Homeಕರ್ನಾಟಕಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

ಚಾಣಕ್ಯ ವಿವಿ, ಮನುವಾದಿಗಳ ವಿಶ್ವವಿದ್ಯಾಲಯ ಇದರ ಸ್ಥಾಪನೆಗೆ ಅವಕಾಶ ನೀಡಬಾರದು: ಸಿದ್ದರಾಮಯ್ಯ

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ’

- Advertisement -
- Advertisement -

“ಚಾಣಕ್ಯ ವಿಶ್ವವಿದ್ಯಾಲಯ ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ. ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು” ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

“ವಿಧಾನಸಭಾ ಅಧಿವೇಶನದಲ್ಲಿ ಬಿಜೆಪಿ ಸರ್ಕಾರ ಆತುರಾತುರವಾಗಿ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ಮಸೂದೆಯನ್ನು ಚರ್ಚೆಗೆ ಅವಕಾಶ ನೀಡದೆ, ಧ್ವನಿಮತದ ಮೂಲಕ‌ ಅಂಗೀಕರಿಸಿದೆ. ಈ ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಉದ್ದೇಶಿಸಿರುವುದು ಸೆಸ್ (ಸೆಂಟರ್ ಫಾರ್ ಎಜುಕೇಶನ್ ಎಂಡ್ ಸೋಷಿಯಲ್ ಸ್ಟಡೀಸ್) ಎಂಬ ಸಂಸ್ಥೆ. ಈ ಸಂಸ್ಥೆಯಲ್ಲಿರುವ ಎಲ್ಲರೂ ಆರ್‌ಎಸ್‌ಎಸ್‌ನವರು.
ಸೆಸ್ ಸಂಸ್ಥೆ ಇಲ್ಲಿಯವರೆಗೆ ಯಾವುದೇ ಶೈಕ್ಷಣಿಕ ಸಂಸ್ಥೆಯನ್ನು ನಡೆಸಿಲ್ಲ, ಜೊತೆಗೆ ವಿಶ್ವವಿದ್ಯಾಲಯ ಆರಂಭಿಸಲು ಬೇಕಾದ ಮೂಲಸೌಕರ್ಯ ಇವರಲ್ಲಿ ಇಲ್ಲ. ಯಾವ ಆಧಾರ ಮತ್ತು ಅರ್ಹತೆಯ ಮೇರೆಗೆ ವಿಶ್ವವಿದ್ಯಾಲಯ ಆರಂಭಿಸಲು ರಾಜ್ಯ ಸರ್ಕಾರ ಇವರಿಗೆ ಭೂಮಿ ನೀಡಿದೆ ಎಂದು ಸ್ಪಷ್ಟಪಡಿಸಬೇಕು” ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

’ರಾಜ್ಯ ಬಿಜೆಪಿ ಸರ್ಕಾರ ಏಪ್ರಿಲ್ 26 ರಲ್ಲಿ ಸಚಿವ ಸಂಪುಟ ಸಭೆ ನಡೆಸಿ, ಆ ಮೂಲಕ ನಿರ್ಣಯ ಕೈಗೊಂಡು ದೇವನಹಳ್ಳಿ ಬಳಿಯ ಹರಳೂರು ಗ್ರಾಮದಲ್ಲಿ ಏರೋಸ್ಪೇಸ್ ಹಾಗೂ ಡಿಫೆನ್ಸ್ ಇಂಡಸ್ಟ್ರಿ ಸ್ಥಾಪನೆಯ ಉದ್ದೇಶಕ್ಕಾಗಿ ವಶಪಡಿಸಿಕೊಂಡಿದ್ದ ಕೆಐಎಡಿಬಿಗೆ ಸೇರಿದ 116 ಎಕರೆ 16 ಗುಂಟೆ ಜಮೀನನ್ನು ಸೆಸ್ ಸಂಸ್ಥೆಗೆ ನೀಡಲು ಆದೇಶಿಸಿದೆ. ಕೆಐಎಡಿಬಿ ರೈತರಿಂದ ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಎಕರೆಗೆ ರೂ. 1 ಕೋಟಿ 50 ಲಕ್ಷದಂತೆ ಒಟ್ಟು 116 ಎಕರೆಗೆ ರೂ.175 ಕೋಟಿ ಪರಿಹಾರ ನೀಡಿದ್ದಾರೆ. ಇದೇ ಜಮೀನನ್ನು ರಾಜ್ಯ ಸರ್ಕಾರ ಕೇವಲ ರೂ. 50 ಕೋಟಿಗೆ ಸೆಸ್ ಸಂಸ್ಥೆಗೆ ನೀಡಿದೆ. ಈ ಭೂಮಿಯ ಈಗಿನ ಮೌಲ್ಯ ಕನಿಷ್ಟ ರೂ. 300 ರಿಂದ 400 ಕೋಟಿಗಳಾಗುತ್ತದೆ’ ಎಂದಿದ್ದಾರೆ.

ಇದನ್ನೂ ಓದಿ: #NationalUnemploymentDay: ಮೋದಿ ಸೃಷ್ಟಿಸಿದ್ದು ಐತಿಹಾಸಿಕ ನಿರುದ್ಯೋಗ- ಕಾಂಗ್ರೆಸ್

’ಅತ್ಯಧಿಕ ಮೌಲ್ಯದ ಭೂಮಿಯನ್ನು ಅತೀ ಕಡಿಮೆ ಬೆಲೆಗೆ ಸರ್ಕಾರ ಆರ್‌ಎಸ್‌ಎಸ್‌ಗೆ ಬಳುವಳಿ ರೂಪದಲ್ಲಿ ನೀಡಿದೆ. ಖಾಸಗಿ ವಿಶ್ವವಿದ್ಯಾಲಯ ಸ್ಥಾಪನೆಗೆ ಸಂಬಂಧಿಸಿದ ನಿಬಂಧನೆಗಳನ್ನು ಗಾಳಿಗೆ ತೂರಿ, ಶಿಕ್ಷಣ ಸಂಸ್ಥೆಯೇ ಇಲ್ಲದ ಸಂಸ್ಥೆಗೆ ಭೂಮಿ ನೀಡಿರುವುದು ಅಪರಾಧವಷ್ಟೇ ಅಲ್ಲ, ನನ್ನ ಪ್ರಕಾರ ಇದೊಂದು ದೊಡ್ಡ ಹಗರಣ ಕೂಡ ಹೌದು. ಕೊರೊನಾ ಎರಡನೇ ಅಲೆಯ ಭೀತಿಯಿದ್ದ ವೇಳೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸರ್ಕಾರ ಸಂಪುಟ ಸಭೆಯಲ್ಲಿ ತೀರ್ಮಾನಿಸಿ ಮಾರುಕಟ್ಟೆ ಬೆಲೆಗಿಂತ ಕಡಿಮೆ ಬೆಲೆ ಆತುರಾತುರವಾಗಿ ಜಮೀನನ್ನು ಸೆಸ್ ಸಂಸ್ಥೆಗೆ ನೀಡಿದೆ’ ಎಂದು ಆರೋಪಿಸಿದ್ದಾರೆ.

 

’ಇದು ಮನುವಾದಿಗಳ ವಿಶ್ವವಿದ್ಯಾಲಯ, ಚಾಣಕ್ಯ ಕೂಡ ಮನುವಾದಿ ಕುಟುಂಬಕ್ಕೆ ಸೇರಿದವರು. ಈ ಶಿಕ್ಷಣ ಸಂಸ್ಥೆ ಚತುರ್ವರ್ಣ ವ್ಯವಸ್ಥೆಯ ಪುನರ್ ಸ್ಥಾಪನೆ ಮಾಡುವ ದುರುದ್ದೇಶ ಹೊಂದಿದೆ ಎಂಬುದು ನನ್ನ ಊಹೆ.
ಚಾಣಕ್ಯ ವಿಶ್ವವಿದ್ಯಾಲಯ ಮಸೂದೆಯ ಬಗ್ಗೆ ಗೌರವಾನ್ವಿತ ಸಭಾಧ್ಯಕ್ಷರು ಕೂಡ ಪಕ್ಷಪಾತಿಯಂತೆ ನಡೆದುಕೊಂಡಿದ್ದಾರೆ’ ಎಂದರು.

’ಕೆಐಎಡಿಬಿ ಜಮೀನನ್ನು ಕಡಿಮೆ ಬೆಲೆಗೆ ಸೆಸ್ ಸಂಸ್ಥೆಗೆ ನೀಡುವುದರಿಂದ ಸರ್ಕಾರಕ್ಕೆ ಹೆಚ್ಚಿನ ನಷ್ಟವಾಗಲಿದೆ. ಅಂದರೆ ಇದು ರಾಜ್ಯದ ಜನರಿಗಾದ ನಷ್ಟ. ಯಾರೋ ಮನುವಾದಿಗಳು ಶಿಕ್ಷಣ ಸಂಸ್ಥೆ ಆರಂಭಿಸಲು ರಾಜ್ಯದ ಜನರು ಏಕೆ ನಷ್ಟ ಅನುಭವಿಸಬೇಕು ಎಂಬುದು ನನ್ನ ವಾದ’ ಎಂದಿದ್ದಾರೆ.

’ಅಗತ್ಯವಾಗಿ ಚರ್ಚಿಸಬೇಕಿದ್ದ ಪ್ರಮುಖ ವಿಚಾರಗಳನ್ನು ಚರ್ಚೆಯಿಂದ ಕೈಬಿಟ್ಟು, ಈ ಮಸೂದೆಗೆ ಹೆಚ್ಚಿನ ಮಹತ್ವ ನೀಡಿ, ಮಂಡಿಸಲು ಅವಕಾಶ ನೀಡಿದರು. ಚರ್ಚೆಗೆ ಅವಕಾಶ ನೀಡುವಂತೆ ಸಭಾಧ್ಯಕ್ಷರಲ್ಲಿ ಎಷ್ಟು ಬಾರಿ ಮನವಿ ಮಾಡಿದರು ಅವರು ನನ್ನ ಮಾತನ್ನು ಕಿವಿಗೆ ಹಾಕಿಕೊಳ್ಳಲಿಲ್ಲ. ಚರ್ಚೆಗೆ ಅವಕಾಶವನ್ನೇ ನೀಡದೆ ಮಸೂದೆಗೆ ತರಾತುರಿಯಲ್ಲಿ ಅನುಮೋದನೆ ಪಡೆಯುವ ಅಗತ್ಯವೇನಿತ್ತು? ಇದೇನು ಸಾರ್ವಜನಿಕ ತುರ್ತು ವಿಷಯವಾಗಿತ್ತೇ?’ ಎಂದು ಪ್ರಶ್ನಿಸಿದ್ದಾರೆ.

’ಇದು ರಾಜ್ಯ ಸರ್ಕಾರದ ಸ್ವಜನಪಕ್ಷಪಾತಿ ನಿರ್ಣಯವಾಗುತ್ತದೆ ಹಾಗಾಗಿ ಸರ್ಕಾರ ಕೂಡಲೇ ಭೂಮಿ ನೀಡುವ ನಿರ್ಣಯವನ್ನು ರದ್ದುಪಡಿಸಬೇಕು. ಸೆಸ್ ಸಂಸ್ಥೆಗೆ ವಿಶ್ವವಿದ್ಯಾಲಯ ಆರಂಭಿಸಲು ಯಾವ ಅರ್ಹತೆಯೂ ಇಲ್ಲದಿರುವುದರಿಂದ, ಚಾಣಕ್ಯ ವಿಶ್ವವಿದ್ಯಾಲಯ ಸ್ಥಾಪನೆಗೆ ಅವಕಾಶ ನೀಡಬಾರದು’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಜೊತೆಗಿನ ಜತೆ ಜಂಟಿ ಪತ್ರಿಕಾಗೋಷ್ಠಿಯಲ್ಲಿ ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಬೆಂಗಳೂರು: ಇಂಧನ ದರ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ ಸೈಕಲ್ ಜಾಥಾ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...