Homeಕರ್ನಾಟಕಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಕಸ್ತೂರಿ ರಂಗನ್ ವರದಿ ತಿರಸ್ಕಾರ : ಸಚಿವ ಸಂಪುಟ ಸಭೆಯಲ್ಲಿ ನಿರ್ಧಾರ

ಜುಲೈನಲ್ಲಿ ಕೇಂದ್ರ ಸರ್ಕಾರ 6ನೇ ಕರಡು ಅಧಿಸೂಚನೆ ಹೊರಡಿಸಿತ್ತು

- Advertisement -
- Advertisement -

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸುವ ಬಗ್ಗೆ ಡಾ. ಕಸ್ತೂರಿ ರಂಗನ್ ವರದಿ ಆಧರಿಸಿದ ಕರಡು ಅಧಿಸೂಚನೆಯನ್ನು ತಿರಸ್ಕರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.

ಗುರುವಾರ (ಸೆ.26) ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಸಚಿವ ಹೆಚ್‌.ಕೆ ಪಾಟೀಲ್ ಅವರು “ಈ ಹಿಂದಿನ ಬಿಜೆಪಿ ಸರ್ಕಾರ ವರದಿಯನ್ನು ತಿರಸ್ಕರಿಸಿ ಕೈಗೊಂಡಿದ್ದ ನಿರ್ಣಯವನ್ನು ಮುಂದುವರೆಸಲು ತೀರ್ಮಾನಿಸಲಾಗಿದೆ” ಎಂದಿದ್ದಾರೆ.

ಪಶ್ಚಿಮ ಘಟ್ಟದಲ್ಲಿ ಪರಿಸರ ಸೂಕ್ಷ್ಮ ಪ್ರದೇಶವನ್ನು ಘೋಷಿಸಲು ಕೇಂದ್ರ ಸರ್ಕಾರ ಜುಲೈ 31, 2024ರಂದು ಆರನೇ ಕರಡು ಅಧಿಸೂಚನೆ ಹೊರಡಿಸಿತ್ತು. 60 ದಿನಗಳಲ್ಲಿ ಆಕ್ಷೇಪಣೆ ಮತ್ತು ಸಲಹೆಗಳನ್ನು ಸಲ್ಲಿಸಲು ರಾಜ್ಯಗಳಿಗೆ ಸೂಚಿಸಿತ್ತು.

ಕಸ್ತೂರಿ ರಂಗನ್ ವರದಿಯು ಕರ್ನಾಟಕದ 20,668 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಎಂದು ಗುರುತಿಸಿತ್ತು. ಇದರಲ್ಲಿ ಆಗಿದ್ದ ಕೆಲ ಲೋಪಗಳನ್ನು ತಿದ್ದುಪಡಿ ಮಾಡಿ, 19, 252.70 ಚದರ ಕಿ.ಮೀ ಪ್ರದೇಶವನ್ನು ಸೂಕ್ಷ್ಮ ಎಂದು ಪರಿಗಣಿಸಲಾಗಿತ್ತು. ರಾಜ್ಯದ ವಿವಿಧ ಅರಣ್ಯ ಕಾನೂನುಗಳ ಅಡಿಯಲ್ಲಿ ಈಗಾಗಲೇ 16,164 ಚದರ ಕಿ.ಮೀ ಅರಣ್ಯ ಪ್ರದೇಶವನ್ನು ಸಂರಕ್ಷಿಸಲಾಗುತ್ತಿದೆ. ಆದ್ದರಿಂದ ಕರಡು ಅಧಿಸೂಚನೆ ತಿರಸ್ಕರಿಸಲಾಗಿದೆ ಎಂದು ಹೆಚ್.ಕೆ ಪಾಟೀಲ್ ವಿವರಿಸಿದ್ದಾರೆ.

ವಯನಾಡ್ ದುರಂತದ ಬಳಿಕ ಆರನೇ ಅಧಿಸೂಚನೆ

ಜುಲೈ 31, 2024ರ ಆರನೇ ಕರಡು ಅಧಿಸೂಚನೆಯಲ್ಲಿ ಗುಜರಾತ್, ಮಹಾರಾಷ್ಟ್ರ, ಗೋವಾ, ಕರ್ನಾಟಕ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ವ್ಯಾಪಿಸಿರುವ ಪಶ್ಚಿಮ ಘಟ್ಟಗಳ 56,826 ಚದರ ಕಿ.ಮೀ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ (ಇಎಸ್‌ಎ) ಎಂದು ಕೇಂದ್ರ ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ ಗುರುತಿಸಿತ್ತು.

ಈ ಹಿಂದೆ ಐದು ಬಾರಿ ಕರಡು ಅಧಿಸೂಚನೆ ಹೊರಡಿಸಿದ್ದ ಕೇಂದ್ರ, ವಯನಾಡ್‌ ಭೂಕುಸಿತ ದುರಂತ ಸಂಭವಿಸಿದ ಬಳಿಕ 6ನೇ ಅಧಿಸೂಚನೆ ಪ್ರಕಟಿಸಿತ್ತು. ಪರಿಸರ ಸೂಕ್ಷ್ಮ ಪ್ರದೇಶಗಳ ವ್ಯಾಪ್ತಿಯನ್ನು ಗುರುತಿಸುವ ವಿಚಾರದಲ್ಲಿ ಕೇಂದ್ರ ಮತ್ತು ಆರು ರಾಜ್ಯಗಳು ಇದುವರೆಗೆ ಒಮ್ಮತಕ್ಕೆ ಬಂದಿಲ್ಲ.

ಕಸ್ತೂರಿ ರಂಗನ್ ವರದಿ ಆಧರಿಸಿ ಗುಜರಾತ್‌ನ 449 ಚದರ ಕಿ.ಮೀ, ಮಹಾರಾಷ್ಟ್ರದ 17,340, ಗೋವಾದ 1,461, ಕರ್ನಾಟಕದ 20,668 ತಮಿಳುನಾಡಿನ 6,914 ಮತ್ತು ಕೇರಳದ 9,994 ಚದರ ಕಿ.ಮೀ ವ್ಯಾಪ್ತಿಯನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಕೇಂದ್ರ ಗುರುತಿಸಿದೆ.

ಪಶ್ಚಿಮ ಘಟ್ಟಗಳ ಭಾಗಗಳನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಕರಡು ಅಧಿಸೂಚನೆಯನ್ನು ಮೊದಲ ಬಾರಿಗೆ ಮಾರ್ಚ್ 2014 ರಲ್ಲಿ ಹೊರಡಿಸಲಾಗಿತ್ತು. ಇದು 2012ರಲ್ಲಿ ಕೇಂದ್ರ ಸರ್ಕಾರ ರಚಿಸಿದ್ದ ಉನ್ನತ ಮಟ್ಟದ ತಜ್ಞರ ಸಮಿತಿಯ ಸಲಹೆಗಳನ್ನು ಆಧರಿಸಿದೆ.

ಬಾಹ್ಯಾಕಾಶ ವಿಜ್ಞಾನಿ ಕೆ ಕಸ್ತೂರಿರಂಗನ್ ನೇತೃತ್ವದ ಸಮಿತಿಯು ಪರಿಸರ ಸೂಕ್ಷ್ಮ ಪ್ರದೇಶಗಳ ಕುರಿತು ಹಿರಿಯ ಪರಿಸರ ವಿಜ್ಞಾನಿ ಮಾಧವ್ ಗಾಡ್ಗೀಳ್ ನೇತೃತ್ವದ ತಜ್ಞರ ಸಮಿತಿಯು ಸಿದ್ಧಪಡಿಸಿದ್ದ ವರದಿಯ ಸಲಹೆಗಳನ್ನು ಪರಿಶೀಲಿಸಿತ್ತು.

ಆರು ರಾಜ್ಯ ಸರ್ಕಾರಗಳ ಸಲಹೆಗಳನ್ನು ಮರು ಪರಿಶೀಲಿಸಲು, ವಿಪತ್ತು ಪೀಡಿತ ಪ್ರಾಚೀನ ಪರಿಸರ ವ್ಯವಸ್ಥೆಯ ಸಂರಕ್ಷಣೆ ಅಂಶಗಳನ್ನು ಮತ್ತು ಪ್ರದೇಶದ ಹಕ್ಕುಗಳು, ಸವಲತ್ತುಗಳು, ಅಗತ್ಯಗಳು ಮತ್ತು ಅಭಿವೃದ್ಧಿಯ ಆಕಾಂಕ್ಷೆಗಳನ್ನು ಗಮನದಲ್ಲಿಟ್ಟುಕೊಂಡು ಏಪ್ರಿಲ್ 2022ರಲ್ಲಿ ಕೇಂದ್ರವು ಮತ್ತೊಂದು ಸಮಿತಿಯನ್ನು ರಚಿಸಿತ್ತು. ಅದರ ಸಲಹೆಗಳನ್ನು ಕೂಡ ಕರಡು ಪ್ರತಿಯಲ್ಲಿ ಅಳವಡಿಸಿಕೊಳ್ಳಲಾಗಿದೆ.

ವಯನಾಡ್ ಭೂಕುಸಿತ ದುರಂತ ಸಂಭವಿಸಿದ ಬಳಿಕ ಮಾಧವ್ ಗಾಡ್ಗೀಳ್ ನೇತೃತ್ವದ ‘ಪಶ್ಚಿಮ ಘಟ್ಟಗಳ ಪರಿಸರ ತಜ್ಞರ ಸಮಿತಿ’ (WGEEP)ಯು ಆಗಸ್ಟ್ 2011ರಲ್ಲಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ್ದ ವರದಿಯ ಜಾರಿಗೆ ಆಗ್ರಹ ಕೇಳಿ ಬಂದಿದೆ.

ಮಾಧವ್ ಗಾಡ್ಗೀಳ್ ವರದಿಯ ಕುರಿತು ಹೆಚ್ಚಿನ ಮಾಹಿತಿ ಓದಲು ಕೆಳಗಿನ ಒತ್ತಿ 

ವಯನಾಡ್ ಭೀಕರ ಭೂಕುಸಿತ : ಮತ್ತೆ ಮುನ್ನೆಲೆಗೆ ಬಂದ ‘ಗಾಡ್ಗೀಳ್ ಸಮಿತಿ ವರದಿ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...