Homeಮುಖಪುಟಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ..: ಆಡಿಯೋ ನನ್ನದಲ್ಲ ಎಂದ ನಳಿನ್ ಕುಮಾರ್ ಕಟೀಲ್

- Advertisement -
- Advertisement -

“ಕರ್ನಾಟಕ ಸಿಎಂ ಬದಲಾವಣೆಯಾಗಲಿದ್ದಾರೆ – ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಮಾತು” ಎಂಬ ಆಡಿಯೋ ರಾಜ್ಯ ರಾಜಕೀಯದಲ್ಲಿ ಸಂಚಲನ ಮೂಡಿಸಿದ್ದು ಹೊಸ ಚರ್ಚೆಗಳಿಗೆ ದಾರಿಮಾಡಿಕೊಟ್ಟಿದೆ. ಕರ್ನಾಟಕದ ಹೊಸ ಸಿಎಂ ದೆಹಲಿಯಿಂದ ಬರುತ್ತಾರೆ ಎಂದು ಆಡಿಯೋದಲ್ಲಿ ಹೇಳಿರುವುದರಿಂದ ಅವರು ಯಾರು ಯಾರು ಎಂಬ ಪ್ರಶ್ನೆ ಹಲವೆಡೆ ಸುಳಿದಾಡುತ್ತಿದೆ. ಆದರೆ ತಡರಾತ್ರಿ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ‘ಆ ಆಡಿಯೋ ನನ್ನದಲ್ಲ, ನಕಲಿ’ ಎಂದಿದ್ದಾರೆ.

ವೈರಲ್ ಆಗಿರುವ ಆಡಿಯೋದಲ್ಲಿ ತುಳು ಭಾಷೆಯಲ್ಲಿ “ಯಾರಿಗೆ ಹೇಳೋಕೆ ಹೋಗಬೇಡಿ, ಈಶ್ವರಪ್ಪ ಜಗದೀಶ್ ಶೆಟ್ಟರ್ ಟೀಮ್ ಅನ್ನೆ ತೆಗೆಯುತ್ತೇವೆ. ಎಲ್ಲ ಹೊಸ ಟೀಮ್ ಮಾಡುತ್ತಿದ್ದೇವೆ. ಯಾರಲ್ಲೂ ಹೇಳಲು ಹೋಗಬೇಡಿ, ಈಗ ಸಧ್ಯಕ್ಕೆ ಯಾರಿಗೂ ಕೊಡಬೇಡಿ ಎಂದು ಹೇಳಿದ್ದಾರೆ. ಇಲ್ಲ, ಯಾರಿಗೂ ಹೇಳಬೇಡಿ, ಏನು ತೊಂದರೆ ಇಲ್ಲ, ಹೆದರಬೇಡಿ ನಾವಿದ್ದೇವೆ, ಇನ್ನು ಯಾರಾದರೂ ನಮ್ಮ ಕೈಯಲ್ಲೆ ಎಲ್ಲಾ. ಮೂರು ಹೆಸರು ಉಂಟು, ಅದರಲ್ಲಿ ಯಾವುದಾದರೂ ಆಗುವ ಚಾನ್ಸ್ ಉಂಟು. ಇಲ್ಲ, ಇಲ್ಲಿಯವರನ್ನು ಯಾರನ್ನು ಮಾಡೋದಿಲ್ಲ. ದೆಹಲಿಯಿಂದಲೇ ಮಾಡುತ್ತಾರೆ” ಎಂದು ಹೇಳಲಾಗಿದೆ. ಸಣ್ಣ ದನಿಯಲ್ಲಿ ಮಾತನಾಡಿದ್ದು ನಡು ನಡುವೆ ನಗುವುದು ಕೇಳಿಬಂದಿದೆ.

ಈ ಆಡಿಯೋ ಸಾಮಾಜಿಕ ಜಾಲತಾಣದಲ್ಲಿ ವ್ಯಾಪಕವಾಗಿ ವೈರಲ್ ಆಗಿದೆ. ಇತ್ತೀಚೆಗೆ ತಾನೇ ಹಾಲಿ ಸಿಎಂ ಯಡಿಯೂರಪ್ಪನವರು ದೆಹಲಿಗೆ ತೆರಳಿದ್ದಾಗ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ ಎಂಬ ಸುದ್ದಿ ಎಲ್ಲೆಡೆ ಹರಿದಾಡಿತ್ತು. ಆ ಹಿನ್ನೆಲೆಯಲ್ಲಿ ಈ ಆಡಿಯೋಗೆ ಮನ್ನಣೆ ದೊರೆತ್ತಿದ್ದು ನಿಜವಿರಬಹುದು ಎಂದು ಹಲವರು ನಂಬಿದ್ದಾರೆ. ಅಲ್ಲದೆ ಆಡಿಯೋದಲ್ಲಿನ ದನಿ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್‌ರವರ ದನಿಯನ್ನೆ ಹೋಲುವುದರಿಂದ ಬಹಳಷ್ಟು ಜನ ಆಡಿಯೋವನ್ನು ಹಂಚಿಕೊಂಡಿದ್ದಾರೆ.

ಯಾರು ಹೊಸ ಮುಖ್ಯಮಂತ್ರಿ?

ಇನ್ನು ಹೊಸ ಮುಖ್ಯಮಂತ್ರಿ ದೆಹಲಿಯಿಂದ ಬರುತ್ತಾರೆ ಎಂಬ ವಿಷಯ ಬಿಸಿ ಬಿಸಿ ಚರ್ಚೆಗೆ ಕಾರಣವಾಗಿದೆ. ಆಡಿಯೋದಲ್ಲಿರುವಂತೆ ಮೂರು ಜನರ ಹೆಸರಿದೆ, ಯಾರಾದರೂ ಆಗಬಹುದು ಎಂಬುದನ್ನು ಜನ ತಮಗೆ ಬೇಕಾದಂತೆ ಅರ್ಥೈಸಿಕೊಳ್ಳುತ್ತಿದ್ದರೂ ಅವರ ಊಹೆಯ ಮೊದಲ ಹೆಸರು ಬಿಜೆಪಿಯ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್ ಸಂತೋಷ್‌ರವರದ್ದು ಆಗಿದೆ. ಕರ್ನಾಟಕ ಮೂಲದ ಸಂತೋಷ್‌ರವರು ಆರ್‌ಎಸ್‌ಎಸ್‌ನ ಪ್ರಭಾವಿ ಮುಖಂಡರಾಗಿದ್ದು ಕೆಲಸ ಮಾಡಿದವರು. ಬಹಳ ಹಿಂದಿನಿಂದಲೂ ರಾಜಕೀಯ ಮಹತ್ವಾಕಾಂಕ್ಷೆ ಹೊಂದಿರುವ ಅವರು 2019 ರಲ್ಲಿ ನೇರವಾಗಿ ಬಿಜೆಪಿ ಪಕ್ಷ ಸಂಘಟನೆಗಿಳಿದಿದ್ದು ಸದ್ಯ ರಾಷ್ಟ್ರೀಯ ಕಾರ್ಯದರ್ಶಿಯಾಗಿದ್ದಾರೆ. ಹಲವು ಬಾರಿ ಮುಂದಿನ ಮುಖ್ಯಮಂತ್ರಿ ಯಾರು ಎಂಬ ಚರ್ಚೆ ಬಂದಾಗಲೆಲ್ಲಾ ಆರ್‌ಎಸ್‌ಎಸ್‌ ಹಿನ್ನೆಲೆಯ ಸಂತೋಷ್ ಹೆಸರು ಮುನ್ನೆಲೆಗೆ ಬಂದಿದೆ. ಸದ್ಯ ಅವರು ದೆಹಲಿಯಲ್ಲಿರುವುದರಿಂದ ಆಡಿಯೋದಲ್ಲಿನ ಮೂರು ಹೆಸರುಗಳಲ್ಲಿ ಅವರ ಹೆಸರು ಮುಂಚೂಣಿಯಲ್ಲಿದೆ.

ಕಳೆದ ಕೆಲ ತಿಂಗಳುಗಳಿಂದ ಸಂತೋಷ್ ಬಿಜೆಪಿಯ ಟ್ರಬಲ್ ಶೂಟರ್ ಪಾತ್ರ ನಿರ್ವಹಿಸುತ್ತಿದ್ದಾರೆ. ಉತ್ತರ ಪ್ರದೇಶದಲ್ಲಿ ಯೋಗಿ ನೇತೃತ್ವದ ಆಡಳಿತದಲ್ಲಿ ಉಂಟಾದ ಬಿಕ್ಕಟ್ಟು ನಿಭಾಯಿಸುವಲ್ಲಿ ಅವರು ಪಾತ್ರ ವಹಿಸಿದ್ದರು. ಹಾಗಾಗಿ ಅವರಿಗೆ ಕರ್ನಾಟಕದ ಸಿಎಂ ಸ್ಥಾನ ಕೊಡುವ ಮೂಲಕ ಆರ್‌ಎಸ್‌ಎಸ್‌ ವ್ಯಕ್ತಿಯನ್ನು ಮುಖ್ಯಮಂತ್ರಿ ಮಾಡುವ ಸಂಘಪರಿವಾರದ ಬೇಡಿಕೆ ಈಡೇರಿಸಲು ಬಿಜೆಪಿ ಮುಂದಾಗಿದೆ ಎಂಬ ಮಾತುಗಳು ಕೇಳಿಬರುತ್ತಿವೆ.

ಎರಡನೇ ಆಯ್ಕೆಯಾಗಿ ಪ್ರಹ್ಲಾದ್ ಜೋಶಿ ಇದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಸದ್ಯಕ್ಕೆ ಕೇಂದ್ರ ಮಂತ್ರಿಯಾಗಿರುವ ಅವರು ಕರ್ನಾಟಕ ಸಿಎಂ ಆಗುವ ಸಾಧ್ಯತೆಯಿದೆ ಎನ್ನಲಾಗಿದೆ.

ಆಡಿಯೋ ನಕಲಿ, ತನಿಖೆಯಾಗಬೇಕು – ಕಟೀಲ್

ಆಡಿಯೋ ವೈರಲ್ ಆಗುತ್ತಿದ್ದಂತೆ ಸ್ಪಷ್ಟೀಕರಣ ನೀಡಿರುವ ನಳಿನ್ ಕುಮಾರ್ ಕಟೀಲ್, ಆ ಆಡಿಯೋ ನನ್ನದಲ್ಲ. ನನಗೆ ಕಳಂಕ ತರಲು ನಕಲಿ ಆಡಿಯೋ ಸೃಷ್ಟಿಸಲಾಗಿದೆ. ನನ್ನ ದನಿಯನ್ನು ಅನುಕರಿಸಿ ಯಾರೋ ಆಡಿಯೋ ತಯಾರು ಮಾಡಿದ್ದಾರೆ. ಅದನ್ನು ಕಿಡಿಗೇಡಿಗಳು ವಾಟ್ಸಾಪ್‌ನಲ್ಲಿ ಷೇರ್ ಮಾಡಿ ಧಕ್ಕೆ ತರಲು ಯತ್ನಿಸುತ್ತಿದ್ದಾರೆ. ಈ ಕುರಿತು ಸಮಗ್ರ ತನಿಖೆಯಾಗಬೇಕೆಂದು ಅವರು ಆಗ್ರಹಿಸಿದ್ದಾರೆ.

ಇದೇ ಜುಲೈ 26ಕ್ಕೆ ಯಡಿಯೂರಪ್ಪನವರು ಸಿಎಂ ಆಗಿ ಅಧಿಕಾರ ಸ್ವೀಕರಿಸಿ 2 ವರ್ಷ ತುಂಬುತ್ತಿದೆ. ಆ ಸಂದರ್ಭದಲ್ಲಿಯೇ ಅವರು ಪದತ್ಯಾಗ ಮಾಡಲಿದ್ದಾರೆ ಎಂಬ ಚರ್ಚೆಗಳ ನಡುವೆ ಈ ಆಡಿಯೋ ವೈರಲ್ ಆಗಿರುವುದು ಕಾಕತಾಳಿಯವೇ? ಅಥವಾ ಉದ್ದೇಶ ಪೂರ್ವಕವೇ? ಈ ಎಲ್ಲಾ ಪ್ರಶ್ನೆಗಳಿಗೆ ಇನ್ನೊಂದು ವಾರದಲ್ಲಿ ಉತ್ತರ ದೊರೆಯಲಿದೆ.


ಇದನ್ನೂ ಓದಿ: ಬಿಜೆಪಿ ಸೇರುತ್ತಿರುವ ಕೊಳ್ಳೇಗಾಲ ಶಾಸಕ ಎನ್‌. ಮಹೇಶ್‌; ಆಪ್ತರ ಹೇಳಿಕೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...

ಬಿಹಾರ: ನಕಲಿ ದಾಖಲೆ ನೀಡಿ ಕೆಲಸ ಗಿಟ್ಟಿಸಿದ್ದ 3,000ಕ್ಕೂ ಹೆಚ್ಚು ಶಿಕ್ಷಕರು ವಜಾ!

ನಕಲಿ ಪದವಿ ಹಾಗೂ ನಕಲಿ ಶೈಕ್ಷಣಿಕ ಪ್ರಮಾಣಪತ್ರಗಳನ್ನು ನೀಡಿ ಸರ್ಕಾರಿ ಶಾಲೆಗಳಲ್ಲಿ ಉದ್ಯೋಗ ಗಿಟ್ಟಿಸಿಕೊಂಡಿದ್ದ 3,000ಕ್ಕೂ ಹೆಚ್ಚು ಶಿಕ್ಷಕರನ್ನು ಸೇವೆಯಿಂದ ವಜಾಗೊಳಿಸಲು ಬಿಹಾರ ಸರ್ಕಾರ ನಿರ್ಧರಿಸಿದೆ. ಈ ಕುರಿತು ಶುಕ್ರವಾರ ಅಧಿಕೃತ ಪ್ರಕಟಣೆ...