Homeಮುಖಪುಟಉಪಚುನಾವಣೆ ಮತ ಎಣಿಕೆ: ಅನರ್ಹರಿಗೆ ಜೈ ಎನ್ನುತ್ತಿರುವ ಮತದಾರರು!

ಉಪಚುನಾವಣೆ ಮತ ಎಣಿಕೆ: ಅನರ್ಹರಿಗೆ ಜೈ ಎನ್ನುತ್ತಿರುವ ಮತದಾರರು!

- Advertisement -
- Advertisement -

15 ಕ್ಷೇತ್ರಗಳಿಗೆ ನಡೆದ ಉಪಚುನಾವಣೆಯ ಮತ ಎಣಿಕೆ ಇಂದು ಆರಂಭವಾಗಿದ್ದು ಸದ್ಯದ ವರದಿ ಪ್ರಕಾರ ಬಿಜೆಪಿ ಭಾರೀ ಮುನ್ನಡೆ ಸಾಧಿಸಿದ್ದು ಕಾಂಗ್ರೆಸ್‌ಗೆ ಮುಖಭಂಗವಾಗಿದೆ. ಜೆಡಿಎಸ್‌ ಸಮಾಧಾನದ ನಿಟ್ಟುಸಿರು ಬಿಟ್ಟಿದೆ. ಪಕ್ಷೇತರ ಅಭ್ಯರ್ಥಿಯ ಮೊಗದಲ್ಲಿ ಮಂದಹಾಸ ಬೀರಿದೆ.

ಹೊಸಕೋಟೆಯಲ್ಲಿ ಶರತ್‌ ಬಚ್ಚೇಗೌಡ, ಯಶವಂತಪುರ ಮತ್ತು ಕೆ.ಆರ್‌ ಪೇಟೆಯಲ್ಲಿ ಜೆಡಿಎಸ್‌, ಶಿವಾಜಿನಗರ ಮತ್ತು ಹುಣಸೂರಿನಲ್ಲಿ ಕಾಂಗ್ರೆಸ್‌ ಮುನ್ನಡೆಯನ್ನು ಕಂಡರೆ ಉಳಿದ 10 ಕ್ಷೇತ್ರಗಳಲ್ಲಿಯೂ ಬಿಜೆಪಿಯ ಅನರ್ಹ ಶಾಸಕರು ಮುನ್ನಡೆ ಸಾಧಿಸುವ ಮೂಲಕ  ಗೆಲುವಿನತ್ತ ಮುನ್ನಡೆದಿದ್ದಾರೆ.

ಅದರಲ್ಲಿಯೂ ಯಲ್ಲಾಪುರ ಕ್ಷೇತ್ರದ ಅನರ್ಹ ಶಾಸಕ ಶಿವರಾಮ್‌ ಹೆಬ್ಬಾರ್‌ 15000 ಸಾವಿರ ಮತಗಳ ಭಾರೀ ಅಂತರವನ್ನು ಕಾಯ್ದುಕೊಂಡಿದ್ದು ಬಹುತೇಕ ಗೆಲುವಿನ ಸನಿಹದಲ್ಲಿದ್ದಾರೆ. ಇನ್ನು ಚಿಕ್ಕಬಳ್ಳಾಪುರದಲ್ಲಿ ಡಾ.ಕೆ ಸುಧಾಕರ್‌ ಕೂಡ ಗೆಲುವಿನತ್ತ ಹೆಜ್ಜೆ ಹಾಕಿದ್ದು ಅವರು ಕೂಡ 8000 ಮತಗಳ ಭಾರೀ ಅಂತರವನ್ನು ಹೊಂದಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪನವರ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಈ ಫಲಿತಾಂಶದಿಂದ ನಿಟ್ಟುಸಿರು ಬಿಡುವಂತಾಗಿದ್ದು ಇನ್ನು ಮೂರುವರೆ ವರ್ಷಗಳ ಕಾಲ ಸುಭದ್ರವಾಗಿರುತ್ತದೆ ಎನ್ನಲಾಗುತ್ತಿದೆ. ಅದೇ ರೀತಿ ಇನ್ನು ಎಷ್ಟು ಕ್ಷೇತ್ರಗಳಲ್ಲಿ ಶಾಸಕರ ಕುದುರೆ ವ್ಯಾಪಾರ, ಆಪರೇಷನ್ ಕಮಲ, ಉಪಚುನಾವಣೆಗಳು ನಡೆಯುತ್ತವೆಯೋ ಗೊತ್ತಿಲ್ಲ. ಆದರೆ ಆ ಸಾಧ್ಯತೆಯೊಂದು ಇದ್ದೇ ಇದೆ.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...