Homeಮುಖಪುಟಹೈಕಮಾಂಡ್ ಭೇಟಿಗಾಗಿ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

ಹೈಕಮಾಂಡ್ ಭೇಟಿಗಾಗಿ ನಾಳೆ ದೆಹಲಿಗೆ ತೆರಳಲಿರುವ ಸಿಎಂ ಬಸವರಾಜ್ ಬೊಮ್ಮಾಯಿ

- Advertisement -
- Advertisement -

ಹೈಕಮಾಂಡ್ ಮತ್ತು ಭಾರತೀಯ ಜನತಾ ಪಕ್ಷದ ಹಿರಿಯ ಮುಖಂಡರನ್ನು ಭೇಟಿ ಮಾಡಲು ಶುಕ್ರವಾರ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ. ಮೊದಲ ಭೇಟಿಯಲ್ಲಿ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸುವುದಿಲ್ಲ ಎಂದು ಮಾಹಿತಿ ನೀಡಿದ್ದಾರೆ.

“ನಾನು ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ, ರಾಜನಾಥ್ ಸಿಂಗ್ ಮತ್ತು ಜೆ.ಪಿ ನಡ್ಡಾ ಅವರ ಆಶೀರ್ವಾದ ಪಡೆಯಲು ನಾಳೆ (ಶುಕ್ರವಾರ) ದೆಹಲಿಗೆ ಭೇಟಿ ನೀಡುತ್ತೇನೆ. ಆದರೆ, ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ ನಡೆಸುವುದಿಲ್ಲ” ಎಂದಿದ್ದಾರೆ.

“ಮೊದಲ ಭೇಟಿ ನಂತರ ಎರಡು-ಮೂರು ದಿನಗಳಲ್ಲಿ, ಅವರ ಸಮಯ ತೆಗೆದುಕೊಂಡ ನಂತರ ನಾನು ಮತ್ತೆ ಅವರನ್ನು ಭೇಟಿಯಾಗುತ್ತೇನೆ. ಆಗ ಕ್ಯಾಬಿನೆಟ್ ರಚನೆಯ ಬಗ್ಗೆ ನಾವು ಚರ್ಚಿಸುತ್ತೇವೆ, ನಂತರ ಸಚಿವರ ಆಯ್ಕೆ ಮಾಡಲಾಗುತ್ತದೆ” ಎಂದು ಹುಬ್ಬಳ್ಳಿಯಲ್ಲಿ ಸಿಎಂ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

ಇದನ್ನೂ ಓದಿ: ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಬಸವರಾಜ್‌ ಬೊಮ್ಮಾಯಿ!

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಸಂಪುಟ ಸೇರದಿರುವ ಬಗ್ಗೆ ಹೇಳಿಕೆ ನೀಡಿರುವುದಕ್ಕೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ,ಶೆಟ್ಟರ್ ಅವರೊಂದಿಗೆ ವೈಯಕ್ತಿಕವಾಗಿ ಮಾತನಾಡಲಿದ್ದೇನೆ ಎಂದಿದ್ದಾರೆ.

“ನಾವು ರಾಜಕೀಯಕ್ಕೆ ಸೇರಿದಾಗಿನಿಂದಲೂ ಸ್ನೇಹಿತರಾಗಿದ್ದೇವೆ. ಬೇರೆ ಬೇರೆ ಪಕ್ಷಗಳಲ್ಲಿದ್ದಾಗಲೂ ಸೌಹಾರ್ದಯುತ ಸಂಬಂಧವನ್ನು ಉಳಿಸಿಕೊಂಡಿದ್ದೇವೆ. ಜಗದೀಶ್ ಶೆಟ್ಟರ್ ನಿರ್ಧಾರದ ಬಗ್ಗೆ ಪಕ್ಷದ ಹಿರಿಯ ನಾಯಕರಿಗೆ ತಿಳಿಸುತ್ತೇನೆ. ಈ ಸಮಸ್ಯೆಯನ್ನು ಪರಿಹರಿಸಲಾಗುವುದು ಎಂದು ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ.

“ಯಡಿಯೂರಪ್ಪ ನಮ್ಮ ಹಿರಿಯ ನಾಯಕರು, ಅವರ ನಾಯಕತ್ವದಲ್ಲಿ ನಾವೆಲ್ಲರೂ ರಾಜಕೀಯದಲ್ಲಿ ಬೆಳೆದಿದ್ದೇವೆ. ಆದ್ದರಿಂದ ಅವರ ಸಂಪುಟದಲ್ಲಿ ಸಚಿವರಾಗಲು ಯಾವುದೇ ಸಮಸ್ಯೆಗಳಿಲ್ಲ. ಆದರೆ, ಬೊಮ್ಮಾಯಿ  ಈ ಹಿಂದೆ ನನ್ನ ಸಚಿವ ಸಂಪುಟದಲ್ಲಿ ಸಚಿವರಾಗಿ ಕೆಲಸ ಮಾಡಿದ್ದಾರೆ. ಹಾಗಾಗಿ ಅವರ ಸಂಪುಟದಲ್ಲಿ ಕೆಲಸ ಮಾಡುವುದು ನನಗೆ ಸರಿಯಿಲ್ಲ ಎನಿಸಿದೆ. ಆದ್ದರಿಂದ, ನಾನು ಹೊರಗುಳಿದಿದ್ದೇನೆ ”ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದ್ದರು.


ಇದನ್ನೂ ಓದಿ: ಆಷಾಢದ ಗಾಳಿಯಲ್ಲಿ ಹಾರಿದ ಪಟ ಬಸವರಾಜ ಬೊಮ್ಮಾಯಿ

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

LEAVE A REPLY

Please enter your comment!
Please enter your name here

- Advertisment -

Must Read

ಮೋದಿ ದ್ವೇಷ ಭಾಷಣದ ಕುರಿತು ಅಭಿಪ್ರಾಯ ವ್ಯಕ್ತಪಡಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಪಕ್ಷದಿಂದಲೇ ಉಚ್ಚಾಟನೆ!

0
ಪ್ರಧಾನಿ ನರೇಂದ್ರ ಮೋದಿಯವರು ಮುಸ್ಲಿಮರ ವಿರುದ್ಧ ಮಾಡಿರುವ ದ್ವೇಷ ಭಾಷಣದ ಬಗ್ಗೆ ಮಾಧ್ಯಮವೊಂದರಲ್ಲಿ ತನ್ನ ಅಭಿಪ್ರಾಯ ವ್ಯಕ್ತಪಡಿಸಿದ್ದಕ್ಕೆ ರಾಜಸ್ಥಾನದ ಬಿಕಾನೇರ್ ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಜಿಲ್ಲಾಧ್ಯಕ್ಷನನ್ನು ಪಕ್ಷದಿಂದಲೇ ಉಚ್ಚಾಟಿಸಲಾಗಿದೆ. ಈ ವಿಚಾರ ಈಗ...