲು BJP ಅಭ್ಯರ್ಥಿ ಹಿಂದೇಟು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಸಿಲಿನ ತಾಪವಿದ್ದರೂ ಬಿಜೆಪಿ ಒತ್ತಡದಿಂದ ಬಂಗಾಳದಲ್ಲಿ 7 ಹಂತದ ಚುನಾವಣೆ: ಅಭಿಷೇಕ್ ಬ್ಯಾನರ್ಜಿ

0
ಪಶ್ಚಿಮ ಬಂಗಾಳದಲ್ಲಿ ಸಾಕಷ್ಟು ಬಿಸಿಲಿನ ತಾಪವಿದ್ದರೂ, ಏಳು ಹಂತಗಳಲ್ಲಿ ಲೋಕಸಭೆ ಚುನಾವಣೆ ಆಯೋಜಿಸುವಂತೆ ಬಿಜೆಪಿ ಚುನಾವಣಾ ಆಯೋಗವನ್ನು ಒತ್ತಾಯಿಸಿದೆ ಎಂದು ಟಿಎಂಸಿಯ ನಾಯಕ ಅಭಿಷೇಕ್ ಬ್ಯಾನರ್ಜಿ ಮಂಗಳವಾರ ಆರೋಪಿಸಿದ್ದಾರೆ. ಟಿಎಂಸಿಯ ಡಾರ್ಜಿಲಿಂಗ್ ಅಭ್ಯರ್ಥಿ ಗೋಪಾಲ್...