Homeಕರ್ನಾಟಕಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆದ ಸರ್ಕಾರ

ಡಿ.ಕೆ ಶಿವಕುಮಾರ್ ವಿರುದ್ಧದ ಸಿಬಿಐ ತನಿಖೆ ವಾಪಸ್ ಪಡೆದ ಸರ್ಕಾರ

- Advertisement -
- Advertisement -

ಆದಾಯ ಮೀರಿ ಆಸ್ತಿ ಗಳಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ವಿರುದ್ಧ ಸಿಬಿಐ ತನಿಖೆಗೆ ಅನುಮತಿ ನೀಡಿ ಬಿ.ಎಸ್‌ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ಹೊರಡಿಸಿದ್ದ ಆದೇಶವನ್ನು ರಾಜ್ಯ ಸರ್ಕಾರ ಹಿಂಪಡೆದಿದೆ.

ಡಿಕೆ ಶಿವಕುಮಾರ್‌ ಅನುಪಸ್ಥಿತಿಯಲ್ಲಿ ಗುರುವಾರ ಸಂಜೆ ನಡೆದ ಸಚಿವ ಸಂಪುಟ ಸಭೆಯಲ್ಲಿ ಸಿಬಿಐನಿಂದ ಪ್ರಕರಣ ಹಿಂಪಡೆಯಲು ಸರ್ಕಾರ ನಿರ್ಧಾರ ಕೈಗೊಂಡಿದೆ.

ಪ್ರಕರಣದ ವಿಚಾರಣೆ ಹೈಕೋರ್ಟ್‌ನಲ್ಲಿ ನಡೆಯುತ್ತಿರುವುದರಿಂದ ಸಚಿವ ಸಂಪುಟ ಸಭೆಯಲ್ಲಿ ಡಿಕೆಶಿ ಪಾಲ್ಗೊಂಡರೆ ಸಿಬಿಐ ಕೋರ್ಟ್‌ನಲ್ಲಿ ಸ್ವ ಹಿತಾಸಕ್ತಿಯ ಪ್ರಶ್ನೆ ಮುಂದಿಡುವ ಸಾಧ್ಯತೆ ಹಿನ್ನೆಲೆ ಅವರು ಗೈರಾಗಿದ್ದರು ಎಂದು ಹೇಳಲಾಗ್ತಿದೆ.

ಸಿಬಿಐನಿಂದ ಪ್ರಕರಣ ವಾಪಸ್‌ ಪಡೆದು ರಾಜ್ಯ ಪೊಲೀಸ್‌ ಇಲಾಖೆ ಅಥವಾ ಲೋಕಾಯುಕ್ತ ಪೊಲೀಸ್‌ಗೆ ತನಿಖೆಗೆ ವಹಿಸುವಂತೆ ಗೃಹ ಇಲಾಖೆ ಪ್ರಸ್ತಾವನೆ ಸಲ್ಲಿಸಿತ್ತು. ಈ ಪ್ರಸ್ತಾವನೆಗೆ ಸಂಪುಟ ಸಭೆ ಒಪ್ಪಿಗೆ ನೀಡಿದೆ.

ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಕಾನೂನು ಮತ್ತು ಸಂಸದೀಯ ಸಚಿವ ಹೆಚ್‌.ಕೆ ಪಾಟೀಲ್, ಬಿಜೆಪಿ ಸರ್ಕಾರ ಡಿಕೆ ಶಿವಕುಮಾರ್‌ ವಿರುದ್ಧದ ಪ್ರಕರಣ ಸಿಬಿಐಗೆ ವಹಿಸುವ ಮುನ್ನ ವಿಧಾಸಭೆ ಸಭಾಧ್ಯಕ್ಷರ ಅನುಮತಿ ಪಡೆಯಬೇಕಿತ್ತು. ಆದರೆ, ಅನುಮತಿ ಪಡೆಯದೆ ಸಿಬಿಐಗೆ ವಹಿಸಲಾಗಿದೆ. ಈ ಮೂಲಕ ಕಾನೂನು ಬಾಹಿರ ನಿರ್ಧಾರ ಕೈಗೊಳ್ಳಲಾಗಿದೆ. ಹಾಗಾಗಿ, ಪ್ರಕರಣ ವಾಪಸ್‌ ಪಡೆಯಲು ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.

ಹಿಂದಿನ ಅಡ್ವೊಕೇಟ್ ಜನರಲ್ ಹಾಗೂ ನಮ್ಮ ಸರ್ಕಾರದ ಅಡ್ವೊಕೇಟ್ ಜನರಲ್ ಅವರ ಅಭಿಪ್ರಾಯ ಗಂಭೀರವಾಗಿ ಪರಿಣಗಣಿಸಿ ನಿರ್ಧಾರ ಕೈಗೊಳ್ಳಲಾಗಿದೆ. ಈ ಬಗ್ಗೆ ಎರಡ್ಮೂರು ದಿನಗಳಲ್ಲಿ ಆದೇಶ ಹೊರಡಿಸುತ್ತೇವೆ ಎಂದಿದ್ದಾರೆ.

ಇದನ್ನೂ ಓದಿ: 100 ಕೋಟಿ ರೂ. ವಂಚನೆ ಪ್ರಕರಣ: ನಟ ಪ್ರಕಾಶ್ ರಾಜ್‌ಗೆ ಇಡಿ ಸಮನ್ಸ್

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಬಿಜೆಪಿಯವರು ಬಜೆಟ್ ಓದುವುದೂ ಇಲ್ಲ, ಆರ್ಥಿಕತೆ ಬಗ್ಗೆ ಗೊತ್ತೂ ಇಲ್ಲ: ಸಿಎಂ ಸಿದ್ದರಾಮಯ್ಯ

0
ಬಡವರಿಗೆ ಆರ್ಥಿಕ ಸಬಲತೆ ಕೊಡುವುದು ಅಭಿವೃದ್ಧಿ ಅಲ್ಲವೇ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ಮಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಗ್ಯಾರಂಟಿ ಯೋಜನೆಗಳನ್ನೇ ಸಾಧನೆ ಎಂದು ಬಿಂಬಿಸಲಾಗುತ್ತಿದೆ. ಅಭಿವೃದ್ಧಿ ಕೆಲಸಗಳು ಆಗುತ್ತಿಲ್ಲ" ಎಂಬ ಬಿಜೆಪಿಗರ ಆರೋಪಕ್ಕೆ...