Homeಕರ್ನಾಟಕಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಉಪಚುನಾವಣೆ: ಸಿಂಧಗಿಯಲ್ಲಿ ಬಿಜೆಪಿ ಹಣದ ಹೊಳೆ ಹರಿಸುತ್ತಿದೆ ಪ್ರತಿಪಕ್ಷಗಳ ಆರೋಪ

ಸಿಂಧಗಿಯಲ್ಲಿ ಬಿಜೆಪಿಯವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂ. ನೀಡಿದ್ದಾರೆ- ಸಿದ್ದರಾಮಯ್ಯ

- Advertisement -
- Advertisement -

ರಾಜ್ಯದಲ್ಲಿ ಉಪಚುನಾವಣೆ ಕಣದ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದರೂ ಪಕ್ಷಗಳ ನಡುವಿನ ಕೆಸರೆರಚಾಟ ಮಾತ್ರ ನಿಂತಿಲ್ಲ. ಬಹಿರಂಗ ಪ್ರಚಾರ ಅಂತ್ಯವಾದ ಮೇಲೆಯೂ ಆಡಳಿತಾರೂಢ ಬಿಜೆಪಿಯು ಸಿಂಧಗಿ ಕ್ಷೇತ್ರದಲ್ಲಿ ಮತದಾರರಿಗೆ ಹಣ ಹಂಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿಗಳಾದ ಎಚ್.ಡಿ.ಕುಮಾರಸ್ವಾಮಿ, ಸಿದ್ದರಾಮಯ್ಯ ಆರೋಪ ಮಾಡಿದ್ದಾರೆ.

“ಸಚಿವರಾದ ವಿ.ಸೋಮಣ್ಣ, ಸಿ.ಸಿ ಪಾಟೀಲ್, ಗೋವಿಂದ ಕಾರಜೋಳ ಸೇರಿದಂತೆ ಏಳೆಂಟು ಮಂತ್ರಿಗಳು ಇವತ್ತಿಗೂ ಸಮೀಪದ ರೆಸಾರ್ಟ್‌ನಲ್ಲಿ ಬಿಡು ಬಿಟ್ಟಿದ್ದಾರೆ. ಪ್ರತಿ ಹಳ್ಳಿಗೆ 30 ರಿಂದ 40 ಲಕ್ಷ ರೂಪಾಯಿ ಹಂಚಿಕೆ ಆಗಿದೆ. ಖುದ್ದು ಸಚಿವರೇ ಈ ಕೃತ್ಯದಲ್ಲಿ ತೊಡಗಿರುವ ಮಾಹಿತಿಯಿದೆ. ಅದೇ ರೀತಿ ಕಾಂಗ್ರೆಸ್ ಪಕ್ಷದಿಂದಲೂ ದೊಡ್ಡ ಪ್ರಮಾಣದಲ್ಲಿ ಹಣ ಹಂಚುವ ಕೆಲಸ ನಡೆದಿದೆ” ಎಂದು ಕುಮಾರಸ್ವಾಮಿ ಆರೋಪಿಸಿದ್ದಾರೆ.

’ಕೆಲ ಹಳ್ಳಿಗಳಲ್ಲಿ ಐದರಿಂದ ಆರು ಮತಗಟ್ಟೆಗಳಿವೆ. ಪ್ರತೀ ಮತಗಟ್ಟೆಗೆ ತಲಾ 5 ಲಕ್ಷ ರೂಪಾಯಿ ನೀಡಲಾಗುತ್ತಿದೆ. ಒಂದು ಮತಕ್ಕೆ 1,000 ರೂಪಾಯಿ ನಿಗದಿ ಮಾಡಿದ್ದಾರೆ. ಬಿಜೆಪಿ ರಾಜ್ಯದಲ್ಲಿ ಆಪರೇಷನ್ ಕಮಲದ ಮೂಲಕ ಸರ್ಕಾರ ರಚನೆ ಮಾಡಿದ ಮೇಲೆ ಎಲ್ಲ ಚುನಾವಣೆಗಳನ್ನು ಗೆದ್ದಿರುವುದು ಹಣದ ಹೊಳೆ ಹರಿಸಿಯೇ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಇದನ್ನೂ ಓದಿ: ದಕ್ಷಿಣ ಕನ್ನಡ: BJP ನಾಯಕನ ಮೇಲೆ ಬಜರಂಗ ದಳದ ಕಾರ್ಯಕರ್ತರಿಂದ ತಲವಾರು ದಾಳಿ

ಮುಂದುವರಿದು, ’ಎರಡೂ ರಾಷ್ಟ್ರೀಯ ಪಕ್ಷಗಳು ಹಣ ಬಲದಿಂದ ಚುನಾವಣೆ ಗೆಲ್ಲಬೇಕು ಎಂದು ಹೊರಟಿವೆಯೇ ವಿನಾಃ ಅಭಿವೃದ್ಧಿಯಿಂದಲ್ಲ. ನಾವು ಕ್ಷೇತ್ರದ ಜನರಿಗೆ ಅಭಿವೃದ್ಧಿ ವಿಷಯಗಳನ್ನಷ್ಟೇ ಹೇಳಿದ್ದೇವೆ. ಆ ಮೂಲಕ ಸಿಂಧಗಿ ಕ್ಷೇತ್ರದಲ್ಲಿ ನಾವೇ ಗೆಲುತ್ತೇವೆ’ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇತ್ತ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕೂಡ ಬಿಜೆಪಿ ವಿರುದ್ಧ ಹಣ ಹಂಚುತ್ತಿರುವ ಆರೋಪ ಮಾಡಿದ್ದಾರೆ.  “ಸಿಂಧಗಿ ಕ್ಷೇತ್ರದಲ್ಲಿ ಬಿಜೆಪಿ ಅವರು ಅಂಜುಮಾನ್ ಸಂಸ್ಥೆಯವರಿಗೆ 5 ಲಕ್ಷ ರೂಪಾಯಿ ಹಣ ಕೊಟ್ಟು ಅಲ್ಪಸಂಖ್ಯಾತ ಸಮುದಾಯದವರು ಬಿಜೆಪಿಗೆ ಮತ ಹಾಕಲ್ಲ ಎಂದು ಗೊತ್ತು, ನಮಗೆ ಮತ ನೀಡದಿದ್ದರೂ ಪರವಾಗಿಲ್ಲ, ಜೆಡಿಎಸ್‌ಗೆ ಹಾಕಿ ಎಂದು ಹೇಳಿದ್ದಾರೆ” ಎಂದಿದ್ದಾರೆ.

’ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಮ್ಮ ಸರ್ಕಾರದ ಯಾವುದಾದರೂ ಒಂದು ಜನಪರ ಯೋಜನೆಯ ಹೆಸರು ಹೇಳಲಿ ನೋಡಣ. ಅವರಿಂದ ಸಾಧ್ಯವಿದೆಯಾ? ತಮ್ಮ ಬಣ್ಣ ಬಯಲಾಗುತ್ತೆ ಎಂದು ಹೆದರಿ ಒಂದೇ ವೇದಿಕೆಗೆ ಚರ್ಚೆಗೆ ಬರಲು ನಿರಾಕರಿಸಿದರು” ಎಂದು ಆರೋಪಿಸಿದ್ದಾರೆ.

’ರಾಜ್ಯದ ಬಿಜೆಪಿಯಂತೆ ನಾವು ಹಣ ಹಂಚಿ ಮತ ಕೇಳುತ್ತಿಲ್ಲ. ಅಧಿಕಾರದಲ್ಲಿ ಇದ್ದಾಗ ಐದು ವರ್ಷ ನಿಮಗಾಗಿ ದುಡಿದಿದ್ದೇವೆ, ನಮ್ಮ ದುಡಿಮೆಗೆ ಕೂಲಿಯ ರೂಪದಲ್ಲಿ ಮತ ಕೊಡಿ ಎಂದು ಕೇಳುತ್ತಿದ್ದೇವೆ. ಶ್ರಮಕ್ಕೆ ತಕ್ಕ ಪ್ರತಿಫಲ ಸಿಗಬೇಕಲ್ವಾ..?’ ಎಂದು ಟ್ವೀಟ್‌ಗಳನ್ನು ಮಾಡಿದ್ದಾರೆ.


ಇದನ್ನೂ ಓದಿ: ದೀಪಾವಳಿ: ದೇವಾಲಯಗಳಾದ್ಯಂತ ‘ಗೋ ಪೂಜೆ’ ಮಾಡಲು ಆದೇಶಿಸಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕೊರೋನ ರೋಗಿಗಳು ಆಕ್ಸಿಜನ್ ಇಲ್ಲದೆ ಸತ್ತು ಹೋಗಿ ಮಕ್ಕಳು ದಾರಿಯಲ್ಲಿ ಇದ್ದಾಗ, ಲಾಕ್ ಡೌನ್ ಆಗಿ ಕೆಲಸ ಇಲ್ಲದೆ. ಒಪ್ಪೊತ್ತಿನ ಊಟಕ್ಕೂ ಗತಿ ಇಲ್ಲದಾಗ, ತನ್ನ ಊರಿಗೆ ಹೋಗಲು ದಾರಿಯೇ ಕಾಣದಾಗ, ಯಾವ ರಾಜಕಾರಣಿಗಳಲ್ಲಿಯೂ ಹಣ ಇರಲಿಲ್ಲ. ಈಗ ಓಟಿಗಾಗಿ ಹಣದ ಹೊಳೆ ಹರಿಯುತ್ತಿದೆ ಅಂದರೆ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...