Homeಕರ್ನಾಟಕರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ: ಬಸವರಾಜ ಬೊಮ್ಮಾಯಿ

ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಗೋಶಾಲೆ ನಿರ್ಮಾಣ: ಬಸವರಾಜ ಬೊಮ್ಮಾಯಿ

- Advertisement -
- Advertisement -

ಕರ್ನಾಟಕ ಗೋವಧೆ ನಿಷೇಧ ಮತ್ತು ಜಾನುವಾರು ಸಂರಕ್ಷಣಾ ಕಾಯ್ದೆ- 2020ಗೆ ಪೂರಕವಾಗಿ ಮೊದಲ ಹಂತದಲ್ಲಿ ಒಟ್ಟು 15 ಕೋಟಿ ರೂ. ವೆಚ್ಚದಲ್ಲಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಗೋಶಾಲೆ ಸ್ಥಾಪಿಸಲು ಸರ್ಕಾರ ಗುರುವಾರ ಅನುಮೋದನೆ ನೀಡಿದೆ.

“ಕೆಲಸದ ಪ್ರಗತಿಯನ್ನು ಅವಲಂಬಿಸಿ ಹೆಚ್ಚುವರಿ ಹಣವನ್ನು ಬಿಡುಗಡೆ ಮಾಡಲು ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ” ಎಂದು ಕರ್ನಾಟಕದ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಹಾಲು ಕರೆಯದ ಮತ್ತು ಇತರ ಜಾನುವಾರುಗಳನ್ನು ನಿರ್ವಹಿಸುವ ಹೊಣೆಯನ್ನು ಕಡಿಮೆ ಮಾಡಲು ಮುಂಬರುವ ಬಜೆಟ್‌ನಲ್ಲಿ ಹೆಚ್ಚಿನ ಯೋಜನೆಗಳನ್ನು ಘೋಷಿಸಲಾಗುವುದು ಎಂದು ಸಚಿವ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ರಾಜ್ಯ ಸರ್ಕಾರ ಈಗಾಗಲೇ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ(ಗೋಹತ್ಯೆ ನಿಷೇಧ ಮಸೂದೆ) ಮತ್ತು ಸಂರಕ್ಷಣಾ ಕಾನೂನನ್ನು ಸುಗ್ರೀವಾಜ್ಞೆ ಮೂಲಕ ಜಾರಿ ಮಾಡಿದ್ದು, ಈ ಕಾನೂನು ಜನವರಿ 18 ರಿಂದ ರಾಜ್ಯದಲ್ಲಿ ಜಾರಿಯಾಗಿದೆ. ಈ ಮೂಲಕ ಗೋವುಗಳ ಹತ್ಯೆ ಹಾಗೂ ಅಕ್ರಮ ಸಾಗಾಟ ಸಂಪೂರ್ಣ ನಿಷೇಧಿಸಲಾಗುತ್ತಿದೆ.

ಇದನ್ನೂ ಓದಿ: ವಿವಾದಿತ ಗೋಹತ್ಯೆ ನಿಷೇಧ ಕಾನೂನು ಜನವರಿ 18 ರಿಂದ ಜಾರಿ

ಕಳೆದ ವರ್ಷ ಡಿಸೆಂಬರ್‌ನಲ್ಲಿ ಕರ್ನಾಟಕ ಶಾಸಕಾಂಗ ಸಭೆಯಲ್ಲಿ ಕಾಂಗ್ರೆಸ್ ಮತ್ತು ಜನತಾದಳ (ಜಾತ್ಯತೀತ) ತೀವ್ರ ವಿರೋಧದ ಮಧ್ಯೆ ಕರ್ನಾಟಕ ವಧೆ ಮತ್ತು ಜಾನುವಾರು ಸಂರಕ್ಷಣಾ ಮಸೂದೆ- 2020 ಅಂಗೀಕಾರವಾಯಿತು. ಗೋಶಾಲೆ ನಿರ್ಮಾಣ ಕೂಡ ಇದರ ಯೋಜನೆಯಾಗಿತ್ತು.

ಜಾನುವಾರು ಸಾಗಾಣಿಕೆ ಸಂಬಂಧಿಸಿದಂತೆ ನಿಯಮಗಳನ್ನು ರೂಪಿಸಿ ಜಾರಿಗೊಳಿಸಲಾಗುವುದು. ರಾಜ್ಯದಲ್ಲಿ ರೈತರು, ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಣೆ ಮಾಡುವವರು ಗೊಂದಲಕ್ಕೀಡಾಗುವ ಅಗತ್ಯವಿಲ್ಲ. ಒಂದು ಕಡೆಯಿಂದ ಮತ್ತೊಂದು ಕಡೆಗೆ ಕೃಷಿ ಉದ್ದೇಶಕ್ಕಾಗಿ ಜಾನುವಾರು ಸಾಗಾಣೆ ಮಾಡುವವರು ತಮ್ಮ ಸಂಪೂರ್ಣ ವಿಳಾಸ, ಆಧಾರ್ ಸಂಖ್ಯೆ, ಮೊಬೈಲ್‍ಸಂಖ್ಯೆ, ಸಾಗಾಣೆ ಉದ್ದೇಶ, ಜಾನುವಾರುಗಳ ವಯಸ್ಸು ಸೇರಿದಂತೆ ದೃಢೀಕರಣ ನೀಡಬೇಕು ಎಂದು ಸೂಚಿಸಲಾಗಿತ್ತು.

ಪೊಲೀಸ್ ಇಲಾಖೆಯು ಗೋವುಗಳ ಸಂರಕ್ಷಣೆಯಲ್ಲಿ ತೊಡಗಿರುವ ಸ್ವಯಂ ಸೇವಾ ಸಂಸ್ಥೆಗಳು(ಎನ್‍ಜಿಒ) ಹಾಗೂ ಪ್ರಾಣಿ ಕಲ್ಯಾಣ ಮಂಡಳಿಯ ಜೊತೆಗೆ ಕೈಜೋಡಿಸಲು ಹಾಗೂ ಎಲ್ಲ ಹಂತಗಳಲ್ಲಿ ಕಾಯ್ದೆಯ ಅನುಷ್ಠಾನಕ್ಕೆ ಕ್ರಮ ಕೈಗೊಳ್ಳಲು ತಿಳಿಸಲಾಗಿದೆ. ಅಲ್ಲದೆ, ಗೋಹತ್ಯೆ, ಅಕ್ರಮ ಸಾಗಾಟದ ಮೇಲೆ ಪೊಲೀಸ್ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆ ಹೆಚ್ಚು ನಿಗಾವಹಿಸಬೇಕು ಎಂದು ಈ ಹಿಂದೆ ಸಚಿವ ಪ್ರಭು ಚೌಹಾಣ್ ಹೇಳಿದ್ದರು.


ಇದನ್ನೂ ಓದಿ: ಗೋಹತ್ಯೆ ನಿಷೇಧ ಕಾಯ್ದೆಗೆ ವಿರೋಧ: ಗಂಡು ಕರುಗಳೊಂದಿಗೆ ಠಾಣೆಗೆ ಮುತ್ತಿಗೆ ಹಾಕಿದ ರೈತರು!

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಸಂವಿಧಾನ-ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟ ಇಂದಿನಿಂದ ಆರಂಭ: ಮಲ್ಲಿಕಾರ್ಜುನ ಖರ್ಗೆ

0
2024ರ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇಂದಿನಿಂದ ಆರಂಭಗೊಂಡಿದ್ದು, ಮತದಾರರು ಎಚ್ಚರಿಕೆಯಿಂದ ಮತದಾನ ಮಾಡುವಂತೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮನವಿ ಮಾಡಿದ್ದಾರೆ. "ಆರ್ಥಿಕ ಸಬಲೀಕರಣ ಮತ್ತು ಸಮಾನ ಅವಕಾಶಗಳ ಹೊಸ...