Homeಕರ್ನಾಟಕಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿ, ಅವರಿಗೆ ಮಾನವೀಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿ, ಅವರಿಗೆ ಮಾನವೀಯತೆ ಇಲ್ಲ: ಸಿಎಂ ಸಿದ್ದರಾಮಯ್ಯ

- Advertisement -
- Advertisement -

ಕೇಂದ್ರದ ಬಿಜೆಪಿ ಸರಕಾರ ಬಡವರ ವಿರೋಧಿಯಾಗಿದ್ದು, ಬಂಡವಾಳ ಶಾಹಿಗಳ ಪರವಾಗಿದೆ. ಬಡವರಿಗೆ ಹೆಚ್ಚುವರಿ ಅಕ್ಕಿ ಪೂರೈಕೆಗೆ ನಿರಾಕರಿಸಿದ ಬಿಜೆಪಿಯು ನೀಚ ಮತ್ತು ಮಾನವ ವಿರೋಧಿಯಾಗಿದೆ ಎಂದು ಸಿಎಂ ಸಿದ್ದರಾಮಯ್ಯ  ಬಿಜೆಪಿ ವಿರುದ್ಧ ವಾಗ್ಧಾಳಿ ನಡೆಸಿದ್ದಾರೆ.

ಅನ್ನ ಭಾಗ್ಯ ಯೋಜನೆಯಡಿ ಬಡವರಿಗೆ ನೀಡಲು ಪ್ರತಿ ಫಲಾನುಭವಿಗೆ ಹೆಚ್ಚುವರಿಯಾಗಿ 5 ಕೆಜಿ ಅಕ್ಕಿ ನೀಡಲು ಕರ್ನಾಟಕ ಕೇಂದ್ರಕ್ಕೆ ಮನವಿ ಮಾಡಿತ್ತು.

ಹಿಂದಿನ ಅವಧಿಯಲ್ಲಿ ನಾನು ಸಿಎಂ ಆಗಿದ್ದಾಗ 7ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿದ್ದೆ. ಆದರೆ ಹಿಂದಿನ ಬಿಜೆಪಿ ಸರ್ಕಾರ ಅದನ್ನು 4ಕೆಜಿ ಮತ್ತು 5ಕೆಜಿಗೆ ಇಳಿಸಿದೆ. ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹೆಚ್ಚುವರಿಯಾಗಿ 5 ಕೆಜಿ ನೀಡುವುದಾಗಿ ಭರವಸೆ ನೀಡಿದ್ದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅಕ್ಕಿಯನ್ನು ಖರೀದಿಸಲು ಭಾರತೀಯ ಆಹಾರ ನಿಗಮದೊಂದಿಗೆ(ಎಫ್‌ಸಿಐ) ಒಪ್ಪಂದವನ್ಜು ಮಾಡಿಕೊಂಡಿದ್ದೆವು. ಅಕ್ಕಿ ನೀಡುವುದಾಗಿ ಎಫ್‌ಸಿಐ ರಾಜ್ಯ ಸರ್ಕಾರಕ್ಕೆ ಭರವಸೆ ನೀಡಿತ್ತು. ಆದರೆ ಕೇಂದ್ರವು ನಮಗೆ ಅಕ್ಕಿ ನಿರಾಕರಿಸಿದೆ. ನಾವು ಅಕ್ಕಿಯನ್ನು ಉಚಿತವಾಗಿ ಕೇಳಲಿಲ್ಲ. ನಾವು ಅದಕ್ಕೆ ಪಾವತಿಸಲು ಸಿದ್ಧರಿದ್ದೇವೆ. ನಾವು ಅಕ್ಕಿ ಕೇಳಿದಾಗ ಅವರು ಒಪ್ಪಿದರು ಮತ್ತು ನಂತರ ಹಿಂದೆ ಸರಿದರು. ಅವರು  ಎಷ್ಟು ನೀಚರು ಎಂಬುವುದನ್ನು ನೀವೇ ನಿರ್ಧರಿಸಬೇಕು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಅವರು ಬಡವರ ವಿರೋಧಿಗಳು, ಅವರಿಗೆ ಮಾನವೀಯತೆ ಇಲ್ಲ. ಬಡವರಿಗೆ ಉಚಿತ ಅಕ್ಕಿ ನೀಡಿದರೆ ಆ ರಾಜ್ಯಗಳು ದಿವಾಳಿಯಾಗುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದರು. ನಾವು 5 ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಮತ್ತು ರಾಜ್ಯವನ್ನು ದಿವಾಳಿಯಾಗಲು ಬಿಡುವುದಿಲ್ಲ. ಈಗಾಗಲೇ  ಕಾಂಗ್ರೆಸ್ ಚುನಾವಣೆ ವೇಳೆ ನೀಡಿರುವ 5 ಗ್ಯಾರೆಂಟಿ ಯೋಜನೆಗಳಲ್ಲಿ ನಾಲ್ಕನ್ನು ರಾಜ್ಯದಲ್ಲಿ ಜಾರಿಗೊಳಿಸಲಾಗಿದೆ ಎಂದು ಹೇಳಿದ್ದಾರೆ.

ಇದನ್ನು ಓದಿ: ಚುನಾವಣೆ ಸಮೀಪಿಸುತ್ತಿರುವುದರಿಂದ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ: ಸಿದ್ದರಾಮಯ್ಯ

 

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...